Levítico 14

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
1 Disse também o Senhor a Moisés:
2 “ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ ಅನುಸರಿಸತಕ್ಕ ನಿಯಮಗಳು ಯಾವುವೆಂದರೆ:
2 "Esta é a regulamentação acerca da purificação de um leproso: ele será levado ao sacerdote,
3 ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು.
3 que sairá do acampamento e o examinará. Se a pessoa foi curada da lepra,
4 ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.
4 o sacerdote ordenará que duas aves puras, vivas, um pedaço de madeira de cedro, um pano vermelho e um ramo de hissopo sejam trazidos em favor daquele que será purificado.
5 ಬಳಿಕ ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಅಪ್ಪಣೆ ಕೊಡಬೇಕು.
5 Então o sacerdote ordenará que uma das aves seja morta numa vasilha de barro com água da fonte.
6 ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರುಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.
6 Então pegará a ave viva e a molhará, juntamente com o pedaço de madeira de cedro, com o pano vermelho e com o ramo de hissopo, no sangue da ave morta em água corrente.
7 ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು.
7 Sete vezes ele aspergirá aquele que está sendo purificado da lepra e o declarará puro. Depois soltará a ave viva em campo aberto.
8 “ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.
8 "Aquele que estiver sendo purificado lavará as suas roupas, rapará todos os seus pêlos e se banhará com água; e assim estará puro. Depois disso poderá entrar no acampamento, mas ficará fora da sua tenda por sete dias.
9 ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷೌರ ಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು.
9 No sétimo dia rapará todos os seus pêlos: o cabelo, a barba, as sobrancelhas e o restante dos pêlos. Lavará suas roupas e banhará o corpo com água; então ficará puro.
10 “ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.
10 "No oitavo dia pegará dois cordeiros sem defeito e uma cordeira de um ano sem defeito, juntamente com três jarros da melhor farinha amassada com óleo, como oferta de cereal, e uma caneca de óleo.
11 ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)
11 O sacerdote que faz a purificação apresentará ao Senhor, à entrada da Tenda do Encontro, tanto aquele que estiver para ser purificado como as suas ofertas.
12 ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.
12 "Então o sacerdote pegará um dos cordeiros e o sacrificará como oferta pela culpa, juntamente com a caneca de óleo; ele os moverá perante o Senhor como gesto ritual de apresentação e
13 ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ.
13 matará o cordeiro no Lugar Santo, onde são sacrificados a oferta pelo pecado e o holocausto. Como se dá com a oferta pelo pecado, também a oferta pela culpa pertence ao sacerdote; é santíssima.
14 “ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
14 O sacerdote porá um pouco do sangue da oferta pela culpa na ponta da orelha direita daquele que será purificado, no polegar da sua mão direita e no polegar do seu pé direito.
15 ಅಲ್ಲದೆ ಯಾಜಕನು ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ತನ್ನ ಎಡಗೈಗೆ ಹೊಯ್ದುಕೊಳ್ಳಬೇಕು.
15 Então o sacerdote pegará um pouco de óleo da caneca e o derramará na palma da sua própria mão esquerda,
16 ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.
16 molhará o dedo direito no óleo que está na palma da mão esquerda, e com o dedo o aspergirá sete vezes perante o Senhor.
17 ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ, ಬಲಗೈಯ ಹೆಬ್ಬೆರಳಿಗೆ, ಬಲಗಾಲಿನ ಹೆಬ್ಬೆರಳಿಗೆ ಹಚ್ಚುವನು.
17 O sacerdote ainda porá um pouco do óleo restante na palma da sua mão, na ponta da orelha direita daquele que está sendo purificado, no polegar da sua mão direita e no polegar do seu pé direito, em cima do sangue da oferta pela culpa.
18 ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.
18 O óleo que restar na palma da sua mão, o sacerdote derramará sobre a cabeça daquele que está sendo purificado e fará propiciação por ele perante o Senhor.
19 “ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.
19 "Então o sacerdote sacrificará a oferta pelo pecado e fará propiciação em favor daquele que está sendo purificado da sua impureza. Depois disso, o sacerdote matará o animal do holocausto
20 ಬಳಿಕ ಯಾಜಕನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನು ಅರ್ಪಿಸುವನು. ಈ ರೀತಿಯಾಗಿ ಯಾಜಕನು ಆ ವ್ಯಕ್ತಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವನು ಶುದ್ಧನಾಗುವನು.
