Juízes 8
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT
1 ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.
1 Então os homens da tribo de Efraim perguntaram a Gideão: “Por que você nos tratou dessa forma? Por que não nos chamou quando foi lutar com os midianitas?”. E o repreenderam duramente.
2 ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?
2 Gideão, porém, respondeu: “O que eu fiz em comparação com vocês? A sobra das uvas da colheita de Efraim não são melhores que toda a colheita do pequeno clã de Abiezer?
3 ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.
3 Deus entregou em suas mãos Orebe e Zeebe, os comandantes do exército midianita. O que eu fiz em comparação com isso?”. Quando ouviram a resposta de Gideão, a indignação dos homens de Efraim diminuiu.
4 ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಆಚೆದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು.
4 Então Gideão atravessou o rio Jordão com os trezentos homens e, embora estivessem exaustos, continuaram a perseguir o inimigo.
5 ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.
5 Quando chegaram a Sucote, Gideão pediu ao povo da cidade: “Por favor, deem um pouco de comida aos meus guerreiros. Eles estão muito cansados. Estou perseguindo Zeba e Zalmuna, reis de Midiã”.
6 ಆದರೆ ಸುಖೋತ್ ನಗರದ ನಾಯಕರು ಗಿದ್ಯೋನನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.
6 Mas os líderes de Sucote responderam: “Primeiro capture Zeba e Zalmuna, e então daremos comida ao seu exército”.
7 ಅದಕ್ಕೆ ಗಿದ್ಯೋನನು, “ನೀವು ನಮಗೆ ಆಹಾರವನ್ನು ಕೊಡುವುದಿಲ್ಲವಾದರೆ ಜೆಬಹನನ್ನು ಮತ್ತು ಚಲ್ಮುನ್ನನನ್ನು ಬಂಧಿಸಲು ಯೆಹೋವನೇ ನಮಗೆ ಸಹಾಯ ಮಾಡುತ್ತಾನೆ. ಆಮೇಲೆ ನಾನು ಇಲ್ಲಿಗೆ ಬಂದು ನಿಮ್ಮನ್ನು ಮರುಳುಗಾಡಿನ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡಿಸುತ್ತೇನೆ” ಎಂದು ಉತ್ತರಿಸಿದನು.
7 “Muito bem”, disse Gideão. “Depois que o S enhor entregar Zeba e Zalmuna em minhas mãos, voltarei e rasgarei a carne de vocês com espinhos e com espinheiros do deserto.”
8 ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.
8 Dali Gideão subiu a Peniel, onde também pediu comida e recebeu a mesma resposta.
9 ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಈ ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.
9 Disse ele ao povo de Peniel: “Quando eu voltar vitorioso, derrubarei esta torre”.
10 ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.
10 A essa altura, Zeba e Zalmuna estavam em Carcor com cerca de quinze mil guerreiros. Era tudo que restava dos exércitos aliados do leste, pois 120 mil já haviam sido mortos.
11 ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ.
11 Gideão subiu pela rota das caravanas, a leste de Noba e Jogbeá, e atacou de surpresa o exército midianita.
12 ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.
12 Zeba e Zalmuna, os dois reis midianitas, fugiram, mas Gideão os perseguiu e os capturou, derrotando seu exército.
13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹಿಂದಿರುಗಿದನು. ಗಿದ್ಯೋನ ಮತ್ತು ಅವನ ಸೈನಿಕರು ಹೆರೆಸ್ ಎಂಬ ಒಂದು ಬೆಟ್ಟದ ಕಣಿವೆಯ ಮಾರ್ಗವಾಗಿ ಹಿಂದಿರುಗಿದರು.
13 Gideão, filho de Joás, voltou da batalha pelo desfiladeiro de Heres.
14 ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು.
14 Ali, capturou um jovem de Sucote e exigiu que ele escrevesse o nome dos 77 oficiais e autoridades da cidade.
15 ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.
15 Então Gideão retornou a Sucote e disse ao povo: “Aqui estão Zeba e Zalmuna. Quando estivemos aqui antes, vocês zombaram de mim e disseram: ‘Primeiro capture Zeba e Zalmuna, e então daremos comida aos seus guerreiros exaustos’”.
