Levítico 27

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
1 Falou mais o Senhor a Moisés, dizendo:
2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.
2 Fala aos filhos de Israel e dize-lhes: Quando alguém fizer particular voto, segundo a tua avaliação serão as pessoas ao Senhor .
3 ಇಪ್ಪತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶೆಕೆಲ್ ಬೆಳ್ಳಿಯಾಗಿದೆ. (ಬೆಳ್ಳಿಯನ್ನು ಅಳೆಯಲು ಅಧಿಕೃತ ಅಳತೆಯನ್ನು ಉಪಯೋಗಿಸಬೇಕು.)
3 Se for a tua avaliação dum varão, da idade de vinte anos até à idade de sessenta, será a tua avaliação de cinquenta siclos de prata, segundo o siclo do santuário.
4 ಇಪ್ಪತ್ತರಿಂದ ಅರವತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಮೂವತ್ತು ಶೆಕೆಲ್‌ಗಳಾಗಿದೆ.
4 Porém, se for fêmea, a tua avaliação será de trinta siclos.
5 ಐದರಿಂದ ಇಪ್ಪತ್ತು ವರ್ಷದೊಳಗಿರುವ ಗಂಡಸಿನ ಬೆಲೆ ಇಪ್ಪತ್ತು ಶೆಕೆಲ್‌ಗಳಾಗಿದೆ. ಐದರಿಂದ ಇಪ್ಪತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಹತ್ತು ಶೆಕೆಲ್‌ಗಳಾಗಿದೆ.
5 E, se for de cinco anos até vinte, a tua avaliação dum varão será de vinte siclos, e a da fêmea, de dez siclos.
6 ಒಂದು ತಿಂಗಳಿಂದ ಐದು ವರ್ಷದೊಳಗಿನ ಗಂಡು ಮಗುವಿನ ಬೆಲೆ ಐದು ಶೆಕೆಲ್‌ಗಳಾಗಿದೆ. ಹೆಣ್ಣುಮಗುವಿನ ಬೆಲೆ ಮೂರು ಶೆಕೆಲ್‌ಗಳು.
6 E, se for de um mês até cinco anos, a tua avaliação dum varão será de cinco siclos de prata, e a tua avaliação da fêmea será de três siclos de prata.
7 ಅರವತ್ತು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಾದ ಪುರುಷನ ಬೆಲೆ ಹದಿನೈದು ಶೆಕೆಲ್‌ಗಳು. ಸ್ತ್ರೀಯ ಬೆಲೆ ಹತ್ತು ಶೆಕೆಲ್‌ಗಳು.
7 E, se for de sessenta anos e acima, do varão a tua avaliação será de quinze siclos, e a da fêmea, de dez siclos.
8 “ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.
8 Mas, se for mais pobre do que a tua avaliação, então, apresentar-se-á diante do sacerdote, para que o sacerdote o avalie; conforme o que alcançar a mão do que fez o voto, o avaliará o sacerdote.
9 “ಒಬ್ಬನು ಪಶುಗಳನ್ನು ಯೆಹೋವನಿಗೆ ಯಜ್ಞಕ್ಕಾಗಿ ಪ್ರತಿಷ್ಠಿಸಬಹುದು. ಯಾವನಾದರೂ ಅಂಥ ಪಶುವನ್ನು ತಂದರೆ, ಅದು ಪವಿತ್ರವಾಗುವುದು.
9 E, se for animal de que se oferece oferta ao Senhor , tudo quanto der dele ao Senhor será santo.
10 ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.
10 Não o mudará, nem o trocará bom por mau ou mau por bom; se, porém, em alguma maneira trocar animal por animal, o tal e o trocado serão ambos santos.
11 “ಯೆಹೋವನಿಗೆ ಸಮರ್ಪಿಸಕೂಡದ ಕೆಲವು ಪ್ರಾಣಿಗಳಿರುವವು. ಒಬ್ಬನು ಅಂಥ ಅಶುದ್ಧ ಪಶುಗಳಲ್ಲೊಂದನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದನ್ನು ಯಾಜಕನ ಬಳಿಗೆ ತರಬೇಕು.
11 E, se for algum animal imundo, dos que se não oferecem em oferta ao Senhor , então, apresentará o animal diante do sacerdote.
12 ಯಾಜಕನು ಆ ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.
12 E o sacerdote o avaliará, seja bom ou seja mau; segundo a avaliação do sacerdote, assim será.
13 ಹರಕೆ ಮಾಡಿದವನು ಪಶುವನ್ನು ಮರಳಿ ಕೊಂಡುಕೊಳ್ಳಬೇಕೆಂದಿದ್ದರೆ, ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
13 Porém, se em alguma maneira o resgatar, então, acrescentará o seu quinto além da tua avaliação.
14 “ಒಬ್ಬನು ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದಕ್ಕೆ ಬೆಲೆಯನ್ನು ನಿರ್ಣಯಿಸುವನು. ಮನೆಯು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.
14 E, quando algum santificar a sua casa para ser santa ao Senhor , o sacerdote a avaliará, seja boa, seja má; como o sacerdote a avaliar, assim será.
