Marcos 1

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತ ಸುವಾರ್ತೆಯ ಆರಂಭವಿದು.
1 Princípio do evangelho de Jesus Cristo, Filho de Deus.
2 ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ.
2 Como está escrito no profeta Isaías: Eis que eu envio o meu anjo ante a tua face, o qual preparará o teu caminho diante de ti.
3 “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ,
3 Voz do que clama no deserto: Preparai o caminho do Senhor, endireitai as suas veredas.
4 ಅಂತೆಯೇ ಸ್ನಾನಿಕ ಯೋಹಾನನು ಬಂದು, ಅಡವಿಯಲ್ಲಿ ಜನರಿಗೆ, “ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ನಿಮಗೆ ಪಾಪಕ್ಷಮೆ ಆಗುವುದು” ಎಂದು ಉಪದೇಶಿಸುತ್ತಿದ್ದನು ಮತ್ತು ದೀಕ್ಷಾಸ್ನಾನ ಕೊಡುತ್ತಾ ಇದ್ದನು.
4 Apareceu João batizando no deserto e pregando o batismo de arrependimento, para remissão de pecados.
5 ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.
5 E toda a província da Judeia e todos os habitantes de Jerusalém iam ter com ele; e todos eram batizados por ele no rio Jordão, confessando os seus pecados.
6 ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು.
6 E João andava vestido de pelos de camelo e com um cinto de couro em redor de seus lombos, e comia gafanhotos e mel silvestre,
7 ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.
7 e pregava, dizendo: Após mim vem aquele que é mais forte do que eu, do qual não sou digno de, abaixando-me, desatar a correia das sandálias.
8 ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು.
8 Eu, em verdade, tenho-vos batizado com água; ele, porém, vos batizará com o Espírito Santo.
9 ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು.
9 E aconteceu, naqueles dias, que Jesus, tendo ido de Nazaré, da Galileia, foi batizado por João, no rio Jordão.
10 ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದುಬರುತ್ತಿರುವುದನ್ನು ಕಂಡನು.
10 E, logo que saiu da água, viu os céus abertos e o Espírito, que, como pomba, descia sobre ele.
11 ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ನೀನೇ ನನ್ನ ಪ್ರಿಯ ಮಗನು. ನಾನು ನಿನ್ನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
11 E ouviu-se uma voz dos céus, que dizia: Tu és o meu Filho amado, em quem me comprazo.
12 ಆಗ ದೇವರಾತ್ಮನು ಯೇಸುವನ್ನು ಅಡವಿಗೆ ನಡೆಸಿದನು.
12 E logo o Espírito o impeliu para o deserto.
13 ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.
13 E ali esteve no deserto quarenta dias, tentado por Satanás. E vivia entre as feras, e os anjos o serviam.
14 ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,
14 E, depois que João foi entregue à prisão, veio Jesus para a Galileia, pregando o evangelho do Reino de Deus
15 “ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.
15 e dizendo: O tempo está cumprido, e o Reino de Deus está próximo. Arrependei-vos e crede no evangelho.
16 ಯೇಸು ಗಲಿಲಾಯ ಸರೋವರದ ಬಳಿ ನಡೆದುಹೋಗುತ್ತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.
16 E, andando junto ao mar da Galileia, viu Simão e André, seu irmão, que lançavam a rede ao mar, pois eram pescadores.
17 ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿರಿ, ನಾನು ನಿಮ್ಮನ್ನು ಬೇರೆ ವಿಧದ ಬೆಸ್ತರನ್ನಾಗಿ ಮಾಡುವೆನು. ಇನ್ನು ಮೇಲೆ ನೀವು ಒಂದುಗೂಡಿಸುವುದು ಜನರನ್ನೇ, ಮೀನುಗಳನ್ನಲ್ಲ” ಎಂದು ಅವರಿಗೆ ಹೇಳಿದನು.
17 E Jesus lhes disse: Vinde após mim, e eu farei que sejais pescadores de homens.
18 ಆಗ ಅವರು ತಮ್ಮ ಬಲೆಗಳನ್ನು ಅಲ್ಲಿಯೇ ಬಿಟ್ಟು ಆತನನ್ನು ಹಿಂಬಾಲಿಸಿದರು.
18 E, deixando logo as suas redes, o seguiram.
19 ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.
19 E, passando dali um pouco mais adiante, viu Tiago, filho de Zebedeu, e João, seu irmão, que estavam no barco consertando as redes,
20 ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
20 e logo os chamou. E eles, deixando o seu pai Zebedeu no barco com os empregados, foram após ele.
21 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್‌ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.
21 Entraram em Cafarnaum, e, logo no sábado, indo ele à sinagoga, ali ensinava.
22 ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.
