Josué 21

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.
1 Os chefes de família dos levitas vieram ter com o sacerdote Eleazar, com Josué, filho de Nun, e com os chefes de família das tribos israelitas,
2 ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.
2 e disseram-lhes em Silo, na terra de Canaã: O Senhor ordenou por Moisés que se nos dessem cidades para habitarmos, e juntamente seus arredores para nossos animais.
3 ಇಸ್ರೇಲರು ಯೆಹೋವನ ಈ ಆಜ್ಞೆಯನ್ನು ಪಾಲಿಸಿದರು. ಅವರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಅವುಗಳ ಸುತ್ತಮುತ್ತಲಿನ ಭೂಮಿಯನ್ನು ಕೊಟ್ಟರು:
3 E os israelitas deram, pois, de suas possessões, as seguintes cidades com seus arrabaldes aos levitas, segundo a ordem do Senhor:
4 ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂ ಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿ ಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು.
4 A sorte foi lançada para as famílias dos caatitas; e os levitas, filhos do sacerdote Aarão, obtiveram por sorte treze cidades das tribos de Judá, de Simeão e de Benjamim;
5 ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು.
5 os outros filhos de Caat obtiveram por sorte dez cidades das famílias das tribos de Efraim, de Dã e da meia tribo de Manassés.
6 ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.
6 Tocaram por sorte aos filhos de Gérson treze cidades das famílias das tribos de Issacar, de Aser, de Neftali e da meia tribo de Manassés em Basã.
7 ಮೆರಾರೀ ಗೋತ್ರದವರಿಗೆ ಹನ್ನೆರಡು ಪಟ್ಟಣಗಳನ್ನು ಕೊಡಲಾಯಿತು. ಈ ಹನ್ನೆರಡು ಪಟ್ಟಣಗಳು ರೂಬೇನ್, ಗಾದ್ ಮತ್ತು ಜೆಬುಲೂನ್ ಕುಲಗಳಿಗೆ ಸೇರಿದ ಪ್ರದೇಶಗಳಲ್ಲಿದ್ದವು.
7 Os filhos de Merari, segundo suas famílias, obtiveram doze cidades das tribos de Rubem, de Gad e de Zabulon.
8 ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.
8 Os israelitas deram aos levitas essas cidades com seus arrabaldes, repartindo-as por sorte, como o Senhor tinha ordenado por Moisés.
9 ಯೆಹೂದ ಮತ್ತು ಸಿಮೆಯೋನ್ ಕುಲದವರ ಪ್ರದೇಶಗಳಲ್ಲಿ ಬರುವ ಪಟ್ಟಣಗಳ ಹೆಸರುಗಳು ಇಂತಿವೆ:
9 Da tribo dos juditas e da tribo dos filhos de Simeão, deram as cidades cujos nomes seguem.
10 ಪಟ್ಟಣಗಳನ್ನು ಆರಿಸಿಕೊಳ್ಳುವ ಮೊದಲ ಅಧಿಕಾರವನ್ನು ಕೆಹಾತ್ಯ ಗೋತ್ರದ ಲೇವಿಯರಿಗೆ ಕೊಡಲಾಯಿತು.
10 Elas.foram dadas aos filhos de Aarão dentre as famílias dos caatitas, filhos de Levi, a quem caiu a primeira sorte.
11 ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.
11 Foi-lhes dada na montanha de Judá a cidade de Arbé, pai de Enac, que é Hebron, com seus arrabaldes.
12 ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು.
12 Os campos, porém, e as aldeias dessa cidade foram dados como propriedade a Caleb, filho de Jefoné.
13 ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,
13 Aos filhos do sacerdote Aarão deram Hebron e seus arrabaldes, a cidade de refúgio para o homicida, assim como Libna com seus arredores,
14 ಯತ್ತೀರ್, ಎಷ್ಟೆಮೋಹ,
14 Jeter com seus arredores, Estemo e seus arredores,
15 ಹೋಲೋನ್, ದೆಬೀರ್,
15 Holon e seus arredores, Dabir e seus arredores,
16 ಆಯಿನ್, ಯುಟ್ಟಾ ಮತ್ತು ಬೇತ್‌ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.
