Juízes 11
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಯೆಫ್ತಾಹನು ಗಿಲ್ಯಾದ್ ಕುಲದವನಾಗಿದ್ದನು. ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಯೆಫ್ತಾಹನು ಒಬ್ಬ ವೇಶ್ಯೆಯ ಮಗನಾಗಿದ್ದನು. ಅವನ ತಂದೆಯ ಹೆಸರು ಗಿಲ್ಯಾದ್.
1 Jefté, o galaadita, era. um valente guerreiro, filho de Galaad e duma meretriz.
2 ಗಿಲ್ಯಾದನ ಹೆಂಡತಿಗೆ ಅನೇಕ ಜನ ಮಕ್ಕಳಿದ್ದರು. ಆ ಮಕ್ಕಳು ದೊಡ್ಡವರಾದ ಮೇಲೆ ಯೆಫ್ತಾಹನನ್ನು ಇಷ್ಟಪಡಲಿಲ್ಲ. ಯೆಫ್ತಾಹನು ತನ್ನ ಹುಟ್ಟೂರನ್ನು ಬಿಡುವಂತೆ ಆ ಮಕ್ಕಳು ಒತ್ತಾಯಮಾಡಿದರು. ಅವರು ಅವನಿಗೆ, “ನೀನು ನಮ್ಮ ತಂದೆಯ ಆಸ್ತಿಯಲ್ಲಿ ಯಾವ ಭಾಗವನ್ನೂ ಪಡೆಯಲಾರೆ. ನೀನು ವೇಶ್ಯೆಯ ಮಗ” ಎಂದು ಹೇಳಿದರು.
2 A mulher de Galaad deu-lhe filhos, e estes, tendo crescido, expulsaram Jefté, dizendo: Tu não herdarás nada na casa de nosso pai, porque és um bastardo.
3 ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸಮಾಡತೊಡಗಿದನು. ಟೋಬ್ ದೇಶದಲ್ಲಿ ಕೆಲವು ಪುಂಡರು ಯೆಫ್ತಾಹನ ಜೊತೆ ಸೇರಿಕೊಂಡರು.
3 Jefté afastou-se de seus irmãos e fixou-se na terra de Tob. Alguns homens miseráveis reuniram-se a ele e tomaram parte em suas incursões.
4 ಸ್ವಲ್ಪಕಾಲದ ತರುವಾಯ ಅಮ್ಮೋನಿಯರು ಇಸ್ರೇಲರ ವಿರುದ್ಧ ಯುದ್ಧ ಪ್ರಾರಂಭಿಸಿದರು.
4 Algum tempo depois, os amonitas entraram em luta contra Israel.
5 ಅಮ್ಮೋನಿಯರು ಯುದ್ಧ ಪ್ರಾರಂಭಿಸಿದ ತರುವಾಯ ಗಿಲ್ಯಾದಿನ ನಾಯಕರು ಯೆಫ್ತಾಹನ ಹತ್ತಿರ ಹೋದರು. ಯೆಫ್ತಾಹನು ಟೋಬ್ ದೇಶವನ್ನು ಬಿಟ್ಟು ಗಿಲ್ಯಾದಿಗೆ ಬರಬೇಕೆಂಬುದು ಅವರ ಅಪೇಕ್ಷೆಯಾಗಿತ್ತು.
5 Os habitantes de Galaad, vendo-se assim atacados, foram em busca de Jefté na terra de Tob
6 ಆ ಹಿರಿಯರು ಯೆಫ್ತಾಹನಿಗೆ, “ನಾವು ಅಮ್ಮೋನಿಯರೊಡನೆ ಮಾಡುವ ಯುದ್ಧದಲ್ಲಿ ನೀನೇ ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.
6 e disseram-lhe: Vem: serás o nosso chefe, e combateremos os amonitas.
7 ಆದರೆ ಗಿಲ್ಯಾದಿನ ಹಿರಿಯರಿಗೆ ಯೆಫ್ತಾಹನು, “ನನ್ನ ತಂದೆಯ ಮನೆಯನ್ನು ಬಿಡುವಂತೆ ನೀವು ನನಗೆ ಒತ್ತಾಯ ಮಾಡಿದಿರಿ; ನೀವು ನನ್ನನ್ನು ದ್ವೇಷಿಸುತ್ತೀರಿ. ಆದರೆ ಕಷ್ಟದಲ್ಲಿ ನೀವು ನನ್ನ ಬಳಿಗೆ ಬರುವುದೇಕೆ?” ಎಂದು ಕೇಳಿದನು.
7 Jefté, porém, respondeu: Vós, que sois meus inimigos, tendo-me expulsado da casa de meu pai, por que vindes a mim agora que estais em aperto?
8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ನಾಯಕನಾಗುವೆ” ಅಂದರು.
