Lucas 22

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಯೆಹೂದ್ಯರ ಹುಳಿಯಿಲ್ಲದ ರೊಟ್ಟಿಯ ಹಬ್ಬ ಅಂದರೆ ಪಸ್ಕಹಬ್ಬವು ಹತ್ತಿರವಾಗಿತ್ತು.
1 Estava se aproximando a festa dos pães sem fermento, chamada Páscoa,
2 ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.
2 e os chefes dos sacerdotes e os mestres da lei estavam procurando um meio de matar Jesus, mas tinham medo do povo.
3 ಯೇಸುವಿನ ಹನ್ನೆರಡು ಅಪೊಸ್ತಲರಲ್ಲಿ ಇಸ್ಕರಿಯೋತ ಯೂದನು ಒಬ್ಬನಾಗಿದ್ದನು. ಸೈತಾನನು ಇವನೊಳಗೆ ಪ್ರವೇಶಿಸಿ ಕೆಟ್ಟಕಾರ್ಯವೊಂದನ್ನು ಮಾಡುವಂತೆ ಪ್ರೇರೇಪಿಸಿದನು.
3 Então Satanás entrou em Judas, chamado Iscariotes, um dos Doze.
4 ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.
4 Judas dirigiu-se aos chefes dos sacerdotes e aos oficiais da guarda do templo e tratou com eles como lhes poderia entregar Jesus.
5 ಯಾಜಕರಿಗೆ ಬಹಳ ಸಂತೋಷವಾಯಿತು. ಯೇಸುವನ್ನು ತಮಗೆ ಹಿಡಿದುಕೊಟ್ಟರೆ ಹಣ ಕೊಡುವುದಾಗಿ ಅವರು ಯೂದನಿಗೆ ಮಾತುಕೊಟ್ಟರು.
5 A proposta muito os alegrou, e lhe prometeram dinheiro.
6 ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.
6 Ele consentiu e ficou esperando uma oportunidade para lhes entregar Jesus quando a multidão não estivesse presente.
7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.
7 Finalmente, chegou o dia dos pães sem fermento, no qual devia ser sacrificado o cordeiro pascal.
8 ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.
8 Jesus enviou Pedro e João, dizendo: "Vão preparar a refeição da Páscoa".
9 ಪೇತ್ರ ಮತ್ತು ಯೋಹಾನರು, “ಊಟವನ್ನು ಎಲ್ಲಿ ಸಿದ್ಧಮಾಡಬೇಕು?” ಎಂದು ಯೇಸುವಿಗೆ ಕೇಳಿದರು.
9 "Onde queres que a preparemos? ", perguntaram eles.
10 ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ.
10 Ele respondeu: "Ao entrarem na cidade, vocês encontrarão um homem carregando um pote de água. Sigam-no até a casa em que ele entrar
11 ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.
11 e digam ao dono da casa: ‘O Mestre pergunta: Onde é o salão de hóspedes no qual poderei comer a Páscoa com os meus discípulos? ’
12 ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಈ ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ” ಅಂದನು.
12 Ele lhes mostrará uma ampla sala no andar superior, toda mobiliada. Façam ali os preparativos".
13 ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು.
13 Eles saíram e encontraram tudo como Jesus lhes tinha dito. Então, prepararam a Páscoa.
14 ಪಸ್ಕದ ಊಟಮಾಡುವ ಸಮಯ ಬಂತು. ಯೇಸು ಮತ್ತು ಅಪೊಸ್ತಲರು ಮೇಜಿನ ಸುತ್ತಲೂ ಊಟಕ್ಕೆ ಕುಳಿತುಕೊಂಡರು.
14 Quando chegou a hora, Jesus e os seus apóstolos reclinaram-se à mesa.
15 ಯೇಸು ಅವರಿಗೆ, “ನಾನು ಸಾಯುವ ಮೊದಲು ಈ ಪಸ್ಕದ ಊಟ ಮಾಡಲು ಬಹಳವಾಗಿ ಅಪೇಕ್ಷಿಸಿದ್ದೇನೆ.
15 E disse-lhes: "Desejei ansiosamente comer esta Páscoa com vocês antes de sofrer.
16 ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.
