Josué 8
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯಿ’ಗೆ ತೆಗೆದುಕೊಂಡು ಹೋಗು. ‘ಆಯಿ’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು.
1 O Senhor Deus disse a Josué: — Não tenha medo! Seja corajoso! Marche com todos os seus soldados contra a cidade de Ai. Eu farei com que derrotem o rei de lá. O povo de Ai, a sua cidade e as suas terras serão de vocês.
2 ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.
2 Vocês vão fazer com essa cidade o que fizeram com Jericó, mas desta vez todos os objetos e o gado vão ficar para vocês. Preparem-se para atacar a cidade de surpresa e por trás.
3 ಯೆಹೋಶುವನು “ಆಯಿ”ಯ ಮೇಲೆ ಆಕ್ರಮಣಮಾಡಲು ಸೈನ್ಯಸಮೇತವಾಗಿ ಹೋದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.
3 Então Josué e todos os soldados se prepararam para marchar contra Ai. Ele escolheu trinta mil homens corajosos e os enviou de noite
4 ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.
4 com estas ordens: — Escondam-se do outro lado da cidade. Não fiquem muito longe e estejam prontos para atacar.
5 ನಾನು ನನ್ನ ಸಂಗಡವಿರುವ ಜನರನ್ನು ಕರೆದುಕೊಂಡು ಪಟ್ಟಣದ ಕಡೆಗೆ ಹೋಗುತ್ತೇನೆ. ಪಟ್ಟಣದೊಳಗಿರುವ ಜನರು ನಮ್ಮ ಸಂಗಡ ಕಾದಾಡಲು ಹೊರಗೆ ಬರುತ್ತಾರೆ. ನಾವು ಮುಂಚಿನಂತೆ ಹಿಂತಿರುಗಿ ಅಲ್ಲಿಂದ ಓಡುತ್ತೇವೆ.
5 Eu e os meus soldados vamos avançar na direção da cidade. Quando os soldados de Ai saírem contra nós, vamos fugir como na primeira vez.
6 ಅವರು ನಗರದಿಂದ ನಮ್ಮನ್ನು ಬೆನ್ನಟ್ಟಿಕೊಂಡು ಬರುತ್ತಾರೆ. ನಾವು ಮುಂಚಿನಂತೆ ಅವರ ಮುಂದೆ ಸೋತು ಓಡಿಹೋಗುತ್ತಿದ್ದೇವೆ ಎಂದು ಅವರು ತಿಳಿದುಕೊಳ್ಳುತ್ತಾರೆ. ಹೀಗೆ ನಾವು ಬಹುದೂರ ಓಡಿಹೋದಾಗ
6 Eles vão sair atrás de nós, afastando-se da cidade. Vão pensar que estamos fugindo deles como na primeira vez.
7 ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯ ಪಾಲಿಸುತ್ತಾನೆ.
7 Então vocês sairão dos esconderijos e tomarão a cidade. O Senhor , nosso Deus, entregará Ai a vocês.
8 “ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.
8 Depois que tomarem a cidade, ponham fogo nela, como o Senhor mandou. São essas as minhas ordens.
9 ಬಳಿಕ ಯೆಹೋಶುವನು ಅವರನ್ನು ಅವರು ಅಡಗಿಕೊಳ್ಳಬೇಕಾದ ಸ್ಥಳಕ್ಕೆ ಕಳುಹಿಸಿದನು. ಅವರು “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿದ್ದ ಒಂದು ಸ್ಥಳಕ್ಕೆ ಹೋದರು. ಇದು ಆಯಿಯ ಪಶ್ಚಿಮಕ್ಕಿತ್ತು. ಯೆಹೋಶುವನು ತನ್ನ ಜನರೊಂದಿಗೆ ಆ ರಾತ್ರಿ ಅಲ್ಲಿಯೇ ಇದ್ದನು.
9 Assim Josué enviou os soldados, e eles foram se esconder a oeste de Ai, entre Ai e Betel. Mas Josué passou a noite no acampamento.
10 ಮರುದಿನ ಬೆಳಿಗ್ಗೆ ಯೆಹೋಶುವನು ಎಲ್ಲ ಜನರನ್ನು ಒಂದು ಕಡೆ ಬೇಗನೆ ಸೇರಿಸಿದನು. ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ನಾಯಕರು ಜನರನ್ನು “ಆಯಿ”ಗೆ ಮುನ್ನಡೆಸಿದರು.
10 Levantou-se de madrugada e reuniu os soldados. Ele e os líderes de Israel marcharam na frente do povo na direção de Ai.
11 ಅವನ ಜೊತೆಗಿದ್ದ ಎಲ್ಲ ಸೈನಿಕರು “ಆಯಿ”ಯ ಕಡೆಗೆ ಹೋದರು. ಅವರು ನಗರದ ಮುಂದುಗಡೆ ನಿಂತರು. ಸೈನ್ಯವು ನಗರದ ಉತ್ತರ ದಿಕ್ಕಿನಲ್ಲಿಳಿದುಕೊಂಡಿತು. ಈ ಸೈನ್ಯ ಮತ್ತು “ಆಯಿ” ಪಟ್ಟಣದ ನಡುವೆ ಒಂದು ಕಣಿವೆ ಇತ್ತು.
