Lucas 11
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT
1 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.
1 Certo dia, Jesus estava orando em determinado lugar. Quando terminou, um de seus discípulos lhe disse: “Senhor, ensine-nos a orar, como João ensinou aos discípulos dele”.
2 ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ:
2 Jesus disse: “Orem da seguinte forma: “Pai, Venha o teu reino.
3 ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.
3 Dá-nos hoje o pão para este dia,
4 ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವಂತೆ
4 e perdoa nossos pecados, assim como perdoamos aqueles que pecam contra nós. E não nos deixes cair em tentação”.
5 — ausente —
5 E ele prosseguiu: “Suponha que você fosse à casa de um amigo à meia-noite para pedir três pães, dizendo:
6 — ausente —
6 ‘Um amigo meu acaba de chegar para me visitar e não tenho nada para lhe oferecer’,
7 ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ.
7 e ele respondesse lá de dentro: ‘Não me perturbe. A porta já está trancada, e minha família e eu já estamos deitados. Não posso ajudá-lo’.
8 ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು.
8 Eu lhes digo que, embora ele não o faça por amizade, se você continuar a bater à porta, ele se levantará e lhe dará o que precisa por causa da sua insistência.
9 ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ತಟ್ಟಿರಿ, ಆಗ ನಿಮಗೆ ಬಾಗಿಲು ತೆರೆಯುವುದು.
9 “Portanto eu lhes digo: peçam, e receberão. Procurem, e encontrarão. Batam, e a porta lhes será aberta.
10 ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.
10 Pois todos que pedem, recebem. Todos que procuram, encontram. E, para todos que batem, a porta é aberta.
11 ನಿಮ್ಮಲ್ಲಿ ಎಷ್ಟು ಜನರು ತಂದೆಗಳಾಗಿದ್ದೀರಿ? ನಿಮ್ಮ ಮಗನು ಮೀನನ್ನು ಕೇಳಿದರೆ, ನೀವು ಅವನಿಗೆ ಹಾವನ್ನು ಕೊಡುವಿರೋ? ಇಲ್ಲ! ನೀವು ಮೀನನ್ನೇ ಕೊಡುತ್ತೀರಿ.
11 “Vocês que são pais, respondam: Se seu filho lhe pedir um peixe, você lhe dará uma cobra?
12 ನಿಮ್ಮ ಮಗನು ಮೊಟ್ಟೆಯನ್ನು ಕೇಳಿದರೆ, ನೀವು ಅವನಿಗೆ ಚೇಳನ್ನು ಕೊಡುವಿರೋ? ಇಲ್ಲ!
12 Ou, se lhe pedir um ovo, você lhe dará um escorpião?
13 ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
13 Portanto, se vocês que são pecadores sabem como dar bons presentes a seus filhos, quanto mais seu Pai no céu dará o Espírito Santo aos que lhe pedirem!”.
14 ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.
14 Certo dia, Jesus expulsou um demônio que deixava um homem mudo e, quando o demônio saiu, o homem começou a falar. A multidão ficou admirada,
15 ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು.
15 mas alguns disseram: “É pelo poder de Belzebu, o príncipe dos demônios, que ele expulsa os demônios”.
16 ಇತರ ಜನರು ಯೇಸುವನ್ನು ಪರೀಕ್ಷಿಸಬೇಕೆಂದು ದೇವರಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸು ಎಂದು ಕೇಳಿದರು.
16 Outros exigiram que Jesus lhes desse um sinal do céu para provar sua autoridade.
17 ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ಒಡೆದುಹೋದ ಮತ್ತು ತನಗೆ ವಿರುದ್ಧವಾಗಿ ತಾನೇ ಕಾದಾಡುವ ರಾಜ್ಯವು ನಾಶವಾಗುವುದು. ಭೇದಭಾವದಿಂದ ಕೂಡಿರುವ ಕುಟುಂಬವು ಮುರಿದು ಹೋಗುವುದು.
