Levítico 21

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI

Sair da comparação
NVI Nova Versão Internacional
1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.
1 Disse ainda o Senhor a Moisés: "Diga o seguinte aos sacerdotes, os filhos de Arão: Um sacerdote não poderá tornar-se impuro por causa de alguém do seu povo que venha a morrer,
2 ಆದರೆ ಸತ್ತವನು ಅವನ ಹತ್ತಿರದ ಸಂಬಂಧಿಕರಲ್ಲಿ ಒಬ್ಬನಾಗಿದ್ದರೆ, ಆಗ ಅವನು ಆ ಹೆಣವನ್ನು ಮುಟ್ಟಬಹುದು. ಸತ್ತ ವ್ಯಕ್ತಿ ಅವನ ತಾಯಿ, ತಂದೆ, ಮಗ, ಮಗಳು, ಸಹೋದರ ಅಥವಾ
2 a não ser por um parente próximo, como mãe ou pai, filho ou filha, irmão,
3 ಮದುವೆಯಾಗದ ಸಹೋದರಿಯಾಗಿದ್ದರೆ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು. (ಈ ಸಹೋದರಿಗೆ ಗಂಡನಿಲ್ಲದಿರುವುದರಿಂದ ಅವಳು ಅವನಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. ಆದ್ದರಿಂದ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು.)
3 ou irmã virgem dependente dele por ainda não ter marido; por causa dela, poderá tornar-se impuro.
4 ಆದರೆ ಸತ್ತವನು ಕೇವಲ ಅವನ ಗುಲಾಮರಲ್ಲಿ ಒಬ್ಬನಾಗಿದ್ದರೆ ಯಾಜಕನು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದು.
4 Não poderá tornar-se impuro e contaminar-se por causa de parentes por casamento.
5 “ಯಾಜಕರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳಬಾರದು; ತಮ್ಮ ಗಡ್ಡದ ಪಾರ್ಶ್ವಗಳನ್ನು ಕತ್ತರಿಸಿ ವಿಕಾರಗೊಳಿಸಬಾರದು; ತಮ್ಮ ದೇಹಗಳಲ್ಲಿ ಯಾವ ಗಾಯ ಮಾಡಿಕೊಳ್ಳಬಾರದು.
5 "Os sacerdotes não raparão a cabeça, nem apararão as pontas da barba, nem farão cortes no corpo.
6 ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.
6 Serão santos ao seu Deus, e não profanarão o nome do seu Deus. Pelo fato de apresentarem ao Senhor as ofertas preparadas no fogo, ofertas de alimento do seu Deus, serão santos.
7 “ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಮದುವೆಯಾಗಬಾರದು.
7 "Não poderão tomar por mulher uma prostituta, uma moça que tenha perdido a virgindade, ou uma mulher divorciada do seu marido, porque o sacerdote é santo ao seu Deus.
8 ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.
8 Considerem-no santo, porque ele oferece o alimento do seu Deus. Considerem-no santo, porque eu, o Senhor, que os santifico, sou santo.
9 “ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.
9 "Se a filha de um sacerdote se corromper, tornando-se prostituta, desonra seu pai; será queimada com fogo.
10 “ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.
10 "O sumo sacerdote, aquele entre seus irmãos sobre cuja cabeça tiver sido derramado o óleo da unção, e que tiver sido consagrado para usar as vestes sacerdotais, não andará descabelado, nem rasgará as roupas em sinal de luto.
11 ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು.
11 Não entrará onde houver um cadáver. Não se tornará impuro, nem mesmo por causa do seu pai ou da sua mãe;
12 ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!
12 e não deixará o santuário do seu Deus, nem o profanará, porquanto foi consagrado pelo óleo da unção do seu Deus. Eu sou o Senhor.
13 “ಪ್ರಧಾನಯಾಜಕನು ಕನ್ಯೆಯಾಗಿರುವವಳನ್ನು ಮದುವೆಯಾಗಬೇಕು.
13 "A mulher que ele tomar terá que ser virgem.
