Marcos 16
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF
1 ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.
1 E, passado o sábado, Maria Madalena, e Maria, mãe de Tiago, e Salomé, compraram aromas para irem ungi-lo.
2 ವಾರದ ಮೊದಲನೆಯ ದಿನ, ಮುಂಜಾನೆಯಲ್ಲಿಯೇ, ಅವರು ಸಮಾಧಿಗೆ ಹೊರಟರು. ಆಗ ಸೂರ್ಯೋದಯವಾಗಿದ್ದರೂ ಇನ್ನೂ ನಸುಕಾಗಿತ್ತು.
2 E, no primeiro dia da semana, foram ao sepulcro, de manhã cedo, ao nascer do sol.
3 ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು.
3 E diziam umas às outras: Quemnos revolverá a pedra da porta do sepulcro?
4 ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು.
4 E, olhando, viram que já a pedra estava revolvida; e era ela muito grande.
5 ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು.
5 E, entrando no sepulcro, viram um jovem assentado à direita, vestido de uma roupa comprida, branca; e ficaram espantadas.
6 ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.
6 Ele, porém, disse-lhes: Não vos assusteis; buscais a Jesus Nazareno, que foi crucificado; já ressuscitou, não está aqui; eis aqui o lugar onde o puseram.
7 ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.
7 Mas ide, dizei a seus discípulos, e a Pedro, que ele vai adiante de vós para a Galiléia; ali o vereis, como ele vos disse.
8 ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.
8 E, saindo elas apressadamente, fugiram do sepulcro, porque estavam possuídas de temor e assombro; e nada diziam a ninguém porque temiam.
9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.
9 E Jesus, tendo ressuscitado na manhã do primeiro dia da semana, apareceu primeiramente a Maria Madalena, da qual tinha expulsado sete demônios.
10 ಮರಿಯಳು ಹೋಗಿ ಆತನ ಶಿಷ್ಯರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಿದ್ದರು.
10 E, partindo ela, anunciou-o àqueles que tinham estado com ele, os quais estavam tristes, e chorando.
11 ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ.
11 E, ouvindo eles que vivia, e que tinha sido visto por ela, não o creram.
12 ನಂತರ, ಇಬ್ಬರು ಶಿಷ್ಯರು ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಯೇಸು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
12 E depois manifestou-se de outra forma a dois deles, que iam de caminho para o campo.
13 ಈ ಶಿಷ್ಯರು ಇತರ ಶಿಷ್ಯರ ಬಳಿಗೆ ಹಿಂತಿರುಗಿ, ಈ ವಿಷಯವನ್ನು ತಿಳಿಸಿದರು. ಆದರೆ ಆ ಶಿಷ್ಯರು ಅವರನ್ನು ನಂಬಲಿಲ್ಲ.
13 E, indo estes, anunciaram-no aos outros, mas nem ainda estes creram.
14 ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.
14 Finalmente apareceu aos onze, estando eles assentados juntamente, e lançou-lhes em rosto a sua incredulidade e dureza de coração, por não haverem crido nos que o tinham visto já ressuscitado.
15 ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.
15 E disse-lhes: Ide por todo omundo, pregai o evangelho a toda criatura.
16 ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.
16 Quem crer e for batizado será salvo; mas quem não crer será condenado.
17 ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.
17 E estes sinais seguirão aos que crerem: Em meu nome expulsarão os demônios; falarão novas línguas;
18 ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.
18 Pegarão nas serpentes; e, se beberem alguma coisa mortífera, não lhes fará dano algum; e porãoas mãos sobre os enfermos, e os curarão.
19 ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
19 Ora, o Senhor, depois de lhes ter falado, foi recebido no céu, e assentou-se à direita de Deus.
20 ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.
20 E eles, tendo partido, pregaram por todas as partes, cooperando com eles o Senhor, e confirmando a palavra com os sinais que se seguiram. Amém.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Marcos 16, comparar traduções ou montar um estudo — tudo direto pelo WhatsApp.