Lucas 14

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT

Sair da comparação
NVT Nova Versão Transformadora
1 ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
1 Certo sábado, Jesus foi comer na casa de um líder fariseu, onde o observavam atentamente.
2 ಯೇಸುವಿನ ಎದುರಿನಲ್ಲಿಯೇ ಜಲೋದರ ರೋಗವುಳ್ಳ ಒಬ್ಬನನ್ನು ಇರಿಸಿದ್ದರು.
2 Estava ali um homem com o corpo muito inchado.
3 ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ? ತಪ್ಪೋ?” ಎಂದು ಕೇಳಿದನು.
3 Jesus perguntou aos fariseus e aos especialistas da lei: “A lei permite ou não curar no sábado?”.
4 ಅವರು ಉತ್ತರಕೊಡಲಿಲ್ಲ. ಆಗ ಯೇಸು ಆ ಮನುಷ್ಯನ ಕೈಮುಟ್ಟಿ ವಾಸಿಮಾಡಿ ಅವನನ್ನು ಕಳುಹಿಸಿಬಿಟ್ಟನು.
4 Eles nada responderam, e Jesus tocou no homem enfermo, o curou e o mandou embora.
5 ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.
5 Depois, perguntou a eles: “Qual de vocês, se seu filho ou seu boi cair num buraco, não se apressará em tirá-lo de lá, mesmo que seja sábado?”.
6 ಫರಿಸಾಯರಾಗಲಿ ಧರ್ಮೋಪದೇಶಕರಾಗಲಿ ಯೇಸುವಿನ ಈ ಮಾತಿಗೆ ಉತ್ತರ ಕೊಡಲಾಗಲಿಲ್ಲ.
6 Mais uma vez, não puderam responder.
7 ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು:
7 Quando Jesus observou que os convidados para o jantar procuravam ocupar os lugares de honra à mesa, deu-lhes este conselho:
8 “ಒಬ್ಬನು ನಿನ್ನನ್ನು ಮದುವೆಗೆ ಆಮಂತ್ರಿಸಿದರೆ, ಉನ್ನತವಾದ ಆಸನದಲ್ಲಿ ಕುಳಿತುಕೊಳ್ಳಬೇಡ. ಅವನು ನಿನಗಿಂತಲೂ ಪ್ರಮುಖನಾದವನನ್ನು ಆಮಂತ್ರಿಸಿದ್ದಿರಬಹುದು.
8 “Quando você for convidado para um banquete de casamento, não ocupe o lugar de honra. E se chegar algum convidado mais importante que você?
9 ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.
9 O anfitrião virá e dirá: ‘Dê o seu lugar a esta pessoa’, e você, envergonhado, terá de sentar-se no último lugar da mesa.
10 “ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ‘ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!’ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.
10 “Em vez disso, ocupe o lugar menos importante à mesa. Assim, quando o anfitrião o vir, dirá: ‘Amigo, temos um lugar melhor para você!’. Então você será honrado diante de todos os convidados.
11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”
11 Pois os que se exaltam serão humilhados, e os que se humilham serão exaltados”.
12 ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.
12 Então Jesus se voltou para o anfitrião e disse: “Quando oferecer um banquete ou jantar, não convide amigos, irmãos, parentes e vizinhos ricos. Eles poderão retribuir o convite, e essa será sua única recompensa.
13 ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು.
13 Em vez disso, convide os pobres, os aleijados, os mancos e os cegos.
14 ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.
14 Assim, na ressurreição dos justos, você será recompensado por ter convidado aqueles que não podiam lhe retribuir”.
15 ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.
15 Ao ouvir isso, um homem que estava à mesa com Jesus exclamou: “Feliz será aquele que participar do banquete no reino de Deus!”.
16 ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬನು ಒಂದು ದೊಡ್ಡ ಔತಣವನ್ನು ಮಾಡಿಸಿ ಅನೇಕ ಜನರನ್ನು ಆಮಂತ್ರಿಸಿದನು.
16 Jesus respondeu com a seguinte parábola: “Certo homem preparou um grande banquete e enviou muitos convites.
17 ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು.
17 Quando estava tudo pronto, mandou seu servo dizer aos convidados: ‘Venham, o banquete está pronto’.
18 ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
18 Mas todos eles deram desculpas. Um disse: ‘Acabei de comprar um campo e preciso inspecioná-lo. Peço que me desculpe’.
19 ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
19 Outro disse: ‘Acabei de comprar cinco juntas de bois e quero experimentá-las. Sinto muito’.
20 ಮೂರನೆಯವನು, ‘ನಾನು ಇದೀಗ ಮದುವೆಯಾಗಿದ್ದೇನೆ, ನಾನು ಬರಲಾರೆ’ ಎಂದನು.
