Josué 18
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.
1 Toda a assembléia dos filhos de Israel se reuniu em Silo, onde levantaram a tenda de reunião; a terra estava-lhes sujeita.
2 ಆದರೂ ದೇವರು ವಾಗ್ದಾನ ಮಾಡಿದ ಭೂಮಿಯನ್ನು ಇಸ್ರೇಲರ ಏಳು ಕುಲಗಳು ಇನ್ನೂ ಪಡೆದಿರಲಿಲ್ಲ.
2 Havia sete tribos entre os israelitas que ainda não tinham recebido sua parte.
3 ಆದ್ದರಿಂದ ಯೆಹೋಶುವನು ಇಸ್ರೇಲರಿಗೆ, “ನೀವು ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಅಷ್ಟು ದೀರ್ಘಕಾಲದವರೆಗೆ ಏಕೆ ಕಾಯುತ್ತೀರಿ? ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಈ ಭೂಮಿಯನ್ನು ನಿಮಗೆ ಕೊಟ್ಟಿದ್ದಾನೆ.
3 Josué disse aos israelitas: Até quando tardareis a tomar posse da terra que vos deu o Senhor, Deus de vossos pais?
4 ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ.
4 Escolhei de cada tribo três homens para que eu os envie a percorrer a terra: eles farão a sua descrição em vista da repartição, e voltarão para junto de mim.
5 ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ.
5 Dividi-la-ão em sete partes: Judá permanecerá nos seus limites do lado do meio-dia, e a casa de José nos seus, da banda do norte.
6 ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.
6 Traçareis, pois, a planta da terra, repartindo-a em sete partes, e me trareis aqui essa planta, para que eu, diante do Senhor, nosso Deus, vos lance as sortes.
7 ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.
7 Não haverá parte alguma para os levitas entre vós, porque sua herança é o sacerdócio do Senhor. Quanto a Gad, Rubem e a meia tribo de Manassés, já receberam a sua parte na Transjordânia, ao oriente, a qual lhes deu Moisés, servo do Senhor.
8 ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.
8 Então os homens se levantaram e partiram. E Josué deu ordem aos que partiram para demarcar a terra: Ide, disse ele, percorrei a terra, traçai a sua planta e voltai a mim; eu vos lançarei as sortes aqui em Silo, diante do Senhor.
9 ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.
9 Partiram, pois, percorreram a terra e fizeram a sua descrição em um livro, repartindo-a em sete porções, segundo as cidades. Depois voltaram para junto de Josué no acampamento de Silo.
10 ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.
10 Então Josué lançou-lhes a sorte diante do Senhor, e repartiu a terra entre os israelitas, segundo suas divisões.
11 ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.
11 A sorte caiu primeiro sobre a tribo dos benjaminitas, segundo suas famílias, aos quais coube o território situado entre os juditas e os filhos de José.
12 ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು
12 Sua fronteira, ao norte, partia do Jordão, subia atrás de Jericó, pelo norte e, indo pela montanha para o ocidente, terminava no deserto de Betaven.
13 ದಕ್ಷಿಣದಲ್ಲಿರುವ ಬೇತೇಲ್ ಎಂಬ ಲೂಜಿಗೆ ಹೋಗುತ್ತದೆ. ಅಲ್ಲಿಂದ ಇಳಿದು ಅಟಾರೋತದ್ದಾರ್‌ಗೆ ಹೋಗುತ್ತದೆ. ಅಟಾರೋತದ್ದಾರ್ ಕೆಳಗಿನ ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದ ಮೇಲೆ ಇದೆ.
13 Dali, passava ao meio-dia sobre a vertente de Luz, que é Betel; depois descia a Atarot-Adar, perto da montanha que está ao sul de Betoron inferior.
14 ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದಿಂದ ಆ ಸೀಮೆಯು ದಕ್ಷಿಣಕ್ಕೆ ತಿರುಗಿಕೊಂಡು ಆ ಬೆಟ್ಟದ ಪಶ್ಚಿಮಭಾಗದ ಜೊತೆಗೆ ಮುಂದುವರೆಯುತ್ತದೆ. ಆ ಸೀಮೆಯು ಕಿರ್ಯತ್ಯಾರೀಮ್ ಎಂಬ ಕಿರ್ಯತ್‌ಬಾಳ್‌ಗೆ ಹೋಗುತ್ತದೆ. ಈ ಪಟ್ಟಣವು ಯೆಹೂದ್ಯರಿಗೆ ಸೇರಿದ್ದು. ಇದು ಪಶ್ಚಿಮದಿಕ್ಕಿನ ಸೀಮೆಯಾಗಿತ್ತು.
14 Estendia-se em seguida e, dando volta ao lado ocidental para o sul, desde a montanha que está perto de Betoron, ao sul, terminava em Cariat-Baal, que é Cariatiarim, cidade dos juditas. Tal era a região ocidental.