16 Pois eu lhes digo: Não comerei dela novamente até que se cumpra no Reino de Deus".
17 ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.
17 Recebendo um cálice, ele deu graças e disse: "Tomem isto e partilhem uns com os outros.
18 ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.
18 Pois eu lhes digo que não beberei outra vez do fruto da videira até que venha o Reino de Deus".
19 ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.
19 Tomando o pão, deu graças, partiu-o e o deu aos discípulos, dizendo: "Isto é o meu corpo dado em favor de vocês; façam isto em memória de mim".
20 ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.
20 Da mesma forma, depois da ceia, tomou o cálice, dizendo: "Este cálice é a nova aliança no meu sangue, derramado em favor de vocês.
21 ಯೇಸು, “ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.
21 "Mas eis que a mão daquele que vai me trair está com a minha sobre a mesa.
22 ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.
22 O Filho do homem vai, como foi determinado; mas ai daquele que o trai! "
23 ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು.
23 Eles começaram a perguntar entre si qual deles iria fazer aquilo.
24 ಬಳಿಕ ಅಪೊಸ್ತಲರು ತಮ್ಮಲ್ಲಿ ಯಾರು ಅತಿ ಶ್ರೇಷ್ಠರೆಂದು ವಾದ ಮಾಡತೊಡಗಿದರು.
24 Surgiu também uma discussão entre eles, acerca de qual deles era considerado o maior.
25 ಆಗ ಯೇಸು ಅವರಿಗೆ, “ಈ ಲೋಕದ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ. ಜನರ ಮೇಲೆ ಅಧಿಕಾರ ಹೊಂದಿರುವವರನ್ನು ಧರ್ಮಿಷ್ಠರೆಂದು ಕರೆಯುತ್ತಾರೆ.
25 Jesus lhes disse: "Os reis das nações dominam sobre elas; e os que exercem autoridade sobre elas são chamados benfeitores.
26 ಆದರೆ ನೀವು ಹಾಗಾಗಬಾರದು. ಅತ್ಯಂತ ದೊಡ್ಡ ವ್ಯಕ್ತಿಯು ಅತ್ಯಂತ ಚಿಕ್ಕ ವ್ಯಕ್ತಿಯಾಗಬೇಕು. ನಾಯಕರು ಸೇವಕರಂತಿರಬೇಕು.
26 Mas, vocês não serão assim. Pelo contrário, o maior entre vocês deverá ser como o mais jovem, e aquele que governa como o que serve.
27 ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!
27 Pois quem é maior: o que está à mesa, ou o que serve? Não é o que está à mesa? Mas eu estou entre vocês como quem serve.
28 “ನೀವು ನನ್ನ ಅನೇಕ ಕಷ್ಟಗಳಲ್ಲಿ ನನ್ನ ಸಂಗಡ ಇದ್ದವರು.
28 Vocês são os que têm permanecido ao meu lado durante as minhas provações.
29 ನನ್ನ ತಂದೆ ನನಗೆ ರಾಜ್ಯವನ್ನು ಕೊಟ್ಟಿದ್ದಾನೆ. ನನ್ನ ಸಂಗಡ ಆಳುವುದಕ್ಕೆ ನಾನು ಸಹ ನಿಮಗೆ ಅಧಿಕಾರ ಕೊಡುತ್ತೇನೆ.
29 E eu lhes designo um Reino, assim como meu Pai o designou a mim,
30 ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
30 para que vocês possam comer e beber à minha mesa no meu Reino e sentar-se em tronos, julgando as doze tribos de Israel.
31 “ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)
31 "Simão, Simão, Satanás pediu vocês para peneirá-los como trigo.
32 ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.
32 Mas eu orei por você, para que a sua fé não desfaleça. E quando você se converter, fortaleça os seus irmãos".
33 ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು.
33 Mas ele respondeu: "Estou pronto para ir contigo para a prisão e para a morte".
34 ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.
34 Respondeu Jesus: "Eu lhe digo, Pedro, que antes que o galo cante hoje, três vezes você negará que me conhece".
35 ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು.
