Lucas 18
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA
1 ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:
1 Jesus lhes contou uma parábola para mostrar que deviam orar sempre e nunca desanimar:
2 “ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.
2 — Em certa cidade havia um juiz que não temia a Deus, nem respeitava ninguém.
3 ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.
3 Havia também, naquela mesma cidade, uma viúva que sempre o procurava, dizendo: “Julgue a minha causa contra o meu adversário.”
4 ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.
4 Por algum tempo, ele não a quis atender, mas depois pensou assim: “É bem verdade que eu não temo a Deus, nem respeito ninguém.
5 ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”
5 Porém, como esta viúva fica me incomodando, vou julgar a sua causa, para não acontecer que, por fim, venha a molestar-me.”
6 ಪ್ರಭುವು ಈ ಸಾಮ್ಯವನ್ನು ಹೇಳಿದ ಮೇಲೆ ತನ್ನ ಶಿಷ್ಯರಿಗೆ, “ಕೇಳಿರಿ! ಆ ಅನ್ಯಾಯಗಾರನಾದ ನ್ಯಾಯಾಧೀಶನು ಹೇಳಿದ್ದರಲ್ಲಿ ಅರ್ಥವಿದೆ.
6 Então o Senhor disse:
7 ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!
7 Será que Deus não fará justiça aos seus escolhidos, que a ele clamam dia e noite, embora pareça demorado em defendê-los?
8 ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.
8 Digo a vocês que, depressa, lhes fará justiça. Contudo, quando o Filho do Homem vier, será que ainda encontrará fé sobre a terra?
9 ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.
9 Jesus também contou esta parábola para alguns que confiavam em si mesmos, por se considerarem justos, e desprezavam os outros:
10 “ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು.
10 — Dois homens foram ao templo para orar: um era fariseu e o outro era publicano.
11 ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
11 O fariseu ficou em pé e orava de si para si mesmo, desta forma: “Ó Deus, graças te dou porque não sou como os demais homens, roubadores, injustos e adúlteros, nem ainda como este publicano.
12 ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.
12 Jejuo duas vezes por semana e dou o dízimo de tudo o que ganho.”
13 “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.
13 O publicano, estando em pé, longe, nem mesmo ousava levantar os olhos para o céu, mas batia no peito, dizendo: “Ó Deus, tem pena de mim, que sou pecador!”
14 ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”
14 Digo a vocês que este desceu justificado para a sua casa, e não aquele. Porque todo o que se exalta será humilhado; mas o que se humilha será exaltado.
15 ಕೆಲವು ಜನರು ತಮ್ಮ ಚಿಕ್ಕಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತಂದರು. ಆದರೆ ಶಿಷ್ಯರು ಇದನ್ನು ನೋಡಿ, “ಮಕ್ಕಳನ್ನು ತರಕೂಡದು” ಎಂದು ಜನರಿಗೆ ಹೇಳಿದರು.
15 Traziam também as crianças a Jesus para que ele as abençoasse, mas os discípulos, ao verem isso, os repreendiam.
16 ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.
16 Jesus, porém, chamando as crianças para junto de si, disse:
17 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.
17 Em verdade lhes digo: Quem não receber o Reino de Deus como uma criança de maneira nenhuma entrará nele.
18 ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು.
18 Certo homem de destaque perguntou a Jesus: — Bom Mestre, que farei para herdar a vida eterna?
19 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು.
19 Jesus respondeu:
20 ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.
20 Você conhece os mandamentos: “Não cometa adultério”, “não mate”, “não furte”, “não dê falso testemunho”, “honre o seu pai e a sua mãe”.
21 ಅದಕ್ಕೆ ಅವನು, “ನಾನು ಚಿಕ್ಕಂದಿನಿಂದಲೂ ಆ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ!” ಎಂದು ಹೇಳಿದನು.
21 Então o homem disse: — Tudo isso tenho observado desde a minha juventude.
22 ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.
22 Ouvindo isso, Jesus lhe disse:
23 ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
23 Mas, ouvindo ele estas palavras, ficou muito triste, porque era riquíssimo.
24 ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರರಾಜ್ಯಕ್ಕೆ ಸೇರುವುದು ಬಹಳ ಕಷ್ಟ!
24 Jesus, vendo-o assim triste, disse:
25 ಐಶ್ವರ್ಯವಂತನು ದೇವರ ರಾಜ್ಯಕ್ಕೆ ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು.
