Josué 17

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB

Sair da comparação
ARIB Almeida Revisada Imprensa Bíblica
1 ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.
1 Também coube sorte à tribo de Manassés, porquanto era o primogênito de José. Quanto a Maquir, o primogênito de Manassés, pai de Gileade, porquanto era homem de guerra, obtivera Gileade e Basã.
2 ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.
2 Também os outros filhos de Manassés tiveram a sua parte, segundo as suas famílias, a saber: os filhos de Abiezer, os filhos de Heleque, os filhos de Asriel, os filhos de Siquém, os filhos de Hefer, e os filhos de Semida. Esses são os filhos de Manassés, filho de José, segundo as suas famílias.
3 ಚಲ್ಪಹಾದನು ಹೇಫೆರನ ಮಗನು, ಹೇಫೆರನು ಗಿಲ್ಯಾದನ ಮಗನು, ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಚಲ್ಪಹಾದನಿಗೆ ಗಂಡುಮಕ್ಕಳಿರಲಿಲ್ಲ. ಆದರೆ ಅವನಿಗೆ ಐದು ಜನ ಹೆಣ್ಣುಮಕ್ಕಳಿದ್ದರು. ಅವರ ಹೆಸರುಗಳು: ಮಹ್ಲಾ, ನೋಹಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.
3 Zelofeade, porém, filho de Hefer, filho de Gileade, filho de Maquir, filho de Manassés, não teve filhos, mas só filhas; e estes são os nomes de suas filhas: Macla, Noa, Hogla, Milca e Tirza.
4 ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.
4 Estas, pois, se apresentaram diante de Eleazar, o sacerdote, e diante de Josué, filho de Num, e diante dos príncipes, dizendo: O Senhor ordenou a Moisés que se nos desse herança no meio de nossos irmãos. Pelo que se lhes deu herança no meio dos irmãos de seu pai, conforme a ordem do Senhor.
5 ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು.
5 E couberam a Manassés dez quinhões, afora a terra de Gileade e Basã, que está além do Jordão;
6 ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.
6 porque as filhas de Manassés possuíram herança entre os filhos dele; e a terra de Gileade coube aos outros filhos de Manassés.
7 ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್‌ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.
7 Ora, o termo de Manassés vai desde Aser até Micmetá, que está defronte de Siquém; e estende-se pela direita até os moradores de En-Tapua.
8 ಎನ್‌ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್‌ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.
8 A terra de Tapua ficou pertencendo a Manassés; porém Tapua, junto ao termo de Manassés, pertencia aos filhos de Efraim .
9 ಮನಸ್ಸೆ ಪ್ರಾಂತ್ಯದ ಸೀಮೆ ದಕ್ಷಿಣದಲ್ಲಿ ಕಾನಾ ನದಿಯವರೆಗೆ ಹೋಗುತ್ತದೆ. ಈ ಕ್ಷೇತ್ರ ಮನಸ್ಸೆ ಕುಲದವರ ಸ್ವಾಸ್ತ್ಯದಲ್ಲಿದ್ದರೂ ಪಟ್ಟಣಗಳು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿದ್ದವು. ಮನಸ್ಸೆ ಪ್ರಾಂತ್ಯದ ಸೀಮೆಯು ನದಿಯ ಉತ್ತರದಿಕ್ಕಿನಿಂದ ಪಶ್ಚಿಮದಲ್ಲಿ ಮೆಡಿಟರೆನಿಯನ್ ಸಮುದ್ರದವರೆಗೆ ಮುಂದುವರೆದಿದೆ.
9 Então desce este termo ao ribeiro de Caná; a Efraim couberam as cidades ao sul do ribeiro no meio das cidades de Manassés; o termo de Manassés está ao norte do ribeiro, e vai até o mar.
10 ದಕ್ಷಿಣದ ಭೂಮಿ ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೆನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಆಶೇರ್ ಕುಲದವರ ಪ್ರಾಂತ್ಯವನ್ನೂ ಪೂರ್ವದಲ್ಲಿ ಇಸ್ಸಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ.
10 Ao sul a terra é de Efraim, e ao norte de Manassés, sendo o mar o seu termo. Estendem-se ao norte até Aser, e ao oriente até Issacar
11 ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
11 Porque em Issacar e em Aser couberam a Manassés Bete-Seã e suas vilas, Ibleão e suas vilas, os habitantes de Dor e suas vilas, os habitantes de En-Dor e suas vilas, os habitantes de Taanaque e suas vilas, e os habitantes de Megido e suas vilas, com os seus três outeiros.
12 ಮನಸ್ಸೆ ಕುಲದವರಿಗೆ ಆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು.
12 Contudo os filhos de Manassés não puderam expulsar os habitantes daquelas cidades, porquanto os cananeus persistiram em habitar naquela terra.
13 ಆದರೆ ಸ್ವಲ್ಪ ಕಾಲದ ನಂತರ ಇಸ್ರೇಲರು ಬಲಶಾಲಿಗಳಾಗಿ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಅವರನ್ನು ಅಲ್ಲಿಂದ ಹೊರಗಟ್ಟಲಿಲ್ಲ.
13 Mas quando os filhos de Israel se tornaram fortes, sujeitaram os cananeus a trabalhos forçados, porém não os expulsaram de todo.
14 ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ತ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ಈ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟೆ?” ಎಂದು ಕೇಳಿದರು.
14 Então os filhos de José falaram a Josué, dizendo: Por que me deste por herança apenas uma sorte e um quinhão, sendo eu um povo numeroso, porquanto o Senhor até aqui me tem abençoado?
15 ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.
15 Respondeu-lhes Josué: Se és povo numeroso, sobe ao bosque, e corta para ti lugar ali na terra dos perizeus e dos refains, desde que a região montanhosa de Efraim te é estreita demais.
16 ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.
16 Tornaram os filhos de José: A região montanhosa não nos bastaria; além disso todos os cananeus que habitam na terra do vale têm carros de ferro, tanto os de Bete-Seã e das suas vilas, como os que estão no vale de Jizreel.
17 ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು.
17 Então Josué falou a casa de José, isto é, a Efraim e a Manassés, dizendo: Povo numeroso és tu, e tens grande força; não terás uma sorte apenas;
18 ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.
18 porém a região montanhosa será tua; ainda que é bosque, cortá-lo-ás, e as suas extremidades serão tuas; porque expulsarás os cananeus, não obstante terem eles carros de ferro e serem fortes:

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Josué 17, comparar traduções ou montar um estudo — tudo direto pelo WhatsApp.