Juízes 9
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು
1 Abimelec, filho de Jerobaal, foi ter com os irmãos de sua mãe em Siquém, e disse-lhes, assim como a toda a família de sua mãe:
2 ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.
2 Dizei, vo-lo peço, a todos os habitantes de Siquém: o que é melhor para vós: serdes dominados por setenta homens, todos filhos de Jerobaal, ou que um só homem seja vosso rei? Lembrai-vos de que eu sou de vosso sangue e de vossa carne.
3 ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು.
3 Os irmãos de sua mãe falaram dele aos habitantes de Siquém, referindo-lhes suas palavras, e inclinaram o seu coração para Abimelec, porque, diziam eles, é nosso irmão.
4 ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.
4 E deram-lhe setenta siclos de prata tomados do templo de Baal-Berit, com os quais assalariou homens miseráveis e aventureiros, que o seguiram.
5 ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾವು.
5 Foi à casa de seu pai em Efra, e matou sobre uma pedra os seus irmãos, filhos de Jerobaal, setenta homens; escapou somente Joatão, filho mais novo de Jerobaal, porque se tinha escondido.
6 ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.
6 Juntaram-se então todos os siquemitas com todos os de Bet-Melo, e vieram junto do terebinto da estela que havia em Siquém, onde proclamaram rei Abimelec.
7 ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾವುನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾವುನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು:
7 Sabendo disso, subiu Joatão ao cimo do monte Garizim e exclamou: Ouvi-me, homens de Siquém, para que Deus vos ouça!
8 “ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸನನ್ನು ಆರಿಸಬೇಕೆಂದು ನಿರ್ಧರಿಸಿದವು. ಆ ಮರಗಳು ಆಲಿವ್ ಮರಕ್ಕೆ, ‘ನೀನು ನಮ್ಮ ಅರಸನಾಗಿ ಆಳು’ ಎಂದು ಕೇಳಿಕೊಂಡವು.
8 As árvores resolveram um dia eleger um rei para governá-las e disseram à oliveira: reina sobre nós!
9 “ಆದರೆ ಆಲಿವ್ ಮರವು, ‘ಜನರು ಮತ್ತು ದೇವತೆಗಳು ನನ್ನ ಎಣ್ಣೆಗಾಗಿ ನನ್ನನ್ನು ತುಂಬ ಹೊಗಳುತ್ತಾರೆ; ಬೇರೆ ಮರಗಳ ಮೇಲೆ ಆಳುವುದಕ್ಕಾಗಿ ನಾನು ಎಣ್ಣೆ ಮಾಡುವುದನ್ನು ಬಿಡಬೇಕೇ?’ ಎಂದು ಕೇಳಿತು.
9 Mas ela respondeu: renunciarei, porventura, ao meu óleo que constitui minha glória aos olhos de Deus e dos homens, para colocar-me acima das outras árvores?
10 “ಆಗ ಆ ಮರಗಳು ಅಂಜೂರದ ಮರದ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.
10 E as árvores disseram à figueira: vem tu, e reina sobre nós!
11 “ಆದರೆ ಅಂಜೂರದ ಮರವು, ‘ನಾನು ಕೇವಲ ಬೇರೆ ಮರಗಳ ಮೇಲೆ ಆಳ್ವಿಕೆ ಮಾಡುವುದಕ್ಕಾಗಿ ಉತ್ತಮವಾದ ಮತ್ತು ರುಚಿಕರವಾದ ಹಣ್ಣುಗಳು ಫಲಿಸುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
11 Mas a figueira disse-lhes: poderia eu, porventura, renunciar à doçura de meu delicioso fruto, para colocar-me acima das outras árvores?
12 “ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದವು.
12 E as árvores disseram à videira: vem tu, reina sobre nós!
13 “ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
13 Mas a videira respondeu: poderia eu renunciar ao meu vinho que faz a alegria de Deus e dos homens, para colocar-me acima das outras árvores?
14 “ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.
14 E todas as árvores disseram ao espinheiro: vem tu, reina sobre nós!
15 “ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.
