Juízes 7

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು.
1 De madrugada Jerubaal, isto é, Gideão, e todo o seu exército acampou junto à fonte de Harode. O acampamento de Midiã estava ao norte deles, no vale, perto do monte Moré.
2 ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.
2 E o Senhor disse a Gideão: "Você tem gente demais, para eu entregar Midiã nas suas mãos. A fim de que Israel não se orgulhe contra mim, dizendo que a sua própria força o libertou,
3 ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು.
3 anuncie, pois, ao povo que todo aquele que estiver tremendo de medo poderá ir embora do monte Gileade". Então vinte e dois mil homens partiram, e ficaram apenas dez mil.
4 ಆಗ ಯೆಹೋವನು ಗಿದ್ಯೋನನಿಗೆ, “ಇನ್ನೂ ಬಹಳಷ್ಟು ಜನರಿದ್ದಾರೆ. ಇವರನ್ನು ನೀನು ನದಿಗೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗಾಗಿ ಪರೀಕ್ಷಿಸುತ್ತೇನೆ. ‘ಯಾವನು ನಿನ್ನ ಜೊತೆಯಲ್ಲಿ ಹೋಗಬಹುದು’ ಎಂದು ನಾನು ಹೇಳುತ್ತೇನೋ ಅವನು ಹೋಗಲಿ. ‘ಯಾವನು ನಿನ್ನ ಜೊತೆಯಲ್ಲಿ ಹೋಗುವುದು ಬೇಡ’ ಎಂದು ನಾನು ಹೇಳುತ್ತೇನೋ ಅವನು ಹೋಗದಿರಲಿ” ಎಂದು ಹೇಳಿದನು.
4 Mas o Senhor tornou a dizer a Gideão: "Ainda há gente demais. Desça com eles à beira d’água, e eu separarei os que ficarão com você. Se eu disser: Este irá com você, ele irá; mas, se eu disser: Este não irá com você, ele não irá".
5 ಆದ್ದರಿಂದ ಗಿದ್ಯೋನನು ಅವರನ್ನು ನದಿಯ ಹತ್ತಿರ ಕರೆದುಕೊಂಡು ಹೋದನು. ಅಲ್ಲಿ ಯೆಹೋವನು ಗಿದ್ಯೋನನಿಗೆ, “ನೀರನ್ನು ನಾಯಿಯಂತೆ ತಮ್ಮ ನಾಲಿಗೆಯಿಂದ ನೆಕ್ಕಿ ಕುಡಿಯುವವರನ್ನು ಒಂದು ಗುಂಪನ್ನಾಗಿ ಮತ್ತು ನೆಲಕ್ಕೆ ಮೊಣಕಾಲೂರಿ ನೀರನ್ನು ಕುಡಿಯುವವರನ್ನು ಇನ್ನೊಂದು ಗುಂಪನ್ನಾಗಿ ವಿಂಗಡಿಸು” ಎಂದು ಹೇಳಿದನು.
5 Assim Gideão levou os homens à beira d’água, e o Senhor lhe disse: "Separe os que beberem a água lambendo-a como faz o cachorro, daqueles que se ajoelharem para beber".
6 ಅವರಲ್ಲಿ ಮೂನ್ನೂರು ಮಂದಿ ಗಂಡಸರು ಕೈಯಿಂದ ನೀರನ್ನು ಬಾಯಿಯವರೆಗೆ ತೆಗೆದುಕೊಂಡು ನಾಯಿಯಂತೆ ನೆಕ್ಕಿದರು. ಉಳಿದವರೆಲ್ಲರು ಬಗ್ಗಿ ಮೊಣಕಾಲೂರಿ ನೀರನ್ನು ಕುಡಿದರು.
6 O número dos que lamberam a água levando-a com as mãos à boca foi de trezentos homens. Todos os demais se ajoelharam para beber.
7 ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು.
7 O Senhor disse a Gideão: "Com os trezentos homens que lamberam a água livrarei vocês e entregarei os midianitas nas suas mãos. Mande para casa todos os outros homens".
8 ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು.
8 Gideão mandou os israelitas para as suas tendas, mas reteve os trezentos. E estes ficaram com as provisões e as trombetas dos que partiram. O acampamento de Midiã ficava abaixo deles, no vale.
9 ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.
9 Naquela noite o Senhor disse a Gideão: "Levante-se, e desça ao acampamento, pois vou entregá-lo nas suas mãos.
10 ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು.
10 Se você está com medo de atacá-los, desça ao acampamento com o seu servo Pura
11 ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು.
11 e ouça o que estiverem dizendo. Depois disso você terá coragem para atacar". Então ele e o seu servo Pura desceram até os postos avançados do acampamento.
12 ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.
12 Os midianitas, os amalequitas e todos os outros povos que vinham do leste haviam se instalado no vale; eram numerosos como nuvens de gafanhotos. Assim como não se pode contar a areia da praia, também não se podia contar os seus camelos.
13 ಗಿದ್ಯೋನನು ಶತ್ರುಗಳ ಪಾಳೆಯಕ್ಕೆ ಬಂದಾಗ ಒಬ್ಬನ ಮಾತನ್ನು ಕೇಳಿಸಿಕೊಂಡನು. ಆ ಮನುಷ್ಯನು ತಾನು ಕಂಡ ಒಂದು ಕನಸಿನ ಬಗ್ಗೆ ತನ್ನ ಮಿತ್ರನಿಗೆ ಹೇಳುತ್ತಿದ್ದನು. “ನಾನು ಕನಸಿನಲ್ಲಿ ಒಂದು ದುಂಡಾದ ರೊಟ್ಟಿಯು ಉರುಳಿಕೊಂಡು ಮಿದ್ಯಾನ್ಯರ ಪಾಳೆಯದಲ್ಲಿ ಬರುವುದನ್ನು ಕಂಡೆ. ಆ ರೊಟ್ಟಿಯು ರಭಸದಿಂದ ಬಂದು ಒಂದು ಗುಡಾರಕ್ಕೆ ಅಪ್ಪಳಿಸಲು ಆ ಗುಡಾರವು ಕುಸಿದುಬಿತ್ತು” ಎಂದನು.
