Josué 24
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF
1 ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.
1 Depois reuniu Josué todas as tribos de Israel em Siquém; e chamou os anciãos de Israel, e os seus cabeças, e os seus juízes, e os seus oficiais; e eles se apresentaram diante de Deus.
2 ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
2 Então Josué disse a todo o povo: Assim diz o Senhor Deus de Israel: Além do rio habitaram antigamente vossos pais, Terá, pai de Abraão e pai de Naor; e serviram a outros deuses.
3 ಆದರೆ ಯೆಹೋವನಾದ ನಾನು ನಿಮ್ಮ ಪೂರ್ವಿಕನಾದ ಅಬ್ರಹಾಮನನ್ನು ಆ ಪ್ರದೇಶದಿಂದ ನದಿಯ ಮತ್ತೊಂದು ದಡಕ್ಕೆ ಕರೆದುಕೊಂಡು ಬಂದೆ. ನಾನು ಅವನನ್ನು ಕಾನಾನ್ ಪ್ರದೇಶದಲ್ಲೆಲ್ಲ ಸಂಚಾರ ಮಾಡಿಸಿ ಅವನಿಗೆ ಅನೇಕ ಮಕ್ಕಳನ್ನು ಕೊಟ್ಟೆನು, ನಾನು ಅಬ್ರಹಾಮನಿಗೆ ಇಸಾಕನೆಂಬ ಮಗನನ್ನು ಕೊಟ್ಟೆ.
3 Eu, porém, tomei a vosso pai Abraão dalém do rio e o fiz andar por toda a terra de Canaã; também multipliquei a sua descendência e dei-lhe a Isaque.
4 ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು.
4 E a Isaque dei Jacó e Esaú; e a Esaú dei a montanha de Seir, para a possuir; porém, Jacó e seus filhos desceram para o Egito.
5 “‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ.
5 Então enviei Moisés e Arão e feri ao Egito, como o fiz no meio deles; e depois vos tirei de lá.
6 ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.
6 E, tirando eu a vossos pais do Egito, viestes ao mar; e os egípcios perseguiram a vossos pais com carros e com cavaleiros, até ao Mar Vermelho.
7 ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ.
7 E clamaram ao Senhor, que pôs uma escuridão entre vós e os egípcios, e trouxe o mar sobre eles, e os cobriu, e os vossos olhos viram o que eu fiz no Egito; depois habitastes no deserto muitos dias.
8 ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ.
8 Então eu vos trouxe à terra dos amorreus, que habitavam além do Jordão, os quais pelejaram contra vós; porém os entreguei nas vossas mãos, e possuístes a sua terra, e os destruí de diante de vós.
9 “‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.
9 Levantou-se também Balaque, filho de Zipor, rei dos moabitas e pelejou contra Israel; e mandou chamar a Balaão, filho de Beor, para que vos amaldiçoasse.
10 ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ.
10 Porém eu não quis ouvir a Balaão; pelo que ele vos abençoou grandemente e eu vos livrei da sua mão.
11 “‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.
11 E, passando vós o Jordão, e vindo a Jericó, os habitantes de Jericó pelejaram contra vós, os amorreus, e os perizeus, e os cananeus, e os heteus, e os girgaseus, e os heveus, e os jebuseus; porém os entreguei nas vossas mãos.
12 ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ.
12 E enviei vespões adiante de vós, que os expulsaram de diante de vós, como a ambos os reis dos amorreus; não com a tua espada nem com o teu arco.
13 “‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”
13 E eu vos dei a terra em que não trabalhastes, e cidades que não edificastes, e habitais nelas e comeis das vinhas e dos olivais que não plantastes.
14 ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.
14 Agora, pois, temei ao Senhor, e servi-o com sinceridade e com verdade; e deitai fora os deuses aos quais serviram vossos pais além do rio e no Egito, e servi ao Senhor.