11 Os soldados que iam com Josué marcharam na direção do portão principal da cidade e acamparam no lado norte. Havia um vale entre eles e Ai.
12 ಆಗ ಯೆಹೋಶುವನು ಸುಮಾರು ಐದು ಸಾವಿರ ಜನರನ್ನು ಆರಿಸಿ ಪಟ್ಟಣದ ಪಶ್ಚಿಮದಲ್ಲಿರುವ “ಬೇತೇಲ್” ಮತ್ತು “ಆಯಿ”ಯ ಮಧ್ಯದಲ್ಲಿರುವ ಕ್ಷೇತ್ರದಲ್ಲಿ ಅಡಗಿಕೊಳ್ಳಲು ಕಳುಹಿಸಿಕೊಟ್ಟನು.
12 Josué reuniu uns cinco mil homens e os pôs em esconderijos a oeste, entre Ai e Betel.
13 ಯೆಹೋಶುವನು ತನ್ನ ಜನರನ್ನು ಯುದ್ಧಕ್ಕೆ ಸಿದ್ಧಗೊಳಿಸಿದ್ದನು. ಮುಖ್ಯ ಪಾಳೆಯವು ಪಟ್ಟಣದ ಉತ್ತರ ದಿಕ್ಕಿನಲ್ಲಿತ್ತು. ಉಳಿದ ಜನರು ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಆ ರಾತ್ರಿ ಯೆಹೋಶುವನು ಕಣಿವೆಗೆ ಹೋದನು.
13 Os soldados estavam colocados assim para a batalha: o acampamento principal, ao norte da cidade; e os outros, a oeste. E Josué passou a noite no vale.
14 ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವುದಕ್ಕಾಗಿ ತ್ವರೆಮಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ.
14 O rei de Ai agiu depressa quando viu os israelitas. Ele e todos os seus soldados saíram de madrugada e foram lutar contra os israelitas no mesmo lugar de antes, em frente do vale do Jordão. Ele não sabia que ia ser atacado por trás.
15 ಯೆಹೋಶುವನು ಮತ್ತು ಇಸ್ರೇಲರ ಎಲ್ಲ ಜನರು “ಆಯಿ”ಯ ಸೈನ್ಯವು ತಮ್ಮನ್ನು ಹಿಮ್ಮೆಟ್ಟುವುದಕ್ಕೆ ಅವಕಾಶ ಮಾಡಿಕೊಟ್ಟರು. ಯೆಹೋಶುವನು ಮತ್ತು ಅವನ ಜನರು ಪೂರ್ವಕ್ಕೆ ಮರಭೂಮಿಯ ಕಡೆಗೆ ಓಡಲು ಪ್ರಾರಂಭಿಸಿದರು.
15 Josué e os seus soldados fingiram que estavam sendo derrotados e fugiram para o deserto.
16 ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು.
16 Todos os homens de Ai tinham sido convocados para ir atrás dos israelitas; e, enquanto perseguiam Josué, iam se afastando cada vez mais da cidade.
17 “ಆಯಿ” ಮತ್ತು ಬೇತೇಲಿನ ಎಲ್ಲ ಜನರು ಇಸ್ರೇಲಿನ ಸೈನ್ಯವನ್ನು ಬೆನ್ನಟ್ಟಿದರು. ಪಟ್ಟಣದ ಬಾಗಿಲನ್ನು ತೆರೆದಿಟ್ಟಿದ್ದರು; ಒಬ್ಬನಾದರೂ ಪಟ್ಟಣದ ರಕ್ಷಣೆಗೆ ಉಳಿದಿರಲಿಲ್ಲ.
17 Todos os homens de Ai saíram atrás dos israelitas, e a cidade ficou aberta, sem ninguém para defendê-la.
18 ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು.
18 Então o Senhor disse a Josué: — Aponte a sua lança na direção de Ai, pois vou dar esta cidade a você. E Josué obedeceu.
19 ಅಡಗಿಕೊಂಡಿದ್ದ ಇಸ್ರೇಲಿನ ಜನರು ಇದನ್ನು ನೋಡಿ ಕೂಡಲೇ ತಾವು ಅಡಗಿದ್ದ ಸ್ಥಳದಿಂದ ಹೊರಬಂದು ವೇಗವಾಗಿ ಪಟ್ಟಣದ ಕಡೆಗೆ ಧಾವಿಸಿದರು. ಅವರು ಪಟ್ಟಣವನ್ನು ಪ್ರವೇಶಿಸಿ ಅದನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದರು.
19 Quando ele levantou a mão, os homens que estavam escondidos se levantaram depressa, correram, tomaram a cidade e em seguida puseram fogo nela.
20 “ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.
20 Quando os homens de Ai olharam para trás, viram a fumaça, que subia para o céu. Porém não puderam fugir para lado nenhum porque os israelitas que haviam corrido para o deserto deram meia-volta e os atacaram.
