Lucas 21
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು.
1 Jesus olhou e viu os ricos colocando suas contribuições nas caixas de ofertas.
2 ಅಷ್ಟರಲ್ಲಿ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕನಾಣ್ಯಗಳನ್ನು ಪೆಟ್ಟಿಗೆಯಲ್ಲಿ ಹಾಕಿದಳು.
2 Viu também uma viúva pobre colocar duas pequeninas moedas de cobre.
3 ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಈ ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಆ ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು.
3 E disse: "Afirmo-lhes que esta viúva pobre colocou mais do que todos os outros.
4 ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು.
4 Todos esses deram do que lhes sobrava; mas ela, da sua pobreza, deu tudo o que possuía para viver".
5 ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಮಾತಾಡುತ್ತಾ, “ಇದು ಅಂದವಾದ ಕಲ್ಲುಗಳಿಂದಲೂ ಹರಕೆಯ ಕೊಡುಗೆಗಳಿಂದಲೂ ಎಷ್ಟೊಂದು ಸುಂದರವಾಗಿದೆ!” ಎಂದರು.
5 Alguns dos seus discípulos estavam comentando como o templo era adornado com lindas pedras e dádivas dedicadas a Deus. Mas Jesus disse:
6 ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.
6 "Disso que vocês estão vendo, dias virão em que não ficará pedra sobre pedra; serão todas derrubadas".
7 ಶಿಷ್ಯರಲ್ಲಿ ಕೆಲವರು ಯೇಸುವಿಗೆ, “ಗುರುವೇ, ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಆ ಸಮಯವನ್ನು ಯಾವ ಸೂಚನೆಗಳಿಂದ ತಿಳಿದುಕೊಳ್ಳಬೇಕು?” ಎಂದು ಕೇಳಿದರು.
7 "Mestre", perguntaram eles, "quando acontecerão essas coisas? E qual será o sinal de que elas estão prestes a acontecer? "
8 ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.
8 Ele respondeu: "Cuidado para não serem enganados. Pois muitos virão em meu nome, dizendo: ‘Sou eu! ’ e ‘o tempo está próximo’. Não os sigam.
9 ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.
9 Quando ouvirem falar de guerras e rebeliões, não tenham medo. É necessário que primeiro aconteçam essas coisas, mas o fim não virá imediatamente".
10 ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು.
10 Então lhes disse: "Nação se levantará contra nação, e reino contra reino.
11 ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.
11 Haverá grandes terremotos, fomes e pestes em vários lugares, e acontecimentos terríveis e grandes sinais provenientes do céu.
12 “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.
12 "Mas antes de tudo isso, prenderão e perseguirão vocês. Então os entregarão às sinagogas e prisões, e vocês serão levados à presença de reis e governadores, tudo por causa do meu nome.
13 ಆದರೆ ನನ್ನ ಕುರಿತು ಹೇಳುವುದಕ್ಕೆ ನಿಮಗೆ ಅದು ಸುಸಂದರ್ಭವಾಗಿರುವುದು.
13 Será para vocês uma oportunidade de dar testemunho.
14 ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ.
14 Mas convençam-se de uma vez de que não devem preocupar-se com o que dirão para se defender.
15 ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.
15 Pois eu lhes darei palavras e sabedoria a que nenhum dos seus adversários será capaz de resistir ou contradizer.
16 ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು.
16 Vocês serão traídos até por pais, irmãos, parentes e amigos, e eles entregarão alguns de vocês à morte.
17 ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು.
17 Todos odiarão vocês por causa do meu nome.
18 ಆದರೆ ಇವುಗಳಿಂದ ನೀವೇನೂ ನಾಶವಾಗುವುದಿಲ್ಲ.
18 Contudo, nenhum fio de cabelo da cabeça de vocês se perderá.
19 ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.
19 É perseverando que vocês obterão a vida.
20 “ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.
20 "Quando virem Jerusalém rodeada de exércitos, vocês saberão que a sua devastação está próxima.
21 ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!
