Josué 23
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA
1 ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.
1 Muito tempo havia se passado desde que o Senhor tinha dado a Israel repouso de todos os seus inimigos ao redor. Josué agora já era bem idoso.
2 ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ.
2 Ele chamou todo o Israel, os seus anciãos, os seus chefes, os seus juízes e os seus oficiais e lhes disse: — Já estou bem velho,
3 ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು.
3 e vocês já viram tudo o que o Senhor , seu Deus, fez com todas essas nações por causa de vocês, porque o Senhor , seu Deus, é o que lutou por vocês.
4 ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.
4 Vejam bem: por sorteio eu reparti entre as tribos de vocês estas nações que restam, juntamente com todas as nações que tenho eliminado, desde o Jordão até o mar Grande, na direção do pôr do sol.
5 ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.
5 O Senhor , seu Deus, as afastará e as expulsará da presença de vocês; e vocês tomarão posse das terras dessas nações, como o Senhor , seu Deus, prometeu.
6 “ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.
6 — Portanto, esforcem-se muito para guardar e cumprir tudo o que está escrito no Livro da Lei de Moisés, para que dela não se afastem, nem para a direita nem para a esquerda,
7 ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.
7 e para que não se misturem com essas nações que restaram entre vocês. Não façam menção dos nomes de seus deuses, nem jurem por eles. Não sirvam, nem adorem esses deuses.
8 ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೊ ಅದೇ ರೀತಿಯಲ್ಲಿ ಮುಂದೆಯೂ ಇರಿ.
8 Pelo contrário, apeguem-se ao Senhor , seu Deus, como vocês têm feito até o dia de hoje.
9 “ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.
9 Porque o Senhor expulsou de diante de vocês grandes e fortes nações; e, até o dia de hoje, ninguém conseguiu resistir a vocês.
10 ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.
10 Um só de vocês perseguirá mil, pois o Senhor , seu Deus, é quem luta por vocês, como ele prometeu.
11 ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.
11 — Portanto, empenhem-se em amar o Senhor , seu Deus.
12 “ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,
12 Porque, se vocês se desviarem dele e se apegarem ao que resta dessas nações que ainda se encontram entre vocês, e se unirem com elas por meio de casamento, e se misturarem com elas, e elas com vocês,
13 ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
13 saibam com certeza que o Senhor , seu Deus, não expulsará mais essas nações de diante de vocês. Pelo contrário, elas serão um laço e uma rede para vocês, e açoite nas costas e espinhos nos olhos, até que vocês desapareçam desta boa terra que o Senhor , seu Deus, lhes deu.
14 “ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನಗಳನ್ನು ನೆರವೇರಿಸಿದ್ದಾನೆ.
14 — Eis que hoje sigo pelo caminho de todos os mortais, e vocês sabem de todo o coração e de toda a alma que nem uma só promessa falhou de todas as boas palavras que o Senhor , seu Deus, lhes falou; todas se cumpriram, nem uma delas falhou.
15 ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗಟ್ಟವುದಾಗಿಯೂ ಆತನು ಹೇಳಿದ್ದಾನೆ.
15 E assim como se cumpriram todas estas boas coisas que o Senhor , seu Deus, lhes prometeu, assim o Senhor também cumprirá contra vocês todas as ameaças, até que os destrua de sobre a boa terra que o Senhor , seu Deus, lhes deu.
16 ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.
16 Se violarem a aliança que o Senhor , seu Deus, lhes ordenou, e forem e servirem outros deuses, e os adorarem, a ira do Senhor se acenderá sobre vocês, e logo vocês desaparecerão da boa terra que ele lhes deu.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Josué 23, comparar traduções ou montar um estudo — tudo direto pelo WhatsApp.