Josué 9

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH

Sair da comparação
NTLH Nova Tradução na Linguagem de Hoje 2000
1 ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.
1 Todos os reis que viviam a oeste do rio Jordão, tanto os das montanhas como os das planícies, e também os reis de todo o litoral do mar Mediterrâneo até o Líbano ficaram sabendo disso. Estes eram os reis dos heteus, dos amorreus, dos cananeus, dos perizeus, dos heveus e dos jebuseus.
2 ಈ ಎಲ್ಲ ಅರಸರು ಒಂದು ಕಡೆ ಸೇರಿದರು. ಅವರು ಯೆಹೋಶುವನ ಮತ್ತು ಇಸ್ರೇಲರ ವಿರುದ್ಧ ಯುದ್ಧ ಮಾಡುವ ಯೋಜನೆಗಳನ್ನು ಹಾಕಿಕೊಂಡರು.
2 E todos eles se reuniram para guerrear contra Josué e o povo de Israel.
3 ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು.
3 Quando os moradores da cidade de Gibeão, que eram heveus, ouviram falar do que Josué tinha feito com Jericó e com Ai,
4 ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು.
4 resolveram enganá-lo. Pegaram comida e carregaram os seus jumentos com sacos velhos e com odres rasgados e remendados, cheios de vinho.
5 ಅವರು ಹಳೆಯ ಪಾದರಕ್ಷೆಗಳನ್ನು ಮೆಟ್ಟಿಕೊಂಡರು; ಹಳೆಯ ಬಟ್ಟೆಗಳನ್ನು ಧರಿಸಿಕೊಂಡರು; ಒಣಗಿದ ಮತ್ತು ಕೆಟ್ಟುಹೋದ ರೊಟ್ಟಿಗಳನ್ನು ಕಟ್ಟಿಕೊಂಡರು. ಹೀಗೆ ಅವರು ಬಹುದೂರ ಪ್ರಯಾಣಮಾಡಿ ಬಂದವರಂತೆ ತೋರಿಸಿಕೊಂಡರು.
5 Calçaram sandálias velhas e remendadas e vestiram roupas bem gastas. E levaram para comer pão seco e bolorento.
6 ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು.
6 Eles foram até o acampamento de Gilgal e disseram a Josué e a todos os homens de Israel: — Nós estamos chegando de um país que fica bem longe daqui. Façam um
7 ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.
7 Porém os homens de Israel disseram: — Pode ser que vocês morem aqui por perto. Como é que podemos fazer um acordo de paz com vocês?
8 ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು.
8 — Estamos prontos para ser seus empregados! — responderam eles. — Quem são vocês? De onde vêm? — perguntou Josué.
9 ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.
9 Os gibeonitas responderam: — Nós, os seus criados, somos de um país que fica muito longe e viemos até aqui porque ouvimos falar do
10 ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.
10 E também soubemos o que fez com os dois reis amorreus a leste do rio Jordão; a Seom, rei de Hesbom, e a Ogue, rei de Basã, que vivia em Astarote.
11 ಆದ್ದರಿಂದ ನಮ್ಮ ಹಿರಿಯರು ಮತ್ತು ನಮ್ಮ ಜನರು ನಮಗೆ, ‘ನಿಮ್ಮ ಪ್ರಯಾಣಕ್ಕೆ ಸಾಕಷ್ಟು ಆಹಾರವನ್ನು ತೆಗೆದುಕೊಂಡು ಹೋಗಿ ಇಸ್ರೇಲರನ್ನು ಭೇಟಿಮಾಡಿ, ‘ನಾವು ನಿಮ್ಮ ಸೇವಕರು. ನಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಿರಿ ಎಂದು ಅವರಿಗೆ ತಿಳಿಸಿ’ ಎಂಬುದಾಗಿ ಹೇಳಿ ನಮ್ಮನ್ನು ಕಳುಹಿಸಿದ್ದಾರೆ.
11 Os nossos líderes e toda a nossa gente nos mandaram preparar comida para viajar. Eles nos mandaram encontrar com vocês e dizer: “Estamos prontos para ser seus empregados! Façam um acordo de paz com a gente.”
12 “ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ.
12 E vejam só o nosso pão! Estava quentinho quando saímos de casa no começo da viagem. Mas olhem! Agora está seco e bolorento.
13 ನಮ್ಮ ದ್ರಾಕ್ಷಾರಸದ ಬುದ್ದಲಿಗಳನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಅವು ಹೊಸದಾಗಿದ್ದವು ಮತ್ತು ದ್ರಾಕ್ಷಾರಸದಿಂದ ತುಂಬಿದ್ದವು. ಆದರೆ ಈಗ ಹಳೆಯದಾಗಿ ಹರಿದುಹೋಗಿವೆ. ನಮ್ಮ ಬಟ್ಟೆಗಳನ್ನು ಮತ್ತು ಪಾದರಕ್ಷೆಗಳನ್ನು ನೋಡಿರಿ, ಈಗ ಅವು ದೂರ ಪ್ರಯಾಣದಿಂದ ಹಾಳಾಗಿಹೋಗಿವೆ” ಎಂದು ಹೇಳಿದರು.