20 e o oferecerá sobre o altar, juntamente com a oferta de cereal; e assim fará propiciação pelo ofertante, o qual estará puro.
21 “ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,
21 "Se, todavia, for alguém pobre, sem recursos para isso, pegará um cordeiro como oferta pela culpa para ser movido para fazer propiciação por ele, juntamente com um jarro da melhor farinha, amassada com óleo, como oferta de cereal; uma caneca de óleo
22 ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.
22 e duas rolinhas ou dois pombinhos, os quais ele tenha condições de ofertar, um como oferta pelo pecado e o outro como holocausto.
23 “ಎಂಟನೆಯ ದಿನದಲ್ಲಿ, ಅವನು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. ಅವನು ಶುದ್ಧನಾಗುವಂತೆ ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
23 "No oitavo dia ele os trará ao sacerdote, para a sua purificação, à entrada da Tenda do Encontro, perante o Senhor.
24 ದೋಷಪರಿಹಾರಕ್ಕಾಗಿ ತಂದ ಕುರಿಮರಿಯನ್ನು ಮತ್ತು ಎಣ್ಣೆಯನ್ನು ಯಾಜಕನು ತೆಗೆದುಕೊಂಡು, ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
24 O sacerdote pegará o cordeiro da oferta pela culpa, juntamente com uma caneca de óleo, e os moverá perante o Senhor como gesto ritual de apresentação.
25 ಬಳಿಕ ದೋಷಪರಿಹಾರಕ ಯಜ್ಞವಾದ ಕುರಿಮರಿಯನ್ನು ಯಾಜಕನು ವಧಿಸುವನು. ಯಾಜಕನು ದೋಷಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
25 Matará o cordeiro da oferta pela culpa e pegará um pouco do sangue e o porá na ponta da orelha direita daquele que está sendo purificado, no polegar da sua mão direita e no polegar do seu pé direito.
26 ಅಲ್ಲದೆ ಯಾಜಕನು ಈ ಎಣ್ಣೆಯಲ್ಲಿ ಸ್ವಲ್ಪವನ್ನು ಅವನ ಎಡಗೈಗೆ ಹೊಯ್ಯಬೇಕು.
26 O sacerdote derramará um pouco do óleo na palma da sua mão esquerda,
27 ತನ್ನ ಎಡಗೈಯಲ್ಲಿರುವ ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ಏಳುಸಲ ತನ್ನ ಬಲಗೈಯ ಬೆರಳಿನಿಂದ ಚಿಮಿಕಿಸುವನು.
27 e com o dedo indicador direito aspergirá um pouco do óleo da palma da sua mão esquerda sete vezes perante o Senhor.
28 ಬಳಿಕ ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ದೋಷಪರಿಹಾರಕ ಯಜ್ಞದ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಹಚ್ಚುವನು; ಸ್ವಲ್ಪ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೆ ಹಚ್ಚಬೇಕು; ಸ್ವಲ್ಪ ಎಣ್ಣೆಯನ್ನು ಬಲಗೈಯ ಹೆಬ್ಬೆರಳಿಗೂ ಸ್ವಲ್ಪ ಎಣ್ಣೆಯನ್ನು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
28 Ele porá o óleo da palma da sua mão nos mesmos lugares em que pôs o sangue da oferta pela culpa: na ponta da orelha direita daquele que está sendo purificado, no polegar da sua mão direita e no polegar do seu pé direito.
29 ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು.
29 O que restar do óleo na palma da sua mão, o sacerdote derramará sobre a cabeça daquele que está sendo purificado, para fazer propiciação por ele perante o Senhor.
30 “ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೊ ಅದನ್ನು ಅವನು ಸಮರ್ಪಿಸಬೇಕು.)
30 Depois sacrificará uma das rolinhas ou um dos pombinhos, os quais a pessoa tem condições de ofertar,
31 ಅವನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯ ಶುದ್ಧೀಕರಣಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ಆ ವ್ಯಕ್ತಿ ಶುದ್ಧನಾಗುವನು.”
31 um como oferta pelo pecado e o outro como holocausto, juntamente com a oferta de cereal. Assim o sacerdote fará propiciação perante o Senhor em favor daquele que está sendo purificado".
32 ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿಗೋಸ್ಕರವಿರುವ ನಿಯಮಗಳು ಇವೇ.