16 Ain e seus arredores, Jeta e seus arredores, Betsames e seus arredores; nove cidades dessas duas tribos.
17 ಬೆನ್ಯಾಮೀನ್ ಕುಲದವರಿಗೆ ಸೇರಿದ ನಗರಗಳನ್ನು ಸಹ ಆರೋನನ ಸಂತತಿಯವರಿಗೆ ಕೊಡಲಾಯಿತು. ಅವು ಯಾವುವೆಂದರೆ: ಗಿಬ್ಯೋನ್, ಗೆಬ,
17 Da tribo de Benjamim deram-lhes Gabaon e seus arredores,
18 ಅನಾತೋತ್ ಮತ್ತು ಅಲ್ಮೋನ್. ಈ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನೂ ಅವರಿಗೆ ಕೊಡಲಾಯಿತು.
18 Gabaa e seus arredores, Anatot e seus arredores, Almon e seus arredores; quatro cidades.
19 ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು.
19 Total das cidades dos sacerdotes, filhos de Aarão: treze cidades com seus arredores.
20 ಕೆಹಾತ್ಯರ ಕುಟುಂಬಕ್ಕೆ ಸೇರಿದ ಇತರ ಜನರಿಗೆ ಎಫ್ರಾಯೀಮ್ ಕುಲದವರ ಪ್ರದೇಶದಿಂದ ಕೆಲವು ಪಟ್ಟಣಗಳನ್ನು ಕೊಡಲಾಯಿತು. ಅವರು ಪಡೆದ ಪಟ್ಟಣಗಳು ಇವು:
20 Os levitas das outras famílias dos filhos de Caat receberam por sorte cidades da tribo de Efraim.
21 ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್,
21 Deram-lhes Siquém, cidade de refúgio para o homicida, e seus arredores, na montanha de Efraim, Geser e seus arredores,
22 ಕಿಬ್‌ಚೈಮ್ ಮತ್ತು ಬೇತ್‌ಹೋರೋನ್. ಒಟ್ಟಿನಲ್ಲಿ ಎಫ್ರಾಯೀಮರು ಅವರಿಗೆ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನೂ ಕೊಟ್ಟರು.
22 Gibsaim e seus arredores, Betoron e seus arredores; quatro cidades.
23 ದಾನ್ ಕುಲದವರು ಅವರಿಗೆ ಎಲ್ತೆಕೇ, ಗಿಬ್ಬೆತೋನ್,
23 Da tribo de Dã, foram-lhes dadas Elteco e seus arredores,
24 ಅಯ್ಯಾಲೋನ್ ಮತ್ತು ಗತ್‌ರಿಮ್ಮೋನ್ ಎಂಬ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
24 Gabaton e seus arredores, Ajalon e seus arredores, Get-Remon e seus arredores; quatro cidades.
25 ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್‌ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
25 Da meia tribo de Manassés: Tanac e seus arredores, Get-Remon e seus arredores; duas cidades.
26 ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪಭೂಮಿಯನ್ನು ಪಡೆದರು.
26 Total: dez cidades com seus arredores para as famílias dos outros filhos de Caat.
27 ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು:
27 Aos filhos de Gérson, uma das famílias de Levi, foram dadas da meia tribo de Manassés: Gaulon, cidade de refúgio para o homicida, em Basã, com seus arredores, e Bosra com seus arredores; duas cidades.
28 ಇಸ್ಸಾಕಾರ್ ಕುಲದವರು ಕಿಷ್ಯೋನ್, ದ್ವಾೆರತ್,
28 Da tribo de Issacar, Cesion e seus arredores, Daberet e seus arredores,
29 ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
29 Jaramote seus arredores, En-Gamin e seus, arredores; quatro cidades.
30 ಆಶೇರ್ ಕುಲದವರು ಮಿಷಾಲ್, ಅಬ್ದೋನ್,
30 Da tribo de Aser, Masal e seus arredores, Abdon e seus arredores,
31 ಹೆಲ್ಕಾತ್, ರೆಹೋಬ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
31 Helcat e seus arredores, Roob e seus arredores; quatro cidades.
32 ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್‌ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
32 Da tribo de Neftali, Cedes na Galiléia, cidade de refúgio para o homicida, e seus arredores, Hamat-Dor e seus arredores. Cartã e seus arredores; três cidades.
