Lucas 23

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF

Sair da comparação
ACF Almeida Corrigida Fiel
1 ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.
1 E, levantando-se toda a multidão deles, o levaram a Pilatos.
2 ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.
2 E começaram a acusá-lo, dizendo: Havemos achado este pervertendo a nação, proibindo dar o tributo a César, e dizendo que ele mesmo é Cristo, o rei.
3 ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
3 E Pilatos perguntou-lhe, dizendo: Tu és o Rei dos Judeus? E ele, respondendo, disse-lhe: Tu o dizes.
4 ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.
4 E disse Pilatos aos principais dos sacerdotes, e à multidão: Não acho culpa alguma neste homem.
5 ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.
5 Mas eles insistiam cada vez mais, dizendo: Alvoroça o povo ensinando por toda a Judéia, começando desde a Galiléia até aqui.
6 ಪಿಲಾತನು ಇದನ್ನು ಕೇಳಿ, “ಇವನು ಗಲಿಲಾಯದವನೋ?” ಎಂದು ಕೇಳಿದನು.
6 Então Pilatos, ouvindo falar da Galiléia perguntou se aquele homem era galileu.
7 ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.
7 E, sabendo que era da jurisdição de Herodes, remeteu-o a Herodes, que também naqueles dias estava em Jerusalém.
8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು.
8 E Herodes, quando viu a Jesus, alegrou-se muito; porque havia muito que desejava vê-lo, por ter ouvido dele muitas coisas; e esperava que lhe veria fazer algum sinal.
9 ಹೆರೋದನು ಯೇಸುವಿಗೆ ಅನೇಕ ಪ್ರಶ್ನೆಗಳನ್ನು ಕೇಳಿದನು. ಆದರೆ ಯೇಸು ಒಂದಕ್ಕೂ ಉತ್ತರ ನೀಡಲಿಲ್ಲ.
9 E interrogava-o com muitas palavras, mas ele nada lhe respondia.
10 ಮಹಾಯಾಜಕರು ಮತ್ತು ಧರ್ಮೋಪದೇಶಕರು ಅಲ್ಲಿ ನಿಂತುಕೊಂಡಿದ್ದರು. ಅವರು ಯೇಸುವಿಗೆ ವಿರುದ್ಧವಾಗಿ ಕೂಗುತ್ತಿದ್ದರು.
10 E estavam os principais dos sacerdotes, e os escribas, acusando-o com grande veemência.
11 ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
11 E Herodes, com os seus soldados, desprezou-o e, escarnecendo dele, vestiu-o de uma roupa resplandecente e tornou a enviá-lo a Pilatos.
12 ಮೊದಲು ಪಿಲಾತನು ಮತ್ತು ಹೆರೋದನು ವೈರಿಗಳಾಗಿದ್ದರು. ಆದರೆ ಅಂದು ಹೆರೋದನು ಮತ್ತು ಪಿಲಾತನು ಮತ್ತೆ ಸ್ನೇಹಿತರಾದರು.
12 E no mesmo dia, Pilatos e Herodes entre si se fizeram amigos; pois dantes andavam em inimizade um com o outro.
13 ಪಿಲಾತನು ಮಹಾಯಾಜಕರನ್ನೂ ಯೆಹೂದ್ಯನಾಯಕರನ್ನೂ ಇತರ ಜನರನ್ನೂ ಒಟ್ಟಾಗಿ ಕರೆಸಿ,
13 E, convocando Pilatos os principais dos sacerdotes, e os magistrados, e o povo,
14 ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.
14 Disse-lhes: Haveis-me apresentado este homem como pervertedor do povo; e eis que, examinando-o na vossa presença, nenhuma culpa, das de que o acusais, acho neste homem.
15 ಇದಲ್ಲದೆ ಹೆರೋದನು ಸಹ ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ಹೆರೋದನು ಯೇಸುವನ್ನು ನಮ್ಮ ಬಳಿಗೆ ಮತ್ತೆ ಕಳುಹಿಸಿದನು. ನೋಡಿರಿ, ಯೇಸು ಯಾವ ತಪ್ಪನ್ನೂ ಮಾಡಿಲ್ಲ. ಅವನಿಗೆ ಮರಣದಂಡನೆ ಆಗಬಾರದು.
15 Nem mesmo Herodes, porque a ele vos remeti, e eis que não tem feito coisa alguma digna de morte.
16 ಆದ್ದರಿಂದ ನಾನು ಇವನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.
16 Castigá-lo-ei, pois, e soltá-lo-ei.
17 — ausente —
17 E era-lhe necessário soltar-lhes um pela festa.
18 ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು.