25 Porque é mais fácil um camelo passar pelo fundo de uma agulha do que um rico entrar no Reino de Deus.
26 ಜನರು ಯೇಸುವಿನ ಈ ಮಾತನ್ನು ಕೇಳಿ, “ಹಾಗಾದರೆ ಯಾರಿಗೆ ರಕ್ಷಣೆಯಾಗುವುದು?” ಎಂದು ಕೇಳಿದರು.
26 Os que ouviram isto perguntaram: — Sendo assim, quem pode ser salvo?
27 ಯೇಸು ಅವರಿಗೆ, “ಜನರಿಗೆ ಅಸಾಧ್ಯವಾದ ಕಾರ್ಯಗಳನ್ನು ದೇವರು ಮಾಡಬಲ್ಲನು” ಎಂದು ಉತ್ತರಿಸಿದನು.
27 Mas Jesus respondeu:
28 ಪೇತ್ರನು, “ನೋಡು, ನಾವು ನಮ್ಮದೆಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು!” ಅಂದನು.
28 Então Pedro disse: — Eis que nós deixamos nossa casa e seguimos o senhor.
29 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು.
29 Jesus lhes respondeu:
30 ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.
30 que não receba, no presente, muitas vezes mais e, no mundo por vir, receberá a vida eterna.
31 ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!
31 Chamando os doze para um lado, Jesus lhes disse:
32 ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.
32 Ele será entregue aos gentios, que vão zombar dele, insultá-lo e cuspir nele.
33 ಅವರು ಆತನಿಗೆ ಕೊರಡೆಗಳಿಂದ ಹೊಡೆಯುವರು ಮತ್ತು ಆತನನ್ನು ಕೊಲ್ಲುವರು! ಆದರೆ ಆತನು ತನ್ನ ಮೂರನೇ ದಿನದಲ್ಲಿ ಮತ್ತೆ ಜೀವಂತವಾಗಿ ಎದ್ದುಬರುವನು” ಅಂದನು.
33 Depois de açoitá-lo, eles o matarão, mas, ao terceiro dia, ressuscitará.
34 ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.
34 Eles, porém, não entenderam nada disso. O significado dessas palavras lhes era encoberto, e eles não sabiam do que Jesus estava falando.
35 ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆ ರಸ್ತೆಯ ಪಕ್ಕದಲ್ಲಿ ಒಬ್ಬ ಕುರುಡನು ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
35 Aconteceu que, quando Jesus se aproximava de Jericó, um cego estava sentado à beira do caminho, pedindo esmolas.
36 ಆ ರಸ್ತೆಯಲ್ಲಿ ಜನಸಮೂಹದ ಶಬ್ದವನ್ನು ಕೇಳಿ ಆ ಕುರುಡನು, “ಯಾವ ಸಮಾರಂಭ ನಡೆಯುತ್ತಿದೆ?” ಎಂದು ಕೇಳಿದನು.
36 E, ouvindo o barulho da multidão que passava, perguntou o que era aquilo.
37 ಜನರು ಅವನಿಗೆ, “ನಜರೇತಿನ ಯೇಸು ಬರುತ್ತಿದ್ದಾನೆ” ಎಂದು ತಿಳಿಸಿದರು.
37 Anunciaram-lhe que Jesus, o Nazareno, estava passando.
38 ಆ ಕುರುಡನು ಗಟ್ಟಿಯಾಗಿ, “ಯೇಸುವೇ, ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
38 Então ele gritou: — Jesus, Filho de Davi, tenha compaixão de mim!
39 ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
39 E os que iam na frente o repreendiam para que se calasse. Mas ele gritava cada vez mais: — Filho de Davi, tenha compaixão de mim!
40 ಯೇಸು ಅಲ್ಲೇ ನಿಂತು, “ಆ ಕುರುಡನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ಆ ಕುರುಡನು ಹತ್ತಿರಕ್ಕೆ ಬಂದಾಗ, ಯೇಸು ಅವನಿಗೆ
40 Jesus parou e mandou que trouxessem o cego. E, tendo ele chegado, Jesus perguntou:
41 “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು.
41 — O que você quer que eu lhe faça? Ele respondeu: — Senhor, que eu possa ver de novo.
42 ಯೇಸು ಅವನಿಗೆ, “ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಎಂದು ಹೇಳಿದನು.
42 Jesus lhe disse:
43 ಆಗ ಆ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಈ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.
43 Imediatamente ele passou a ver de novo e seguia Jesus, glorificando a Deus. Também todo o povo, vendo isto, dava louvores a Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 18, comparar traduções ou montar um estudo — tudo direto pelo WhatsApp.