Jeremias 52

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬಐ ಪಟ್ಟಣದ ನಿವಾಸಿಗಳಾಗಿದ್ದರು.
1 Zedequias tinha vinte e um anos quando se tornou rei, e reinou onze anos em Jerusalém. O nome de sua mãe era Hamutal, filha de Jeremias, de Libna.
2 ರಾಜನಾದ ಯೆಹೋಯಾಕೀಮನು ಮಾಡಿದಂತೆ ಚಿದ್ಕೀಯನು ದುಷ್ಕೃತ್ಯಗಳನ್ನು ಮಾಡಿದನು. ಚಿದ್ಕೀಯನು ಆ ದುಷ್ಕೃತ್ಯಗಳನ್ನು ಮಾಡಿದ್ದು ಯೆಹೋವನಿಗೆ ಒಪ್ಪಿಗೆಯಾಗಲಿಲ್ಲ.
2 Ele fez o que o Senhor reprova, assim como fez Jeoaquim.
3 ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು.
3 A ira do Senhor tem sido provocada em Jerusalém e em Judá de tal forma que tenho que tirá-los da minha frente. Zedequias se rebelou contra o rei da Babilônia.
4 ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.
4 Então, no nono ano do reinado de Zedequias, no décimo mês, Nabucodonosor, rei da Babilônia, marchou contra Jerusalém com todo o seu exército. Acamparam fora da cidade e construíram torres de assalto ao redor dela.
5 ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದವರೆಗೆ ಬಾಬಿಲೋನಿನ ಸೈನ್ಯವು ಜೆರುಸಲೇಮ್ ನಗರವನ್ನು ಮುತ್ತಿಗೆ ಹಾಕಿತ್ತು.
5 A cidade ficou sob cerco até o décimo primeiro ano do rei Zedequias.
6 ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ.
6 Ao chegar o nono dia do quarto mês a fome era tão severa que não havia comida para o povo.
7 ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.
7 Então o muro da cidade foi rompido. O rei e todos os soldados fugiram e saíram da cidade, à noite, na direção do jardim real, pela porta entre os dois muros, embora os babilônios estivessem cercando a cidade. Foram para a Arabá,
8 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.
8 mas os babilônios perseguiram o rei Zedequias e o alcançaram na planície de Jericó. Todos os seus soldados se separaram dele e se dispersaram,
9 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.
9 e ele foi capturado. Ele foi levado ao rei da Babilônia em Ribla, na terra de Hamate, que o sentenciou.
10 ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು.
10 Em Ribla, o rei da Babilônia mandou executar os filhos de Zedequias diante de seus olhos, e também matou todos os nobres de Judá.
11 ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.
11 Então mandou furar os olhos de Zedequias e prendê-lo com correntes de bronze e o levou para a Babilônia, onde o manteve na prisão até o dia de sua morte.
12 ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.
12 No décimo dia do quinto mês, no décimo nono ano de Nabucodonosor, rei da Babilônia, Nebuzaradã, comandante da guarda imperial, que servia o rei da Babilônia, veio a Jerusalém.
13 ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.
13 Ele incendiou o templo do Senhor, o palácio real e todas as casas de Jerusalém. Todo o edifício importante foi incendiado por ele.
14 ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಧಿಪತಿಯ ಅಧಿನದಲ್ಲಿತ್ತು.
14 Todo o exército babilônio, sob o comandante da guarda imperial, derrubou todos os muros em torno de Jerusalém.
15 ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.
15 Nebuzaradã, o comandante da guarda imperial, deportou para a Babilônia alguns dos mais pobres e o povo que restou na cidade, juntamente com o restante dos artesãos e aqueles que tinham se rendido ao rei da Babilônia.
16 ಆದರೆ ಕೆಲವು ಜನ ಕಡುಬಡವರನ್ನು ನೆಬೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನ್ನು ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.
16 Mas Nebuzaradã deixou para trás o restante dos mais pobres da terra para trabalhar nas vinhas e campos.
17 ಬಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಬಗಳನ್ನು ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನ್ನು ಮತ್ತು ಕಂಚಿನ ಸರೋವರಗಳನ್ನು ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
17 Os babilônios despedaçaram as colunas de bronze, os estrados móveis e o mar de bronze que ficavam no templo do Senhor e levaram todo o bronze para a Babilônia.
18 ಬಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಬೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
18 Também levaram embora as panelas, pás, tesouras de pavio, bacias de aspersão, tigelas e todos os utensílios de bronze usados no serviço do templo.
19 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಬೋಗುಣಿಗಳನ್ನು, ಧೂಪಾರತಿಗಳನ್ನು, ದೊಡ್ಡ ಬಟ್ಟಲುಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.
19 O comandante da guarda imperial levou embora as pias, os incensários, as bacias de aspersão, as panelas, os candeeiros, as tigelas e as bacias usadas para as ofertas derramadas, tudo que era feito de ouro puro ou de prata.