22 E maravilharam-se da sua doutrina, porque os ensinava como tendo autoridade e não como os escribas.
23 ಯೇಸು ಸಭಾಮಂದಿರದಲ್ಲಿದ್ದಾಗ, ದೆವ್ವದಿಂದ ಪೀಡಿತನಾಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು. ಅವನು,
23 E estava na sinagoga deles um homem com um espírito imundo, o qual exclamou, dizendo:
24 “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.
24 Ah! Que temos contigo, Jesus Nazareno? Vieste destruir-nos? Bem sei quem és: o Santo de Deus.
25 ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು.
25 E repreendeu-o Jesus, dizendo: Cala-te e sai dele.
26 ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಅರಚುತ್ತಾ ಅವನೊಳಗಿಂದ ಹೊರಬಂದಿತು.
26 Então, o espírito imundo, agitando-o e clamando com grande voz, saiu dele.
27 ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
27 E todos se admiraram, a ponto de perguntarem entre si, dizendo: Que é isto? Que nova doutrina é esta? Pois com autoridade ordena aos espíritos imundos, e eles lhe obedecem!
28 ಯೇಸುವಿನ ಸುದ್ದಿಯು ಗಲಿಲಾಯ ಪ್ರದೇಶದ ಎಲ್ಲೆಡೆಯಲ್ಲಿಯೂ ಹರಡಿತು.
28 E logo correu a sua fama por toda a província da Galileia.
29 ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು.
29 E logo, saindo da sinagoga, foram à casa de Simão e de André, com Tiago e João.
30 ಸೀಮೋನನ ಅತ್ತೆ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದಳು. ಅಲ್ಲಿನ ಜನರು ಅವಳ ಬಗ್ಗೆ ಯೇಸುವಿಗೆ ಹೇಳಿದರು.
30 E a sogra de Simão estava deitada, com febre; e logo lhe falaram dela.
31 ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು.
31 Então, chegando-se a ela, tomou-a pela mão e levantou-a; e a febre a deixou, e servia-os.
32 ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು.
32 E, tendo chegado a tarde, quando já estava se pondo o sol, trouxeram-lhe todos os que se achavam enfermos e os endemoninhados.
33 ಊರಿನ ಜನರೆಲ್ಲರೂ ಆ ಮನೆಯ ಮುಂದೆ ಒಟ್ಟುಗೂಡಿದರು.
33 E toda a cidade se ajuntou à porta.
34 ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.
34 E curou muitos que se achavam enfermos de diversas enfermidades e expulsou muitos demônios, porém não deixava falar os demônios, porque o conheciam.
35 ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.
35 E, levantando-se de manhã muito cedo, estando ainda escuro, saiu, e foi para um lugar deserto, e ali orava.
36 ತರುವಾಯ, ಸೀಮೋನ ಮತ್ತು ಅವನ ಗೆಳೆಯರು ಯೇಸುವನ್ನು ಹುಡುಕುತ್ತಾ ಹೋದರು.
36 E seguiram-no Simão e os que com ele estavam.
37 ಅವರು ಯೇಸುವನ್ನು ಕಂಡುಕೊಂಡು, “ಜನರೆಲ್ಲರೂ ನಿನ್ನನ್ನೇ ಎದುರು ನೋಡುತ್ತಿದ್ದಾರೆ!” ಎಂದು ಹೇಳಿದರು.
37 E, achando-o, lhe disseram: Todos te buscam.
38 ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಆ ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು.
38 E ele lhes disse: Vamos às aldeias vizinhas, para que eu ali também pregue, porque para isso vim.
39 ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.
39 E pregava nas sinagogas deles, por toda a Galileia, e expulsava os demônios.
40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.
40 E aproximou-se dele um leproso, que, rogando-lhe e pondo-se de joelhos diante dele, lhe dizia: Se queres, bem podes limpar-me.
41 ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು.
41 E Jesus, movido de grande compaixão, estendeu a mão, e tocou-o, e disse-lhe: Quero, sê limpo!
42 ಆ ಕೂಡಲೇ ಅವನಿಗೆ ಗುಣವಾಯಿತು.
42 E, tendo ele dito isso, logo a lepra desapareceu, e ficou limpo.
43 — ausente —
43 E, advertindo-o severamente, logo o despediu.
44 — ausente —
44 E disse-lhe: Olha, não digas nada a ninguém; porém vai, mostra-te ao sacerdote e oferece pela tua purificação o que Moisés determinou, para lhes servir de testemunho.
45 ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.
45 Mas, tendo ele saído, começou a apregoar muitas coisas e a divulgar o que acontecera; de sorte que Jesus já não podia entrar publicamente na cidade, mas conservava-se fora em lugares desertos; e de todas as partes iam ter com ele.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Marcos 1, comparar traduções ou montar um estudo — tudo direto pelo WhatsApp.