13 Gideão chegou bem no momento em que um homem estava contando seu sonho a um amigo. "Tive um sonho", dizia ele. "Um pão de cevada vinha rolando dentro do acampamento midianita, e atingiu a tenda com tanta força que ela tombou e se desmontou".
14 ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.
14 Seu amigo respondeu: "Não pode ser outra coisa senão a espada de Gideão, filho de Joás, o israelita. Deus entregou os midianitas e todo o acampamento nas mãos dele".
15 ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು.
15 Quando Gideão ouviu o sonho e a sua interpretação, adorou a Deus. Voltou para o acampamento de Israel e gritou: "Levantem-se! O Senhor entregou o acampamento midianita nas suas mãos".
16 ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.
16 Dividiu os trezentos homens em três companhias, pôs nas mãos de todos eles trombetas e jarros vazios, com tochas dentro.
17 ಗಿದ್ಯೋನನು ಅವರಿಗೆ, “ನನ್ನನ್ನು ಗಮನಿಸುತ್ತಾ ನಾನು ಮಾಡಿದಂತೆ ಮಾಡಿರಿ. ಶತ್ರುಗಳ ಪಾಳೆಯದ ಸೀಮೆಯವರೆಗೆ ನನ್ನನ್ನು ಹಿಂಬಾಲಿಸಿ ಬನ್ನಿ. ನಾನು ಪಾಳೆಯದ ಗಡಿಯನ್ನು ಮುಟ್ಟಿದ ಮೇಲೆ ನಾನು ಮಾಡಿದಂತೆಯೇ ಮಾಡಿರಿ.
17 E ele lhes disse: "Observem-me. Façam o que eu fizer. Quando eu chegar à extremidade do acampamento, façam o que eu fizer.
18 ನೀವು ಶತ್ರುಗಳ ಪಾಳೆಯಕ್ಕೆ ಮುತ್ತಿಗೆ ಹಾಕಿರಿ. ನನ್ನ ಸಂಗಡವಿರುವ ಜನರು ತುತ್ತೂರಿಯನ್ನು ಊದುವರು. ನಾವು ನಮ್ಮ ತುತ್ತೂರಿಗಳನ್ನು ಊದಿದಾಗ ನೀವು ಸಹ ನಿಮ್ಮ ತುತ್ತೂರಿಗಳನ್ನು ಊದಿರಿ. ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ,’ ಎಂದು ಕೂಗಿರಿ” ಎಂದು ಹೇಳಿದನು.
18 Quando eu e todos os que estiverem comigo tocarmos as nossas trombetas ao redor do acampamento, toquem as suas, e gritem: Pelo Senhor e por Gideão! "
19 ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು.
19 Gideão e os cem homens que o acompanhavam chegaram aos postos avançados do acampamento pouco depois da meia noite, assim que foram trocadas as sentinelas. Tocaram as suas trombetas e quebraram os jarros que tinham nas mãos;
20 ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.
20 as três companhias tocaram as trombetas e despedaçaram os jarros. Empunhando as tochas com a mão esquerda e as trombetas com a direita, gritaram: "À espada, pelo Senhor e por Gideão! "
21 ಗಿದ್ಯೋನನ ಜನರು ನಿಂತಲ್ಲಿಯೇ ನಿಂತುಕೊಂಡರು. ಮಿದ್ಯಾನ್ಯರು ಕೂಗಿಕೊಂಡು ಓಡಿಹೋಗಲು ಆರಂಭಿಸಿದರು.
21 Cada homem mantinha a sua posição em torno do acampamento, e todos os midianitas fugiam correndo e gritando.
22 ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿದರು.
22 Quando as trezentas trombetas soaram, o Senhor fez que em todo o acampamento os homens se voltassem uns contra os outros com as suas espadas. Mas muitos fugiram para Bete-Sita, na direção de Zererá, até a fronteira de Abel-Meolá, perto de Tabate.
23 ಆಗ ನಫ್ತಾಲಿ, ಆಶೇರ ಮತ್ತು ಮನಸ್ಸೆ ಕುಲಗಳ ಎಲ್ಲ ಸೈನಿಕರಿಗೆ ಮಿದ್ಯಾನ್ಯರನ್ನು ಬೆನ್ನಟ್ಟಲು ಹೇಳಲಾಯಿತು.
23 Os israelitas de Naftali, de Aser e de todo o Manassés foram convocados, e perseguiram os midianitas.
24 ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು.
24 Gideão enviou mensageiros a todos os montes de Efraim, dizendo: "Desçam para atacar os midianitas e cerquem as águas do Jordão à frente deles até Bete-Bara". Foram, pois, convocados todos os homens de Efraim, e eles ocuparam as águas do Jordão até Bete-Bara.
25 ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.
25 Eles prenderam dois líderes midianitas, Orebe e Zeebe. Mataram Orebe na rocha de Orebe, e Zeebe no tanque de prensar uvas de Zeebe. E, depois de perseguir os midianitas, trouxeram a cabeça de Orebe e a de Zeebe a Gideão, que estava do outro lado do Jordão.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Juízes 7, comparar traduções ou montar um estudo — tudo direto pelo WhatsApp.