35 Então Jesus lhes perguntou: "Quando eu os enviei sem bolsa, saco de viagem ou sandálias, faltou-lhes alguma coisa? " "Nada", responderam eles.
36 ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
36 Ele lhes disse: "Mas agora, se vocês têm bolsa, levem-na, e também o saco de viagem; e se não têm espada, vendam a sua capa e comprem uma.
37 ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12
37 Está escrito: ‘E ele foi contado com os transgressores’; e eu lhes digo que isto precisa cumprir-se em mim. Sim, o que está escrito a meu respeito está para se cumprir".
38 ಶಿಷ್ಯರು, “ಪ್ರಭುವೇ, ಇಲ್ಲಿ ನೋಡು, ಎರಡು ಖಡ್ಗಗಳಿವೆ” ಎಂದು ಹೇಳಿದರು.
38 Os discípulos disseram: "Vê, Senhor, aqui estão duas espadas". "É o suficiente! ", respondeu ele.
39 ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.
39 Como de costume, Jesus foii para o monte das Oliveiras, e os seus discípulos o seguiram.
40 ಆತನ ಶಿಷ್ಯರೂ ಆತನೊಡನೆ ಹೋದರು. (ಯೇಸು ಆಗಾಗ್ಗೆ ಅಲ್ಲಿಗೆ ಹೋಗುತ್ತಿದ್ದನು.) ಯೇಸು ತನ್ನ ಶಿಷ್ಯರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
40 Chegando ao lugar, ele lhes disse: "Orem para que vocês não caiam em tentação".
41 ಬಳಿಕ ಯೇಸು ಅವರಿಂದ ಸುಮಾರು ನೂರೈವತ್ತು ಅಡಿ ದೂರ ಹೋದನು. ಆತನು ಮೊಣಕಾಲೂರಿ,
41 Ele se afastou deles a uma pequena distância, ajoelhou-se e começou a orar:
42 “ತಂದೆಯೇ, ನಿನಗೆ ಇಷ್ಟವಿದ್ದರೆ, ಈ ಶ್ರಮೆಯ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಇಷ್ಟದಂತಾಗದೆ ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
42 "Pai, se queres, afasta de mim este cálice; contudo, não seja feita a minha vontade, mas a tua".
43 ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು.
43 Apareceu-lhe então um anjo do céu que o fortalecia.
44 ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.
44 Estando angustiado, ele orou ainda mais intensamente; e o seu suor era como gotas de sangue que caíam no chão.
45 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರ ಬಳಿ ಹೋದನು. ಅವರು ನಿದ್ರೆ ಮಾಡುತ್ತಿದ್ದರು. (ಅವರು ದುಃಖದಿಂದ ಆಯಾಸಗೊಂಡಿದ್ದರು.)
45 Quando se levantou da oração e voltou aos discípulos, encontrou-os dormindo, dominados pela tristeza.
46 ಯೇಸು ಅವರಿಗೆ, “ನೀವು ಏಕೆ ನಿದ್ರಿಸುತ್ತಿದ್ದೀರಿ? ಎದ್ದೇಳಿರಿ! ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
46 "Por que estão dormindo? ", perguntou-lhes. "Levantem-se e orem para que vocês não caiam em tentação! "
47 ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.
47 Enquanto ele ainda falava, apareceu uma multidão conduzida por Judas, um dos Doze. Este se aproximou de Jesus para saudá-lo com um beijo.
48 ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುವಿಯೋ?” ಎಂದು ಕೇಳಿದನು.
48 Mas Jesus lhe perguntou: "Judas, com um beijo você está traindo o Filho do homem? "
49 ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.
49 Ao verem o que ia acontecer, os que estavam com Jesus lhe disseram: "Senhor, atacaremos com espadas? "
50 ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು.
50 E um deles feriu o servo do sumo sacerdote, decepando-lhe a orelha direita.
51 ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.
51 Jesus, porém, respondeu: "Basta! " E tocando na orelha do homem, ele o curou.
52 ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?
52 Então Jesus disse aos chefes dos sacerdotes, aos oficiais da guarda do templo e aos líderes religiosos que tinham vindo procurá-lo: "Estou eu chefiando alguma rebelião, para que vocês tenham vindo com espadas e varas?
