Lucas 19
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF
1 ಒಮ್ಮೆ ಯೇಸು ಜೆರಿಕೊ ಪಟ್ಟಣದ ಮೂಲಕ ಹೋಗುತ್ತಿದ್ದನು.
1 E, tendo Jesus entrado em Jericó, ia passando.
2 ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು.
2 E eis que havia ali um homem chamado Zaqueu; e era este um chefe dos publicanos, e era rico.
3 ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.
3 E procurava ver quem era Jesus, e não podia, por causa da multidão, pois era de pequena estatura.
4 ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು.
4 E, correndo adiante, subiu a uma figueira brava para o ver; porque havia de passar por ali.
5 ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.
5 E quando Jesus chegou àquele lugar, olhando para cima, viu-o e disse-lhe: Zaqueu, desce depressa, porque hoje me convém pousar em tua casa.
6 ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.
6 E, apressando-se, desceu, e recebeu-o alegremente.
7 ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.
7 E, vendo todos isto, murmuravam, dizendo que entrara para ser hóspede de um homem pecador.
8 ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.
8 E, levantando-se Zaqueu, disse ao Senhor: Senhor, eis que eu dou aos pobres metade dos meus bens; e, se nalguma coisa tenho defraudado alguém, o restituo quadruplicado.
9 ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು.
9 E disse-lhe Jesus: Hoje veio a salvação a esta casa, pois também este é filho de Abraão.
10 ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.
10 Porque o Filho do homem veio buscar e salvar o que se havia perdido.
11 ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು.
11 E, ouvindo eles estas coisas, ele prosseguiu, e contou uma parábola; porquanto estava perto de Jerusalém, e cuidavam que logo se havia de manifestar o reino de Deus.
12 ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.
12 Disse pois: Certo homem nobre partiu para uma terra remota, a fim de tomar para si um reino e voltar depois.
13 ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ‘ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು.
13 E, chamando dez servos seus, deu-lhes dez minas, e disse-lhes: Negociai até que eu venha.
14 ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.
14 Mas os seus concidadãos odiavam-no, e mandaram após ele embaixadores, dizendo: Não queremos que este reine sobre nós.
15 “ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.
15 E aconteceu que, voltando ele, depois de ter tomado o reino, disse que lhe chamassem aqueles servos, a quem tinha dado o dinheiro, para saber o que cada um tinha ganhado, negociando.
16 ಮೊದಲನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು.
16 E veio o primeiro, dizendo: Senhor, a tua mina rendeu dez minas.
17 ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.
17 E ele lhe disse: Bem está, servo bom, porque no mínimo foste fiel, sobre dez cidades terás autoridade.
18 “ಎರಡನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು.
18 E veio o segundo, dizendo: Senhor, a tua mina rendeu cinco minas.
19 ಅರಸನು ಆ ಸೇವಕನಿಗೆ, ‘ನೀನು ನನ್ನ ಐದು ಪಟ್ಟಣಗಳಿಗೆ ಅಧಿಕಾರಿಯಾಗಿರು’ ಎಂದು ಹೇಳಿದನು.
19 E a este disse também: Sê tu também sobre cinco cidades.
20 “ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ.
20 E veio outro, dizendo: Senhor, aqui está a tua mina, que guardei num lenço;
21 ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.
21 Porque tive medo de ti, que és homem rigoroso, que tomas o que não puseste, e segas o que não semeaste.
22 “ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.
22 Porém, ele lhe disse: Mau servo, pela tua boca te julgarei. Sabias que eu sou homem rigoroso, que tomo o que não pus, e sego o que não semeei;
23 ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು.
23 Por que não puseste, pois, o meu dinheiro no banco, para que eu, vindo, o exigisse com os juros?
24 ಬಳಿಕ ಅರಸನು ಅಲ್ಲಿದ್ದ ಜನರಿಗೆ, ‘ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು.
24 E disse aos que estavam com ele: Tirai-lhe a mina, e dai-a ao que tem dez minas.
25 “ಆ ಜನರು ಅರಸನಿಗೆ, ‘ಸ್ವಾಮೀ, ಆ ಸೇವಕನ ಬಳಿ ಈಗಾಗಲೇ ಹತ್ತುಸಾವಿರ ರೂಪಾಯಿ ಇದೆಯಲ್ಲಾ!’ ಎಂದು ಹೇಳಿದರು.