16 ಗಿದ್ಯೋನನು ಸುಖೋತ್ ನಗರದ ಹಿರಿಯರಿಗೆ ಮರುಭೂಮಿಯ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡೆಸಿ ಶಿಕ್ಷಿಸಿದನು.
16 Gideão prendeu as autoridades da cidade e os castigou com espinhos e espinheiros do deserto.
17 ಗಿದ್ಯೋನನು ಪೆನೂವೇಲಿನ ಬುರುಜನ್ನೂ ಸಹ ಕೆಡವಿ ಆ ಪಟ್ಟಣದ ಜನರನ್ನು ಕೊಂದುಹಾಕಿದನು.
17 Também derrubou a torre de Peniel e matou os homens da cidade.
18 ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು.
18 Depois disso, Gideão perguntou a Zeba e a Zalmuna: “Como eram os homens que vocês mataram em Tabor?”. “Como você”, responderam eles. “Todos pareciam filhos de rei.”
19 ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.
19 “Eram meus irmãos, filhos de minha mãe!”, exclamou Gideão. “Tão certo como vive o S enhor , eu não mataria vocês se tivessem poupado a vida deles!”
20 ಗಿದ್ಯೋನನು ಎತೆರನ ಕಡೆಗೆ ತಿರುಗಿದನು. ಎತೆರನು ಗಿದ್ಯೋನನ ಹಿರಿಯ ಮಗ. ಗಿದ್ಯೋನನು ಅವನಿಗೆ, “ಈ ಅರಸರನ್ನು ಕೊಲ್ಲು” ಎಂದು ಹೇಳಿದನು. ಆದರೆ ಎತೆರನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟನು. ಅವನು ತನ್ನ ಕತ್ತಿಯನ್ನು ಹೊರ ತೆಗೆಯಲಿಲ್ಲ.
20 Gideão se voltou para Jéter, seu filho mais velho, e disse: “Mate-os!”. Mas Jéter não tirou sua espada, pois ainda era jovem e teve medo.
21 ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
21 Então Zeba e Zalmuna disseram a Gideão: “Seja homem! Mate-nos você mesmo!”. Gideão os matou e tirou os enfeites que estavam no pescoço dos camelos deles.
22 ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಳ್ವಿಕೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು.
22 Então os israelitas disseram a Gideão: “Seja nosso governante! Você, seu filho e seu neto nos governarão, pois nos libertou de Midiã”.
23 ಗಿದ್ಯೋನನು ಇಸ್ರೇಲರಿಗೆ, “ಯೆಹೋವನು ನಿಮ್ಮನ್ನು ಆಳುತ್ತಾನೆ. ನಾನು ನಿಮ್ಮನ್ನು ಆಳುವುದಿಲ್ಲ; ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ” ಎಂದು ಹೇಳಿದನು.
23 Gideão, porém, respondeu: “Nem eu nem meu filho governaremos vocês. O S enhor os governará!
24 ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.
24 Mas tenho um pedido a fazer. Cada um de vocês me dê uma argola de ouro que tomou de seus inimigos como despojo”. (Uma vez que os inimigos eram ismaelitas, todos usavam argolas de ouro.)
25 ಇಸ್ರೇಲರು, “ನೀನು ಕೇಳಿದ್ದನ್ನು ಸಂತೋಷದಿಂದ ಕೊಡುತ್ತೇವೆ” ಎಂದು ಹೇಳಿ ನೆಲದ ಮೇಲೆ ಒಂದು ಮೇಲಂಗಿಯನ್ನು ಹಾಸಿದರು. ಪ್ರತಿಯೊಬ್ಬನು ಒಂದೊಂದು ಮುರುವನ್ನು ಆ ಅಂಗಿಯ ಮೇಲೆ ಎಸೆದನು.
25 “Com todo o prazer!”, responderam eles. Estenderam uma capa, e cada um jogou ali uma argola de ouro que havia tomado como despojo.
26 ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.
26 O peso das argolas de ouro totalizou pouco mais de vinte quilos, sem contar os enfeites, os pendentes e as roupas de púrpura que os reis de Midiã usavam, além das correntes que estavam no pescoço de seus camelos.