20 Ainda outro disse: ‘Acabei de me casar e não posso ir’.
21 “ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
21 “O servo voltou e informou a seu senhor o que tinham dito. Ele ficou furioso e ordenou: ‘Vá depressa pelas ruas e becos da cidade e convide os pobres, os aleijados, os cegos e os mancos’.
22 “ತರುವಾಯ ಆ ಸೇವಕನು ಬಂದು, ‘ಸ್ವಾಮೀ, ನೀನು ಹೇಳಿದಂತೆಯೇ ಮಾಡಿದೆನು. ಆದರೆ ನಮ್ಮಲ್ಲಿ ಇನ್ನೂ ಹೆಚ್ಚು ಜನರಿಗೆ ಸ್ಥಳವಿದೆ.’ ಎಂದು ಹೇಳಿದನು.
22 Depois de cumprir essa ordem, o servo informou: ‘Ainda há lugar para mais gente’.
23 ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.
23 Então o senhor disse: ‘Vá pelas estradas do campo e junto às cercas entre as videiras e insista com todos que encontrar para que venham, de modo que minha casa fique cheia.
24 ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!’ ಎಂದು ಹೇಳಿದನು.”
24 Pois nenhum dos que antes foram convidados provará do meu banquete’”.
25 ಅನೇಕ ಜನರು ಯೇಸುವಿನೊಂದಿಗೆ ಗುಂಪುಗುಂಪಾಗಿ ಹೋಗುತ್ತಿದ್ದಾಗ ಆತನು ಅವರಿಗೆ ಹೀಗೆಂದನು:
25 Uma grande multidão seguia Jesus, que se voltou para ela e disse:
26 “ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.
26 “Se alguém que me segue amar pai e mãe, esposa e filhos, irmãos e irmãs, e até mesmo a própria vida, mais que a mim, não pode ser meu discípulo.
27 ನನ್ನನ್ನು ಹಿಂಬಾಲಿಸುವವನು ತನಗೆ ಕೊಡಲ್ಪಟ್ಟಿರುವ ಶಿಲುಬೆಯನ್ನು (ಶ್ರಮೆ) ಹೊತ್ತುಕೊಂಡು ಹೋಗದಿದ್ದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.
27 E, se não tomar sua cruz e me seguir, não pode ser meu discípulo.
28 “ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು.
28 “Quem começa a construir uma torre sem antes calcular o custo e ver se possui dinheiro suficiente para terminá-la?
29 ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ,
29 Pois, se completar apenas os alicerces e ficar sem dinheiro, todos rirão dele,
30 ‘ಇವನು ಈ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಆದರೆ ಪೂರೈಸಲು ಅವನಿಂದಾಗಲಿಲ್ಲ’ ಎಂದು ಗೇಲಿ ಮಾಡುವರು.
30 dizendo: ‘Esse aí começou a construir, mas não conseguiu terminar!’.
31 “ಒಬ್ಬ ಅರಸನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವಾಗ, ಮೊದಲು ಅವನು ಕುಳಿತುಕೊಂಡು ಯೋಜನೆ ಮಾಡುವನು. ಅರಸನ ಬಳಿಯಲ್ಲಿ ಕೇವಲ ಹತ್ತುಸಾವಿರ ಮಂದಿ ಸೈನಿಕರಿದ್ದರೆ, ಇಪ್ಪತ್ತುಸಾವಿರ ಮಂದಿ ಸೈನಿಕರಿರುವ ಇನ್ನೊಬ್ಬ ಅರಸನನ್ನು ಸೋಲಿಸಲು ತನಗೆ ಸಾಧ್ಯವೇ ಎಂದು ಆಲೋಚಿಸುವನು.
31 “Ou que rei iria à guerra sem antes avaliar se seu exército de dez mil poderia derrotar os vinte mil que vêm contra ele?
32 ಅವನು ಇನ್ನೊಬ್ಬ ಅರಸನನ್ನು ಸೋಲಿಸಲಾಗದಿದ್ದರೆ, ತನ್ನ ರಾಯಭಾರಿಗಳನ್ನು ಕಳುಹಿಸಿ, ಶಾಂತಿಒಪ್ಪಂದಕ್ಕಾಗಿ ಕೇಳಿಕೊಳ್ಳುವನು.
32 E, se concluir que não, o rei enviará uma delegação para negociar um acordo de paz enquanto o inimigo está longe.
33 “ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!
33 Da mesma forma, ninguém pode se tornar meu discípulo sem abrir mão de tudo que possui.
34 “ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ.
34 “O sal é bom para temperar, mas, se perder o sabor, como torná-lo salgado outra vez?
35 ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ.
35 O sal sem sabor não serve nem para o solo nem para adubo; é jogado fora. Quem é capaz de ouvir, ouça com atenção!”.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 14, comparar traduções ou montar um estudo — tudo direto pelo WhatsApp.