17 Jesus, conhecendo seus pensamentos, disse: “Todo reino dividido internamente está condenado à ruína. Uma família dividida contra si mesma se desintegrará.
18 ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ.
18 Vocês dizem que eu expulso demônios pelo poder de Belzebu. Mas, se Satanás está dividido e luta contra si mesmo, como o seu reino sobreviverá?
19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ.
19 E, se meu poder vem de Belzebu, o que dizer de seus discípulos? Eles também expulsam demônios, de modo que condenarão vocês pelo que acabaram de dizer.
20 ಆದರೆ ನಾನು ದೆವ್ವಗಳನ್ನು ದೇವರ ಬಲದಿಂದ ಹೊರಡಿಸುವುದಾದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.
20 Se, contudo, expulso demônios pelo poder de Deus, então o reino de Deus já chegou a vocês.
21 “ಒಬ್ಬ ಬಲಿಷ್ಠನು ಅನೇಕ ಆಯುಧಗಳಿಂದ ಸುಸಜ್ಜಿತನಾಗಿ ತನ್ನ ಮನೆಯನ್ನು ಕಾಯುತ್ತಿರುವಾಗ, ಮನೆಯೊಳಗಿರುವ ವಸ್ತುಗಳು ಸುರಕ್ಷಿತವಾಗಿರುತ್ತವೆ.
21 Pois, quando um homem forte está bem armado e guarda seu palácio, seus bens estão seguros,
22 ಆದರೆ ಅವನಿಗಿಂತಲೂ ಬಲಿಷ್ಠನಾದ ಮತ್ತೊಬ್ಬನು ಬಂದು ಅವನನ್ನು ಸೋಲಿಸಿದರೆ, ಮೊದಲನೆಯ ಬಲಿಷ್ಠನು ತನ್ನ ಮನೆಯನ್ನು ಸುರಕ್ಷಿತವಾಗಿಡುವುದಕ್ಕಾಗಿ ಅವಲಂಬಿಸಿಕೊಂಡಿದ್ದ ಆಯುಧಗಳನ್ನೆಲ್ಲಾ ಆ ಮತ್ತೊಬ್ಬ ಬಲಿಷ್ಠನು ತೆಗೆದುಕೊಂಡು ಹೋಗುವನು. ಬಳಿಕ ಆ ಮತ್ತೊಬ್ಬ ಬಲಿಷ್ಠನು ಆ ಮನುಷ್ಯನ ವಸ್ತುಗಳನ್ನು ತನಗೆ ಇಷ್ಟಬಂದ ಹಾಗೆ ಮಾಡುವನು.
22 até que alguém ainda mais forte o ataque e o vença, tire dele suas armas e leve embora seus pertences.
23 “ನನ್ನೊಂದಿಗಿಲ್ಲದವನು ನನಗೆ ವಿರೋಧವಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.
23 “Quem não está comigo opõe-se a mim, e quem não trabalha comigo trabalha contra mim.
24 “ದೆವ್ವವು ಒಬ್ಬ ವ್ಯಕ್ತಿಯಿಂದ ಹೊರಗೆ ಬಂದ ಮೇಲೆ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಅಲೆದಾಡುತ್ತದೆ. ಆದರೆ ವಿಶ್ರಮಿಸಿಕೊಳ್ಳಲು ಅದಕ್ಕೆ ಸ್ಥಳ ದೊರೆಯುವುದಿಲ್ಲ. ಆದ್ದರಿಂದ ‘ನಾನು ಬಿಟ್ಟುಬಂದ ಮನೆಗೆ (ವ್ಯಕ್ತಿ) ಹಿಂತಿರುಗುವೆನು’ ಎಂದುಕೊಳ್ಳುತ್ತದೆ.
24 “Quando um espírito impuro sai de uma pessoa, anda por lugares secos à procura de descanso. Mas, não o encontrando, diz: ‘Voltarei à casa da qual saí’.
