Marcos 12

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.
1 E começou a falar-lhes em parábolas. Um homem plantou uma vinha, cercou-a com uma sebe, cavou nela um lagar, edificou uma torre, arrendou-a a vinhateiros e ausentou-se daquela terra.
2 “ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು.
2 A seu tempo enviou aos vinhateiros um servo, para receber deles uma parte do produto da vinha.
3 ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು.
3 Ora, eles prenderam-no, feriram-no e reenviaram-no de mãos vazias.
4 ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು.
4 Enviou-lhes de novo outro servo; também este feriram na cabeça e o cobriram de afrontas.
5 ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
5 O senhor enviou-lhes ainda um terceiro, mas o mataram. E enviou outros mais, dos quais feriram uns e mataram outros.
6 “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
6 Restava-lhe ainda seu filho único, a quem muito amava. Enviou-o também por último a ir ter com eles, dizendo: Terão respeito a meu filho!...
7 “ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ಈ ದ್ರಾಕ್ಷಿತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು,
7 Os vinhateiros, porém, disseram uns aos outros: Este é o herdeiro! Vinde, matemo-lo e será nossa a herança!
8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.
8 Agarrando-o, mataram-no e lançaram-no fora da vinha.
9 “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ.
9 Que fará, pois, o senhor da vinha? Virá e exterminará os vinhateiros e dará a vinha a outro.
10 ಪವಿತ್ರಗ್ರಂಥದಲ್ಲಿ ಬರೆದಿರುವಂತೆ,
10 Nunca lestes estas palavras da Escritura: A pedra que os construtores rejeitaram veio a tornar-se pedra angular.
11 ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’” ಕೀರ್ತನೆ. 118:22-23
11 Isto é obra do Senhor, e ela é admirável aos nossos olhos {Sal 117,22s}?
12 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.
12 Procuravam prendê-lo, mas temiam o povo; porque tinham entendido que a respeito deles dissera esta parábola. E deixando-o, retiraram-se.
13 ಅನಂತರ ಯೆಹೂದ್ಯನಾಯಕರು ಕೆಲವು ಫರಿಸಾಯರನ್ನು ಹಾಗೂ ಹೆರೋದ್ಯರ ಗುಂಪಿನಿಂದ ಕೆಲವರನ್ನು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲು ಕಳುಹಿಸಿದರು.
13 Enviaram-lhe alguns fariseus e herodianos, para que o apanhassem em alguma palavra.
14 ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
14 Aproximaram-se dele e disseram-lhe: Mestre, sabemos que és sincero e que não lisonjeias a ninguém; porque não olhas para as aparências dos homens, mas ensinas o caminho de Deus segundo a verdade. É permitido que se pague o imposto a César ou não? Devemos ou não pagá-lo?
15 ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.
15 Conhecendo-lhes a hipocrisia, respondeu-lhes Jesus: Por que me quereis armar um laço? Mostrai-me um denário.
16 ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.
16 Apresentaram-lho. E ele perguntou-lhes: De quem é esta imagem e a inscrição? De César, responderam-lhe.
17 ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.
17 Jesus então lhes replicou. Dai, pois, a César o que é de César e a Deus o que é de Deus. E admiravam-se dele.
18 ನಂತರ ಸದ್ದುಕಾಯರಲ್ಲಿ (ಸದ್ದುಕಾಯರು ಪುನರುತ್ಥಾನವಿಲ್ಲವೆಂದು ನಂಬುತ್ತಾರೆ.) ಕೆಲವರು ಯೇಸುವಿನ ಬಳಿಗೆ ಬಂದು,
18 Ora, vieram ter com ele os saduceus, que afirmam não haver ressurreição, e perguntaram-lhe:
19 “ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.
19 Mestre, Moisés prescreveu-nos: Se morrer o irmão de alguém, e deixar mulher sem filhos, seu irmão despo-se a viúva e suscite posteridade a seu irmão.
20 ಏಳು ಜನ ಸಹೋದರರಿದ್ದರು. ಮೊದಲನೆಯ ಸಹೋದರನು ಮದುವೆ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತುಹೋದನು.
20 Ora, havia sete irmãos; o primeiro casou e morreu sem deixar descendência.
21 ಆದ್ದರಿಂದ ಎರಡನೆಯ ಸಹೋದರನು ಆಕೆಯನ್ನು ಮದುವೆಯಾದನು. ಆದರೆ ಅವನೂ ಮಕ್ಕಳಿಲ್ಲದೆ ಸತ್ತುಹೋದನು. ಮೂರನೆಯ ಸಹೋದರನಿಗೂ ಹೀಗೆಯೇ ಆಯಿತು.
21 Então o segundo desposou a viúva, e morreu sem deixar posteridade. Do mesmo modo o terceiro.
22 ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿ ಆಕೆಯಲ್ಲಿ ಮಕ್ಕಳಿಲ್ಲದೆ ಸತ್ತುಹೋದರು. ಕೊನೆಗೆ ಆಕೆಯೂ ಸತ್ತುಹೋದಳು.