18 Mas toda a multidão clamou a uma, dizendo: Fora daqui com este, e solta-nos Barrabás.
19 (ಬರಬ್ಬನು ಪಟ್ಟಣದಲ್ಲಿ ದಂಗೆ ಎಬ್ಬಿಸಿದ್ದರಿಂದ ಸೆರೆಮನೆಯಲ್ಲಿದ್ದನು. ಅವನು ಕೆಲವು ಜನರನ್ನು ಕೊಂದಿದ್ದನು.)
19 O qual fora lançado na prisão por causa de uma sedição feita na cidade, e de um homicídio.
20 ಪಿಲಾತನು ಯೇಸುವನ್ನು ಬಿಡಿಸಬೇಕೆಂದಿದ್ದನು. ಆದ್ದರಿಂದ ಯೇಸುವನ್ನು ಬಿಟ್ಟುಬಿಡೋಣ ಎಂದು ಪಿಲಾತನು ಮತ್ತೆ ಅವರಿಗೆ ಹೇಳಿದನು.
20 Falou, pois, outra vez Pilatos, querendo soltar a Jesus.
21 ಆದರೆ ಅವರು ಮತ್ತೆ, “ಅವನನ್ನು ಕೊಲ್ಲಿಸು! ಅವನನ್ನು ಶಿಲುಬೆಗೇರಿಸು!” ಎಂದು ಕೂಗಿದರು.
21 Mas eles clamavam em contrário, dizendo: Crucifica-o, crucifica-o.
22 ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.
22 Então ele, pela terceira vez, lhes disse: Mas que mal fez este? Não acho nele culpa alguma de morte. Castigá-lo-ei pois, e soltá-lo-ei.
23 ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ,
23 Mas eles instavam com grandes gritos, pedindo que fosse crucificado. E os seus gritos, e os dos principais dos sacerdotes, prevaleciam.
24 ಪಿಲಾತನು ಅವರ ಬಯಕೆಯನ್ನು ಈಡೇರಿಸಲು ನಿರ್ಧರಿಸಿದನು.
24 Então Pilatos julgou que devia fazer o que eles pediam.
25 ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.
25 E soltou-lhes o que fora lançado na prisão por uma sedição e homicídio, que era o que pediam; mas entregou Jesus à vontade deles.
26 ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.
26 E quando o iam levando, tomaram um certo Simão, cireneu, que vinha do campo, e puseram-lhe a cruz às costas, para que a levasse após Jesus.
27 ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ದೊಡ್ಡಗುಂಪಾಗಿ ಸೇರಿದ್ದ ಸ್ತ್ರೀಯರು ಯೇಸುವಿಗಾಗಿ ದುಃಖಪಟ್ಟು ಎದೆ ಬಡಿದುಕೊಂಡು ಗೋಳಾಡುತ್ತಿದ್ದರು.
27 E seguia-o grande multidão de povo e de mulheres, as quais batiam nos peitos, e o lamentavam.
28 ಆದರೆ ಯೇಸು, ಆ ಸ್ತ್ರೀಯರಿಗೆ, “ಜೆರುಸಲೇಮಿನ ಸ್ತ್ರೀಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ!
28 Jesus, porém, voltando-se para elas, disse: Filhas de Jerusalém, não choreis por mim; chorai antes por vós mesmas, e por vossos filhos.
29 ‘ಬಂಜೆಯರೇ ಭಾಗ್ಯವಂತರು! ಹೆರದವಳೇ ಹಾಲುಕುಡಿಸದವಳೇ ಭಾಗ್ಯವಂತಳು’ ಎಂದು ಜನರು ಹೇಳುವ ಸಮಯ ಬರುತ್ತದೆ.
29 Porque eis que hão de vir dias em que dirão: Bem-aventuradas as estéreis, e os ventres que não geraram, e os peitos que não amamentaram!
30 ಆಗ ಜನರು ಬೆಟ್ಟಕ್ಕೆ, ‘ನಮ್ಮ ಮೇಲೆ ಬೀಳು!’ ಎಂತಲೂ ಗುಡ್ಡಗಳಿಗೆ, ‘ನಮ್ಮನ್ನು ಮುಚ್ಚಿಕೊಳ್ಳಿರಿ!’ ಎಂತಲೂ ಕೂಗಿಕೊಳ್ಳುವರು.
30 Então começarão a dizer aos montes: Caí sobre nós, e aos outeiros: Cobri-nos.
31 ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” ಎಂದು ಹೇಳಿದನು.
31 Porque, se ao madeiro verde fazem isto, que se fará ao seco?
32 ಯೇಸುವಿನ ಸಂಗಡ ಇಬ್ಬರು ದುಷ್ಕರ್ಮಿಗಳನ್ನು ಕೊಲ್ಲಬೇಕೆಂದು ಅವರು ನಿರ್ಧರಿಸಿದರು.
32 E também conduziram outros dois, que eram malfeitores, para com ele serem mortos.
33 ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.