8 Os anciãos de Galaad disseram-lhe: Foi {precisamente} por isso que viemos agora ter contigo, para que venhas conosco e combatas contra os filhos de Amon, e sejas o nosso chefe, o chefe de todo o povo de Galaad.
9 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನಾನು ಗಿಲ್ಯಾದಿಗೆ ಹಿಂದಿರುಗಿ ಬಂದು ಅಮ್ಮೋನಿಯರ ವಿರುದ್ಧ ಯುದ್ಧಮಾಡಬೇಕೆಂದು ನೀವು ಅಪೇಕ್ಷಿಸುವುದೇನೋ ಒಳ್ಳೆಯದು. ಆದರೆ ಯೆಹೋವನ ಕೃಪೆಯಿಂದ ನಾನು ಗೆದ್ದರೆ ನಾನು ನಿಮಗೆ ಹೊಸ ನಾಯಕನಾಗುತ್ತೇನೆ” ಎಂದನು.
9 Jefté disse-lhes: Se vós me conduzirdes para lutar contra os amonitas, e o Senhor mos entregar nas mãos, serei o vosso chefe.
10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು.
10 Os anciãos responderam-lhe: O Senhor seja testemunha entre nós de que faremos tudo o que disseste!
11 ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೊರಟುಹೋದನು. ಅವರು ಯೆಫ್ತಾಹನನ್ನು ತಮ್ಮ ನಾಯಕನನ್ನಾಗಿಯೂ ಸೇನಾಧಿಪತಿಯನ್ನಾಗಿಯೂ ಮಾಡಿದರು. ಯೆಫ್ತಾಹನು ಮಿಚ್ಛೆ ನಗರದಲ್ಲಿ ಯೆಹೋವನ ಸಮ್ಮುಖದಲ್ಲಿ ತನ್ನ ಎಲ್ಲಾ ಮಾತುಗಳನ್ನು ಮತ್ತೊಮ್ಮೆ ಹೇಳಿದನು.
11 E Jefté partiu com os anciãos de Galaad. O povo proclamou-o seu chefe e general, e Jefté repetiu diante do Senhor, em Masfa, tudo o que acabara de dizer.
12 ಯೆಫ್ತಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶವನ್ನು ಕಳುಹಿಸಿದನು.
12 Jefté enviou mensageiros ao rei dos amonitas para lhe dizer: Que tens tu contra mim para que me venhas combater em minha terra?
13 ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.
13 O rei respondeu-lhes: Israel, vindo do Egito, tomou a minha terra desde o Arnon até Jaboc e até o Jordão. Devolve-mo agora, pois, pacificamente.
14 ಯೆಫ್ತಾಹನ ದೂತರು ಈ ಸಂದೇಶವನ್ನು ಯೆಫ್ತಾಹನಿಗೆ ಮುಟ್ಟಿಸಿದರು. ಆಗ ಯೆಫ್ತಾಹನು ಮತ್ತೊಮ್ಮೆ ಅಮ್ಮೋನಿಯರ ಅರಸನಲ್ಲಿಗೆ ದೂತರನ್ನು ಕಳುಹಿಸಿದನು.
14 Jefté mandou nova embaixada ao rei dos amonitas,
15 ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು:
15 dizendo-lhe: Assim fala Jefté: Israel não se apoderou nem do território de Moab, nem da terra dos filhos de Amon.
16 ಇಸ್ರೇಲರು ಈಜಿಪ್ಟನ್ನು ಬಿಟ್ಟುಬಂದ ಮೇಲೆ ಅರಣ್ಯ ಮಾರ್ಗವಾಗಿ ಕೆಂಪುಸಮುದ್ರಕ್ಕೆ ಹೋದರು. ತರುವಾಯ ಅವರು ಕಾದೇಶಿಗೆ ಹೋದರು.
16 Quando saiu do Egito, Israel marchou pelo deserto até o mar Vermelho, e chegou a Cades.
17 ಅವರು ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿಕೊಡು’ ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿಹೋಗಲು ಅನುಮತಿಕೊಡಲಿಲ್ಲ. ತರುವಾಯ ಅವರು ಮೋವಾಬ್ಯರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಯರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಆದ್ದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು.
17 Mandou então mensageiros ao rei de Edom, pedindo-lhe a permissão de passar pela sua terra; mas o rei de Edom não o consentiu. Fez o mesmo pedido ao rei de Moab, que tampouco lhe deu passagem. Israel deteve-se, pois, em Cades.
18 “ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.)
18 Retomou em seguida sua marcha pelo deserto, e contornou as terras de Edom e de Moab; chegando à parte oriental da terra de Moab, acampou na outra banda do Arnon, sem contudo penetrar na terra de Moab, cuja fronteira é o Arnon.