22 E assim tomaram-na os sete, e não deixaram filhos. Por último, morreu também a mulher.
23 ಹೀಗಿರಲು ಜನರು ಪುನರುತ್ಥಾನ ಹೊಂದಿದಾಗ ಆಕೆಯು ಯಾರ ಹೆಂಡತಿಯಾಗುವಳು?” ಎಂದರು.
23 Na ressurreição, a quem destes pertencerá a mulher? Pois os sete a tiveram por mulher.
24 ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.
24 Jesus respondeu-lhes: Errais, não compreendendo as Escrituras nem o poder de Deus.
25 ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ.
25 Na ressurreição dos mortos, os homens não tomarão mulheres, nem as mulheres, maridos, mas serão como os anjos nos céus.
26 ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.
26 Mas quanto à ressurreição dos mortos, não lestes no livro de Moisés como Deus lhe falou da sarça, dizendo: Eu sou o Deus de Abraão, o Deus de Isaac e o Deus de Jacó {Êx 3, 6}?
27 ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.”
27 Ele não é Deus de mortos, senão de vivos. Portanto, estais muito errados.
28 ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
28 Achegou-se dele um dos escribas que os ouvira discutir e, vendo que lhes respondera bem, indagou dele: Qual é o primeiro de todos os mandamentos?
29 ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು.
29 Jesus respondeu-lhe: O primeiro de todos os mandamentos é este: Ouve, Israel, o Senhor nosso Deus é o único Senhor;
30 ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮುಖ್ಯವಾದ ಆಜ್ಞೆ.
30 amarás ao Senhor teu Deus de todo o teu coração, de toda a tua alma, de todo o teu espírito e de todas as tuas forças.
31 ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.
31 Eis aqui o segundo: Amarás o teu próximo como a ti mesmo. Outro mandamento maior do que estes não existe.
32 ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು.
32 Disse-lhe o escriba: Perfeitamente, Mestre, disseste bem que Deus é um só e que não há outro além dele.
33 ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.
33 E amá-lo de todo o coração, de todo o pensamento, de toda a alma e de todas as forças, e amar o próximo como a si mesmo, excede a todos os holocaustos e sacrifícios.
34 ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.
34 Vendo Jesus que ele falara sabiamente, disse-lhe: Não estás longe do Reino de Deus. E já ninguém ousava fazer-lhe perguntas.
35 ಯೇಸು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಆತನು ಅವರಿಗೆ, “ಕ್ರಿಸ್ತನು ದಾವೀದನ ಮಗನೆಂದು ಧರ್ಮೋಪದೇಶಕರು ಹೇಳುವುದೇಕೆ?
35 Continuava Jesus a ensinar no templo e propôs esta questão: Como dizem os escribas que Cristo é o filho de Davi?
36 ‘ಪ್ರಭುವು ನನ್ನ ಪ್ರಭುವಿಗೆ,
36 Pois o mesmo Davi diz, inspirado pelo Espírito Santo: Disse o Senhor a meu Senhor: senta-te à minha direita, até que eu ponha os teus inimigos sob os teus pés {Sal 109,1}.
37 ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.
37 Ora, se o próprio Davi o chama Senhor, como então é ele seu filho? E a grande multidão ouvia-o com satisfação.
38 ಯೇಸು ತನ್ನ ಉಪದೇಶವನ್ನು ಮುಂದುವರಿಸಿ, “ಧರ್ಮೋಪದೇಶಕರ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ. ಅವರು ಪೇಟೆಬೀದಿಗಳಲ್ಲಿ ಜನರಿಂದ ಗೌರವ ಪಡೆಯಲು ಅಪೇಕ್ಷಿಸುತ್ತಾರೆ.
38 Ele lhes dizia em sua doutrina: Guardai-vos dos escribas que gostam de andar com roupas compridas, de ser cumprimentados nas praças públicas
39 ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ.
39 e de sentar-se nas primeiras cadeiras nas sinagogas e nos primeiros lugares nos banquetes.
40 ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.
40 Eles devoram os bens das viúvas e dão aparência de longas orações. Estes terão um juízo mais rigoroso.
41 ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು.
41 Jesus sentou-se defronte do cofre de esmola e observava como o povo deitava dinheiro nele; muitos ricos depositavam grandes quantias.
42 ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು ಅಂದರೆ ಒಂದು ಪೈಸೆಯನ್ನು ಹಾಕಿದಳು.
42 Chegando uma pobre viúva, lançou duas pequenas moedas, no valor de apenas um quadrante.
43 ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ.
43 E ele chamou os seus discípulos e disse-lhes: Em verdade vos digo: esta pobre viúva deitou mais do que todos os que lançaram no cofre,
44 ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.
44 porque todos deitaram do que tinham em abundância; esta, porém, pôs, da sua indigência, tudo o que tinha para o seu sustento.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Marcos 12, comparar traduções ou montar um estudo — tudo direto pelo WhatsApp.