33 E, quando chegaram ao lugar chamado a Caveira, ali o crucificaram, e aos malfeitores, um à direita e outro à esquerda.
34 ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು.
34 E dizia Jesus: Pai, perdoa-lhes, porque não sabem o que fazem. E, repartindo as suas vestes, lançaram sortes.
35 ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.
35 E o povo estava olhando. E também os príncipes zombavam dele, dizendo: Aos outros salvou, salve-se a si mesmo, se este é o Cristo, o escolhido de Deus.
36 ಸೈನಿಕರೂ ಯೇಸುವನ್ನು ಗೇಲಿಮಾಡಿದರು. ಅವರು ಯೇಸುವಿನ ಬಳಿಗೆ ಬಂದು, ಸ್ವಲ್ಪ ಹುಳಿದ್ರಾಕ್ಷಾರಸವನ್ನು ನೀಡಿ,
36 E também os soldados o escarneciam, chegando-se a ele, e apresentando-lhe vinagre.
37 “ನೀನು ಯೆಹೂದ್ಯರ ಅರಸನಾಗಿದ್ದರೆ, ನಿನ್ನನ್ನು ರಕ್ಷಿಸಿಕೊ!” ಎಂದು ಹೇಳಿದರು.
37 E dizendo: Se tu és o Rei dos Judeus, salva-te a ti mesmo.
38 (ಶಿಲುಬೆಯ ಮೇಲ್ಭಾಗದಲ್ಲಿ, “ಈತನು ಯೆಹೂದ್ಯರ ಅರಸನು” ಎಂದು ಬರೆಯಲಾಗಿತ್ತು.)
38 E também por cima dele, estava um título, escrito em letras gregas, romanas, e hebraicas: ESTE É O REI DOS JUDEUS.
39 ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೋ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು.
39 E um dos malfeitores que estavam pendurados blasfemava dele, dizendo: Se tu és o Cristo, salva-te a ti mesmo, e a nós.
40 ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!
40 Respondendo, porém, o outro, repreendia-o, dizendo: Tu nem ainda temes a Deus, estando na mesma condenação?
41 ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.
41 E nós, na verdade, com justiça, porque recebemos o que os nossos feitos mereciam; mas este nenhum mal fez.
42 ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.
42 E disse a Jesus: Senhor, lembra-te de mim, quando entrares no teu reino.
43 ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.
43 E disse-lhe Jesus: Em verdade te digo que hoje estarás comigo no Paraíso.
44 ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು.
44 E era já quase a hora sexta, e houve trevas em toda a terra até à hora nona, escurecendo-se o sol;
45 ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು.
45 E rasgou-se ao meio o véu do templo.
46 ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
46 E, clamando Jesus com grande voz, disse: Pai, nas tuas mãos entrego o meu espírito. E, havendo dito isto, expirou.
47 ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.
47 E o centurião, vendo o que tinha acontecido, deu glória a Deus, dizendo: Na verdade, este homem era justo.
48 ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು.
48 E toda a multidão que se ajuntara a este espetáculo, vendo o que havia acontecido, voltava batendo nos peitos.
49 ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.
49 E todos os seus conhecidos, e as mulheres que juntamente o haviam seguido desde a Galiléia, estavam de longe vendo estas coisas.
50 — ausente —
50 E eis que um homem por nome José, senador, homem de bem e justo,
51 — ausente —
51 Que não tinha consentido no conselho e nos atos dos outros, de Arimatéia, cidade dos judeus, e que também esperava o reino de Deus;
52 ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಯೋಸೇಫನು ಪಿಲಾತನನ್ನು ಕೇಳಿಕೊಂಡನು.
52 Esse, chegando a Pilatos, pediu o corpo de Jesus.
53 ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆ ಯಾರನ್ನೂ ಎಂದೂ ಹೂಳಿರಲಿಲ್ಲ.
53 E, havendo-o tirado, envolveu-o num lençol, e pô-lo num sepulcro escavado numa penha, onde ninguém ainda havia sido posto.
54 ಅದು ಸಿದ್ಧತೆಯ ದಿನದ ಸಾಯಂಕಾಲವಾಗಿತ್ತು. ಸೂರ್ಯನು ಮುಳುಗಿದಾಗ, ಸಬ್ಬತ್‌ದಿನ ಪ್ರಾರಂಭವಾಗಲಿಕ್ಕಿತ್ತು.
54 E era o dia da preparação, e amanhecia o sábado.
55 ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು.
55 E as mulheres, que tinham vindo com ele da Galiléia, seguiram também e viram o sepulcro, e como foi posto o seu corpo.
56 ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು.
56 E, voltando elas, prepararam especiarias e ungüentos; e no sábado repousaram, conforme o mandamento.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 23, comparar traduções ou montar um estudo — tudo direto pelo WhatsApp.