Lucas 20
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVT
1 ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,
1 Certo dia, quando Jesus ensinava o povo e anunciava as boas-novas no templo, os principais sacerdotes, os mestres da lei e os líderes do povo se aproximaram dele
2 “ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಈ ಸಂಗತಿಗಳನ್ನು ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು.
2 e perguntaram: “Com que autoridade você faz essas coisas? Quem lhe deu esse direito?”.
3 ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ.
3 “Primeiro, deixe-me fazer uma pergunta”, respondeu ele.
4 ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.
4 “A autoridade de João para batizar vinha do céu ou era apenas humana?”
5 ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.
5 Eles discutiram a questão entre si: “Se dissermos que vinha do céu, ele perguntará por que não cremos em João.
6 ‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.
6 Mas, se dissermos que era apenas humana, seremos apedrejados pela multidão, pois todos estão convencidos de que João era profeta”.
7 ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು.
7 Por fim, responderam a Jesus que não sabiam.
8 ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.
8 E Jesus replicou: “Então eu também não direi com que autoridade faço essas coisas”.
9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
9 Em seguida, Jesus se voltou para o povo e contou a seguinte parábola: “Um homem plantou um vinhedo e o arrendou a alguns lavradores. Depois, partiu para um lugar distante, onde passou um longo tempo.
10 ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
10 Na época da colheita da uva, enviou um de seus servos para receber sua parte da produção. Os lavradores atacaram o servo, o espancaram e o mandaram de volta, de mãos vazias.
11 ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
11 Então o dono da propriedade enviou outro servo, mas eles também o insultaram, o espancaram e o mandaram de volta, de mãos vazias.
12 ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು.
12 Enviou ainda um terceiro, e eles o feriram e o expulsaram do vinhedo.
13 “ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.
13 “‘Que farei?’, disse o dono do vinhedo. ‘Já sei; enviarei meu filho amado. Certamente eles o respeitarão.’
14 ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.
14 “No entanto, quando os lavradores viram o filho, disseram uns aos outros: ‘Aí vem o herdeiro da propriedade. Vamos matá-lo e tomar posse desta terra!’.
15 ಬಳಿಕ ಆ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು.
15 Então o arrastaram para fora do vinhedo e o mataram. “O que vocês acham que o dono do vinhedo fará com eles?”, perguntou Jesus.
16 ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.”
16 “Ele virá, matará os lavradores, e arrendará o vinhedo a outros.” “Que isso jamais aconteça!”, disseram os que o ouviam.
17 ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ,
17 Jesus olhou para eles e perguntou: “Então o que significa esta passagem das Escrituras: ‘A pedra que os construtores rejeitaram se tornou a pedra angular’?
18 ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು.
18 Quem tropeçar nessa pedra será despedaçado, e aquele sobre quem ela cair será reduzido a pó”.
19 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
19 Os mestres da lei e os principais sacerdotes queriam prender Jesus ali mesmo, pois perceberam que eles eram os lavradores maus a que Jesus se referia. No entanto, tinham medo da reação do povo.
20 ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
20 Esperando uma oportunidade, os líderes enviaram espiões que fingiam ser pessoas sinceras. Tentaram fazer Jesus dizer algo que pudesse ser relatado ao governador romano, de modo que ele fosse preso.
21 ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!
21 Disseram: “Mestre, sabemos que o senhor fala e ensina o que é certo, não se deixa influenciar por outros e ensina o caminho de Deus de acordo com a verdade.
22 ಈಗ ಹೇಳು, ನಾವು ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ತಪ್ಪೋ?” ಎಂದು ಕೇಳಿದರು.
22 Então, diga-nos: É certo pagar impostos a César ou não?”.
23 ಆದರೆ ಈ ಜನರು ತನಗೆ ಮೋಸಮಾಡಲು ಪ್ರಯತ್ನಿಸುತ್ತಿದ್ದಾರೆಂದು ಯೇಸುವಿಗೆ ತಿಳಿದಿತ್ತು.
23 Jesus percebeu a hipocrisia deles e disse:
24 ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು.
24 “Mostrem-me uma moeda de prata. De quem são a imagem e o título nela gravados?”. “De César”, responderam.
25 ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.
25 “Então deem a César o que pertence a César, e deem a Deus o que pertence a Deus”, disse ele.
26 ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.
26 Eles não conseguiam apanhá-lo em nada que ele dizia diante do povo. Em vez disso, admiraram-se de sua resposta e se calaram.
27 ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ,
27 Então vieram a Jesus alguns saduceus, líderes religiosos que afirmam não haver ressurreição dos mortos,
28 “ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ.