19 “ತರುವಾಯ ಇಸ್ರೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದರು. ಹೆಷ್ಬೋನ್ ಅಮೋರಿಯರ ದೇಶದ ರಾಜಧಾನಿಯಾಗಿತ್ತು. ಆ ದೂತರು ಸೀಹೋನನಿಗೆ, ‘ಇಸ್ರೇಲರು ನಿಮ್ಮ ಪ್ರದೇಶದಿಂದ ದಾಟಿಹೋಗುವುದಕ್ಕೆ ಅನುಮತಿಯನ್ನು ಕೊಡು, ನಾವು ನಮ್ಮ ದೇಶಕ್ಕೆ ಹೋಗ ಬಯಸುತ್ತೇವೆ’ ಎಂದು ಕೇಳಿದರು.
19 Dali, Israel mandou ainda mensageiros a Seon, rei dos amorreus, em Hesebon pedindo-lhe que os deixasse passar pela sua terra, para que chegassem à deles.
20 ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು.
20 Seon, porém, não teve bastante confiança em Israel para deixá-lo atravessar o seu território; antes, ajuntando todas as suas tropas, acampou em Jasa, e atacou Israel.
21 ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದ್ದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.
21 O Senhor, Deus de Israel, entregou-o com todo o seu povo nas mãos de Israel, que o derrotou, e conquistou todas as terras dos amorreus que habitavam naquela região;
22 ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದುಕೊಂಡರು. ಆ ಪ್ರದೇಶವು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿಕೊಂಡಿದೆ.
22 tomou toda a terra dos amorreus, desde o Arnon até Jaboc, e desde o deserto até o Jordão.
23 “ಇಸ್ರೇಲರ ದೇವರಾದ ಯೆಹೋವನು ಅಮೋರಿಯರನ್ನು ಅವರ ದೇಶದಿಂದ ಬಲವಂತವಾಗಿ ಹೊರಗಟ್ಟಿ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟನು. ಈಗ ಇಸ್ರೇಲರು ಈ ಪ್ರದೇಶವನ್ನು ಬಿಡುವಂತೆ ನೀನು ಮಾಡಬಹುದೆಂದು ತಿಳಿದುಕೊಂಡಿರುವಿಯಾ?
23 Agora que o Senhor, Deus de Israel, expulsou os amorreus diante de seu povo de Israel, tu pretendes possuir a sua terra?
24 ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು.
24 Porventura não tens a posse do que te deu a conquistar o teu deus Camos? E nós, por que não possuiríamos tudo aquilo que o Senhor, nosso Deus, expulsou diante de nós?
25 ಚಿಪ್ಪೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
25 Serias tu melhor do que Balac, filho de Sefor, rei de Moab? Porventura disputou ele com os israelitas, ou combateu contra eles?
26 ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?
26 Eis já trezentos anos que Israel habita em Hesebon e em suas aldeias, em Aroer e em suas aldeias, e em todas as cidades banhadas pelo Arnon. Por que não lhe tiraste estas terras durante todo esse tempo?
27 ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”
27 Não sou eu, pois, que te faço dano, mas és tu mesmo que te prejudicas, declarando-me guerra. Que o Senhor, o Juiz, se pronuncie hoje entre os israelitas e os amonitas!
28 ಆದರೆ ಯೆಫ್ತಾಹನ ಸಂದೇಶವನ್ನು ಅಮ್ಮೋನಿಯರ ಅರಸನು ಕಿವಿಗೆ ಹಾಕಿಕೊಳ್ಳಲಿಲ್ಲ.
28 Mas o rei dos amonitas não quis ouvir nada do que Jefté lhe mandara dizer.
29 ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.
29 O Espírito do Senhor desceu sobre Jefté, e ele, atravessando Galaad e Manassés, passou dali até Masfa de Galaad, de onde marchou contra os amonitas.
30 ಯೆಫ್ತಾಹನು ಯೆಹೋವನಿಗೆ, “ನಾನು ಅಮ್ಮೋನಿಯರನ್ನು ಸೋಲಿಸುವಂತೆ ನೀನು ಮಾಡಿದರೆ
30 Jetfé fez ao Senhor este voto:
31 ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.
31 Se me entregardes nas mãos os amonitas, aquele que sair das portas de minha casa ao meu encontro, quando eu voltar vitorioso dos filhos de Amon, será consagrado ao Senhor, e eu o oferecerei em holocausto.
32 ಆಮೇಲೆ ಯೆಫ್ತಾಹನು ಅಮ್ಮೋನಿಯರ ದೇಶಕ್ಕೆ ಹೋಗಿ ಯುದ್ಧಮಾಡಿದನು. ಅವರನ್ನು ಸೋಲಿಸಲು ಯೆಹೋವನು ಯೆಫ್ತಾಹನಿಗೆ ಸಹಾಯ ಮಾಡಿದನು.
