Levítico 22
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC
1 ದೇವರಾದ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
1 Depois, falou o Senhor a Moisés, dizendo:
2 “ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು, ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಆ ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು!
2 Dize a Arão e a seus filhos que se apartem das coisas santas dos filhos de Israel, que a mim me santificam, para que não profanem o nome da minha santidade. Eu sou o Senhor .
3 ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!
3 Dize-lhes: Todo homem, que entre as vossas gerações, de toda a vossa semente, se chegar às coisas santas que os filhos de Israel santificam ao Senhor , tendo sobre si a sua imundícia, aquela alma será extirpada de diante da minha face. Eu sou o Senhor .
4 “ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,
4 Ninguém da semente de Arão que for leproso ou tiver fluxo comerá das coisas santas, até que seja limpo; como também o que tocar alguma coisa imunda de cadáver ou aquele de que sair a semente da cópula;
5 ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ.
5 ou qualquer que tocar a algum réptil, pelo que se fez imundo, ou a algum homem, pelo que se fez imundo, segundo toda a sua imundícia.
6 ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.
6 O homem que o tocar será imundo até à tarde e não comerá das coisas santas, mas banhará a sua carne em água.
7 ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.
7 E, havendo-se o sol já posto, então, será limpo e depois comerá das coisas santas; porque este é o seu pão.
8 “ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!
8 O corpo morto e o dilacerado não comerá, para nele se não contaminar. Eu sou o Senhor .
9 “ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.
9 Guardarão, pois, o meu mandamento, para que por isso não levem pecado e morram nele, havendo-o profanado. Eu sou o Senhor que os santifico.
10 ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು.
10 Também nenhum estranho comerá das coisas santas; nem o hóspede do sacerdote, nem o jornaleiro comerão das coisas santas.
11 ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.
11 Mas, quando o sacerdote comprar alguma alma com o seu dinheiro, aquela comerá delas e o nascido na sua casa; estes comerão do seu pão.
12 ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು.
12 E, quando a filha do sacerdote se casar com homem estranho, ela não comerá da oferta movida das coisas santas.
13 ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.
13 Mas, quando a filha do sacerdote for viúva ou repudiada, e não tiver semente, e se houver tornado à casa de seu pai, como na sua mocidade, do pão de seu pai comerá; mas nenhum estranho comerá dele.
14 “ಒಬ್ಬನು ತಿಳಿಯದೆ ನೈವೇದ್ಯ ಪದಾರ್ಥವನ್ನು ತಿಂದರೆ ಅವನು ಆ ಪದಾರ್ಥವನ್ನೂ ಪದಾರ್ಥದ ಬೆಲೆಯ ಐದನೆಯ ಒಂದಂಶವನ್ನೂ ಅದಕ್ಕೆ ಸೇರಿಸಿ ಯಾಜಕನಿಗೆ ಕೊಡಬೇಕು.
14 E, quando alguém, por erro, comer a coisa santa, sobre ela acrescentará seu quinto e o dará ao sacerdote com a coisa santa.
15 “ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು.
15 Assim, não profanarão as coisas santas dos filhos de Israel, que oferecem ao Senhor ,
16 ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”
16 nem os farão levar a iniquidade da culpa, comendo as suas coisas santas; pois eu sou o Senhor que os santifico.
17 ಯೆಹೋವನು ಮೋಶೆಗೆ ಹೀಗೆಂದನು:
17 Falou mais o Senhor a Moisés, dizendo:
18 “ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,
18 Fala a Arão, e a seus filhos, e a todos os filhos de Israel e dize-lhes: Qualquer que, da casa de Israel ou dos estrangeiros em Israel, oferecer a sua oferta, quer dos seus votos, quer das suas ofertas voluntárias, que oferecerem ao Senhor em holocausto,
19 — ausente —
19 segundo a sua vontade, oferecerá macho sem mancha, das vacas, dos cordeiros ou das cabras.
20 — ausente —
20 Nenhuma coisa em que haja defeito oferecereis, porque não seria aceita a vosso favor.
21 “ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.
21 E, quando alguém oferecer sacrifício pacífico ao Senhor , separando das vacas ou das ovelhas um voto ou oferta voluntária, sem mancha será, para que seja aceito; nenhum defeito haverá nele.
22 ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.
22 O cego, ou quebrado, ou aleijado, ou verrugoso, ou sarnoso, ou cheio de impigens, este não oferecereis ao Senhor e deles não poreis oferta queimada ao Senhor sobre o altar.
23 “ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.
23 Porém boi ou gado miúdo, comprido ou curto de membros, poderás oferecer por oferta voluntária, mas por voto não será aceito.
24 “ಗಾಯಗೊಂಡ, ಜಜ್ಜಿದ ಅಥವಾ ಒಡೆದ ಬೀಜವುಳ್ಳ ಪಶುವನ್ನು ಯೆಹೋವನಿಗೆ ಅರ್ಪಿಸಬಾರದು. ಇದನ್ನು ನಿಮ್ಮ ಸ್ವಂತ ನಾಡಿನಲ್ಲಿ ಮಾಡಬಾರದು.
24 O machucado, ou moído, ou despedaçado, ou cortado não oferecereis ao Senhor ; não fareis isto na vossa terra.
25 “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”
25 Também da mão do estrangeiro nenhum manjar oferecereis ao vosso Deus, de todas estas coisas, pois a sua corrupção está nelas; falta nelas há; não serão aceitas a vosso favor.
26 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
26 Falou mais o Senhor a Moisés, dizendo:
27 “ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.
27 Quando nascer o boi, ou cordeiro, ou cabra, sete dias estará debaixo de sua mãe; depois, desde o dia oitavo em diante, será aceito por oferta queimada ao Senhor .
28 ಆದರೆ ನೀವು ಆ ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ.
28 Também boi ou gado miúdo, a ele e a seu filho não degolareis num dia.
29 “ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.
29 E, quando sacrificardes sacrifício de louvores ao Senhor , o sacrificareis de vossa vontade.
30 ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು!
30 No mesmo dia se comerá; nada deixareis ficar até à manhã. Eu sou o Senhor .
31 “ನನ್ನ ಆಜ್ಞೆಗಳನ್ನು ಜ್ಞಾಪಕ ಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ನಾನೇ ಯೆಹೋವನು!
31 Pelo que guardareis os meus mandamentos e os fareis. Eu sou o Senhor .
32 ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
32 E não profanareis o meu santo nome, para que eu seja santificado no meio dos filhos de Israel. Eu sou o Senhor que vos santifico,
33 ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”
33 que vos tirei da terra do Egito, para vos ser por Deus. Eu sou o Senhor .
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Levítico 22, comparar traduções ou montar um estudo — tudo direto pelo WhatsApp.