27 ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪ ಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.
27 Com esse ouro, Gideão fez um colete sacerdotal e o colocou em Ofra, sua cidade. Todo o Israel, porém, se prostituiu, fazendo do colete objeto de adoração, e ele se tornou uma armadilha para Gideão e sua família.
28 ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿದ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ಆ ದೇಶದಲ್ಲಿ ಶಾಂತಿ ನೆಲೆಸಿತ್ತು.
28 Esse é o relato de como os israelitas derrotaram Midiã, que nunca se recuperou. Durante quarenta anos do restante da vida de Gideão, houve paz na terra.
29 ಯೋವಾಷನ ಮಗ ಯೆರುಬ್ಬಾಳನು (ಗಿದ್ಯೋನನು) ತನ್ನ ಮನೆಯಲ್ಲಿ ವಾಸವಾಗಿದ್ದನು.
29 Então Gideão, filho de Joás, voltou para casa.
30 ಗಿದ್ಯೋನನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವನಿಗೆ ಅನೇಕ ಹೆಂಡತಿಯರಿದ್ದರು.
30 Gerou setenta filhos do sexo masculino, pois teve muitas esposas.
31 ಗಿದ್ಯೋನನಿಗೆ ಒಬ್ಬ ಉಪಪತ್ನಿಯೂ ಇದ್ದಳು. ಅವಳು ಶೆಕೆಮಿನಲ್ಲಿರುತ್ತಿದ್ದಳು. ಅವಳಲ್ಲಿ ಅವನಿಗೆ ಒಬ್ಬ ಮಗನು ಹುಟ್ಟಿದನು. ಗಿದ್ಯೋನನು ಅವನಿಗೆ ಅಬೀಮೆಲೆಕ ಎಂದು ಹೆಸರಿಟ್ಟನು.
31 Também teve uma concubina em Siquém que deu à luz um filho seu, a quem ele chamou Abimeleque.
32 ಯೋವಾಷನ ಮಗನಾದ ಗಿದ್ಯೋನನು ದಿನ ತುಂಬಿದ ಮುದುಕನಾಗಿ ಮರಣಹೊಂದಿದನು. ಗಿದ್ಯೋನನ ಶವವನ್ನು ಅವನ ತಂದೆಯಾದ ಯೋವಾಷನಿಗೆ ಸೇರಿದ್ದ ಒಂದು ಸಮಾಧಿಯಲ್ಲಿ ಹೂಳಿಟ್ಟರು. ಆ ಸಮಾಧಿಯು ಅಬೀಯೆಜೆರ್ ಕುಟುಂಬದವರ ಒಫ್ರದಲ್ಲಿತ್ತು.
32 Gideão, filho de Joás, morreu quando era muito idoso e foi sepultado no túmulo de seu pai, Joás, em Ofra, no território do clã de Abiezer.
33 ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
33 Logo depois da morte de Gideão, os israelitas se prostituíram, adorando imagens de Baal e fazendo de Baal-Berite seu deus.
34 ಯೆಹೋವನು ಅವರನ್ನು ಅವರ ಸುತ್ತಮುತ್ತಲಿನ ಎಲ್ಲ ಶತ್ರುಗಳಿಂದ ರಕ್ಷಿಸಿದ್ದರೂ ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಜ್ಞಾಪಿಸಿಕೊಳ್ಳಲಿಲ್ಲ.
34 Os israelitas se esqueceram do S enhor , seu Deus, que os havia livrado de todos os inimigos em redor.
35 ಯೆರುಬ್ಬಾಳನು ಅನೇಕ ಸತ್ಕಾರ್ಯಗಳನ್ನು ಮಾಡಿದರೂ ಸಹ ಇಸ್ರೇಲರು ಅವನ ಕುಟುಂಬದವರಿಗೆ ಕೃತಜ್ಞತೆಯುಳ್ಳವರಾಗಿರಲಿಲ್ಲ.
35 Também não demonstraram lealdade alguma para com a família de Jerubaal (isto é, Gideão), apesar de todo o bem que ele havia feito a Israel.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Juízes 8, comparar traduções ou montar um estudo — tudo direto pelo WhatsApp.