Marcos 5
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH
1 ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಗೆರಸೇನರ ಪ್ರಾಂತ್ಯಕ್ಕೆ ಹೋದರು.
1 Jesus e os discípulos chegaram à região de Gerasa, no lado leste do lago da Galileia.
2 ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.
2 Assim que Jesus saiu do barco, foi encontrar-se com ele um homem que estava dominado por um espírito mau.
3 ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.
3 O homem vinha do cemitério, onde estava morando. Ninguém conseguia prendê-lo, nem mesmo usando correntes.
4 ಜನರು ಅನೇಕ ಸಾರಿ ಅವನ ಕೈ ಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದರು. ಆದರೆ ಅವನು ಅವುಗಳನ್ನೆಲ್ಲ ಕಿತ್ತೊಗೆದುಬಿಟ್ಟನು. ಅವನನ್ನು ಹತೋಟಿಗೆ ತರುವ ಬಲಿಷ್ಠನು ಅಲ್ಲಿ ಯಾರೂ ಇರಲಿಲ್ಲ.
4 Muitas vezes já tinham amarrado as suas mãos e os seus pés com correntes de ferro, mas ele quebrava tudo, e ninguém conseguia dominá-lo.
5 ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.
5 Passava os dias e as noites nos montes e entre os túmulos, gritando e se ferindo de propósito com pedras.
6 ಯೇಸು ಬಹಳ ದೂರದಲ್ಲಿದ್ದಾಗಲೇ, ಅವನು ಆತನನ್ನು ಕಂಡು, ಆತನ ಬಳಿಗೆ ಓಡಿಹೋಗಿ ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿದನು.
6 Ele viu Jesus de longe, correu, caiu de joelhos diante dele
7 — ausente —
7 e gritou: — Jesus, Filho do Deus Altíssimo! O que o senhor quer de mim? Em nome de Deus eu peço: não me castigue!
8 — ausente —
8 Ele disse isso porque Jesus havia mandado: “Espírito mau, saia desse homem!”
9 ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು.
9 Jesus perguntou: Ele respondeu: — O meu nome é Multidão, porque somos muitos.
10 ಆ ಮನುಷ್ಯನ ಒಳಗಿದ್ದ ದೆವ್ವಗಳು ಆ ಪ್ರದೇಶದಿಂದ ತಮ್ಮನ್ನು ಹೊರಕ್ಕೆ ಕಳುಹಿಸದಂತೆ ಯೇಸುವಿನಲ್ಲಿ ಮತ್ತೆ ಮತ್ತೆ ಬೇಡಿಕೊಂಡವು.
10 E pedia com muita insistência a Jesus que não expulsasse os espíritos maus para fora daquela região.
11 ಅಲ್ಲಿಗೆ ಹತ್ತಿರವಿದ್ದ ಬೆಟ್ಟದ ಮೇಲೆ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.
11 Acontece que num morro perto dali havia muitos porcos comendo.
12 ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು.
12 Os espíritos pediram a Jesus com insistência: — Nos mande ficar naqueles porcos; nos deixe entrar neles!
13 ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.
13 Ele deixou, e os espíritos saíram do homem e entraram nos porcos. E estes, que eram quase dois mil, se atiraram morro abaixo, para dentro do lago, e se afogaram.
14 ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು.
14 Os homens que estavam tomando conta dos porcos fugiram e espalharam a notícia na cidade e nos campos. Muita gente foi ver o que havia acontecido.
15 ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.
15 Quando chegaram perto de Jesus, viram o homem que antes estava dominado por demônios; e ficaram espantados porque ele estava sentado, vestido e no seu perfeito juízo.
16 ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಈ ಕಾರ್ಯವನ್ನು ನೋಡಿದ್ದರು. ಈ ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.
16 Os que tinham visto tudo aquilo lhes contaram o que havia acontecido com o homem e com os porcos.
17 ಆಗ ಜನರು ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು.
17 Então começaram a pedir com insistência a Jesus que saísse da terra deles.
18 ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.
18 Quando ele estava entrando no barco, o homem curado pediu com insistência: — Me deixe ir com o senhor!
19 ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.
19 Mas Jesus não deixou e disse:
20 ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು.
20 Então ele foi embora e contava, na região das Dez Cidades , o que Jesus tinha feito por ele. E todos ficavam admirados.
21 ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು.
21 Jesus voltou para o lado oeste do lago, e muitas pessoas foram se encontrar com ele na praia.
22 ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,
22 Um homem chamado Jairo, chefe da sinagoga , foi e se jogou aos pés de Jesus,
23 “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.
