Jeremias 7
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC
1 ಯೆರೆಮೀಯನಿಗೆ ಯೆಹೋವನ ಸಂದೇಶ ಹೀಗಿತ್ತು:
1 A palavra que foi dita a Jeremias pelo Senhor , dizendo:
2 “ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು:
2 Põe-te à porta da Casa do Senhor , e proclama ali esta palavra, e dize: Ouvi a palavra do Senhor , todos de Judá, vós os que entrais por estas portas, para adorardes ao Senhor .
3 ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ನಿಮ್ಮ ನಡತೆಯನ್ನು ಬದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ಪದ ಕೊಡುತ್ತೇನೆ.
3 Assim diz o Senhor dos Exércitos, o Deus de Israel: Melhorai os vossos caminhos e as vossas obras, e vos farei habitar neste lugar.
4 ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.
4 Não vos fieis em palavras falsas, dizendo: Templo do Senhor , templo do Senhor , templo do Senhor é este.
5 ನೀವು ನಿಮ್ಮ ನಡತೆಯನ್ನು ಬದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಬೇಕು.
5 Mas, se deveras melhorardes os vossos caminhos e as vossas obras, se deveras fizerdes juízo entre um homem e entre o seu companheiro,
6 ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.
6 se não oprimirdes o estrangeiro, e o órfão, e a viúva, nem derramardes sangue inocente neste lugar, nem andardes após outros deuses para vosso próprio mal,
7 ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸಾಬಸ್ತ್ಯವಾಗಿ ಕೊಟ್ಟಿದ್ದೇನೆ.
7 eu vos farei habitar neste lugar, na terra que dei a vossos pais, de século em século.
8 “‘ನೀವು ಸುಳ್ಳುಗಳನ್ನು ನಂಬುತ್ತಿದ್ದೀರಿ, ಆ ಸುಳ್ಳುಗಳು ಹುರುಳಿಲ್ಲದವುಗಳಾಗಿವೆ.
8 Eis que vós confiais em palavras falsas, que para nada são proveitosas.
9 ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?
9 Furtareis vós, e matareis, e cometereis adultério, e jurareis falsamente, e queimareis incenso a Baal, e andareis após outros deuses que não conhecestes,
10 ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?
10 e então vireis, e vos poreis diante de mim nesta casa, que se chama pelo meu nome, e direis: Somos livres, podemos fazer todas estas abominações?
11 ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೇಲ್ಲ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.
11 É, pois, esta casa, que se chama pelo meu nome, uma caverna de salteadores aos vossos olhos? Eis que eu, eu mesmo, vi isso, diz o Senhor .
12 “ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.
12 Mas ide agora ao meu lugar, que estava em Siló, onde, no princípio, fiz habitar o meu nome, e vede o que lhe fiz, por causa da maldade do meu povo de Israel.
13 ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.
13 Agora, pois, porquanto fazeis todas estas obras, diz o Senhor , e eu vos falei, madrugando e falando, e não ouvistes, chamei-vos, e não respondestes,
14 ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.
14 farei também a esta casa, que se chama pelo meu nome, na qual confiais, e a este lugar, que vos dei a vós e a vossos pais, como fiz a Siló.
15 ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”
15 E vos arrojarei da minha presença, como arrojei a todos os vossos irmãos, a toda a geração de Efraim.
16 “ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ.
16 Tu, pois, não ores por este povo, nem levantes por ele clamor ou oração, nem me importunes, porque eu não te ouvirei.
17 ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು.
17 Não vês tu o que andam fazendo nas cidades de Judá e nas ruas de Jerusalém?
18 ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.
18 Os filhos apanham a lenha, e os pais acendem o fogo, e as mulheres amassam a farinha, para fazerem bolos à deusa chamada Rainha dos Céus, e oferecem libações a outros deuses, para me provocarem à ira.
19 ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.
19 Acaso é a mim que eles provocam à ira, diz o Senhor , e não antes a si mesmos, para confusão dos seus rostos?
20 ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”
20 Portanto, assim diz o Senhor Jeová : Eis que a minha ira e o meu furor se derramarão sobre este lugar, e sobre os homens, e sobre os animais, e sobre as árvores do campo, e sobre os frutos da terra; e acender-se-á e não se apagará.
21 ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.
21 Assim diz o Senhor dos Exércitos, o Deus de Israel: Ajuntai os vossos holocaustos aos vossos sacrifícios, e comei carne.
22 ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ.
22 Porque nunca falei a vossos pais, no dia em que vos tirei da terra do Egito, nem lhes ordenei coisa alguma acerca de holocaustos ou sacrifícios.
23 ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೇಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.
23 Mas isto lhes ordenei, dizendo: Dai ouvidos à minha voz, e eu serei o vosso Deus, e vós sereis o meu povo; e andai em todo o caminho que eu vos mandar, para que vos vá bem.
24 “ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.
24 Mas não ouviram, nem inclinaram os ouvidos, mas andaram nos seus próprios conselhos, no propósito do seu coração malvado; e andaram para trás e não para diante.
25 ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.
25 Desde o dia em que vossos pais saíram da terra do Egito até hoje, enviei-vos todos os meus servos, os profetas, todos os dias madrugando e enviando-os.
26 ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.
26 Mas não me deram ouvidos, nem inclinaram os ouvidos, mas endureceram a sua cerviz e fizeram pior do que seus pais.
27 “ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.
27 Dir-lhes-ás, pois, todas estas palavras, mas não te darão ouvidos; chamá-los-ás, mas não te responderão.
28 ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.
28 E lhes dirás: Uma gente é esta que não dá ouvidos à voz do Senhor , seu Deus, e não aceita a correção; já pereceu a verdade e se arrancou da sua boca.
29 “ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.
29 Corta o cabelo da tua cabeça, e lança- o fora, e levanta o teu pranto sobre as alturas; porque já o Senhor rejeitou e desamparou a geração do seu furor;
30 ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.
30 porque os filhos de Judá fizeram o que era mal aos meus olhos, diz o Senhor ; puseram as suas abominações na casa que se chama pelo meu nome, para a contaminarem.
31 ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.
31 E edificaram os altos de Tofete, que está no vale do filho de Hinom, para queimarem a seus filhos e a suas filhas; o que nunca ordenei, nem me subiu ao coração.
32 ಹೀಗಿರಲು ನಾನು ಈ ಕಣಿವೆಯನ್ನು ತೋಫೆತ್ ಮತ್ತು ಬೆನ್‌ಹಿನ್ನೊಮೀನ ಕಣಿವೆ ಎಂದು ಕರೆಯದೆ ಇದನ್ನು ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಬರುತ್ತಿವೆ ಎಂಬ ಎಚ್ಚರಿಕೆಯನ್ನು ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನ್ನು ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನ್ನು ಹೂಳುವ ಕಾರಣ ಅದಕ್ಕೆ ಈ ಹೆಸರನ್ನು ಕೊಡಲಾಗುವುದು.
32 Portanto, eis que vêm dias, diz o Senhor , em que nunca se chamará mais Tofete, nem vale do filho de Hinom, mas o vale da Matança; e enterrarão em Tofete, por não haver mais lugar.
33 ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.
33 E os cadáveres deste povo servirão de pasto às aves dos céus e aos animais da terra; e ninguém os espantará.
34 ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”
34 E farei cessar nas cidades de Judá e nas ruas de Jerusalém a voz de folguedo, e a voz de alegria, e a voz de esposo, e a voz de esposa; porque a terra se tornará em desolação.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jeremias 7, comparar traduções ou montar um estudo — tudo direto pelo WhatsApp.