13 Quando enchemos de vinho estes odres, eles eram novos. Mas vejam! Agora estão rasgados. As nossas roupas e as nossas sandálias estão gastas por causa da longa viagem que fizemos.
14 ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.
14 Os homens de Israel aceitaram a comida deles, porém não pediram conselho a Deus, o Senhor .
15 ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.
15 Josué fez um acordo de paz com os gibeonitas, prometendo que não seriam mortos. E os líderes do povo de Israel juraram que cumpririam a sua palavra.
16 ಮೂರು ದಿನಗಳ ತರುವಾಯ ಆ ಜನರು ತಮ್ಮ ಪಾಳೆಯದ ಸಮೀಪ ವಾಸಿಸುವವರು ಎಂಬುದು ಇಸ್ರೇಲರಿಗೆ ತಿಳಿದುಬಂತು.
16 Três dias depois de feito o acordo, descobriram que aquela gente morava perto.
17 ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.
17 Tanto assim que os israelitas saíram do acampamento e três dias depois chegaram às cidades onde os gibeonitas viviam, isto é, Gibeão, Cefira, Beerote e Quiriate-Jearim.
18 ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು.
18 Porém, por causa do juramento que os seus líderes tinham feito aos gibeonitas em nome do Senhor , o Deus de Israel, os israelitas não os mataram. E por isso todo o povo reclamou contra os líderes,
19 ಆದರೆ ಜನನಾಯಕರು, “ನಾವು ಮಾತುಕೊಟ್ಟಿದ್ದೇವೆ; ಇಸ್ರೇಲಿನ ದೇವರಾದ ಯೆಹೋವನ ಮುಂದೆ ಪ್ರಮಾಣ ಮಾಡಿದ್ದೇವೆ; ಈಗ ನಾವು ಅವರ ವಿರುದ್ಧ ಯುದ್ಧ ಮಾಡಲು ಸಾಧ್ಯವಿಲ್ಲ.
19 mas eles explicaram assim: — Nós juramos em nome do
20 ನಾವು ಅವರನ್ನು ಜೀವಂತವಾಗಿ ಉಳಿಸಲೇಬೇಕು. ನಾವು ಅವರಿಗೆ ಕೊಟ್ಟ ಮಾತನ್ನು ಮೀರಿದರೆ ದೇವರ ಕೋಪಕ್ಕೆ ಗುರಿಯಾಗುತ್ತೇವೆ.
20 Por causa da nossa promessa temos de deixá-los viver; se não, Deus nos castigará.
21 ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.
21 Deixem que eles vivam; mas terão de cortar lenha e carregar água para nós. Foi isso o que os líderes disseram.
22 ಯೆಹೋಶುವನು ಗಿಬ್ಯೋನಿನ ಜನರನ್ನು ಕರೆದು, “ನೀವು ನಮಗೆ ಸುಳ್ಳು ಹೇಳಿದ್ದೇಕೆ? ನಿಮ್ಮ ನಾಡು ನಮ್ಮ ಪಾಳೆಯದ ಹತ್ತಿರವೇ ಇತ್ತು. ಆದರೆ ನೀವು ನಿಮ್ಮನ್ನು ದೂರದೇಶದವರು ಎಂದು ಹೇಳಿಕೊಂಡಿರಿ.
22 Então Josué chamou os gibeonitas e perguntou: — Por que vocês nos enganaram, afirmando que vinham de longe, quando vivem aqui mesmo?
23 ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.
23 E, já que vocês fizeram isso, de agora em diante vão viver debaixo do castigo de Deus. É do povo gibeonita que sairão sempre os escravos para cortar madeira e carregar água para a casa do meu Deus.
24 ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.
24 Eles responderam: — Fizemos isso porque ficamos sabendo que o
25 ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.
25 Agora estamos nas suas mãos; faça de nós o que achar melhor.
26 ಹೀಗೆ ಗಿಬ್ಯೋನಿನ ಜನರು ಗುಲಾಮರಾದರು. ಆದರೆ ಯೆಹೋಶುವನು ಅವರನ್ನು ಜೀವಂತವಾಗಿ ಉಳಿಸಿದನು. ಇಸ್ರೇಲರು ಅವರನ್ನು ಕೊಲ್ಲದಂತೆ ನೋಡಿಕೊಂಡರು.
26 Josué protegeu os gibeonitas e não deixou que fossem mortos.
27 ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.
27 Mas, daquele dia em diante, ele os obrigou a serem carregadores de água e rachadores de lenha para o povo de Israel e para o altar de Deus, o Senhor . E até hoje eles continuam fazendo isso, trabalhando no lugar escolhido por Deus para a sua adoração.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Josué 9, comparar traduções ou montar um estudo — tudo direto pelo WhatsApp.