25 ಅದು ಆ ವ್ಯಕ್ತಿಯ ಬಳಿಗೆ ಹಿಂತಿರುಗಿ ಬಂದಾಗ, ಆ ಮನೆಯನ್ನು (ವ್ಯಕ್ತಿ) ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
25 Ele volta para sua antiga casa e a encontra vazia, varrida e arrumada.
26 ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.
26 Então o espírito busca outros sete espíritos, piores que ele, e todos entram na pessoa e passam a morar nela, e a pessoa fica pior que antes”.
27 ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು.
27 Enquanto ele falava, uma mulher na multidão gritou: “Feliz é sua mãe, que o deu à luz e o amamentou!”.
28 ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.
28 Jesus, porém, respondeu: “Ainda mais felizes são os que ouvem a palavra de Deus e a praticam”.
29 ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ.
29 Enquanto a multidão se apertava contra Jesus, ele disse: “Esta geração perversa insiste que eu lhe mostre um sinal, mas o único sinal que lhes darei será o de Jonas.
30 ನಿನೆವೆಯಲ್ಲಿ ಜೀವಿಸುತ್ತಿದ್ದ ಜನರಿಗೆ ಯೋನನು ಒಂದು ಸೂಚನೆಯಾಗಿದ್ದನು. ಅದೇ ರೀತಿಯಲ್ಲಿ ಈ ಕಾಲದ ಜನರಿಗೆ ಮನುಷ್ಯಕುಮಾರನು ಸೂಚನೆಯಾಗಿದ್ದಾನೆ.
30 O que aconteceu com ele foi um sinal para o povo de Nínive. O que acontecer com o Filho do Homem será um sinal para esta geração.
31 “ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!
31 “A rainha de Sabá se levantará contra esta geração no dia do juízo e a condenará, pois veio de uma terra distante para ouvir a sabedoria de Salomão; e vocês têm à sua frente alguém maior que Salomão!
32 “ನ್ಯಾಯತೀರ್ಪಿನ ದಿನದಲ್ಲಿ ನಿನೆವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ.
32 Os habitantes de Nínive também se levantarão contra esta geração no dia do juízo e a condenarão, pois eles se arrependeram de seus pecados quando ouviram a mensagem anunciada por Jonas; e vocês têm à sua frente alguém maior que Jonas!”
33 “ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
33 “Não faz sentido acender uma lâmpada e depois escondê-la ou colocá-la sob um cesto. Pelo contrário, ela é colocada num pedestal, de onde sua luz é vista por todos que entram na casa.
34 ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.
34 “Seus olhos são como uma lâmpada que ilumina todo o corpo. Quando os olhos são bons, todo o corpo se enche de luz. Mas, quando são maus, o corpo se enche de escuridão.
35 ಆದ್ದರಿಂದ ಎಚ್ಚರಿಕೆಯಾಗಿರು! ನಿನ್ನೊಳಗಿರುವ ಬೆಳಕು ಕತ್ತಲಾಗದಂತೆ ನೋಡಿಕೊ.
35 Portanto, tomem cuidado para que sua luz não seja, na verdade, escuridão.
36 ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು.
36 Se estiverem cheios de luz, sem nenhum canto escuro, sua vida inteira será radiante, como se uma lamparina os estivesse iluminando”.
37 ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು.
37 Quando Jesus terminou de falar, um dos fariseus o convidou para comer em sua casa. Ele foi e tomou lugar à mesa.
38 ಆದರೆ ಯೇಸು ತನ್ನ ಕೈಗಳನ್ನು ತೊಳೆದುಕೊಳ್ಳದೆ ಊಟಕ್ಕೆ ಕುಳಿತಿರುವುದನ್ನು ಕಂಡಾಗ ಫರಿಸಾಯನಿಗೆ ಆಶ್ಚರ್ಯವಾಯಿತು.
38 Seu anfitrião ficou surpreso por ele não realizar primeiro a cerimônia de lavar as mãos, como era costume entre os judeus.
39 ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ.