32 Essa é a regulamentação para todo aquele que tem lepra e não tem recursos para fazer a oferta da sua purificação.
33 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ;
33 O Senhor disse a Moisés e a Arão:
34 “ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,
34 "Quando vocês entrarem na terra de Canaã, que lhes dou como propriedade, e eu puser mancha de mofo numa casa, na terra que lhes pertence,
35 ಆ ಮನೆಯ ಯಾಜಮಾನನು ಬಂದು, ‘ನನ್ನ ಮನೆಯಲ್ಲಿ ಬೂಷ್ಟು ಬಂದಿದೆ’ ಎಂದು ಯಾಜಕನಿಗೆ ಹೇಳಬೇಕು.
35 o dono da casa irá ao sacerdote e dirá: ‘Parece-me que há mancha de mofo em minha casa’.
36 “ಆಗ ಯಾಜಕನು ಬೂಷ್ಟನ್ನು ನೋಡಲು ಮನೆಯ ಒಳಗೆ ಹೋಗುವುದಕ್ಕಿಂತ ಮೊದಲು ಆ ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರತೆಗೆಯಲು ಜನರಿಗೆ ಆಜ್ಞಾಪಿಸಬೇಕು. ಆಗ ಯಾಜಕನು ಮನೆಯಲ್ಲಿರುವ ಪ್ರತಿಯೊಂದು ವಸ್ತುವನ್ನು ಅಶುದ್ಧವೆಂದು ಹೇಳಬೇಕಾಗಿರುವುದಿಲ್ಲ. ಜನರು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರಗೆ ತೆಗೆದ ನಂತರ ಯಾಜಕನು ಮನೆಯೊಳಗೆ ಹೋಗುವನು.
36 Antes de examinar o mofo, o sacerdote ordenará que desocupem a casa para que nada que houver na casa se torne impuro. Depois disso, o sacerdote irá examinar a casa.
37 ಯಾಜಕನು ಬೂಷ್ಟನ್ನು ನೋಡುವನು. ಗೋಡೆಗಳಲ್ಲಿರುವ ಬೂಷ್ಟಿನಲ್ಲಿ ರಂಧ್ರಗಳಿದ್ದು ಅದು ಹಸಿರು ಅಥವಾ ಕೆಂಪು ಬಣ್ಣದ್ದಾಗಿದ್ದರೆ ಮತ್ತು ಬೂಷ್ಟು ಗೋಡೆಗಿಂತ ತಗ್ಗಾಗಿದ್ದರೆ,
37 Examinará as manchas nas paredes, e, se elas forem esverdeadas ou avermelhadas e parecerem mais profundas do que a superfície da parede,
38 ಆಗ ಯಾಜಕನು ಹೊರಗೆ ಹೋಗಿ ಮನೆಗೆ ಏಳು ದಿನಗಳವರೆಗೆ ಬೀಗ ಹಾಕಿಸಬೇಕು.
38 o sacerdote sairá da casa e a deixará fechada por sete dias.
39 “ಏಳನೆಯ ದಿನದಲ್ಲಿ ಯಾಜಕನು ಹಿಂತಿರುಗಿ ಬಂದು ಮನೆಯನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯ ಗೋಡೆಗಳಲ್ಲಿ ಹರಡಿದ್ದರೆ,
39 No sétimo dia voltará para examinar a casa. Se as manchas se houverem espalhado pelas paredes da casa,
40 ಆಗ ಯಾಜಕನು ಬೂಷ್ಟು ಇರುವ ಕಲ್ಲುಗಳನ್ನು ಒಡೆದುಹಾಕಿ ಬಿಸಾಡಬೇಕೆಂದು ಆಜ್ಞಾಪಿಸಬೇಕು. ಅವರು ಆ ಕಲ್ಲುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
40 ordenará que as pedras contaminadas pelas manchas sejam retiradas e jogadas num local impuro, fora da cidade.
41 ತರುವಾಯ ಯಾಜಕನು ಮನೆಯ ಒಳಗಿನ ಗೋಡೆಯನ್ನೆಲ್ಲಾ ಕೆರೆಯಿಸಬೇಕು. ಜನರು ಕೆರೆದುಹಾಕುವ ಮಣ್ಣನ್ನು ಪಟ್ಟಣದ ಹೊರಗೆ ಎಸೆದುಬಿಡಬೇಕು. ಅವರು ಅದನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
41 Fará que a casa seja raspada por dentro e que o reboco raspado seja jogado num local impuro, fora da cidade.
42 ಬಳಿಕ ಆ ವ್ಯಕ್ತಿಯು ಗೋಡೆಗಳಲ್ಲಿ ಹೊಸ ಕಲ್ಲುಗಳನ್ನು ಇಡಿಸಿ ಹೊಸ ಮಡ್ಡಿ ಮಾಡಿಸಬೇಕು.
