Lucas 12

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH

Sair da comparação
NTLH Nova Tradução na Linguagem de Hoje 2000
1 ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.
1 Milhares de pessoas se ajuntaram, de tal maneira que umas pisavam as outras. Então Jesus disse primeiro aos discípulos:
2 ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು.
2 Tudo o que está coberto vai ser descoberto, e o que está escondido será conhecido.
3 ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.
3 Assim tudo o que vocês disserem na escuridão será ouvido na luz do dia. E tudo o que disserem em segredo, dentro de um quarto fechado, será anunciado abertamente.
4 ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು.
4 Jesus continuou:
5 ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.
5 Vou mostrar a vocês de quem devem ter medo: tenham medo de Deus, que, depois de matar o corpo, tem poder para jogar a pessoa no inferno. Sim, repito: tenham medo de Deus.
6 “ಐದು ಗುಬ್ಬಿಗಳ ಬೆಲೆ ಕೇವಲ ಎರಡು ಪೈಸೆಗಳು. ಆದರೆ ದೇವರು ಅವುಗಳಲ್ಲಿ ಒಂದನ್ನೂ ಮರೆತುಬಿಡುವುದಿಲ್ಲ.
6 — Por acaso não é verdade que cinco passarinhos são vendidos por algumas moedinhas? No entanto Deus não esquece nenhum deles.
7 ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
7 Até os fios dos cabelos de vocês estão todos contados. Não tenham medo, pois vocês valem mais do que muitos passarinhos!
8 “ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.
8 Jesus disse ainda:
9 ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.
9 Mas aquele que disser publicamente que não é meu, o Filho do Homem também dirá diante dos anjos de Deus que essa pessoa não é dele.
10 “ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆಯೇ ಇಲ್ಲ.
10 — Quem falar contra o Filho do Homem será perdoado, porém quem
11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.
11 — Quando levarem vocês para serem julgados nas
12 ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”
12 Pois naquela hora o Espírito Santo lhes ensinará o que devem dizer.
13 ಸಮೀಪದಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕನೇ, ನಮ್ಮ ತಂದೆ ಇದೀಗ ಸತ್ತುಹೋದನು. ನಮ್ಮ ತಂದೆಯ ಆಸ್ತಿಯಲ್ಲಿ ನನಗೆ ಪಾಲುಕೊಡಬೇಕೆಂದು ನನ್ನ ಅಣ್ಣನಿಗೆ ಹೇಳು” ಎಂದು ಹೇಳಿದನು.
13 Um homem que estava no meio da multidão disse a Jesus: — Mestre, mande o meu irmão repartir comigo a herança que o nosso pai nos deixou.
14 ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.
14 Jesus disse:
15 ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.
15 E continuou, dizendo a todos:
16 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು.
16 Então Jesus contou a seguinte parábola :
17 ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು.
17 Então ele começou a pensar: “Eu não tenho lugar para guardar toda esta colheita. O que é que vou fazer?
18 “ಬಳಿಕ ಅವನು, ‘ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.’
18 Ah! Já sei! — disse para si mesmo. — Vou derrubar os meus depósitos de cereais e construir outros maiores ainda. Neles guardarei todas as minhas colheitas junto com tudo o que tenho.
19 ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.
19 Então direi a mim mesmo: ‘Homem feliz! Você tem tudo de bom que precisa para muitos anos. Agora descanse, coma, beba e alegre-se.’ ”
20 “ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.
20 Mas Deus lhe disse: “Seu tolo! Esta noite você vai morrer; aí quem ficará com tudo o que você guardou?”
21 “ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”
21 Jesus concluiu:
22 ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.
22 Então Jesus disse aos seus discípulos:
23 ಆಹಾರಕ್ಕಿಂತ ಪ್ರಾಣ ಹೆಚ್ಚು ಪ್ರಾಮುಖ್ಯವಾದದ್ದು. ಬಟ್ಟೆಗಿಂತಲೂ ದೇಹ ಹೆಚ್ಚು ಪ್ರಾಮುಖ್ಯವಾದದ್ದು.
23 Pois a vida é mais importante do que a comida, e o corpo é mais importante do que as roupas.
24 ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ.
24 Vejam os corvos: não semeiam, não colhem, não têm despensas nem depósitos, mas Deus dá de comer a eles. Será que vocês não valem muito mais do que os pássaros?
25 ನೀವು ಊಟಬಟ್ಟೆಗಳಿಗಾಗಿ ಎಷ್ಟೇ ಚಿಂತಿಸಿದರೂ ನಿಮ್ಮ ಆಯುಷ್ಯೇನೂ ಹೆಚ್ಚಾಗುವುದಿಲ್ಲ.
