Lucas 24

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARIB

Sair da comparação
ARIB Almeida Revisada Imprensa Bíblica
1 ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
1 Mas já no primeiro dia da semana, bem de madrugada, foram elas ao sepulcro, levando as especiarias que tinham preparado.
2 ಬಂಡೆ ಉರಳಿಸಲ್ಪಟ್ಟಿರುವುದನ್ನು ಕಂಡ ಅವರು ಒಳಗೆ ಹೋದರು.
2 E acharam a pedra revolvida do sepulcro.
3 ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ.
3 Entrando, porém, não acharam o corpo do Senhor Jesus.
4 ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು.
4 E, estando elas perplexas a esse respeito, eis que lhes apareceram dois varões em vestes resplandecentes;
5 ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!
5 e ficando elas atemorizadas e abaixando o rosto para o chão, eles lhes disseram: Por que buscais entre os mortos aquele que vive?
6 ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ?
6 Ele não está aqui, mas ressurgiu. Lembrai-vos de como vos falou, estando ainda na Galiléia.
7 ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು.
7 dizendo: Importa que o Filho do homem seja entregue nas mãos de homens pecadores, e seja crucificado, e ao terceiro dia ressurja.
8 ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು.
8 Lembraram-se, então, das suas palavras;
9 ಆ ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಆ ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು.
9 e, voltando do sepulcro, anunciaram todas estas coisas aos onze e a todos os demais.
10 ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು.
10 E eram Maria Madalena, e Joana, e Maria, mãe de Tiago; também as outras que estavam com elas relataram estas coisas aos apóstolos.
11 ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು.
11 E pareceram-lhes como um delírio as palavras das mulheres e não lhes deram crédito.
12 ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
12 Mas Pedro, levantando-se, correu ao sepulcro; e, abaixando-se, viu somente os panos de linho; e retirou-se, admirando consigo o que havia acontecido.
13 ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು.
13 Nesse mesmo dia, iam dois deles para uma aldeia chamada Emaús, que distava de Jerusalém sessenta estádios;
14 ನಡೆದ ಪ್ರತಿಯೊಂದು ಸಂಗತಿಯ ಕುರಿತು ಅವರು ಮಾತಾಡುತ್ತಿದ್ದರು.
14 e iam comentando entre si tudo aquilo que havia sucedido.
15 ಆಗ ಯೇಸು ತಾನೇ ಅವರ ಹತ್ತಿರಕ್ಕೆ ಬಂದು, ಅವರ ಜೊತೆಯಲ್ಲಿ ಹೋದನು.
15 Enquanto assim comentavam e discutiam, o próprio Jesus se aproximou, e ia com eles;
16 (ಆದರೆ ಅವರಿಗೆ ಆತನ ಗುರುತು ಸಿಕ್ಕಲಿಲ್ಲ.)
16 mas os olhos deles estavam como que fechados, de sorte que não o reconheceram.
17 ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು.
17 Então ele lhes perguntou: Que palavras são essas que, caminhando, trocais entre vós? Eles então pararam tristes.
18 ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.
18 E um deles, chamado Cleopas, respondeu-lhe: És tu o único peregrino em Jerusalém que não soube das coisas que nela têm sucedido nestes dias?
19 ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು.
19 Ao que ele lhes perguntou: Quais? Disseram-lhe: As que dizem respeito a Jesus, o nazareno, que foi profeta, poderoso em obras e palavras diante de Deus e de todo o povo.
20 ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು.
20 e como os principais sacerdotes e as nossas autoridades e entregaram para ser condenado à morte, e o crucificaram.
21 ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು.
21 Ora, nós esperávamos que fosse ele quem havia de remir Israel; e, além de tudo isso, é já hoje o terceiro dia desde que essas coisas aconteceram.
22 ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು.
22 Verdade é, também, que algumas mulheres do nosso meio nos encheram de espanto; pois foram de madrugada ao sepulcro
23 ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.
23 e, não achando o corpo dele voltaram, declarando que tinham tido uma visão de anjos que diziam estar ele vivo.
24 ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.
24 Além disso, alguns dos que estavam conosco foram ao sepulcro, e acharam ser assim como as mulheres haviam dito; a ele, porém, não o viram.
25 ಆಗ ಯೇಸು ಅವರಿಗೆ, “ನೀವು ಬುದ್ಧಿಹೀನರು ಮತ್ತು ಸತ್ಯವನ್ನು ಗ್ರಹಿಸುವುದರಲ್ಲಿ ಮಂದಗತಿಗಳು! ಪ್ರವಾದಿಗಳು ಹೇಳಿದ ಪ್ರತಿಯೊಂದನ್ನೂ ನೀವು ನಂಬಬೇಕು.
25 Então ele lhes disse: ó néscios, e tardos de coração para crerdes tudo o que os profetas disseram!
26 ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
26 Porventura não importa que o Cristo padecesse essas coisas e entrasse na sua glória?
27 ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.
27 E, começando por Moisés, e por todos os profetas, explicou-lhes o que dele se achava em todas as Escrituras.
28 ಅವರು ಎಮ್ಮಾಹು ಊರಿನ ಹತ್ತಿರಕ್ಕೆ ಬಂದಾಗ ಆತನು ತಾನು ಅಲ್ಲಿ ಇಳಿದುಕೊಳ್ಳದವನಂತೆ ನಟಿಸಿದನು.
28 Quando se aproximaram da aldeia para onde iam, ele fez como quem ia para mais longe.
29 ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.
29 Eles, porém, o constrangeram, dizendo: Fica conosco; porque é tarde, e já declinou o dia. E entrou para ficar com eles.