14 ಪ್ರಧಾನಯಾಜಕನು ಬೇರೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಪ್ರಧಾನಯಾಜಕನು ವೇಶ್ಯಾ ಸ್ತ್ರೀಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಅಥವಾ ವಿಧವೆಯನ್ನಾಗಲಿ ಮದುವೆಯಾಗಬಾರದು. ಪ್ರಧಾನಯಾಜಕನು ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ಯೆಯನ್ನು ಮದುವೆಯಾಗಬೇಕು.
14 Não poderá ser viúva, nem divorciada, nem moça que perdeu a virgindade, nem prostituta, mas terá que ser uma virgem do seu próprio povo,
15 ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”
15 assim ele não profanará a sua descendência entre o seu povo. Eu sou o Senhor, que o santifico".
16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
16 Disse ainda o Senhor a Moisés:
17 “ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು.
17 "Diga a Arão: Pelas suas gerações, nenhum dos seus descendentes que tenha algum defeito poderá aproximar-se para trazer ao seu Deus ofertas de alimento.
18 ಯಾವ ಅಂಗವಿಕಲನೂ ಯಾಜಕನಾಗಿ ಸೇವೆಮಾಡಬಾರದು; ನನಗೆ ಯಜ್ಞಗಳನ್ನು ಅರ್ಪಿಸಬಾರದು. ಯಾಜಕರಾಗಿ ಸೇವೆ ಮಾಡಬಾರದವರು ಯಾರೆಂದರೆ: ಕುರುಡರು, ಕುಂಟರು, ತಮ್ಮ ಮುಖಗಳಲ್ಲಿ ಕೆಟ್ಟದಾದ ಗಾಯದ ಗುರುತುಗಳುಳ್ಳವರು, ಬಹಳ ಉದ್ದವಾದ ಕೈಕಾಲುಗಳುಳ್ಳವರು.
18 Nenhum homem que tenha algum defeito poderá aproximar-se: ninguém que seja cego ou aleijado, que tenha o rosto defeituoso ou o corpo deformado;
19 ಮುರಿದ ಕೈಕಾಲುಗಳುಳ್ಳವರು.
19 ninguém que tenha o pé ou a mão defeituosos,
20 ಗೂನು ಬೆನ್ನುಳ್ಳವರು, ದೇಹ ಬೆಳವಣಿಗೆ ನಿಂತುಹೋಗಿರುವವರು, ಕಣ್ಣು ದೋಷವುಳ್ಳವರು, ಕಜ್ಜಿತುರಿಗಳುಳ್ಳವರು ಅಥವಾ ಚರ್ಮರೋಗವುಳ್ಳವರು, ಬೀಜದೋಷವುಳ್ಳವರು.
20 ou que seja corcunda ou anão, ou que tenha qualquer defeito na vista, ou que esteja com feridas purulentas ou com fluxo, ou que tenha testículos defeituosos.
21 “ಆರೋನನ ಸಂತತಿಯವರಲ್ಲಿ ಅಂಗವಿಕಲರಾದ ಯಾರೂ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸಬಾರದು; ಅಂಥವನು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಕೂಡದು.
21 Nenhum descendente do sacerdote Arão que tenha qualquer defeito poderá aproximar-se para apresentar ao Senhor ofertas preparadas no fogo. Tem defeito; não poderá aproximar-se para trazê-las ao seu Deus.
22 ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.
22 Poderá comer o alimento santíssimo de seu Deus, e também o alimento santo;
23 ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”
23 contudo, por causa do seu defeito, não se aproximará do véu nem do altar, para que não profane o meu santuário. Eu sou o Senhor, que os santifico".
24 ಹೀಗೆ ಮೋಶೆಯು ಈ ಸಂಗತಿಗಳನ್ನು ಆರೋನನಿಗೂ ಅವನ ಪುತ್ರರಿಗೂ ಮತ್ತು ಇಸ್ರೇಲರೆಲ್ಲರಿಗೂ ಹೇಳಿದನು.
24 Foi isso que Moisés falou a Arão e a seus filhos e a todos os israelitas.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Levítico 21, comparar traduções ou montar um estudo — tudo direto pelo WhatsApp.