Lucas 1
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF
1 ಸನ್ಮಾನ್ಯ ಥೆಯೊಫಿಲನೇ,
1 Tendo, pois, muitos empreendido pôr em ordem a narração dos fatos que entre nós se cumpriram,
2 ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.
2 Segundo nos transmitiram os mesmos que os presenciaram desde oprincípio, e foram ministros da palavra,
3 ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.
3 Pareceu-me também a mim conveniente descrevê-los a ti, ó excelente Teófilo, por sua ordem, havendo-me já informado minuciosamente de tudo desde o princípio;
4 ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನಿನಗೆ ಸ್ಪಷ್ಟವಾಗಿರುವುದು.
4 Para que conheças a certeza das coisas de que já estás informado.
5 ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
5 Existiu, no tempo de Herodes, rei da Judéia, um sacerdote chamado Zacarias, da ordem de Abias, e cuja mulher era das filhas de Arão; e o seu nome era Isabel.
6 ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.
6 E eram ambos justos perante Deus, andando sem repreensão em todos os mandamentos e preceitos do Senhor.
7 ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.
7 E não tinham filhos, porque Isabel era estéril, e ambos eram avançados em idade.
8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.
8 E aconteceu que, exercendo ele o sacerdócio diante de Deus, na ordem da sua turma,
9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
9 Segundo o costume sacerdotal, coube-lhe em sorte entrar no templo do Senhor para oferecer o incenso.
10 ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.
10 E toda a multidão do povo estava fora, orando, à hora do incenso.
11 ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು.
11 E um anjo do Senhor lhe apareceu, posto em pé, à direita do altar do incenso.
12 ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು.
12 E Zacarias, vendo-o, turbou-se, e caiu temor sobre ele.
13 ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
13 Mas o anjo lhe disse: Zacarias, não temas, porque a tua oração foi ouvida, e Isabel, tua mulher, dará à luz um filho, e lhe porás o nome de João.
14 ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು.
14 E terás prazer e alegria, e muitos se alegrarão no seu nascimento,
15 ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
15 Porque será grande diante do Senhor, e não beberá vinho, nem bebida forte, e será cheio do Espírito Santo, já desde o ventre de sua mãe.
16 “ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು.
16 E converterá muitos dos filhos de Israel ao Senhor seu Deus,
17 ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
17 E irá adiante dele no espírito e virtude de Elias, para converter os corações dos pais aos filhos, e os rebeldes à prudência dos justos, com o fim de preparar ao Senhor um povo bem disposto.
18 ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.
18 Disse então Zacarias ao anjo: Como saberei isto? pois eu já sou velho, e minha mulher avançada em idade.
19 ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.
19 E, respondendo o anjo, disse-lhe: Eu sou Gabriel, que assisto diante de Deus, e fui enviado a falar-te e dar-te estas alegres novas.
20 ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
20 E eis que ficarás mudo, e não poderás falar até ao dia em que estas coisas aconteçam; porquanto não creste nas minhas palavras, que a seu tempo se hão de cumprir.
21 ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.
21 E o povo estava esperando a Zacarias, e maravilhava-se de que tanto se demorasse no templo.
22 ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
22 E, saindo ele, não lhes podia falar; e entenderam que tinha tido uma visão no templo. E falava por acenos, e ficou mudo.
23 ತನ್ನ ಯಾಜಕಸೇವೆಯ ಸರದಿಯು ಮುಗಿದ ಮೇಲೆ ಜಕರೀಯನು ಮನೆಗೆ ಹಿಂತಿರುಗಿ ಹೋದನು.
23 E sucedeu que, terminados os dias de seu ministério, voltou para sua casa.
24 ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ.
24 E, depois daqueles dias, Isabel, sua mulher, concebeu, e por cinco meses se ocultou, dizendo:
25 ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.
25 Assim me fez o Senhor, nos dias em que atentou em mim, para destruir o meu opróbrio entre os homens.
26 — ausente —
26 E, no sexto mês, foi o anjo Gabriel enviado por Deus a uma cidade da Galiléia, chamada Nazaré,
27 — ausente —
27 A uma virgem desposada com um homem, cujo nome era José, da casa de Davi; e o nome da virgem era Maria.
28 ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.
28 E, entrando o anjo aonde ela estava, disse: Salve, agraciada; o Senhor é contigo; bendita és tu entre as mulheres.
29 ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.
29 E, vendo-o ela, turbou-se muito com aquelas palavras, e considerava que saudação seria esta.
30 ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.
30 Disse-lhe, então, o anjo: Maria, não temas, porque achaste graça diante de Deus.
31 ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು.
31 E eis que em teu ventre conceberás e darás à luz um filho, e pôr-lhe-ás o nome de Jesus.
32 ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.
32 Este será grande, e será chamado filho do Altíssimo; e o Senhor Deus lhe dará o trono de Davi, seu pai;
33 ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.
33 E reinará eternamente na casa de Jacó, e o seu reino não terá fim.
34 ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು.
34 E disse Maria ao anjo: Como se fará isto, visto que não conheço homem algum?
35 ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.
35 E, respondendo o anjo, disse-lhe: Descerá sobre ti o Espírito Santo, e a virtude do Altíssimo te cobrirá com a sua sombra; por isso também o Santo, que de ti há de nascer, será chamado Filho de Deus.
36 ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
36 E eis que também Isabel, tua prima, concebeu um filho em sua velhice; e é este o sexto mês para aquela que era chamada estéril;
37 ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.
37 Porque para Deus nada é impossível.
38 ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.