15 E o espinheiro respondeu: se realmente me quereis escolher para reinar sobre vós, vinde e abrigai-vos debaixo de minha sombra; mas, se não o quereis, saia fogo do espinheiro e devore os cedros do Líbano!
16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದವರೊಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು.
16 Agora, pois, se com lealdade e boa-fé escolhestes Abimelec para vosso rei, se vos portastes bem com Jerobaal e sua casa, correspondendo aos benefícios que ele vos fez
17 ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು.
17 porque meu pai combateu por vós e livrou-vos dos madianitas arriscando a própria vida;
18 ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ.
18 vós, que agora vos levantastes contra a casa de meu pai, matastes todos os seus setenta filhos sobre uma pedra, e proclamastes rei dos habitantes de Siquém Abimelec, filho de sua escrava, sob o pretexto de que ele é vosso irmão,
19 ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.
19 se, pois, com lealdade e boa-fé, procedestes bem com Jerobaal e sua casa, então que Abimelec vos faça felizes, e que vós o façais feliz igualmente!
20 ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.
20 Do contrário, saia fogo de Abimelec, e devore os homens de Siquém com os de Bet-Melo; e saia fogo dos habitantes de Siquém e de Bet-Melo, e devore Abimelec!
21 ಇದನ್ನೆಲ್ಲಾ ಹೇಳಿ ಯೋತಾವುನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾವುನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು.
21 Fugiu em seguida Joatão para Bera, onde habitou, longe de Abimelec, seu irmão.
22 ಅಬೀಮೆಲೆಕನು ಇಸ್ರೇಲರನ್ನು ಮೂರು ವರ್ಷ ಆಳಿದನು.
22 Reinou Abimelec sobre Israel durante três anos.
23 — ausente —
23 E Deus suscitou um mau espírito entre ele e os habitantes de Siquém, que os fez se revoltarem.
24 — ausente —
24 Isso aconteceu para que fosse vingado o homicídio dos setenta filhos de Jerobaal, e seu sangue caísse sobre Abimelec, seu irmão, que os havia matado, e sobre os siquemitas que tinham sido seus cúmplices.
25 ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು.
25 Os homens de Siquém armaram contra ele emboscadas no alto dos montes, e puseram-se a despojar todos aqueles que passavam por ali; e Abimelec foi informado disso.
26 ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು.
26 Gaal, filho de Obed, foi com seus irmãos a Siquém e ganhou a confiança dos homens do lugar.
27 ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.
27 Saíram pelos campos, vindimaram as vinhas, pisaram as uvas, celebraram a festa. Foram ao templo do seu deus e ali fizeram um festim, amaldiçoando Abimelec.
28 ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)
28 Gaal, filho de Obed, disse: Quem é Abimelec, e o que é Siquém, para que lhe estejamos sujeitos? Não é ele filho de Jerobaal, e não é Zebul o seu lugar-tenente? Servi a família de Emor, pai de Siquém. Por que razão serviremos Abimelec?
29 ನೀವು ನನಗೆ ಈ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶಮಾಡುತ್ತೇನೆ. ನಾನು ಅವನಿಗೆ, ‘ನಿನ್ನ ಸೈನ್ಯವನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಬಾ’ ಎಂದು ಕರೆಯುತ್ತೇನೆ” ಎಂದನು.
29 Oxalá tivesse eu poder sobre esse povo! Eu arrasaria Abimelec e lhe diria: junta o teu exército, e vem!
30 ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು.
30 Zebul, governador da cidade, sabendo o que dissera Gaal, filho de Obed, encolerizou-se,
31 ಜೆಬುಲನು ಅರೂಮ ನಗರದಲ್ಲಿದ್ದ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ:
31 e mandou secretamente dizer a Abimelec: Gaal, filho de Obed, veio a Siquém com seus irmãos, e anda sublevando a cidade contra ti.
32 ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.
32 Levanta-te de noite, tu e tua tropa, e põe-te de emboscada no campo;
33 ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.”
33 amanhã cedo, ao nascer do sol, lança-te sobre a cidade; quando Gaal e sua tropa saírem contra ti, far-lhe-ás o que as circunstâncias te permitirem.