32 Jefté marchou contra os amonitas, e o Senhor lhos entregou.
33 ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನ್ನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಆಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೇಲ್‌ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು.
33 Ele os derrotou desde Aroer até as proximidades de Menit, e até Abel-Queramim, tomando-lhes vinte aldeias. E os amonitas, com este terrível golpe, foram humilhados perante Israel.
34 ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.
34 Ora, voltando Jefté para a sua casa em Masfa, eis que sua filha saiu-lhe ao encontro com tamborins e danças. Era a sua única filha, porque, afora ela, não tinha filho nem filha.
35 ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.
35 Quando a viu, rasgou as suas vestes: Ah, minha filha, exclamou ele, tu me acabrunhas de dor, e estás no número daqueles que causam a minha infelicidade! Fiz ao Senhor um voto que não posso revogar.
36 ಆಗ ಯೆಫ್ತಾಹನ ಮಗಳು ಅವನಿಗೆ, “ನನ್ನ ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು.
36 Meu pai, disse ela, se fizeste um voto ao Senhor, trata-me segundo o que prometeste, agora que o Senhor te vingou de teus inimigos, os amonitas.
37 ಯೆಫ್ತಾಹನ ಮಗಳು ತನ್ನ ತಂದೆಗೆ, “ನನಗೋಸ್ಕರ ಒಂದು ಕೆಲಸವನ್ನು ಮಾಡು. ಎರಡು ತಿಂಗಳುಗಳವರೆಗೆ ನನ್ನನ್ನು ಒಬ್ಬಂಟಿಗಳಾಗಿ ಇರಲು ಬಿಡು. ನಾನು ಬೆಟ್ಟಪ್ರದೇಶಕ್ಕೆ ಹೋಗುತ್ತೇನೆ. ನಾನು ಮದುವೆ ಮಾಡಿಕೊಳ್ಳುವುದಿಲ್ಲ ಮತ್ತು ಮಕ್ಕಳನ್ನು ಹೆರುವದಿಲ್ಲ. ನಾನು ಮತ್ತು ನನ್ನ ಗೆಳತಿಯರು ಹೋಗಿ ಒಟ್ಟಾಗಿ ಅಳುತ್ತೇವೆ” ಎಂದಳು.
37 E ajuntou: Concede-me somente isto: Deixa-me que vá sobre as colinas durante dois meses, para chorar a minha virgindade com as minhas amigas.
38 ಯೆಫ್ತಾಹನು, “ಹೋಗು, ಹಾಗೆಯೇ ಮಾಡು” ಎಂದನು. ಯೆಫ್ತಾಹನು ಅವಳನ್ನು ಎರಡು ತಿಂಗಳುಗಳವರೆಗೆ ಕಳುಹಿಸಿಕೊಟ್ಟನು. ಯೆಫ್ತಾಹನ ಮಗಳು ಮತ್ತು ಆಕೆಯ ಗೆಳತಿಯರು ಬೆಟ್ಟಪ್ರದೇಶದಲ್ಲಿ ವಾಸಮಾಡಿದರು. ಅವಳು ಮದುವೆಯಾಗುವುದಿಲ್ಲ ಮತ್ತು ಮಕ್ಕಳನ್ನು ಹಡೆಯುವುದಿಲ್ಲ ಎಂಬ ಕಾರಣದಿಂದ ಅವರೆಲ್ಲರೂ ಗೋಳಾಡಿದರು.
38 Vai, disse-lhe ele. E deu-lhe dois meses de liberdade. Ela foi com as suas companheiras, e chorou a sua virgindade sobre as colinas.
39 ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.
39 Passado o prazo, voltou para seu pai, e ele cumpriu o voto que tinha feito. Ela não tinha conhecido varão.
40 ಪ್ರತಿವರ್ಷ ಇಸ್ರೇಲಿನ ಹೆಂಗಸರು ಗಿಲ್ಯಾದಿನ ಯೆಫ್ತಾಹನ ಮಗಳನ್ನು ಸ್ಮರಿಸುತ್ತಾರೆ. ಇಸ್ರೇಲಿನ ಹೆಂಗಸರು ಯೆಫ್ತಾಹನ ಮಗಳಿಗಾಗಿ ಪ್ರತಿವರ್ಷ ನಾಲ್ಕು ದಿನ ಅಳುತ್ತಾರೆ. ಇದು ಇಸ್ರೇಲಿನಲ್ಲಿ ಒಂದು ಪದ್ಧತಿಯಾಗಿದೆ.
40 Daqui veio este costume, em Israel, que todos os anos as jovens israelitas reúnem-se para chorar durante quatro dias a filha de Jefté, o galaadita.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Juízes 11, comparar traduções ou montar um estudo — tudo direto pelo WhatsApp.