21 Então os que estiverem na Judéia fujam para os montes, os que estiverem na cidade saiam, e os que estiverem no campo não entrem na cidade.
22 ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.
22 Pois esses são os dias da vingança, em cumprimento de tudo o que foi escrito.
23 ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ
23 Como serão terríveis aqueles dias para as grávidas e para as que estiverem amamentando! Haverá grande aflição na terra e ira contra este povo.
24 ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.
24 Cairão pela espada e serão levados como prisioneiros para todas as nações. Jerusalém será pisada pelos gentios, até que os tempos deles se cumpram.
25 “ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.
25 "Haverá sinais no sol, na lua e nas estrelas. Na terra, as nações se verão em angústia e perplexidade com o bramido e a agitação do mar.
26 ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.
26 Os homens desmaiarão de terror, apreensivos com o que estará sobrevindo ao mundo; e os poderes celestes serão abalados.
27 ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು.
27 Então se verá o Filho do homem vindo numa nuvem com poder e grande glória.
28 ಈ ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.”
28 Quando começarem a acontecer estas coisas, levantem-se e ergam a cabeça, porque estará próxima a redenção de vocês".
29 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಎಲ್ಲಾ ಮರಗಳಲ್ಲಿ ಅಂಜೂರದ ಮರ ಒಳ್ಳೆಯ ಉದಾಹರಣೆಯಾಗಿದೆ.
29 Ele lhes contou esta parábola: "Observem a figueira e todas as árvores.
30 ಅದು ಚಿಗುರುತ್ತಲೇ, ಬೇಸಿಗೆ ಹತ್ತಿರವಾಗಿದೆ ಎಂದು ನೀವು ತಿಳಿದುಕೊಳ್ಳುವಿರಿ.
30 Quando elas brotam, vocês mesmos percebem e sabem que o verão está próximo.
31 ಅದೇರೀತಿಯಲ್ಲಿ ಈ ಎಲ್ಲಾ ಸಂಗತಿಗಳು ಸಂಭವಿಸುವುದನ್ನು ನೀವು ನೋಡುವಾಗ, ದೇವರ ರಾಜ್ಯವು ಬಹುಬೇಗನೆ ಬರುತ್ತದೆ ಎಂದು ತಿಳಿದುಕೊಳ್ಳುವಿರಿ.
31 Assim também, quando virem estas coisas acontecendo, saibam que o Reino de Deus está próximo.
32 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಜೀವಿಸುತ್ತಿರುವಾಗ ಈ ಸಂಗತಿಗಳೆಲ್ಲಾ ಸಂಭವಿಸುವವು!
32 "Eu lhes asseguro que não passará esta geração até que todas essas coisas aconteçam.
33 ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ!
33 O céu e a terra passarão, mas as minhas palavras jamais passarão.
34 “ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.
34 "Tenham cuidado, para que os seus corações não fiquem carregados de libertinagem, bebedeira e ansiedades da vida, e aquele dia venha sobre vocês inesperadamente.
35 ಆ ದಿವಸವು ಭೂನಿವಾಸಿಗಳೆಲ್ಲರಿಗೂ ವಿಸ್ಮಯಕರವಾಗಿರುವುದು.
35 Porque ele virá sobre todos os que vivem na face de toda a terra.
36 ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”
36 Estejam sempre atentos e orem para que vocês possam escapar de tudo o que está para acontecer, e estar de pé diante do Filho do homem".
37 ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.
37 Jesus passava o dia ensinando no templo; e, ao entardecer, saía para passar a noite no monte chamado das Oliveiras.
38 ಪ್ರತಿ ಮುಂಜಾನೆ, ಜನರೆಲ್ಲರೂ ಬೇಗನೆ ಎದ್ದು ದೇವಾಲಯದಲ್ಲಿ ಯೇಸುವಿನ ಉಪದೇಶವನ್ನು ಕೇಳುವುದಕ್ಕೆ ಹೋಗುತ್ತಿದ್ದರು.
38 Todo o povo ia de manhã cedo ouvi-lo no templo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 21, comparar traduções ou montar um estudo — tudo direto pelo WhatsApp.