Levítico 20

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF

Sair da comparação
ACF Almeida Corrigida Fiel
1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
1 Falou mais o SENHOR a Moisés, dizendo:
2 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
2 Também dirás aos filhos de Israel: Qualquer que, dos filhos de Israel, ou dos estrangeiros que peregrinam em Israel, der da sua descendência a Moloque, certamente morrerá; o povo da terra o apedrejará.
3 ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.
3 E eu porei a minha face contra esse homem, e o extirparei do meio do seu povo, porquanto deu da sua descendência a Moloque, para contaminar o meu santuário e profanar o meu santo nome.
4 ಒಂದುವೇಳೆ ದೇಶದ ಜನರು ಅವನು ಮಾಡಿದ ಕಾರ್ಯವನ್ನು ನಿರ್ಲಕ್ಷಿಸಿ ಅವನನ್ನು ಕೊಲ್ಲದಿದ್ದರೆ,
4 E, se o povo da terra de alguma maneira esconder os seus olhos daquele homem, quando der, da sua descendência a Moloque, para não o matar,
5 ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.
5 Então eu porei a minha face contra aquele homem, e contra a sua família, e o extirparei do meio do seu povo, bem como a todos que forem após ele, prostituindo-se com Moloque.
6 “ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.
6 Quando alguém se virar para os adivinhadores e encantadores, para se prostituir com eles, eu porei a minha face contra ele, e o extirparei do meio do seu povo.
7 “ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ.
7 Portanto santificai-vos, e sede santos, pois eu sou o Senhor vosso Deus.
8 ನನ್ನ ನಿಯಮಗಳನ್ನು ಜ್ಞಾಪಕಮಾಡಿ ಅವುಗಳಿಗೆ ವಿಧೇಯರಾಗಿರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡುವ ಯೆಹೋವನೇ ನಾನು. ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
8 E guardai os meus estatutos, e cumpri-os. Eu sou o Senhor que vos santifica.
9 “ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.
9 Quando um homem amaldiçoar a seu pai ou a sua mãe, certamente morrerá; amaldiçoou a seu pai ou a sua mãe; o seu sangue será sobre ele.
10 “ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!
10 Também o homem que adulterar com a mulher de outro, havendo adulterado com a mulher do seu próximo, certamente morrerá o adúltero e a adúltera.
11 ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.
11 E o homem que se deitar com a mulher de seu pai descobriu a nudez de seu pai; ambos certamente morrerão; o seu sangue será sobre eles.
12 “ಒಬ್ಬನು ತನ್ನ ಸೊಸೆಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವರಿಬ್ಬರೂ ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅವರು ಬಹಳ ಕೆಟ್ಟದಾದ ಲೈಂಗಿಕ ಪಾಪವನ್ನು ಮಾಡಿದವರಾಗಿದ್ದಾರೆ.
12 Semelhantemente, quando um homem se deitar com a sua nora, ambos certamente morrerão; fizeram confusão; o seu sangue será sobre eles.
13 “ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
13 Quando também um homem se deitar com outro homem, como com mulher, ambos fizeram abominação; certamente morrerão; o seu sangue será sobre eles.
14 “ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ.
14 E, quando um homem tomar uma mulher e a sua mãe, maldade é; a ele e a elas queimarão com fogo, para que não haja maldade no meio de vós.
15 “ಒಬ್ಬನು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು ಮತ್ತು ನೀವು ಪಶುವನ್ನು ಕೊಲ್ಲಬೇಕು.
15 Quando também um homem se deitar com um animal, certamente morrerá; e matareis o animal.
16 ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು. ಅವಳಿಗೆ ಮತ್ತು ಅದಕ್ಕೆ ಮರಣ ಶಿಕ್ಷೆಯಾಗಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
16 Também a mulher que se chegar a algum animal, para ajuntar-se com ele, aquela mulher matarás bem assim como o animal; certamente morrerão; o seu sangue será sobre eles.