39 Então o Senhor lhe disse: “Vocês, fariseus, têm o cuidado de limpar o exterior do copo e do prato, mas estão sujos por dentro, cheios de ganância e perversidade.
40 ನೀವು ಬುದ್ಧಿಹೀನರು! ಹೊರಭಾಗವನ್ನು ಮಾಡಿದಾತನೇ (ದೇವರು) ಒಳಭಾಗವನ್ನೂ ಮಾಡಿದ್ದಾನೆ.
40 Tolos! Acaso Deus não fez tanto o interior como o exterior?
41 ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.
41 Portanto, limpem o interior dando ofertas aos necessitados e ficarão limpos por completo.
42 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
42 “Que aflição os espera, fariseus! Vocês têm o cuidado de dar o dízimo da hortelã, da arruda e de todas as ervas, mas negligenciam a justiça e o amor de Deus. Sim, vocês deviam fazer essas coisas, mas sem descuidar das mais importantes.
43 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸಭಾಮಂದಿರಗಳಲ್ಲಿ ಉನ್ನತಪೀಠಗಳನ್ನೂ ಮಾರುಕಟ್ಟೆಗಳಲ್ಲಿ ಜನರಿಂದ ಗೌರವವನ್ನೂ ಆಶಿಸುತ್ತೀರಿ.
43 “Que aflição os espera, fariseus! Pois gostam de sentar-se nos lugares de honra nas sinagogas e de receber saudações respeitosas enquanto andam pelas praças.
44 ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.”
44 Sim, que aflição os espera! Pois são como túmulos escondidos: as pessoas passam por cima deles sem saber onde estão pisando”.
45 ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.
45 Então um especialista da lei disse: “Mestre, o senhor insultou também a nós com o que acabou de dizer”.
46 ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ.
46 Jesus respondeu: “Sim, que aflição também os espera, especialistas da lei! Pois oprimem as pessoas com exigências insuportáveis e não movem um dedo sequer para aliviar seus fardos.
47 ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟುತ್ತೀರಿ. ಆದರೆ ಆ ಪ್ರವಾದಿಗಳನ್ನು ಕೊಂದವರು ನಿಮ್ಮ ಪಿತೃಗಳೇ!
47 Que aflição os espera! Pois constroem monumentos para os profetas que seus próprios antepassados assassinaram.
48 ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!
48 Com isso, porém, testemunham que concordam com o que seus antepassados fizeram. Eles mataram os profetas, e vocês cooperam com eles construindo os monumentos!
49 ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’
49 Foi a isto que Deus, em sua sabedoria, se referiu: ‘Eu lhes enviarei profetas e apóstolos, mas eles matarão alguns e perseguirão outros’.
50 “ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಈ ಕಾಲದ ಜನರಾದ ನೀವು ದಂಡನೆ ಹೊಂದುವಿರಿ.
50 “Portanto, esta geração será responsabilizada pelo assassinato de todos os profetas de Deus desde a criação do mundo,
51 ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.
51 desde o assassinato do justo Abel até o de Zacarias, morto entre o altar e o santuário. Sim, certamente esta geração será considerada responsável.
52 “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.
52 “Que aflição os espera, especialistas da lei! Vocês se apossaram da chave do conhecimento e, além de não entrarem no reino, impedem que outros entrem”.
53 ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.
53 Quando Jesus se retirou dali, os mestres da lei e os fariseus ficaram extremamente irados e tentaram provocá-lo com muitas perguntas.
54 ಯೇಸುವನ್ನು ಮಾತಿನಲ್ಲಿ ಹಿಡಿಯಬೇಕೆಂದು ಯೋಚಿಸಿ, ಆತನು ಏನಾದರೂ ತಪ್ಪು ಹೇಳುವಂತೆ ಮಾಡಲು ಪ್ರಯತ್ನಿಸುತ್ತಿದ್ದರು.
54 Queriam apanhá-lo numa armadilha, levando-o a dizer algo que pudessem usar contra ele.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 11, comparar traduções ou montar um estudo — tudo direto pelo WhatsApp.