25 (E disseram-lhe eles: Senhor, ele tem dez minas. )
26 “ಅರಸನು, ‘ತನ್ನಲ್ಲಿರುವುದನ್ನು ಉಪಯೋಗಿಸುವವನು ಹೆಚ್ಚು ಪಡೆಯುವನು. ಆದರೆ ತನ್ನಲ್ಲಿರುವುದನ್ನು ಉಪಯೋಗಿಸದವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು.
26 Pois eu vos digo que a qualquer que tiver ser-lhe-á dado, mas ao que não tiver, até o que tem lhe será tirado.
27 ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”
27 E quanto àqueles meus inimigos que não quiseram que eu reinasse sobre eles, trazei-os aqui, e matai-os diante de mim.
28 ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು.
28 E, dito isto, ia caminhando adiante, subindo para Jerusalém.
29 ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ,
29 E aconteceu que, chegando perto de Betfagé, e de Betânia, ao monte chamado das Oliveiras, mandou dois dos seus discípulos,
30 “ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.
30 Dizendo: Ide à aldeia que está defronte, e aí, ao entrar, achareis preso um jumentinho em que nenhum homem ainda montou; soltai-o e trazei-o.
31 ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ‘ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು.
31 E, se alguém vos perguntar: Por que o soltais? assim lhe direis: Porque o Senhor o há de mister.
32 ಆ ಇಬ್ಬರು ಶಿಷ್ಯರು ಪಟ್ಟಣದೊಳಕ್ಕೆ ಹೋದರು. ಯೇಸು ಅವರಿಗೆ ಹೇಳಿದ ಪ್ರಕಾರವೇ ಅವರು ಕತ್ತೆಯನ್ನು ಕಂಡು
32 E, indo os que haviam sido mandados, acharam como lhes dissera.
33 ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು.
33 E, quando soltaram o jumentinho, seus donos lhes disseram: Por que soltais o jumentinho?
34 ಶಿಷ್ಯರು, “ಪ್ರಭುವಿಗೆ ಇದು ಬೇಕಾಗಿದೆ” ಎಂದು ಉತ್ತರಿಸಿದರು.
34 E eles responderam: O Senhor o há de mister.
35 ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು.
35 E trouxeram-no a Jesus; e, lançando sobre o jumentinho as suas vestes, puseram Jesus em cima.
36 ಯೇಸು ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು. ಶಿಷ್ಯರು ತಮ್ಮ ಬಟ್ಟೆಗಳನ್ನು ರಸ್ತೆಯಲ್ಲಿ ಯೇಸುವಿನ ಮುಂದೆ ಹಾಸಿದರು.
36 E, indo ele, estendiam no caminho as suas vestes.
37 ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.
37 E, quando já chegava perto da descida do Monte das Oliveiras, toda a multidão dos discípulos, regozijando-se, começou a dar louvores a Deus em alta voz, por todas as maravilhas que tinham visto,
38 ಅವರು,
38 Dizendo: Bendito o Rei que vem em nome do Senhor; paz no céu, e glória nas alturas.
39 ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು.
39 E disseram-lhe de entre a multidão alguns dos fariseus: Mestre, repreende os teus discípulos.
40 ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.
40 E, respondendo ele, disse-lhes: Digo-vos que, se estes se calarem, as próprias pedras clamarão.
41 ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು
41 E, quando ia chegando, vendo a cidade, chorou sobre ela,
42 ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.
42 Dizendo: Ah! se tu conhecesses também, ao menos neste teu dia, o que à tua paz pertence! Mas agora isto está encoberto aos teus olhos.
43 ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,
43 Porque dias virão sobre ti, em que os teus inimigos te cercarão de trincheiras, e te sitiarão, e te estreitarão de todos os lados;
44 ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.
44 E te derrubarão, a ti e aos teus filhos que dentro de ti estiverem, e não deixarão em ti pedra sobre pedra, pois que não conheceste o tempo da tua visitação.
45 ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ,
45 E, entrando no templo, começou a expulsar todos os que nele vendiam e compravam,
46 ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ‘ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ’” ಎಂದನು.
46 Dizendo-lhes: Está escrito: A minha casa é casa de oração; mas vós fizestes dela covil de salteadores.
47 ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.
47 E todos os dias ensinava no templo; mas os principais dos sacerdotes, e os escribas, e os principais do povo procuravam matá-lo.
48 ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.
48 E não achavam meio de o fazer, porque todo o povo pendia para ele, escutando-o.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 19, comparar traduções ou montar um estudo — tudo direto pelo WhatsApp.