23 pedindo com muita insistência: — A minha filha está morrendo! Venha comigo e ponha as mãos sobre ela para que sare e viva!
24 ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು.
24 E Jesus foi com ele. Uma grande multidão foi junto e o apertava de todos os lados.
25 ಆ ಜನರ ನಡುವೆ ಒಬ್ಬ ಸ್ತ್ರೀ ಇದ್ದಳು. ಆಕೆಗೆ ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿತ್ತು.
25 Chegou ali uma mulher que fazia doze anos que estava com uma hemorragia.
26 ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.
26 Havia gastado tudo o que tinha, tratando-se com muitos médicos. Estes a fizeram sofrer muito; mas, em vez de melhorar, ela havia piorado cada vez mais.
27 ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು.
27 Ela havia escutado falar de Jesus; então entrou no meio da multidão e, chegando por trás dele, tocou na sua capa ,
28 ಆ ಸ್ತ್ರೀಯು, “ಆತನ ಉಡುಪನ್ನು ಮುಟ್ಟಿದರೆ ಸಾಕು ನಾನು ಗುಣಮುಖಳಾಗುತ್ತೇನೆ” ಎಂದುಕೊಂಡದ್ದರಿಂದ
28 pois pensava assim: “Se eu apenas tocar na capa dele, ficarei curada.”
29 ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.
29 Logo o sangue parou de escorrer, e ela teve certeza de que estava curada.
30 ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು.
30 No mesmo instante Jesus sentiu que dele havia saído poder. Então virou-se no meio da multidão e perguntou:
31 ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.
31 Os discípulos responderam: — O senhor está vendo como esta gente o está apertando de todos os lados e ainda pergunta isso?
32 ಆದರೆ ಯೇಸು ತನ್ನನ್ನು ಸ್ಪರ್ಶಿಸಿದವರು ಯಾರೆಂದು ಇನ್ನೂ ನೋಡುತ್ತಲೇ ಇದ್ದನು.
32 Mas Jesus ficou olhando em volta para ver quem tinha feito aquilo.
33 ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.
33 Então a mulher, sabendo o que lhe havia acontecido, atirou-se aos pés dele, tremendo de medo, e contou tudo.
34 ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.
34 E Jesus disse:
35 ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.
35 Jesus ainda estava falando, quando chegaram alguns empregados da casa de Jairo e disseram: — Seu Jairo, a menina já morreu. Não aborreça mais o Mestre.
36 ಆದರೆ ಯೇಸು ಅವರ ಮಾತನ್ನು ಗಣನೆಗೆ ತಂದುಕೊಳ್ಳದೆ, ಸಭಾಮಂದಿರದ ಅಧಿಕಾರಿಗೆ, “ಹೆದರಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
36 Mas Jesus não se importou com a notícia e disse a Jairo:
37 ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು.
37 Jesus deixou que fossem com ele Pedro e os irmãos Tiago e João, e ninguém mais.
38 ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು.
38 Quando entraram na casa de Jairo, Jesus encontrou ali uma confusão geral, com todos chorando alto e gritando.
39 ಯೇಸು ಮನೆಯನ್ನು ಪ್ರವೇಶಿಸಿ, ಆ ಜನರಿಗೆ, “ನೀವು ಅಳುತ್ತಿರುವುದೇಕೆ? ಇಷ್ಟೊಂದು ಗದ್ದಲ ಮಾಡುತ್ತಿರುವುದೇಕೆ? ಈ ಹುಡುಗಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಎಂದು ಹೇಳಿದನು.
39 Então ele disse:
40 ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು.
40 Então eles começaram a caçoar dele. Mas Jesus mandou que todos saíssem e, junto com os três discípulos e os pais da menina, entrou no quarto onde ela estava.
41 ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)
41 Pegou-a pela mão e disse:
42 ಕೂಡಲೇ ಆ ಬಾಲಕಿ ಎದ್ದುನಿಂತು ನಡೆಯಲಾರಂಭಿಸಿದಳು. ಆ ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು.
42 No mesmo instante, a menina, que tinha doze anos, levantou-se e começou a andar. E todos ficaram muito admirados.
43 ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.
43 Então Jesus ordenou que de jeito nenhum espalhassem a notícia dessa cura. E mandou que dessem comida à menina.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Marcos 5, comparar traduções ou montar um estudo — tudo direto pelo WhatsApp.