34 ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು.
34 Abimelec, pois, partiu durante a noite com toda a sua gente, e pôs emboscadas em quatro grupos junto de Siquém.
35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶೆಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು.
35 Entretanto Gaal, filho de Obed, saiu e instalou-se diante das portas da cidade. Então Abimelec com todos os seus deixou a emboscada.
36 ಗಾಳನು ಸೈನಿಕರನ್ನು ನೋಡಿದನು. ಗಾಳನು ಜೆಬುಲನಿಗೆ, “ಅಲ್ಲಿ ನೋಡು, ಬೆಟ್ಟ ಇಳಿದು ಜನರು ಬರುತ್ತಿದ್ದಾರೆ” ಎಂದನು.
36 Vendo aquela tropa, Gaal disse a Zebul: Eis uma multidão que desce das colinas. Tu vês, respondeu Zebul, as sombras das colinas como se fossem homens.
37 ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಆ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು.
37 Gaal replicou: Está descendo uma tropa do alto; e eis uma outra que vem pelo caminho do carvalho dos Adivinhos.
38 ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.
38 Zebul disse-lhe então: Onde está agora a tua arrogância, tu que dizias: quem é Abimelec para que nós o sirvamos? Eis o povo que tu desprezavas! Vai, agora, e combate contra ele!
39 ಅಬೀಮೆಲೆಕನೊಂದಿಗೆ ಯುದ್ಧಮಾಡಲು ಗಾಳನು ಶೆಕೆಮಿನ ಹಿರಿಯರನ್ನು ನಗರದ ಹೊರಗಡೆ ಕರೆದುಕೊಂಡು ಹೋದನು.
39 Saiu Gaal à frente dos siquemitas e combateu contra Abimelec.
40 ಅಬೀಮೆಲೆಕನು ಮತ್ತು ಅವನ ಜನರು ಗಾಳ ಮತ್ತು ಅವನ ಜನರನ್ನು ಬೆನ್ನಟ್ಟಿದರು. ಗಾಳನ ಜನರು ಹಿಂದಿರುಗಿ ಶೆಕೆಮ್ ನಗರದ ದ್ವಾರದ ಕಡೆಗೆ ಓಡಿದರು. ದ್ವಾರಕ್ಕೆ ಮುಟ್ಟುವ ಮೊದಲೇ ಗಾಳನ ಹಲವಾರು ಜನ ಹತರಾದರು.
40 Mas foi derrotado por Abimelec e fugiu; muitos homens, que estavam mortalmente feridos, caíram antes de terem atingido o limiar da porta.
41 ಅನಂತರ ಅಬೀಮೆಲೆಕನು ಅರೂಮ ನಗರಕ್ಕೆ ಹಿಂದಿರುಗಿದನು. ಜೆಬುಲನು ಗಾಳನನ್ನು ಮತ್ತು ಅವನ ಸಹೋದರರನ್ನು ಶೆಕೆಮ್ ನಗರದಿಂದ ಓಡಿಸಿಬಿಟ್ಟನು.
41 Abimelec deteve-se em Ruma; Zebul, porém, lançou Gaal e seus irmãos fora de Siquém.
42 ಮರುದಿನ ಶೆಕೆಮಿನ ಜನರು ಹೊಲಗಳಲ್ಲಿ ಕೆಲಸ ಮಾಡಲು ಹೋದರು. ಅಬೀಮೆಲೆಕನಿಗೆ ಅದು ಗೊತ್ತಾಯಿತು.
42 No dia seguinte, o povo saiu ao campo. Tendo sabido disso, Abimelec
43 ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು.
43 tomou sua tropa, dividiu-a em três grupos e os pôs de emboscada no campo. Ao ver que o povo saía da cidade, atacou-o e derrotou-o,
44 ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.
44 vindo em seguida com o seu grupo tomar posição à entrada da cidade, enquanto os dois outros grupos perseguiam os que estavam no campo e os massacravam.
45 ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.
45 Abimelec combateu a cidade durante todo aquele dia e tomou-a. Matou toda a população, arrasou a cidade e semeou-a de sal.