53 ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.
53 Todos os dias eu estava com vocês no templo e vocês não levantaram a mão contra mim. Mas esta é a hora de vocês — quando as trevas reinam".
54 ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.
54 Então, prendendo-o, levaram-no para a casa do sumo sacerdote. Pedro os seguia à distância.
55 ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.
55 Mas, quando acenderam um fogo no meio do pátio e se sentaram ao redor dele, Pedro sentou-se com eles.
56 ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.
56 Uma criada o viu sentado ali à luz do fogo. Olhou fixamente para ele e disse: "Este homem estava com ele".
57 ಆದರೆ ಪೇತ್ರನು ಅದು ನಿಜವಲ್ಲವೆಂದು ಹೇಳಿದನು. ಅವನು ಅಕೆಗೆ, “ಅಮ್ಮಾ, ಆತನು ನನಗೆ ಗೊತ್ತೇ ಇಲ್ಲ” ಅಂದನು.
57 Mas ele negou: "Mulher, não o conheço".
58 ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು.
58 Pouco depois, um homem o viu e disse: "Você também é um deles". "Homem, não sou! ", respondeu Pedro.
59 ಸುಮಾರು ಒಂದು ತಾಸಿನ ನಂತರ ಇನ್ನೊಬ್ಬನು, “ಅದು ನಿಜ! ಈ ಮನುಷ್ಯನು ಆತನೊಡನೆ ಇದ್ದವನು. ಇವನು ಗಲಿಲಾಯದವನು!” ಎಂದು ದೃಢವಾಗಿ ಹೇಳಿದನು.
59 Cerca de uma hora mais tarde, outro afirmou: "Certamente este homem estava com ele, pois é galileu".
60 ಆಗ ಪೇತ್ರನು, “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ” ಅಂದನು.
60 Pedro respondeu: "Homem, não sei do que você está falando! " Falava ele ainda, quando o galo cantou.
61 ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.
61 O Senhor voltou-se e olhou diretamente para Pedro. Então Pedro se lembrou da palavra que o Senhor lhe tinha dito: "Antes que o galo cante hoje, você me negará três vezes".
62 ಬಳಿಕ ಪೇತ್ರನು ಹೊರಗೆ ಹೋಗಿ ಬಹು ದುಃಖದಿಂದ ಅತ್ತನು.
62 Saindo dali, chorou amargamente.
63 — ausente —
63 Os homens que estavam detendo Jesus começaram a zombar dele e a bater nele.
64 — ausente —
64 Cobriam seus olhos e perguntavam: "Profetize! Quem foi que lhe bateu? "
65 ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.
65 E lhe dirigiam muitas outras palavras de insulto.
66 ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,
66 Ao romper do dia, reuniu-se o Sinédrio, tanto os chefes dos sacerdotes quanto os mestres da lei, e Jesus foi levado perante eles.
67 “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು.
67 "Se você é o Cristo, diga-nos", disseram eles. Jesus respondeu: "Se eu vos disser, não crereis em mim
68 ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರಕೊಡುವುದಿಲ್ಲ.
68 e, se eu vos perguntar, não me respondereis.
69 ಆದರೆ ಇಂದಿನಿಂದ ಮನುಷ್ಯಕುಮಾರನು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
69 Mas de agora em diante o Filho do homem estará assentado à direita do Deus Todo-poderoso".
70 ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.
70 Perguntaram-lhe todos: "Então, você é o Filho de Deus? " "Vós estais dizendo que eu sou", respondeu ele.
71 ಆಗ ಅವರು, “ಇನ್ನೇನು ಸಾಕ್ಷಿಬೇಕು? ಆತನು ಹೀಗೆ ಹೇಳುವುದನ್ನು ನಾವೇ ಕೇಳಿದೆವಲ್ಲಾ!” ಅಂದರು.
71 Eles disseram: "Por que precisamos de mais testemunhas? Acabamos de ouvir dos próprios lábios dele".

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 22, comparar traduções ou montar um estudo — tudo direto pelo WhatsApp.