Lucas 5
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.
1 Certo dia Jesus estava na praia do lago da Galileia, e a multidão se apertava em volta dele para ouvir a mensagem de Deus.
2 ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
2 Ele viu dois barcos no lago, perto da praia. Os pescadores tinham saído deles e estavam lavando as redes.
3 ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.
3 Jesus entrou num dos barcos, o de Simão, e pediu que ele o afastasse um pouco da praia. Então sentou-se e começou a ensinar a multidão.
4 ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.
4 Quando acabou de falar, Jesus disse a Simão:
5 ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು.
5 Simão respondeu: — Mestre, nós trabalhamos a noite toda e não pescamos nada. Mas, já que o senhor está mandando jogar as redes, eu vou obedecer.
6 ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು.
6 Quando eles jogaram as redes na água, pescaram tanto peixe, que as redes estavam se rebentando.
7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.
7 Então fizeram um sinal para os companheiros que estavam no outro barco a fim de que viessem ajudá-los. Eles foram e encheram os dois barcos com tanto peixe, que os barcos quase afundaram.
8 — ausente —
8 Quando Simão Pedro viu o que havia acontecido, ajoelhou-se diante de Jesus e disse: — Senhor, afaste-se de mim, pois eu sou um pecador!
9 — ausente —
9 Simão e os outros que estavam com ele ficaram admirados com a quantidade de peixes que haviam apanhado.
10 ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.)
10 Tiago e João, filhos de Zebedeu, que eram companheiros de Simão, também ficaram muito admirados. Então Jesus disse a Simão:
11 ಅವರು ತಮ್ಮ ದೋಣಿಗಳನ್ನು ದಡಕ್ಕೆ ಸಾಗಿಸಿದ ಮೇಲೆ ಎಲ್ಲವನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
11 Eles arrastaram os barcos para a praia, deixaram tudo e seguiram Jesus.
12 ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.
12 Certa vez Jesus estava numa cidade onde havia um homem que tinha o corpo todo coberto de lepra. Quando viu Jesus, o leproso se ajoelhou diante dele, encostou o rosto no chão e pediu: — Senhor, eu sei que o senhor pode me curar se quiser!
13 ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.
13 Jesus estendeu a mão, tocou nele e disse: No mesmo instante a lepra desapareceu.
14 ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.
14 Então Jesus lhe deu esta ordem:
15 ಅನೇಕ ಜನರು ಆತನ ಬೋಧನೆಗಳನ್ನು ಕೇಳುವುದಕ್ಕೂ ತಮ್ಮ ಕಾಯಿಲೆಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಬಂದರು.
15 Mas as notícias a respeito de Jesus se espalhavam ainda mais, e muita gente vinha para ouvi-lo e para ser curada das suas doenças.
16 ಯೇಸು ಆಗಾಗ್ಗೆ ನಿರ್ಜನ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದನು.
16 Porém Jesus ia para lugares desertos e orava.
17 ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.
17 Um dia Jesus estava ensinando, e alguns fariseus e alguns mestres da Lei estavam sentados perto dele. Eles tinham vindo de todas as cidades da Galileia e da Judeia e também de Jerusalém. O poder do Senhor estava com Jesus para que ele curasse os doentes.
18 ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು.
18 Alguns homens trouxeram um paralítico deitado numa cama e estavam querendo entrar na casa e colocá-lo diante de Jesus.
19 ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
19 Porém, por causa da multidão, não conseguiram entrar com o paralítico. Então o carregaram para cima do telhado. Fizeram uma abertura nas telhas e o desceram na sua cama em frente de Jesus, no meio das pessoas que estavam ali.
20 ಈ ಜನರ ನಂಬಿಕೆಯನ್ನು ನೋಡಿ ಯೇಸು ಆ ರೋಗಿಗೆ, “ಸ್ನೇಹಿತನೇ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
20 Jesus viu que eles tinham fé e disse ao paralítico:
21 ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.
21 Os mestres da Lei e os fariseus começaram a pensar: — Quem é este homem que
22 ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ನೀವು ಆ ರೀತಿ ಯೋಚಿಸುವುದೇಕೆ?
22 Porém Jesus sabia o que eles estavam pensando e disse:
23 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಪಾರ್ಶ್ವವಾಯು ರೋಗಿಗೆ ಹೇಳುವುದೋ? ಅಥವಾ ‘ಎದ್ದುನಿಂತು ನಡೆ’ ಎನ್ನುವುದೋ?
23 O que é mais fácil dizer ao paralítico: “Os seus pecados estão perdoados” ou “Levante-se e ande”?
24 ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.