15 ದಕ್ಷಿಣದಿಕ್ಕಿನ ಮೇರೆಯು ಕಿರ್ಯತ್ಯಾರೀಮಿನ ಹತ್ತಿರದಿಂದ ಪ್ರಾರಂಭವಾಗಿ ನೆಪ್ತೋಹ ನದಿಯವರೆಗೆ ಹೋಗುತ್ತದೆ.
15 A região meridional partia da extremidade de Cariatiarim, estendia-se para o ocidente e terminava na fonte das águas de Neftoa.
16 ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.
16 Descia depois à extremidade da montanha que está defronte ao vale do filho de Enom, no vale dos refains, ao norte. Descia em seguida pelo vale de Enom para a vertente meridional dos jebuseus e para En-Rogel,
17 ಅಲ್ಲಿಂದ ಆ ಸೀಮೆಯು ಉತ್ತರಕ್ಕೆ ತಿರುಗಿ ಏನ್‌ಷೆಮೆಸ್‌ಗೆ ಹೋಗುತ್ತದೆ. ಅದು ಗೆಲೀಲೋತದವರೆಗೆ ಮುಂದುವರೆಯುತ್ತದೆ. (ಬೆಟ್ಟಗಳಲ್ಲಿರುವ ಅದುಮ್ಮೀಮ್ ಎಂಬ ಇಕ್ಕಟ್ಟಾದ ಮಾರ್ಗದ ಸಮೀಪದಲ್ಲಿದೆ ಗೆಲೀಲೋತ್.) ಆ ಸೀಮೆಯು ರೂಬೇನನ ಮಗನಾದ ಬೋಹನನ ಹೆಸರಿನ ಮಹಾಬಂಡೆಗೆ ಹೋಗುತ್ತದೆ.
17 estendendo-se ao norte até En-Semer; dali chegava até Gelilot, defronte da subida de Adomim, e descia até a pedra de Boen, filho de Rubem.
18 ಆ ಸೀಮೆಯು ಬೇತ್‌ಅರಾಬ ಉತ್ತರಭಾಗಕ್ಕೆ ಮುಂದುವರೆದು ಅಲ್ಲಿಂದ ಅದು ಜೋರ್ಡನ್ ಕಣಿವೆಗೆ ಇಳಿಯುತ್ತದೆ.
18 Passava então pela vertente setentrional, em frente de Arabá, e descia a Arabá.
19 ಅಲ್ಲಿಂದ ಆ ಮೇರೆಯು ಬೇತ್‌ಹೊಗ್ಲಾವಿನ ಉತ್ತರಭಾಗದಲ್ಲಿ ಮುಂದುವರೆದು ಲವಣಸಮುದ್ರದ ಉತ್ತರ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಜೋರ್ಡನ್ ನದಿಯು ಸಮುದ್ರಕ್ಕೆ ಸೇರುವುದು ಇಲ್ಲಿಯೇ. ಇದು ದಕ್ಷಿಣದಿಕ್ಕಿನ ಸೀಮೆ.
19 Depois passava sobre a vertente setentrional de Bet-Hagla, e terminava no braço do mar Salgado que está ao norte, na extremidade meridional do Jordão. Tal era a fronteira do sul.
20 ಜೋರ್ಡನ್ ನದಿಯು ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಲಿನ ಮೇರೆಯು ಇದೇ.
20 O Jordão constituía a fronteira oriental. Esta foi a parte dos benjaminitas, segundo suas famílias, e tais foram as suas fronteiras em toda a volta.
21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
21 As cidades da tribo dos benjaminitas, segundo suas famílias, foram: Jericó, Bet-Hagla, Emec-Casis,
22 ಬೇತ್‌ಅರಾಬಾ, ಚೆಮಾರಯಿಮ್, ಬೇತೇಲ್,
22 Bet-Arabá, Samaraim, Betel,
23 ಅವ್ವೀಮ್, ಪಾರಾ, ಒಫ್ರಾ,
23 Avim, Afara, Ofera,
24 ಅಮ್ಮೋನ್ಯ, ಕೆಫೆರ್, ಒಫ್ನೀ ಮತ್ತು ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.
24 Quefar-Emona, Ofni e Gabéia; doze cidades com suas aldeias.
25 ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,
25 Gabaon, Rama, Berot,
26 ಮಿಚ್ಪೆ, ಕೆಫೀರಾ, ಮೋಚಾ,
26 Mesfé, Cafara, Amosa,
27 ರೆಕೆಮ್, ಇರ್ಫೇಲ್, ತರಲಾ,
27 Recém, Jarefel, Tarela,
28 ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.
28 Sela, Elef, Jebus, que é Jerusalém, Gabaat e Cariat; quatorze cidades com suas aldeias. Esta foi a parte dos benjaminitas segundo suas famílias.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Josué 18, comparar traduções ou montar um estudo — tudo direto pelo WhatsApp.