25 Qual de vocês pode encompridar a sua vida, por mais que se preocupe com isso?
26 ಚಿಕ್ಕಕಾರ್ಯಗಳನ್ನೇ ಮಾಡಲು ನಿಮಗೆ ಸಾಧ್ಯವಿಲ್ಲದಿರುವಾಗ, ದೊಡ್ಡಕಾರ್ಯಗಳ ಕುರಿತು ನೀವು ಚಿಂತಿಸುವುದೇಕೆ?
26 Portanto, se vocês não podem conseguir uma coisa assim tão pequena, por que se preocupam com as outras?
27 “ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
27 Vejam como crescem as flores do campo: elas não trabalham, nem fazem roupas para si mesmas. Mas eu afirmo a vocês que nem mesmo Salomão, sendo tão rico, usava roupas tão bonitas como uma dessas flores.
28 ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
28 É Deus quem veste a erva do campo, que hoje está aqui e amanhã desaparece, queimada no forno. Então é claro que ele vestirá também vocês, que têm uma fé tão pequena!
29 “ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ.
29 Portanto, não fiquem aflitos, procurando sempre o que comer ou o que beber.
30 ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ.
30 Pois os pagãos deste mundo é que estão sempre procurando todas essas coisas. O Pai de vocês sabe que vocês precisam de tudo isso.
31 ನೀವು ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆಯನ್ನು ಕೊಡಿರಿ. ಆಗ ನಿಮಗೆ ಬೇಕಾಗಿರುವ ಉಳಿದವುಗಳನ್ನು ಕೊಡಲಾಗುವುದು.
31 Portanto, ponham em primeiro lugar na sua vida o
32 “ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.
32 Jesus continuou:
33 ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.
33 Vendam tudo o que vocês têm e deem o dinheiro aos pobres. Arranjem bolsas que não se estragam e guardem as suas riquezas no céu, onde elas nunca se acabarão; porque lá os ladrões não podem roubá-las, e as traças não podem destruí-las.
34 ನಿಮ್ಮ ಭಂಡಾರ ಎಲ್ಲಿದೆಯೋ ಅಲ್ಲಿಯೇ ನಿಮ್ಮ ಹೃದಯವೂ ಇರುತ್ತದೆ.
34 Pois onde estiverem as suas riquezas, aí estará o coração de vocês.
35 “ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ.
35 E Jesus disse ainda:
36 ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ.
36 Sejam como os empregados que esperam pelo patrão, que vai voltar da festa de casamento. Logo que ele bate na porta, os empregados vão abrir.
37 ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.
37 Felizes aqueles empregados que o patrão encontra acordados e preparados! Eu afirmo a vocês que isto é verdade: o próprio patrão se preparará para servi-los, mandará que se sentem à mesa e ele mesmo os servirá.
38 ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.
38 Eles serão felizes se o patrão os encontrar alertas, mesmo que chegue à meia-noite ou até mais tarde.
39 “ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!
39 Lembrem disto: se o dono da casa soubesse a que hora o ladrão viria, não o deixaria arrombar a sua casa.
40 ಅಂತೆಯೇ, ನೀವೂ ಸಿದ್ಧರಾಗಿರಿ! ನೀವು ನಿರೀಕ್ಷಿಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುವನು!”
40 Vocês, também, fiquem alertas, porque o
41 ಪೇತ್ರನು, “ಪ್ರಭುವೇ, ನೀನು ಈ ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು.
41 Então Pedro perguntou: — Senhor, essa
42 ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.
42 O Senhor respondeu:
43 ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಯಜಮಾನನು ಬಂದಾಗ ಅವನಿಗೆ ಬಹಳ ಸಂತೋಷವಾಗುವುದು.
43 Feliz aquele empregado que estiver fazendo isso quando o patrão chegar!
44 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.
44 Eu afirmo a vocês que, de fato, o patrão vai colocá-lo como encarregado de toda a sua propriedade.
45 “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.
45 Mas imaginem o que acontecerá se aquele empregado pensar que o seu patrão está demorando muito para voltar. E imaginem que esse empregado comece a bater nos outros empregados e empregadas e a comer e a beber até ficar bêbado.
46 ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.
46 Então o patrão voltará no dia em que o empregado menos espera e na hora que ele não sabe. Aí o patrão mandará cortar o empregado em pedaços e o condenará a ir para o lugar aonde os desobedientes vão.
47 “ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!
47 — O empregado que sabe qual é a vontade do patrão, mas não se prepara e não faz o que ele quer, será castigado com muitas chicotadas.
48 ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”
48 Mas o empregado que não sabe o que o patrão quer e faz alguma coisa que merece castigo, esse empregado será castigado com poucas chicotadas. Assim será pedido muito de quem recebe muito; e, daquele a quem muito é dado, muito mais será pedido.