15 ಆದರೆ ಹರಕೆ ಮಾಡಿದವನು ಮನೆಯನ್ನು ಹಿಂದಕ್ಕೆ ಪಡೆಯಲು ಬಯಸಿದರೆ, ಆಗ ಅವನು ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಅದು ಅವನದಾಗುವುದು.
15 Mas, se o que santificou resgatar a sua casa, então, acrescentará o quinto a mais do dinheiro da tua avaliação, e será sua.
16 “ಒಬ್ಬನು ತನ್ನ ಹೊಲಗಳಲ್ಲಿ ಒಂದು ಭಾಗವನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದರಲ್ಲಿ ಬಿತ್ತುವುದಕ್ಕೆ ಬೇಕಾಗಿರುವ ಬೀಜಗಳನ್ನು ಆಧಾರ ಮಾಡಿಕೊಂಡು ಬೆಲೆಯನ್ನು ನಿಗದಿ ಮಾಡಬೇಕು. ಪ್ರತಿಯೊಂದು ಹೋಮೆರ್ (ಎರಡು ಖಂಡುಗ) ಜವೆಗೋಧಿಯನ್ನು ಉತ್ಪಾದಿಸುವ ಹೊಲವು ಐವತ್ತು ಶೆಕೆಲ್ ಬೆಲೆಬಾಳುವುದು.
16 Se também alguém santificar ao Senhor uma parte do campo da sua possessão, então, a tua avaliação será segundo a sua semente: um gômer de semente de cevada será avaliado por cinquenta siclos de prata.
17 ಒಬ್ಬನು ಜ್ಯೂಬಿಲಿ ಸಂವತ್ಸರದಲ್ಲಿ ತನ್ನ ಹೊಲವನ್ನು ಕೊಟ್ಟರೆ, ಆಗ ಅದರ ಬೆಲೆಯು ಯಾಜಕನು ತೀರ್ಮಾನಿಸಿದಷ್ಟು ಇರುವುದು.
17 Se santificar o seu campo desde o Ano do Jubileu, conforme a tua avaliação ficará.
18 ಆದರೆ ಒಬ್ಬನು ಜ್ಯೂಬಿಲಿಯ ನಂತರ ತನ್ನ ಹೊಲವನ್ನು ಕೊಟ್ಟರೆ, ಯಾಜಕನು ಅದರ ಸರಿಯಾದ ಬೆಲೆಯನ್ನು ಲೆಕ್ಕಹಾಕಬೇಕು. ಅವನು ಮುಂದಿನ ಜ್ಯೂಬಿಲಿ ಸಂವತ್ಸರಕ್ಕೆ ಇರುವ ವರ್ಷಗಳನ್ನು ಲೆಕ್ಕಹಾಕಿ ಅದರಿಂದ ಬೆಲೆಯನ್ನು ನಿರ್ಣಯಿಸಬೇಕು.
18 Mas, se santificar o seu campo depois do Ano do Jubileu, então, o sacerdote lhe contará o dinheiro conforme os anos restantes até ao Ano do Jubileu, e isto se abaterá da tua avaliação.
19 ಹೊಲವನ್ನು ಕೊಟ್ಟವನು ಅದನ್ನು ಮರಳಿ ಕೊಂಡುಕೊಳ್ಳಬೇಕೆಂದು ಬಯಸುವುದಾದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿ ಕೊಡಬೇಕು. ಆಗ ಹೊಲವು ತಿರುಗಿ ಅವನದಾಗುವುದು.
19 E, se aquele que santificou o campo de alguma maneira o resgatar, então, acrescentará o quinto a mais do dinheiro da tua avaliação, e ficará seu.
20 ಅವನು ಹೊಲವನ್ನು ಮರಳಿ ಕೊಂಡುಕೊಳ್ಳದಿದ್ದರೆ ಅದು ಯಾವಾಗಲೂ ಯಾಜಕರುಗಳಿಗೆ ಸೇರಿದ್ದಾಗಿರುತ್ತದೆ. ಭೂಮಿಯು ಮತ್ತೊಬ್ಬನಿಗೆ ಮಾರಲ್ಪಟ್ಟಿದ್ದರೆ, ಮೊದಲನೆಯ ವ್ಯಕ್ತಿಯು ಅದನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ.
20 E, se não resgatar o campo ou se vender o campo a outro homem, nunca mais se resgatará.
21 ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.
21 Porém, havendo o campo saído no Ano do Jubileu, será santo ao Senhor , como campo consagrado; a possessão dele será do sacerdote.
22 “ಒಬ್ಬನು ತಾನು ಕೊಂಡುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಪ್ರತಿಷ್ಠಿಸಿದರೆ,
22 E, se santificar ao Senhor o campo que comprou, e não for do campo da sua possessão,
23 ಯಾಜಕನು ಮುಂದಿನ ಜ್ಯೂಬಿಲಿ ಸಂವತ್ಸರದವರೆಗೆ ಇರುವ ವರ್ಷಗಳನ್ನು ಲೆಕ್ಕ ಹಾಕಿ ಅದರ ಬೆಲೆಯನ್ನು ನಿಗದಿ ಮಾಡಬೇಕು. ಆಗ ಭೂಮಿಯು ಯೆಹೋವನದಾಗಿರುವುದು.