30 ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.
30 Estando com eles à mesa, tomou o pão e o abençoou; e, partindo-o, lho dava.
31 ಆಗ ಅವರು ಯೇಸುವನ್ನು ಗುರುತಿಸಿದರು. ಆದರೆ ಆತನೇ ಯೇಸುವೆಂದು ಅವರು ತಿಳಿದಾಕ್ಷಣವೇ ಆತನು ಅವರ ಕಣ್ಣಿಗೆ ಮಾಯವಾದನು.
31 Abriram-se-lhes então os olhos, e o reconheceram; nisto ele desapareceu de diante deles.
32 ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.
32 E disseram um para o outro: Porventura não se nos abrasava o coração, quando pelo caminho nos falava, e quando nos abria as Escrituras?
33 ಆ ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೊಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಆ ಜನರು,
33 E na mesma hora levantaram-se e voltaram para Jerusalém, e encontraram reunidos os onze e os que estavam com eles,
34 “ಪ್ರಭುವು (ಯೇಸು) ಸತ್ತವರೊಳಗಿಂದ ನಿಜವಾಗಿ ಎದ್ದಿದ್ದಾನೆ! ಆತನು ಸೀಮೋನನಿಗೆ (ಪೇತ್ರ) ಕಾಣಿಸಿಕೊಂಡನು” ಎಂದು ಹೇಳಿದರು.
34 os quais diziam: Realmente o Senhor ressurgiu, e apareceu a Simão.
35 ಆಗ ಆ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು.
35 Então os dois contaram o que acontecera no caminho, e como se lhes fizera conhecer no partir do pão.
36 ಅವರಿಬ್ಬರೂ ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಯೇಸುವು ಶಿಷ್ಯರ ಗುಂಪಿನ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ನಿಮಗೆ ಶಾಂತಿಯಾಗಲಿ” ಅಂದನು.
36 Enquanto ainda falavam nisso, o próprio Jesus se apresentou no meio deles, e disse-lhes: Paz seja convosco.
37 ಆಗ ಶಿಷ್ಯರು ಬೆರಗಾದರು. ಅವರಿಗೆ ಭಯವಾಯಿತು. ಅದು ಭೂತವೇ ಇರಬೇಕೆಂದು ಅವರು ಭಾವಿಸಿದರು.
37 Mas eles, espantados e atemorizados, pensavam que viam algum espírito.
38 ಆದರೆ ಯೇಸು, “ನೀವು ಏಕೆ ಗಲಿಬಿಲಿಗೊಂಡಿದ್ದೀರಿ? ನೀವು ಕಣ್ಣಾರೆ ಕಂಡರೂ ಏಕೆ ಸಂಶಯಪಡುತ್ತೀರಿ?
38 Ele, porém, lhes disse: Por que estais perturbados? e por que surgem dúvidas em vossos corações?
39 ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.
39 Olhai as minhas mãos e os meus pés, que sou eu mesmo; apalpai-me e vede; porque um espírito não tem carne nem ossos, como percebeis que eu tenho.
40 ಯೇಸು ಅವರಿಗೆ ಇದನ್ನು ಹೇಳಿದ ನಂತರ, ತನ್ನ ಕೈಗಳಲ್ಲಿ ಮತ್ತು ಪಾದಗಳಲ್ಲಿರುವ ಗಾಯದ ಗುರುತುಗಳನ್ನು ತೋರಿಸಿದನು.
40 E, dizendo isso, mostrou-lhes as mãos e os pés.
41 ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.
41 Não acreditando eles ainda por causa da alegria, e estando admirados, perguntou-lhes Jesus: Tendes aqui alguma coisa que comer?
42 ಅವರು ಸುಟ್ಟ ಮೀನಿನ ತುಂಡನ್ನು ಕೊಟ್ಟರು.
42 Então lhe deram um pedaço de peixe assado,
43 ಶಿಷ್ಯರ ಕಣ್ಣೆದುರಿನಲ್ಲಿಯೇ, ಯೇಸು ಆ ಮೀನನ್ನು ತೆಗೆದುಕೊಂಡು ತಿಂದನು.
43 o qual ele tomou e comeu diante deles.
44 ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
44 Depois lhe disse: São estas as palavras que vos falei, estando ainda convosco, que importava que se cumprisse tudo o que de mim estava escrito na Lei de Moisés, nos Profetas e nos Salmos.
45 ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.
45 Então lhes abriu o entendimento para compreenderem as Escrituras;
46 ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.
46 e disse-lhes: Assim está escrito que o Cristo padecesse, e ao terceiro dia ressurgisse dentre os mortos;
47 — ausente —
47 e que em seu nome se pregasse o arrependimento para remissão dos pecados, a todas as nações, começando por Jerusalém.
48 — ausente —
48 Vós sois testemunhas destas coisas.
49 ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.
49 E eis que sobre vós envio a promessa de meu Pai; ficai porém, na cidade, até que do alto sejais revestidos de poder.
50 ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.
50 Então os levou fora, até Betânia; e levantando as mãos, os abençoou.
51 ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.
51 E aconteceu que, enquanto os abençoava, apartou-se deles; e foi elevado ao céu.
52 ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು.
52 E, depois de o adorarem, voltaram com grande júbilo para Jerusalém;
53 ಅವರು ಯಾವಾಗಲೂ ದೇವಾಲಯದಲ್ಲಿ ದೇವರನ್ನು ಸ್ತುತಿಸುತ್ತಿದ್ದರು.
53 e estavam continuamente no templo, bendizendo a Deus.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 24, comparar traduções ou montar um estudo — tudo direto pelo WhatsApp.