Marcos 8

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಇನ್ನೊಂದು ಸಮಯದಲ್ಲಿ ಯೇಸುವಿನ ಜೊತೆಯಲ್ಲಿ ಅನೇಕ ಜನರಿದ್ದರು. ಆ ಜನರ ಬಳಿ ಊಟಕ್ಕೆ ಏನೂ ಇರಲಿಲ್ಲ. ಆದ್ದರಿಂದ ಯೇಸು ತನ್ನ ಶಿಷ್ಯರನ್ನು ಕರೆದು,
1 Naqueles dias, como fosse novamente numerosa a multidão, enão tivessem o que comer, Jesus convocou os discípulos e lhes disse:
2 “ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ.
2 Tenho compaixão deste povo. Já há três dias perseveram comigo e não têm o que comer.
3 ಇವರು ಏನನ್ನೂ ತಿನ್ನದೆ ಹಸಿವೆಯಲ್ಲಿಯೇ ಹೊರಟರೆ ದಾರಿಯಲ್ಲಿ ಬಳಲಿ ಹೋಗುವರು. ಈ ಜನರಲ್ಲಿ ಕೆಲವರು ಬಹಳ ದೂರದಿಂದ ಬಂದಿದ್ದಾರೆ” ಎಂದು ಹೇಳಿದನು.
3 Se os despedir em jejum para suas casas, desfalecerão no caminho; e alguns deles vieram de longe!
4 ಅದಕ್ಕೆ ಶಿಷ್ಯರು, “ಇಲ್ಲಿಗೆ ಯಾವ ಊರೂ ಸಮೀಪದಲ್ಲಿಲ್ಲ. ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರಲು ಸಾದ್ಯ?” ಎಂದು ಉತ್ತರಿಸಿದರು.
4 Seus discípulos responderam-lhe: Como poderá alguém fartá-los de pão aqui no deserto?
5 ಯೇಸು, “ನಿಮ್ಮ ಬಳಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದನು.
5 Mas ele perguntou-lhes: Quantos pães tendes? Sete, responderam.
6 ಯೇಸು ಆ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಹೇಳಿದನು. ನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ ಅವುಗಳನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟು, ಅವುಗಳನ್ನು ಜನರಿಗೆ ಹಂಚಬೇಕೆಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು.
6 Mandou então que o povo se assentasse no chão. Tomando os sete pães, deu graças, partiu-os e entregou-os a seus discípulos, para que os distribuíssem e eles os distribuíram ao povo.
7 ಶಿಷ್ಯರ ಬಳಿ ಕೆಲವು ಸಣ್ಣ ಮೀನುಗಳೂ ಇದ್ದವು. ಯೇಸು ಆ ಮೀನುಗಳಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ಅವುಗಳನ್ನೂ ಜನರಿಗೆ ಕೊಡಬೇಕೆಂದು ಶಿಷ್ಯರಿಗೆ ಹೇಳಿದನು.
7 Tinham também alguns peixinhos. Ele os abençoou e mandou também distribuí-los.
8 ಜನರೆಲ್ಲರೂ ಊಟಮಾಡಿ ತೃಪ್ತರಾದರು. ನಂತರ ತಿನ್ನದೆ ಉಳಿದಿದ್ದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.
8 Comeram e ficaram fartos, e dos pedaços que sobraram levantaram sete cestos.
9 ಅಲ್ಲಿ ಊಟ ಮಾಡಿದವರಲ್ಲಿ ಸುಮಾರು ನಾಲ್ಕು ಸಾವಿರ ಗಂಡಸರಿದ್ದರು. ಅವರು ಊಟಮಾಡಿದ ಮೇಲೆ, ಯೇಸು ಅವರನ್ನು ಕಳುಹಿಸಿಕೊಟ್ಟನು.
9 Ora, os que comeram eram cerca de quatro mil pessoas. Em seguida, Jesus os despediu.
10 ಬಳಿಕ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ದಲ್ಮನೂಥ ಪ್ರದೇಶಕ್ಕೆ ಹೋದನು.
10 E embarcando depois com seus discípulos, foi para o território de Dalmanuta.
11 ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.
11 Vieram os fariseus e puseram-se a disputar com ele e pediram-lhe um sinal do céu, para pô-lo à prova.
12 ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.
12 Jesus, porém, suspirando no seu coração, disse: Por que pede esta geração um sinal? Em verdade vos digo: jamais lhe será dado um sinal.
13 ನಂತರ ಯೇಸು ಫರಿಸಾಯರ ಬಳಿಯಿಂದ ಹೊರಟು ದೋಣಿಯಲ್ಲಿ ಸರೋವರದ ಆಚೆಯ ದಡಕ್ಕೆ ಹೋದನು.
13 Deixou-os e seguiu de barca para a outra margem.
14 ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ.
14 Aconteceu que eles haviam esquecido de levar pães consigo. Na barca havia um único pão.
15 ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು.
15 Jesus advertiu-os: Abri os olhos e acautelai-vos do fermento dos fariseus e do fermento de Herodes!
16 ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
16 E eles comentavam entre si que era por não terem pão.
17 ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?