28 e perguntaram: “Mestre, Moisés nos deu uma lei segundo a qual se um homem morrer e deixar a esposa sem filhos, o irmão dele deve se casar com a viúva e ter um filho que dará continuidade ao nome do irmão.
29 ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ.
29 Numa família havia sete irmãos. O mais velho se casou e morreu sem deixar filhos.
30 ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು.
30 O segundo irmão se casou com a viúva, mas também morreu.
31 ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು.
31 Então o terceiro irmão se casou com ela. O mesmo aconteceu aos sete irmãos, que morreram sem deixar filhos.
32 ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
32 Por fim, a mulher também morreu.
33 ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.
33 Diga-nos, de quem ela será esposa na ressurreição? Afinal, os sete se casaram com ela”.
34 ಯೇಸು ಸದ್ದುಕಾಯರಿಗೆ, “ಭೂಲೋಕದಲ್ಲಿ ಜನರು ಒಬ್ಬರನ್ನೊಬ್ಬರು ಮದುವೆ ಆಗುತ್ತಾರೆ.
34 Jesus respondeu: “O casamento é para pessoas deste mundo.
35 ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.
35 Mas, na era futura, aqueles que forem considerados dignos de ser ressuscitados dos mortos não se casarão nem se darão em casamento,
36 ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.
36 e nunca mais morrerão. Nesse sentido, serão como os anjos. São filhos de Deus e filhos da ressurreição.
37 ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
37 “Agora, quanto a haver ressurreição dos mortos, o próprio Moisés provou isso quando escreveu a respeito do arbusto em chamas. Ele se referiu ao Senhor como ‘o Deus de Abraão, o Deus de Isaque e o Deus de Jacó’.
38 ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.
38 Portanto, ele é o Deus dos vivos, e não dos mortos, pois para ele todos vivem”.
39 ಧರ್ಮೋಪದೇಶಕರಲ್ಲಿ ಕೆಲವರು, “ಬೋಧಕನೇ, ನೀನು ಒಳ್ಳೆಯ ಉತ್ತರವನ್ನು ಕೊಟ್ಟಿರುವೆ” ಎಂದು ಹೇಳಿದರು.
39 “Mestre, o senhor disse bem!”, comentaram alguns mestres da lei.
40 ಇನ್ನೊಂದು ಪ್ರಶ್ನೆಯನ್ನು ಆತನಿಗೆ ಕೇಳುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
40 E ninguém mais teve coragem de lhe fazer perguntas.
41 ಆಗ ಯೇಸು, “ಕ್ರಿಸ್ತನು ದಾವೀದನ ಮಗನೆಂದು ಜನರು ಏಕೆ ಹೇಳುತ್ತಾರೆ?
41 Então Jesus lhes perguntou: “Por que se diz que o Cristo é filho de Davi?
42 ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ:
42 Afinal, o próprio Davi escreveu no Livro de Salmos: ‘O Senhor disse ao meu Senhor, Sente-se no lugar de honra à minha direita
43 ನಾನು ನಿನ್ನ ವೈರಿಗಳನ್ನು ನಿನ್ನ ಪಾದಪೀಠವನ್ನಾಗಿ ಮಾಡುವ ತನಕ
43 até que eu humilhe seus inimigos, e os ponha debaixo de seus pés’.
44 ದಾವೀದನು ಕ್ರಿಸ್ತನನ್ನು ‘ಪ್ರಭು’ವೆಂದು ಕರೆದ ಮೇಲೆ ಆತನು ಅವನಿಗೆ ಮಗನಾಗಲು ಹೇಗೆ ಸಾಧ್ಯ?” ಎಂದು ಹೇಳಿದನು.
44 Uma vez que Davi chamou o Cristo de ‘meu Senhor’, como ele pode ser filho de Davi?”.
45 ಜನರೆಲ್ಲರೂ ಯೇಸುವಿನ ಮಾತನ್ನು ಆಲಿಸಿದರು. ಯೇಸು ತನ್ನ ಶಿಷ್ಯರಿಗೆ,
45 Então, enquanto as multidões o ouviam, Jesus se voltou para seus discípulos e disse:
46 “ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.
46 “Cuidado com os mestres da lei! Eles gostam de se exibir com vestes longas e de receber saudações respeitosas quando andam pelas praças. E como gostam de sentar-se nos lugares de honra nas sinagogas e à cabeceira da mesa nos banquetes!
47 ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.
47 No entanto, tomam posse dos bens das viúvas de maneira desonesta e, depois, para dar a impressão de piedade, fazem longas orações em público. Por causa disso, serão duramente castigados”.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 20, comparar traduções ou montar um estudo — tudo direto pelo WhatsApp.