17 “ಒಬ್ಬನು ತನ್ನ ಸಹೋದರಿಯನ್ನಾಗಲಿ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲಿ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಬಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದುಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು.
17 E, quando um homem tomar a sua irmã, filha de seu pai, ou filha de sua mãe, e vir a nudez dela, e ela a sua, torpeza é; portanto serão extirpados aos olhos dos filhos do seu povo; descobriu a nudez de sua irmã, levará sobre si a sua iniqüidade.
18 “ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕೆಂದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.
18 E, quando um homem se deitar com uma mulher no tempo da sua enfermidade, e descobrir a sua nudez, descobrindo a sua fonte, e ela descobrir a fonte do seu sangue, ambos serão extirpados do meio do seu povo.
19 “ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.)
19 Também a nudez da irmã de tua mãe, ou da irmã de teu pai não descobrirás; porquanto descobriu a sua parenta, sobre si levarão a sua iniqüidade.
20 “ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.
20 Quando também um homem se deitar com a sua tia descobriu a nudez de seu tio; seu pecado sobre si levarão; sem filhos morrerão.
21 “ತನ್ನ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸುವುದು ತಪ್ಪಾಗಿದೆ. ಅವನು ತನ್ನ ಸಹೋದರನಿಗೆ ಅವಮಾನ ಮಾಡಿದವನಾಗಿದ್ದಾನೆ. ಅವರಿಗೆ ಮಕ್ಕಳಾಗುವುದಿಲ್ಲ.
21 E quando um homem tomar a mulher de seu irmão, imundícia é; a nudez de seu irmão descobriu; sem filhos ficarão.
22 “ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ಆ ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.
22 Guardai, pois, todos os meus estatutos, e todos os meus juízos, e cumpri-os, para que não vos vomite a terra, para a qual eu vos levo para habitar nela.
23 ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!
23 E não andeis nos costumes das nações que eu expulso de diante de vós, porque fizeram todas estas coisas; portanto fui enfadado deles.
24 ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು!
24 E a vós vos tenho dito: Em herança possuireis a sua terra, e eu a darei a vós, para a possuirdes, terra que mana leite e mel. Eu sou o Senhor vosso Deus, que vos separei dos povos.
25 ಆದ್ದರಿಂದ ಶುದ್ಧವಾದ ಪ್ರಾಣಿಗಳನ್ನು ಅಶುದ್ಧವಾದ ಪ್ರಾಣಿಗಳಿಗಿಂತ ಭಿನ್ನವಾಗಿ ಕಾಣಬೇಕು. ನೀವು ಶುದ್ಧವಾದ ಪಕ್ಷಿಗಳನ್ನು ಅಶುದ್ಧವಾದ ಪಕ್ಷಿಗಳಿಗಿಂತ ಭಿನ್ನವಾಗಿ ಕಾಣಬೇಕು. ಆ ಅಶುದ್ಧವಾದ ಪಕ್ಷಿಗಳಲ್ಲಿ, ಪ್ರಾಣಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಪ್ರಾಣಿಗಳಲ್ಲಿ ಯಾವುದನ್ನೂ ತಿನ್ನಬೇಡಿರಿ. ನಾನು ಅವುಗಳನ್ನು ಅಶುದ್ಧವಾಗಿ ಮಾಡಿದ್ದೇನೆ.
25 Fareis, pois, diferença entre os animais limpos e imundos, e entre as aves imundas e as limpas; e as vossas almas não fareis abomináveis por causa dos animais, ou das aves, ou de tudo o que se arrasta sobre a terra; as quais coisas apartei de vós, para tê-las por imundas.
26 ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.
26 E ser-me-eis santos, porque eu, o Senhor, sou santo, e vos separei dos povos, para serdes meus.
27 “ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”
27 Quando, pois, algum homem ou mulher em si tiver um espírito de necromancia ou espírito de adivinhação, certamente morrerá; serão apedrejados; o seu sangue será sobre eles.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Levítico 20, comparar traduções ou montar um estudo — tudo direto pelo WhatsApp.