33 ಒಟ್ಟಿನಲ್ಲಿ ಗೇರ್ಷೋನ್ಯರಿಗೆ ಹದಿಮೂರು ಪಟ್ಟಣಗಳು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯು ಸಿಕ್ಕಿತು.
33 Total das cidades dos gersonitas segundo suas famílias: treze cidades com seus arredores.
34 ಲೇವಿಯರ ಮತ್ತೊಂದು ಗೋತ್ರವು ಮೆರಾರೀ ಎಂಬುದು. ಆ ಗೋತ್ರಕ್ಕೆ ದೊರೆತ ಪಟ್ಟಣಗಳು ಇಂತಿವೆ: ಜೆಬುಲೂನ್ ಕುಲದವರು ಅವರಿಗೆ ಚೂಕ್ನೀಮ್, ಕರ್ತಾ,
34 Às famílias dos filhos de Merari, o resto dos levitas, deram, da tribo de Zabulon, Jecnão e seus arredores, Carta e seus arredores,
35 ದಿಮ್ನಾ, ನಹಲಾಲ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಜೆಬುಲೂನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
35 Damna e seus arredores, Naalol e seus arredores; quatro cidades;
36 ರೂಬೇನ್ಯರು ಅವರಿಗೆ ಬೆಚೆರ್, ಯಹಚಾ,
36 da tribo de Rubem, Basor e seus arredores, Jassa e seus arredores,
37 ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
37 Cedemot e seus arredores, Mefaat e seus arredores; quatro cidades.
38 ಗಾದ್ಯರು ಅವರಿಗೆ ಗಿಲ್ಯಾದಿನ ಆಶ್ರಯನಗರವಾದ ರಾಮೋತ್, ಮಹನಯೀಮ್,
38 Da tribo de Gad: a cidade de refúgio para o homicida, Ramot em Galaad e seus arredores, Manaim e seus arredores,
39 ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
39 Hesebon e seus arredores, Jaser e seus arredores; ao todo, quatro cidades.
40 ಲೇವಿಯರ ಕೊನೆಯ ಗೋತ್ರದವರಾದ ಮೆರಾರೀಯರು ಒಟ್ಟಿನಲ್ಲಿ ಹನ್ನೆರಡು ಪಟ್ಟಣಗಳನ್ನು ಪಡೆದುಕೊಂಡರು.
40 Total das cidades dadas por sorte aos filhos de Merari segundo suas famílias, que formavam o resto dos levitas: doze cidades.
41 ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು.
41 Total das cidades dos levitas no meio das possessões dos israelitas: quarenta e oito cidades com seus arredores.
42 ಪ್ರತಿಯೊಂದು ಪಟ್ಟಣದಲ್ಲಿ ಪಶುಗಳಿಗಾಗಿ ಸ್ವಲ್ಪ ಭೂಮಿ ಇತ್ತು. ಇದು ಪ್ರತಿಯೊಂದು ಪಟ್ಟಣಕ್ಕೂ ಅನ್ವಯಿಸುತ್ತಿತ್ತು.
42 Cada uma dessas cidades tinha os seus arrabaldes ao redor: assim foi com todas as cidades.
43 ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.
43 Foi assim que o Senhor deu a Israel toda a terra que ele tinha jurado dar a seus pais. Eles possuíram-na e estabeleceram-se nela.
44 ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.
44 E o Senhor deu-lhes repouso em todo o derredor de sua terra, como tinha jurado a seus pais; nenhum dos seus inimigos pôde resistir-lhes, pois o Senhor entregou-os todos nas suas mãos.
45 ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.
45 Não falhou nenhuma de todas as boas palavras que o Senhor tinha dito a Israel. Todas se cumpriram.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Josué 21, comparar traduções ou montar um estudo — tudo direto pelo WhatsApp.