15 “ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
15 Porém, se vos parece mal aos vossos olhos servir ao Senhor, escolhei hoje a quem sirvais; se aos deuses a quem serviram vossos pais, que estavam além do rio, ou aos deuses dos amorreus, em cuja terra habitais; porém eu e a minha casa serviremos ao Senhor.
16 ಅದಕ್ಕೆ ಜನರು, “ನಾವು ಯೆಹೋವನನ್ನು ಅನುಸರಿಸುವುದನ್ನು ಎಂದಿಗೂ ನಿಲ್ಲಿಸುವದಿಲ್ಲ. ನಾವು ಬೇರೆ ದೇವರುಗಳ ಸೇವೆಯನ್ನು ಎಂದಿಗೂ ಮಾಡುವುದಿಲ್ಲ.
16 Então respondeu o povo, e disse: Nunca nos aconteça que deixemos ao Senhor para servirmos a outros deuses;
17 ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.
17 Porque o Senhor é o nosso Deus; ele é o que nos fez subir, a nós e a nossos pais, da terra do Egito, da casa da servidão, e o que tem feito estes grandes sinais aos nossos olhos, e nos guardou por todo o caminho que andamos, e entre todos os povos pelo meio dos quais passamos.
18 ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು.
18 E o Senhor expulsou de diante de nós a todos esses povos, até ao amorreu, morador da terra; também nós serviremos ao Senhor, porquanto é nosso Deus.
19 ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.
19 Então Josué disse ao povo: Não podereis servir ao Senhor, porquanto é Deus santo, é Deus zeloso, que não perdoará a vossa transgressão nem os vossos pecados.
20 ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.
20 Se deixardes ao Senhor, e servirdes a deuses estranhos, então ele se tornará, e vos fará mal, e vos consumirá, depois de vos ter feito o bem.
21 ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು.
21 Então disse o povo a Josué: Não, antes ao Senhor serviremos.
22 ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು.
22 E Josué disse ao povo: Sois testemunhas contra vós mesmos de que escolhestes ao Senhor, para o servir. E disseram: Somos testemunhas.
23 ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು.
23 Deitai, pois, agora, fora aos deuses estranhos que há no meio de vós, e inclinai o vosso coração ao Senhor Deus de Israel.
24 ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.
24 E disse o povo a Josué: Serviremos ao Senhor nosso Deus, e obedeceremos à sua voz.
25 ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.
25 Assim, naquele dia fez Josué aliança com o povo e lhe pôs por estatuto e direito em Siquém.
26 ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.
26 E Josué escreveu estas palavras no livro da lei de Deus; e tomou uma grande pedra, e a erigiu ali debaixo do carvalho que estava junto ao santuário do Senhor.
27 ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.
27 E disse Josué a todo o povo: Eis que esta pedra nos será por testemunho, pois ela ouviu todas as palavras, que o Senhor nos tem falado; e também será testemunho contra vós, para que não mintais a vosso Deus.
28 ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು.
28 Então Josué enviou o povo, cada um para a sua herança.
29 ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು.
29 E depois destas coisas sucedeu que Josué, filho de Num, servo do Senhor, faleceu, com idade de cento e dez anos.
30 ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.
30 E sepultaram-no no termo da sua herança, em Timnate-Sera, que está no monte de Efraim, para o norte do monte de Gaás.
31 ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು.
31 Serviu, pois, Israel ao Senhor todos os dias de Josué, e todos os dias dos anciãos que ainda sobreviveram muito tempo depois de Josué, e que sabiam todas as obras que o Senhor tinha feito a Israel.
32 ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.
32 Também os ossos de José, que os filhos de Israel trouxeram do Egito, foram enterrados em Siquém, naquela parte do campo que Jacó comprara aos filhos de Hemor, pai de Siquém, por cem peças de prata, e que se tornara herança dos filhos de José.
33 ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.
33 Faleceu também Eleazar, filho de Arão, e o sepultaram no outeiro de Finéias, seu filho, que lhe fora dado na montanha de Efraim.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Josué 24, comparar traduções ou montar um estudo — tudo direto pelo WhatsApp.