49 ಯೇಸು ತನ್ನ ಮಾತನ್ನು ಮುಂದುವರೆಸಿ ಹೀಗೆಂದನು: “ನಾನು ಈ ಲೋಕಕ್ಕೆ ಬೆಂಕಿಹಾಕಲು ಬಂದೆನು! ಅದು ಇಷ್ಟರೊಳಗೆ ಉರಿಯುತ್ತಿದ್ದರೆ ನನಗೆ ಸಂತೋಷ!
49 Jesus continuou:
50 ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.
50 Tenho de receber um batismo e como estou aflito até que isso aconteça!
51 ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು!
51 Vocês pensam que eu vim trazer paz ao mundo? Pois eu afirmo a vocês que não vim trazer paz, mas divisão.
52 ಇಂದಿನಿಂದ, ಐದು ಜನರಿರುವ ಕುಟುಂಬದಲ್ಲಿ ಭೇದ ಉಂಟಾಗುವುದು. ಅವರಲ್ಲಿ ಮೂವರು ಇಬ್ಬರಿಗೆ ವಿರೋಧವಾಗುವರು ಮತ್ತು ಇಬ್ಬರು ಮೂವರಿಗೆ ವಿರೋಧವಾಗುವರು.
52 Porque daqui em diante uma família de cinco pessoas ficará dividida: três contra duas e duas contra três.
53 ತಂದೆಗೂ ಮಗನಿಗೂ ಭೇದ ಉಂಟಾಗುವುದು.
53 Os pais vão ficar contra os filhos, e os filhos, contra os pais. As mães vão ficar contra as filhas, e as filhas, contra as mães. As sogras vão ficar contra as noras, e as noras, contra as sogras.
54 ಬಳಿಕ ಯೇಸು ಜನರಿಗೆ ಹೀಗೆಂದನು: “ಮೋಡವು ಪಶ್ಚಿಮ ದಿಕ್ಕಿನಲ್ಲಿ ದೊಡ್ಡದಾಗುತ್ತಿರುವುದನ್ನು ನೀವು ನೋಡುವಾಗ ‘ಇಂದು ಮಳೆ ಬರುತ್ತದೆ’ ಎಂದು ಹೇಳುತ್ತೀರಿ. ಅಂತೆಯೇ ಅಂದು ಮಳೆಯಾಗುತ್ತದೆ.
54 Jesus disse também ao povo:
55 ದಕ್ಷಿಣ ದಿಕ್ಕಿನಿಂದ ಗಾಳಿ ಬೀಸತೊಡಗಿದಾಗ, ‘ಈ ದಿನ ತುಂಬಾ ಸೆಕೆ ಇರುವುದು’ ಎನ್ನುತ್ತೀರಿ. ಅಂತೆಯೇ ಸೆಕೆ ಇರುವುದು.
55 E, quando sentem o vento sul soprando, dizem: “Vai fazer calor.” E faz mesmo.
56 ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?
56 Hipócritas! Vocês sabem explicar os sinais da terra e do céu. Então por que não sabem explicar o que querem dizer os sinais desta época?
57 “ನೀವೇ ನ್ಯಾಯನಿರ್ಣಯವನ್ನು ಮಾಡಬಾರದೇಕೆ?
57 E Jesus terminou, dizendo:
58 ಒಬ್ಬನು ನಿಮ್ಮ ಮೇಲೆ ದಾವೆ ಹೂಡಲು ನ್ಯಾಯಾಲಯಕ್ಕೆ ಹೋಗುತ್ತಿರುವಾಗ ನಿಮ್ಮ ಸಮಸ್ಯೆಯನ್ನು ದಾರಿಯಲ್ಲಿಯೇ ಪರಿಹರಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ಇಲ್ಲವಾದರೆ, ಅವನು ನಿಮ್ಮನ್ನು ನ್ಯಾಯಾಧೀಶನ ಬಳಿಗೆ ಕೊಂಡೊಯ್ಯುವನು. ನ್ಯಾಯಾಧೀಶನು ನಿಮ್ಮನ್ನು ಸೆರೆಮನೆಗೆ ಹಾಕಿಸುವನು.
58 Se alguém fizer uma acusação contra você e levá-lo ao tribunal, faça o possível para resolver a questão enquanto ainda está no caminho com essa pessoa. Isso para que ela não o leve ao juiz, o juiz o entregue ao guarda, e o guarda ponha você na cadeia.
59 ನೀವು ನಿಮ್ಮ ಸಾಲವನ್ನೆಲ್ಲಾ ಕೊನೆಯ ಪೈಸದವರೆಗೆ ತೀರಿಸುವ ತನಕ ಸೆರೆಮನೆಯಿಂದ ಹೊರಗೆ ಬರಲು ಸಾಧ್ಯವೇ ಇಲ್ಲ!”
59 Eu lhe afirmo que você não sairá dali enquanto não pagar a multa toda.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 12, comparar traduções ou montar um estudo — tudo direto pelo WhatsApp.