21 ಯೆಹೋಶುವನು ಮತ್ತು ಅವನ ಜನರು, ತಮ್ಮ ಸೈನ್ಯವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡದ್ದನ್ನು ನೋಡಿದರು. ಅವರು ಪಟ್ಟಣದಿಂದ ಏಳುತ್ತಿರುವ ಹೊಗೆಯನ್ನು ನೋಡಿದರು. ಆಗ ಅವರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ” ಜನರೊಂದಿಗೆ ಹೋರಾಡಲು ಬಂದರು.
21 Josué e os seus soldados viram que os outros tinham tomado a cidade e posto fogo nela. Então deram meia-volta e começaram a matar os homens de Ai.
22 ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು “ಆಯಿ”ಯ ಜನರ ಎರಡು ಕಡೆಗೂ ಇತ್ತು. “ಆಯಿ”ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.
22 Os israelitas que estavam na cidade também saíram para atacar os homens de Ai. Esses homens foram completamente cercados e mortos pelos israelitas;
23 ಆದರೆ “ಆಯಿ”ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.
23 só ficou vivo o rei de Ai, que foi preso e levado a Josué.
24 ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು ‘ಆಯಿ’ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.
24 Os israelitas mataram todos os inimigos em campo aberto, no deserto onde haviam sido perseguidos. Depois voltaram para Ai e mataram os que estavam lá.
25 “ಆಯಿ”ಯ ಜನರೆಲ್ಲಾ ಆ ದಿನ ಸತ್ತುಹೋದರು. ಅಲ್ಲಿ ಹನ್ನೆರಡು ಸಾವಿರ ಗಂಡಸರು ಮತ್ತು ಹೆಂಗಸರು ಇದ್ದರು.
25 Nesse dia foram mortos todos os moradores de Ai — doze mil pessoas.
26 ಆ ಪಟ್ಟಣವನ್ನು ನಾಶಮಾಡಲು ಸೂಚಿಸುವ ಸಂಕೇತದಂತೆ ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು. ಆ ಪಟ್ಟಣದ ಜನರೆಲ್ಲರೂ ನಾಶವಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
26 Josué continuou a apontar a lança na direção de Ai e não a abaixou até que todas as pessoas da cidade foram mortas.
27 ಆ ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆಕೊಟ್ಟಿದ್ದನು.
27 Os israelitas ficaram com as coisas que pegaram na cidade, como o Senhor havia ordenado que Josué fizesse.
28 ಅನಂತರ ಯೆಹೋಶುವನು “ಆಯಿ” ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.
28 Josué incendiou Ai, que virou um montão de ruínas para sempre, como se pode ver até hoje .
29 ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.
29 Ele enforcou o rei de Ai numa árvore e o deixou ali até de tarde. Ao pôr do sol mandou que tirassem o corpo e o jogassem no portão de entrada da cidade. E o cobriram com um montão de pedras, que está naquele lugar até hoje.
30 ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು.
30 Nessa ocasião Josué construiu no monte Ebal um altar ao Senhor , o Deus de Israel.
31 ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.
31 Ele seguiu as ordens que Moisés, servo do Senhor , tinha dado aos israelitas, como está escrito na Lei de Moisés: “Faça um altar de pedras brutas, que não foram cortadas com ferramentas.” Sobre esse altar apresentaram ao Senhor ofertas que foram completamente queimadas e ofertas de paz.
32 ಆ ಸ್ಥಳದಲ್ಲಿ ಯೆಹೋಶುವನು ಮೋಶೆಯ ಧರ್ಮಶಾಸ್ತ್ರವನ್ನು ಕಲ್ಲಿನ ಹಲಗೆಗಳ ಮೇಲೆ ಬರೆಸಿದನು. ಇಸ್ರೇಲರೆಲ್ಲರೂ ಅದನ್ನು ನೋಡಬೇಕೆಂಬುದೇ ಅದರ ಉದ್ದೇಶವಾಗಿತ್ತು.
32 Ali, na frente do povo, Josué copiou em pedras a lei que Moisés tinha escrito.
33 ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.
33 E todos os israelitas, com os seus líderes, autoridades e juízes e também todos os estrangeiros que viviam no meio deles ficaram de um lado e de outro da arca da aliança . E outros ficaram de frente para os sacerdotes levitas que carregavam a arca. Metade do povo ficou em frente do monte Gerizim, e a outra metade, em frente do monte Ebal. Moisés, servo do Senhor , tinha dado ordem para o povo se colocar nessa posição na hora de receber a bênção.
34 ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು.
34 Então Josué leu em voz alta toda a lei, com as bênçãos e as maldições, como estão escritas no Livro da Lei .
35 ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.
35 Cada um dos mandamentos de Moisés foi lido por Josué para toda a multidão de israelitas e para as mulheres, crianças e estrangeiros que viviam entre eles. Nenhuma palavra deixou de ser lida.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Josué 8, comparar traduções ou montar um estudo — tudo direto pelo WhatsApp.