Levítico 1

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:
1 Da Tenda do Encontro o Senhor chamou Moisés e lhe ordenou:
2 “ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.
2 "Diga o seguinte aos israelitas: Quando alguém trouxer um animal como oferta ao Senhor, que seja do gado ou do rebanho de ovelhas.
3 “ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.
3 "Se o holocausto for de gado, oferecerá um macho sem defeito. Ele o apresentará à entrada da Tenda do Encontro para que seja aceito pelo Senhor,
4 ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.
4 e porá a mão sobre a cabeça do animal do holocausto para que seja aceito como propiciação em seu lugar.
5 “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.
5 Então o novilho será morto perante o Senhor, e os sacerdotes, descendentes de Arão, trarão o sangue e o derramarão nos lados do altar, que está na entrada da Tenda do Encontro.
6 ಯಾಜಕನು ಆ ಪಶುವಿನ ಚರ್ಮವನ್ನು ಸುಲಿದು, ಪಶುವನ್ನು ತುಂಡುತುಂಡುಗಳಾಗಿ ಕಡಿಯಬೇಕು.
6 Depois se tirará a pele do animal, que será cortado em pedaços.
7 ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.
7 Então os descendentes do sacerdote Arão acenderão o fogo do altar e arrumarão a lenha sobre o fogo.
8 ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
8 Em seguida arrumarão os pedaços, inclusive a cabeça e a gordura, sobre a lenha que está no fogo do altar.
9 ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
9 As vísceras e as pernas serão lavadas com água. E o sacerdote queimará tudo isso no altar. É um holocausto, oferta preparada no fogo, de aroma agradável ao Senhor.
10 “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.
10 "Se a oferta for um holocausto do rebanho, quer de cordeiros quer de cabritos, oferecerá um macho sem defeito.
11 ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
11 O animal será morto no lado norte do altar, perante o Senhor; os sacerdotes, descendentes de Arão, derramarão o sangue nos lados do altar.
12 ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
12 Então o animal será cortado em pedaços. O sacerdote arrumará os pedaços, inclusive a cabeça e a gordura, sobre a lenha que está no fogo do altar.
13 ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
13 As vísceras e as pernas serão lavadas com água. O sacerdote trará tudo isso como oferta e o queimará no altar. É um holocausto, oferta preparada no fogo, de aroma agradável ao Senhor.
14 “ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.
14 "Se a sua oferta ao Senhor for um holocausto de aves, traga uma rolinha ou um pombinho.
15 ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.
15 O sacerdote trará a ave ao altar, destroncará o pescoço dela e a queimará, e deixará escorrer o sangue da ave na parede do altar.
16 ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.
16 Ele retirará o papo com o seu conteúdo e o jogará ao lado leste do altar, onde ficam as cinzas.
17 ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.
17 Rasgará a ave pelas asas, sem dividi-la totalmente, e então o sacerdote a queimará sobre a lenha acesa no altar. É um holocausto, oferta preparada no fogo, de aroma agradável ao Senhor".

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Levítico 1, comparar traduções ou montar um estudo — tudo direto pelo WhatsApp.