17 Jesus percebeu-o e disse-lhes: Por que discutis por não terdes pão? Ainda não tendes refletido nem compreendido? Tendes, pois, o coração insensível?
18 ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ.
18 Tendo olhos, não vedes? E tendo ouvidos, não ouvis? Não vos lembrais mais?
19 ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು.
19 Ao partir eu os cinco pães entre os cinco mil, quantos cestos recolhestes cheios de pedaços? Responderam-lhe: Doze.
20 “ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು.
20 E quando eu parti os sete pães entre os quatro mil homens, quantos cestos de pedaços levantastes? Sete, responderam-lhe.
21 ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು.
21 Jesus disse-lhes: Como é que ainda não entendeis?...
22 ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.
22 Chegando eles a Betsaida, trouxeram-lhe um cego e suplicaram-lhe que o tocasse.
23 ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.
23 Jesus tomou o cego pela mão e levou-o para fora da aldeia. Pôs-lhe saliva nos olhos e, impondo-lhe as mãos, perguntou-lhe: Vês alguma coisa?
24 ಆ ಕುರುಡನು ತಲೆಯೆತ್ತಿ ನೋಡಿ, “ಹೌದು, ನನಗೆ ಜನರು ಕಾಣುತ್ತಾರೆ. ಅವರು ಮರಗಳಂತೆ ಕಂಡರೂ ನಡೆದಾಡುತ್ತಿದ್ದಾರೆ” ಎಂದು ಹೇಳಿದನು.
24 O cego levantou os olhos e respondeu: Vejo os homens como árvores que andam.
25 ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
25 Em seguida, Jesus lhe impôs as mãos nos olhos e ele começou a ver e ficou curado, de modo que via distintamente de longe.
26 ಯೇಸು ಅವನಿಗೆ, “ನೀನು ನೇರವಾಗಿ ಮನೆಗೆ ಹೋಗು, ಊರೊಳಗೆ ಹೋಗಬೇಡ” ಎಂದು ಹೇಳಿ ಕಳುಹಿಸಿದನು.
26 E mandou-o para casa, dizendo-lhe: Não entres nem mesmo na aldeia.
27 ಯೇಸು ಮತ್ತು ಆತನ ಶಿಷ್ಯರು ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಸಮೀಪದಲ್ಲಿರುವ ಊರುಗಳಿಗೆ ಹೋದರು. ಅವರು ಪ್ರಯಾಣ ಮಾಡುತ್ತಿರುವಾಗ, ಯೇಸು ತನ್ನ ಶಿಷ್ಯರನ್ನು, “ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
27 Jesus saiu com os seus discípulos para as aldeias de Cesaréia de Filipe, e pelo caminho perguntou-lhes: Quem dizem os homens que eu sou?
28 ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.
28 Responderam-lhe os discípulos: João Batista; outros, Elias; outros, um dos profetas.
29 ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು.
29 Então perguntou-lhes Jesus: E vós, quem dizeis que eu sou? Respondeu Pedro: Tu és o Cristo.
30 ಯೇಸು ತನ್ನ ಶಿಷ್ಯರಿಗೆ, “ನಾನು ಯಾರೆಂಬುದನ್ನು ಯಾರಿಗೂ ಹೇಳಬೇಡಿ” ಎಂದು ಹೇಳಿದನು.
30 E ordenou-lhes severamente que a ninguém dissessem nada a respeito dele.
31 ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.
31 E começou a ensinar-lhes que era necessário que o Filho do homem padecesse muito, fosse rejeitado pelos anciãos, pelos sumos sacerdotes e pelos escribas, e fosse morto, mas ressuscitasse depois de três dias.
32 ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ.
32 E falava-lhes abertamente dessas coisas. Pedro, tomando-o à parte, começou a repreendê-lo.
33 ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.
33 Mas, voltando-se ele, olhou para os seus discípulos e repreendeu a Pedro: Afasta-te de mim, Satanás, porque teus sentimentos não são os de Deus, mas os dos homens.
34 ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.
34 Em seguida, convocando a multidão juntamente com os seus discípulos, disse-lhes: Se alguém me quer seguir, renuncie-se a si mesmo, tome a sua cruz e siga-me.
35 ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.
35 Porque o que quiser salvar a sua vida, perdê-la-á; mas o que perder a sua vida por amor de mim e do Evangelho, salvá-la-á.
36 ಒಬ್ಬನು ಪ್ರಪಂಚವನ್ನೆಲ್ಲಾ ಸಂಪಾದಿಸಿಕೊಂಡು ತನ್ನ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಪ್ರಯೋಜನವೇನು?
36 Pois que aproveitará ao homem ganhar o mundo inteiro, se vier a perder a sua vida?
37 ಒಬ್ಬನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಸಾಧ್ಯವೇ?
37 Ou que dará o homem em troca da sua vida?
38 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.
38 Porque, se nesta geração adúltera e pecadora alguém se envergonhar de mim e das minhas palavras, também o Filho do homem se envergonhará dele, quando vier na glória de seu Pai com os seus santos anjos.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Marcos 8, comparar traduções ou montar um estudo — tudo direto pelo WhatsApp.