23 então, o sacerdote lhe contará a soma da tua avaliação até ao Ano do Jubileu; e, no mesmo dia, dará a tua avaliação por santidade ao Senhor .
24 ಜ್ಯೂಬಿಲಿ ಸಂವತ್ಸರದಲ್ಲಿ, ಆ ಭೂಮಿಯು ಅದರ ಮೊದಲ ಯಜಮಾನನಿಗೆ ಅಂದರೆ ಯಾವ ಕುಟುಂಬವು ಆ ಭೂಮಿಯನ್ನು ಮೊದಲು ಹೊಂದಿತ್ತೋ ಆ ಕುಟುಂಬಕ್ಕೆ ಸೇರುವುದು.
24 No Ano do Jubileu, o campo tornará àquele de quem o comprou, àquele de quem era a possessão do campo.
25 “ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಆ ಬೆಲೆಗಳನ್ನು ಕೊಡಬೇಕು. ಒಂದು ಶೆಕೆಲ್‌ನ ಬೆಲೆಯನ್ನು ಇಪ್ಪತ್ತು ಗೇರಾ ತೂಕದ ಪ್ರಕಾರ ನೀವು ಯಾವಾಗಲೂ ನಿರ್ಣಯಿಸಬೇಕು.
25 E toda a tua avaliação se fará conforme o siclo do santuário; o siclo será de vinte geras.
26 “ಜನರು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ದನಗಳನ್ನು ಮತ್ತು ಕುರಿಗಳನ್ನು ಕೊಡಬಹುದು. ಆದರೆ ಪಶುವು ಚೊಚ್ಚಲಾದದ್ದಾಗಿದ್ದರೆ, ಅದು ಈಗಾಗಲೇ ಯೆಹೋವನದ್ದಾಗಿರುತ್ತದೆ. ಆದ್ದರಿಂದ ಜನರು ಅಂಥ ಪಶುಗಳನ್ನು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ಕೊಡಲಾಗುವುದಿಲ್ಲ.
26 Mas o primogênito de um animal, por já ser do Senhor , ninguém o santificará; seja boi ou gado miúdo, do Senhor é.
27 ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಆ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಆ ಪಶುವನ್ನು ಮಾರಬೇಕು.
27 Mas, se for de um animal imundo, o resgatará, segundo a tua estimação, e sobre ele acrescentará o seu quinto; e, se não se resgatar, vender-se-á segundo a tua estimação.
28 “ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಈ ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿವೆ.
28 Todavia, nenhuma coisa consagrada que alguém consagrar ao Senhor de tudo o que tem, de homem, ou de animal, ou do campo da sua possessão, se venderá nem resgatará; toda coisa consagrada será uma coisa santíssima ao Senhor .
29 ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು.
29 Toda coisa consagrada que for consagrada do homem não será resgatada; certamente morrerá.
30 “ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.
30 Também todas as dízimas do campo, da semente do campo, do fruto das árvores são do Senhor ; santas são ao Senhor .
31 ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಮರಳಿ ಪಡೆದುಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಮರಳಿ ಕೊಂಡುಕೊಳ್ಳಬೇಕು.
31 Porém, se alguém das suas dízimas resgatar alguma coisa, acrescentará o seu quinto sobre ela.
32 “ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು.
32 No tocante a todas as dízimas de vacas e ovelhas, de tudo o que passar debaixo da vara, o dízimo será santo ao Senhor .
33 ಆರಿಸಲ್ಪಟ್ಟ ಪಶುವು ಒಳ್ಳೆಯದೋ ಕೆಟ್ಟದ್ದೋ ಎಂದು ಅದರ ಮಾಲಿಕನು ಚಿಂತೆ ಮಾಡಬಾರದು. ಅವನು ಅದನ್ನು ಬದಲಾಯಿಸಬಾರದು. ಅವನು ಅದನ್ನು ಬದಲಾಯಿಸಲು ತೀರ್ಮಾನಿಸಿದರೆ, ಆಗ ಎರಡೂ ಪಶುಗಳು ಯೆಹೋವನದಾಗುತ್ತವೆ. ಆ ಪಶುವನ್ನು ಮರಳಿ ಕೊಂಡುಕೊಳ್ಳಲಾಗದು.”
33 Não esquadrinhará entre o bom e o mau, nem o trocará; mas, se em alguma maneira o trocar, o tal e o trocado serão santos; não serão resgatados.
34 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರೇಲರಿಗೆ ಕೊಟ್ಟ ಆಜ್ಞೆಗಳು ಇವೇ.
34 Estes são os mandamentos que o Senhor ordenou a Moisés, para os filhos de Israel, no monte Sinai.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Levítico 27, comparar traduções ou montar um estudo — tudo direto pelo WhatsApp.