46 ಶೆಕೆಮಿನ ಬುರುಜಿನ ಮೇಲೆ ಕೆಲವು ಜನರು ವಾಸಮಾಡುತ್ತಿದ್ದರು. ಶೆಕೆಮಿನಲ್ಲಿ ನಡೆದ ಘಟನೆಯ ಬಗ್ಗೆ ಕೇಳಿ ಅವರು ಏಲ್‌ಬೆರೀತ್ ದೇವರಗುಡಿಯ ಅತಿ ಸುರಕ್ಷಿತವಾದ ಕೋಣೆಯಲ್ಲಿ ಒಟ್ಟುಗೂಡಿದರು.
46 Ao ouvirem isso, todos os habitantes da torre de Siquém retiraram-se para a fortaleza do templo de El-Berit.
47 ಶೆಕೆಮ್ ಬುರುಜಿನ ಎಲ್ಲ ಹಿರಿಯರು ಒಟ್ಟಿಗೆ ಸೇರಿದ್ದಾರೆ ಎಂಬ ಸಂಗತಿಯನ್ನು ಅಬೀಮೆಲೆಕನು ಕೇಳಿದನು.
47 E foi noticiado a Abimelec que todos os habitantes da torre de Siquém se tinham retirado para esse lugar;
48 ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.
48 subiu então Abimelec com sua tropa ao monte Selmon, tomou um machado e cortou um galho de árvore. Pondo-o aos ombros, disse à sua gente: Vistes o que eu fiz? Apressai-vos a fazer o mesmo.
49 ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.
49 Cortou cada um deles um galho e todos seguiram Abimelec; puseram esses galhos contra a fortaleza e meteram-lhes fogo, sendo a fortaleza, com todos os seus ocupantes, devorada pelas chamas. Desse modo pereceram todos os que habitavam na torre de Siquém, cerca de mil pessoas, tanto homens como mulheres.
50 ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನಪಡಿಸಿಕೊಂಡರು.
50 Depois disso, Abimelec marchou contra Tebes, que sitiou e tomou de assalto.
51 ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು.
51 Havia no meio da cidade uma torre forte, na qual se tinham refugiado todos os habitantes, homens e mulheres. Fechando bem a porta, subiram ao terraço da torre.
52 ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಆ ಗೋಪುರದ ಬಾಗಿಲಿನವರೆಗೆ ಹೋದನು. ಅವನು ಆ ಗೋಪುರವನ್ನು ಸುಡಬೇಕೆಂದಿದ್ದನು.
52 Abimelec, chegando ao pé da torre, aproximou-se da porta para lhe pôr fogo.
53 ಆದರೆ ಅಬೀಮೆಲೆಕನು ಆ ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಆ ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.
53 Então uma mulher, lançando de cima uma pedra de moinho, feriu-lhe a cabeça, fraturando-lhe o crânio.
54 ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.
54 Chamou imediatamente seu escudeiro e disse-lhe: Tira a tua espada e acaba de matar-me, para que se não diga que fui morto por uma mulher! Seu escudeiro o feriu, e Abimelec morreu.
55 ಅಬೀಮೆಲೆಕನು ಸತ್ತಿದ್ದನ್ನು ಇಸ್ರೇಲರು ನೋಡಿದರು. ಆದ್ದರಿಂದ ಅವರೆಲ್ಲರೂ ತಮ್ಮತಮ್ಮ ಸ್ಥಳಗಳಿಗೆ ಹಿಂದಿರುಗಿದರು.
55 Morto Abimelec, todos os israelitas voltaram para suas casas.
56 ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದು ಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು.
56 Assim Deus fez recair sobre Abimelec o mal que tinha feito a seu pai, matando seus setenta irmãos.
57 ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾವುನು ನುಡಿದಂತೆಯೇ ಆಯಿತು.
57 E do mesmo modo Deus fez recair sobre os siquemitas os seus crimes. Assim se cumpriu sobre ele a maldição de Joatão, filho de Jerobaal.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Juízes 9, comparar traduções ou montar um estudo — tudo direto pelo WhatsApp.