38 Disse então Maria: Eis aqui a serva do Senhor; cumpra-se em mim segundo a tua palavra. E o anjo ausentou-se dela.
39 ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು.
39 E, naqueles dias, levantando-se Maria, foi apressada às montanhas, a uma cidade de Judá,
40 ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.
40 E entrou em casa de Zacarias, e saudou a Isabel.
41 ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ
41 E aconteceu que, ao ouvir Isabel a saudação de Maria, a criancinha saltou no seu ventre; e Isabel foi cheia do Espírito Santo.
42 ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.
42 E exclamou com grande voz, e disse: Bendita és tu entre as mulheres, e bendito o fruto do teu ventre.
43 ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ!
43 E de onde me provém isto a mim, que venha visitar-me a mãe do meu Senhor?
44 ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.
44 Pois eis que, ao chegar aos meus ouvidos a voz da tua saudação, a criancinha saltou de alegria no meu ventre.
45 ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.
45 Bem-aventurada a que creu, pois hão de cumprir-se as coisas que da parte do Senhor lhe foram ditas.
46 ಆಗ ಮರಿಯಳು,
46 Disse então Maria: A minha alma engrandece ao Senhor,
47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ.
47 E o meu espírito se alegra em Deus meu Salvador;
48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ.
48 Porque atentou na baixeza de sua serva; Pois eis que desde agora todas as gerações me chamarão bem-aventurada,
49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ.
49 Porque me fez grandes coisas o Poderoso; E santo é seu nome.
50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.
50 E a sua misericórdia é de geração em geração Sobre os que o temem.
51 ಆತನು ತನ್ನ ಭುಜಬಲವನ್ನು ತೋರಿ
51 Com o seu braço agiu valorosamente; Dissipou os soberbos no pensamento de seus corações.
52 ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ
52 Depôs dos tronos os poderosos, E elevou os humildes.
53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ
53 Encheu de bens os famintos, E despediu vazios os ricos.
54 ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ
54 Auxiliou a Israel seu servo, Recordando-se da sua misericórdia;
55 ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.
55 Como falou a nossos pais, Para com Abraão e a sua posteridade, para sempre.
56 ಮರಿಯಳು ಸುಮಾರು ಮೂರು ತಿಂಗಳ ಕಾಲ ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂತಿರುಗಿದಳು.
56 E Maria ficou com ela quase três meses, e depois voltou para sua casa.
57 ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು.
57 E completou-se para Isabel o tempo de dar à luz, e teve um filho.
58 ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
58 E os seus vizinhos e parentes ouviram que tinha Deus usado para com ela de grande misericórdia, e alegraram-se com ela.
59 ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.
59 E aconteceu que, ao oitavo dia, vieram circuncidar o menino, e lhe chamavam Zacarias, o nome de seu pai.
60 ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು.
60 E, respondendo sua mãe, disse: Não, porém será chamado João.
61 ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು.
61 E disseram-lhe: Ninguém há na tua parentela que se chame por este nome.
62 ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು.
62 E perguntaram por acenos ao pai como queria que lhe chamassem.
63 ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.
63 E, pedindo ele uma tabuinha de escrever, escreveu, dizendo: O seu nome é João. E todos se maravilharam.
64 ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು.
64 E logo a boca se lhe abriu, e a língua se lhe soltou; e falava, louvando a Deus.
65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.
65 E veio temor sobre todos os seus vizinhos, e em todas as montanhas da Judéia foram divulgadas todas estas coisas.
66 ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.
66 E todos os que as ouviam as conservavam em seus corações, dizendo: Quem será, pois, este menino? E a mão do Senhor estava com ele.
67 ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:
67 E Zacarias, seu pai, foi cheio do Espírito Santo, e profetizou, dizendo:
68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
68 Bendito o Senhor Deus de Israel, Porque visitou e remiu o seu povo,
69 ತನ್ನ ಸೇವಕನಾದ ದಾವೀದನ ಮನೆತನದಿಂದ
69 E nos levantou uma salvação poderosa Na casa de Davi seu servo.
70 ಇದನ್ನು ಆತನು ಪೂರ್ವಕಾಲದ
70 Como falou pela boca dos seus santos profetas, desde o princípio do mundo;
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
71 Para nos livrar dos nossos inimigos e da mão de todos os que nos odeiam;
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
72 Para manifestar misericórdia a nossos pais, E lembrar-se da sua santa aliança,
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
73 E do juramento que jurou a Abraão nosso pai,
74 — ausente —
74 De conceder-nos que, Libertados da mão de nossos inimigos, o serviríamos sem temor,
75 — ausente —
75 Em santidade e justiça perante ele, todos os dias da nossa vida.
76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
76 E tu, ó menino, serás chamado profeta do Altíssimo, Porque hás de ir ante a face do Senhor, a preparar os seus caminhos;
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.
77 Para dar ao seu povo conhecimento da salvação, Na remissão dos seus pecados;
78 “ನಮ್ಮ ದೇವರ ಮಹಾಕರುಣೆಯಿಂದ
78 Pelas entranhas da misericórdia do nosso Deus, Com que o oriente do alto nos visitou;
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
79 Para iluminar aos que estão assentados em trevas e na sombra da morte; A fim de dirigir os nossos pés pelo caminho da paz.
80 ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.
80 E o menino crescia, e se robustecia em espírito. E esteve nos desertos até ao dia em que havia de mostrar-se a Israel.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 1, comparar traduções ou montar um estudo — tudo direto pelo WhatsApp.