24 Pois vou mostrar a vocês que eu, o Então disse ao paralítico:
25 ಆ ಕೂಡಲೇ ಅವನು ಜನರು ಮುಂದೆ ಎದ್ದುನಿಂತು, ತನ್ನ ಹಾಸಿಗೆಯನ್ನು ಹೊತ್ತುಕೊಂಡು ದೇವರನ್ನು ಸ್ತುತಿಸುತ್ತಾ ಮನೆಗೆ ಹೋದನು.
25 No mesmo instante o homem se levantou diante de todos, pegou a cama e foi para casa, louvando a Deus.
26 ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.
26 Todos ficaram muito admirados; e, cheios de medo, louvaram a Deus, dizendo: — Que coisa maravilhosa nós vimos hoje!
27 ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
27 Depois disso Jesus saiu e viu um cobrador de impostos, chamado Levi , sentado no lugar onde os impostos eram pagos. Jesus lhe disse:
28 ಲೇವಿಯು ಎದ್ದು, ಎಲ್ಲವನ್ನೂ ಅಲ್ಲಿಯೇ ಬಿಟ್ಟು ಯೇಸುವನ್ನು ಹಿಂಬಾಲಿಸಿದನು.
28 Levi se levantou, deixou tudo e seguiu Jesus.
29 ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.
29 Então Levi fez para Jesus uma grande festa na sua casa. Havia ali muitos cobradores de impostos, e outras pessoas estavam sentadas com eles.
30 ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.
30 Os fariseus e os mestres da Lei, que eram do partido dos fariseus, ficaram zangados com os discípulos de Jesus e perguntaram: — Por que vocês comem e bebem com os cobradores de impostos e com outras pessoas de má fama?
31 ಯೇಸು ಅವರಿಗೆ, “ವೈದ್ಯನ ಅಗತ್ಯವಿರುವುದು ಆರೋಗ್ಯವಂತರಿಗಲ್ಲ, ಕಾಯಿಲೆಯವರಿಗಷ್ಟೆ.
31 Jesus respondeu:
32 ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರಿಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯಲು ನಾನು ಬಂದವನಲ್ಲ, ಪಾಪಿಗಳನ್ನು ಕರೆಯಲು ಬಂದವನು!” ಎಂದು ಉತ್ತರಿಸಿದನು.
32 Eu não vim para
33 ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.
33 Algumas pessoas disseram a Jesus: — Os discípulos de João Batista jejuam muitas vezes e fazem orações, e os discípulos dos
34 ಯೇಸು ಅವರಿಗೆ, “ಮದುವೆಯಲ್ಲಿ ಮದುಮಗನ ಸಂಗಡ ಇರುವ ಅವನ ಸ್ನೇಹಿತರಿಗೆ ನೀವು ಉಪವಾಸಮಾಡಿ ಎಂದು ಹೇಳಲು ಸಾಧ್ಯವಿಲ್ಲ.
34 Jesus respondeu:
35 ಆದರೆ ಮದುಮಗನು ಅವರ ಬಳಿಯಿಂದ ಹೊರಟುಹೋಗುವ ಕಾಲ ಬರುತ್ತದೆ. ಆಗ ಅವನ ಸ್ನೇಹಿತರು ಉಪವಾಸ ಮಾಡುವರು” ಎಂದು ಉತ್ತರಕೊಟ್ಟನು.
35 Mas chegará o tempo em que o noivo será tirado do meio deles; então sim eles vão jejuar!
36 ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.
36 Jesus fez também esta comparação:
37 ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.
37 Ninguém põe vinho novo em
38 ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ದ್ರಾಕ್ಷಾರಸದ ಚೀಲಗಳಲ್ಲಿ ತುಂಬಿಡುತ್ತಾರೆ.
38 Não. Vinho novo deve ser posto em odres novos.
39 ಹಳೆಯ ದ್ರಾಕ್ಷಾರಸವನ್ನು ಕುಡಿದವನಿಗೆ ಹೊಸ ದ್ರಾಕ್ಷಾರಸವು ರುಚಿಸುವುದಿಲ್ಲ. ಅವನು ಹಳೆಯ ದ್ರಾಕ್ಷಾರಸವನ್ನೇ ಇಷ್ಟಪಡುತ್ತಾನೆ.”
39 E ninguém quer vinho novo depois de beber vinho velho, pois diz: “O vinho velho é melhor.”
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 5, comparar traduções ou montar um estudo — tudo direto pelo WhatsApp.