Levítico 12

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010)

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

2 “ಇಸ್ರೇಲರಿಗೆ ಹೀಗೆ ಹೇಳು:

3 ಎಂಟನೆಯ ದಿನದಲ್ಲಿ ಗಂಡುಮಗುವಿಗೆ ಸುನ್ನತಿ ಮಾಡಬೇಕು.

4 ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.

5 ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.

6 “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.

Ler em outra tradução

Comparar lado a lado

Estude este capítulo no WhatsApp

Peça à IA da Bíblia Fala para explicar Levítico 12, comparar traduções ou montar um estudo — tudo direto pelo WhatsApp.