20 ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನ್ನು ಹೊತ್ತುಕೊಂಡಿರುವ ಹನ್ನೆರಡು ಕಂಚಿನ ಹೋರಿಗಳು ಮತ್ತು ಚಲಿಸಬಲ್ಲ ಅಡ್ಡಣಿಗಳು ಬಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಆ ವಸ್ತುಗಳನ್ನು ಮಾಡಿಸಿದ್ದನು. ಆ ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.
20 O bronze tirado das duas colunas, o mar e os doze touros de bronze debaixo dele, e os estrados móveis, que o rei Salomão fizera para o templo do Senhor, eram mais do que se podia pesar.
21 ಪ್ರತಿಯೊಂದು ಕಂಚಿನ ಕಂಬ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಬ ಟೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು.
21 Cada uma das colunas tinha oito metros e dez centímetros de altura e cinco metros e quarenta centímetros de circunferência; cada uma tinha quadro dedos de espessura e era oca.
22 ಮೊದಲನೇ ಕಂಬದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಬವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ದಾಳಿಂಬೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಬದಲ್ಲಿಯೂ ದಾಳಿಂಬೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಬದಂತೆ ಇತ್ತು.
22 O capitel de bronze no alto de uma coluna tinha dois metros e vinte e cinco centímetros de altura e era ornamentado com um trabalho entrelaçado e romãs de bronze em volta, tudo de bronze. A outra coluna, com suas romãs, era igual.
23 ಕಂಬಗಳ ಪಕ್ಕದಲ್ಲಿ ತೊಂಭತ್ತಾರು ದಾಳಿಂಬೆಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬೆ ಹಣ್ಣುಗಳಿದ್ದವು.
23 Havia noventa e seis romãs nos lados; o número total de romãs acima do trabalho entrelaçado ao redor era de cem.
24 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೆರಾಯ ಮತ್ತು ಚೆಫನ್ಯರನ್ನು ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದ್ವಾರಪಾಲಕರನ್ನು ಕೂಡ ಸೆರೆಹಿಡಿಯಲಾಯಿತು.
24 O comandante da guarda tomou como prisioneiros o sumo sacerdote Seraías, o sacerdote adjunto Sofonias e os três guardas das portas.
25 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೈನ್ಯದ ವ್ಯವಸ್ಥಾಪಕನ ಅಧಿಕಾರಿಯನ್ನು ಬಂಧಿಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನ್ನು ಸಹ ಸೆರೆಹಿಡಿದನು. ಅವರೆಲ್ಲ ಇನ್ನೂ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನ್ನು ಮಾಡುವ ಲಿಪಿಗಾರನನ್ನು ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನ್ನು ಸಹ ಅವನು ಸೆರೆಹಿಡಿದನು.
25 Dos que ainda estavam na cidade, tomou o oficial encarregado dos homens de combate e sete conselheiros reais. Também tomou o secretário que era o oficial maior encarregado do alistamento do povo da terra e sessenta de seus homens que foram encontrados na cidade.
26 — ausente —
26 O comandante Nebuzaradã tomou todos eles e os levou ao rei da Babilônia em Ribla.
27 — ausente —
27 Ali em Ribla, na terra de Hamate, o rei fez com que fossem executados. Assim Judá foi para o cativeiro, longe de sua terra.
28 ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ:
28 Este é o número dos que Nebuzaradã levou para o exílio: no sétimo ano, 3. 023 judeus;
29 ನೆಬೂಕದ್ನೆಚ್ಚರನ ಹದಿನೆಂಟನೇ ವರ್ಷದಲ್ಲಿ ಜೆರುಸಲೇಮಿನಿಂದ 832.
29 no décimo oitavo ano de Nabucodonosor, 832 de Jerusalém;
30 ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು.
30 em seu vigésimo terceiro ano, 745 judeus levados ao exílio pelo comandante da guarda imperial Nebuzaradã. Foram ao todo 4. 600 judeus.
31 ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
31 No ano trinta e sete do exílio do rei Joaquim de Judá, no ano em que Evil-Merodaque tornou-se rei de Babilônia, ele libertou o rei Joaquim de Judá da prisão no dia vinte e cinco do décimo segundo mês.
32 ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ಪ್ರೀತಿಯಿಂದ ಮಾತನಾಡಿದನು. ಅವನು ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲಾ ರಾಜರುಗಳಿಗಿಂತ ಉನ್ನತಸ್ಥಾನವನ್ನು ಯೆಹೋಯಾಖೀನನಿಗೆ ಕೊಟ್ಟನು.
32 Ele falou bondosamente com ele e deu-lhe um assento de honra mais elevado do que os dos outros reis que estavam com ele na Babilônia.
33 ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬಂದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
33 Desse modo Joaquim tirou as roupas da prisão e pelo resto da vida comeu à mesa do rei.
34 ಪ್ರತಿದಿನ ಬಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನ್ನು ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಈ ಕ್ರಮ ಮುಂದುವರೆಯಿತು.
34 Dia após dia o rei da Babilônia deu a Joaquim uma pensão diária enquanto ele viveu, até o dia de sua morte.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 52, comparar traduções ou montar um estudo — tudo direto pelo WhatsApp.