42 Depois colocarão outras pedras no lugar das primeiras, e rebocarão a casa com barro novo.
43 “ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,
43 "Se as manchas tornarem a alastrar-se na casa depois de retiradas as pedras e de raspada e rebocada a casa,
44 ಯಾಜಕನು ಬಂದು ಆ ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಅದು ಬಹುಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಆ ಮನೆಯು ಅಶುದ್ಧವಾಗಿದೆ.
44 o sacerdote irá examiná-la, e, se as manchas se espalharam pela casa, é mofo corrosivo; a casa está impura.
45 ಆ ವ್ಯಕ್ತಿಯು ಆ ಮನೆಯನ್ನು ಕೆಡವಿಹಾಕಿಸಬೇಕು. ಅವರು ಅದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
45 Ela terá que ser demolida: as pedras, as madeiras e todo o reboco da casa; tudo será levado para um local impuro, fora da cidade.
46 ಮುಚ್ಚಲ್ಪಟ್ಟಿರುವ ಆ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
46 "Quem entrar na casa enquanto estiver fechada estará impuro até à tarde.
47 ಯಾವನಾದರೂ ಆ ಮನೆಯಲ್ಲಿ ಆಹಾರ ತಿಂದರೆ ಅಥವಾ ಅಲ್ಲಿ ಮಲಗಿಕೊಂಡರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
47 Aquele que dormir ou comer na casa terá que lavar as suas roupas.
48 “ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.
48 "Mas, se o sacerdote for examiná-la e as manchas não se houverem espalhado depois de rebocada a casa, declarará pura a casa, pois as manchas de mofo desapareceram.
49 “ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರುಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು.
49 Para purificar a casa, ele pegará duas aves, um pedaço de madeira de cedro, um pano vermelho e hissopo.
50 ಯಾಜಕನು ಒಂದು ಪಕ್ಷಿಯನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಬಟ್ಟಲಲ್ಲಿ ವಧಿಸಬೇಕು.
50 Depois matará uma das aves numa vasilha de barro com água da fonte.
51 ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.
51 Então pegará o pedaço de madeira de cedro, o hissopo, o pano vermelho e a ave viva, e os molhará no sangue da ave morta e na água da fonte, e aspergirá a casa sete vezes.
52 ಮನೆಯನ್ನು ಶುದ್ಧೀಕರಿಸುವುದಕ್ಕೆ ಯಾಜಕನು ಅವುಗಳನ್ನು ಆ ರೀತಿಯಲ್ಲಿ ಉಪಯೋಗಿಸುವನು.
52 Ele purificará a casa com o sangue da ave, com a água da fonte, com a ave viva, com o pedaço de madeira de cedro, com o hissopo e com o pano vermelho.
53 ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಆ ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಆ ಮನೆಯು ಶುದ್ಧವಾಗುವುದು.”
53 Depois soltará a ave viva em campo aberto, fora da cidade. Assim fará propiciação pela casa, que ficará pura".
54 ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯದದ್ದು,
54 Essa é a regulamentação acerca de qualquer tipo de lepra, de sarna,
55 ಬಟ್ಟೆಯಲ್ಲಿ ಅಥವಾ ಮನೆಯಲ್ಲಿ ಕಾಣಿಸಿಕೊಳ್ಳುವ ಬೂಷ್ಟಿನ ಕುರಿತು ಅನುಸರಿಸಬೇಕಾದ ನಿಯಮಗಳು ಇವೇ.
55 de mofo nas roupas ou numa casa
56 ಬಾವು, ಗಂಧೆ ಅಥವಾ ಚರ್ಮದ ಮೇಲೆ ಕಂಡುಬರುವ ಹೊಳೆಯುವ ಕಲೆ ಇವುಗಳ ಶುದ್ಧಾಚಾರದ ನಿಯಮಗಳು ಇವೇ.
56 e de inchaço, erupção ou mancha brilhante,
57 ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ.
57 para se determinar quando uma coisa é pura ou impura. Essa é a regulamentação acerca de qualquer tipo de lepra e de mofo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Levítico 14, comparar traduções ou montar um estudo — tudo direto pelo WhatsApp.