Mateus 12
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs AAI
1 ಅಂದು ಸಬ್ಬತ್ ದಿನ. ಯೇಸು ಧಾನ್ಯದ ಹೊಲಗಳ ಮಾರ್ಗವಾಗಿ ನಡೆದುಹೋಗುತ್ತಿದ್ದನು. ಯೇಸುವಿನ ಶಿಷ್ಯರು ಆತನೊಂದಿಗಿದ್ದರು. ಅವರು ಹಸಿದಿದ್ದರು. ಆದ್ದರಿಂದ ಶಿಷ್ಯರು ತೆನೆಗಳನ್ನು ಕಿತ್ತುಕೊಂಡು ತಿನ್ನತೊಡಗಿದರು.
1 Veya bai’ab na’atube sawar ufunamaim, Jesu Baiyarir Ana Veya sanabey wanawanah remor inan ana bai’ufununayah a himorob, basit sanabey afa hirut hikeb ro’oro’oh hibow hi’aa.
2 ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.
2 Naatu ofafar bai’obaibiyenayah hi’itih basit Jesu hi’u, “A bai’ufununayah ku’itih, abis tisisinaf i ata ofafar te’a’a’stu’utu’ub, anayabin boun i Baiyarir ana veya.
3 ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ?
3 — ausente —
4 ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.
4 — ausente —
5 ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?
5 Naatu Moses ana ofafar ta kwaiyab kwa’itin? Baiyarir ana veya firis terun Tafaror Bar teyayabuna men ofafar te’a’astu’ub? En.
6 ಆದರೆ ದೇವಾಲಯಕ್ಕಿಂತಲೂ ಹೆಚ್ಚಿನವನು ಇಲ್ಲಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.
6 Baise boun i a tur ao’owen, sawar gagamin anababatun i na tit, men iti Tafaror Bar na’atube’emih.
7 ‘ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು’ ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.
7 Buk Atamaninamaim i iti na’atube eo, ‘Kabeber i akokok men sibor.’ Kwa iti sawar yabin anababatun kwatasoso’ob na’at sabuw gewasih boro men kwatakusairih.
8 “ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.
8 Anayabin Orot Natun i Baiyarir Tamah anababatun.”
9 ಯೇಸು ಆ ಸ್ಥಳವನ್ನು ಬಿಟ್ಟು ಅವರ ಸಭಾಮಂದಿರದೊಳಕ್ಕೆ ಹೋದನು.
9 Jesu nati efan itumar na hai Kou’ay Bar ta wananwanan run,
10 ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.
10 orot ta uman murubin ma’ama’amaim, naatu sabuw afa nati’imaim hima’am i ef hinunuwet Jesu gamin uwin isan, imih Jesu hibatiy hio, “It ata ofafaramaim Baiyarir ana veya orot babin boro taniyawas ai en?”
11 ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.
11 Baise Jesu iyafutih eo, “Bo o orot ta a sheep Baiyarir ana veya hub tare’er, boro itatain tayen o itihamiy ta’in tamorob?
12 ಮನುಷ್ಯನು ಕುರಿಗಿಂತ ಎಷ್ಟೋ ಬೆಲೆಯುಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್‌ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರಕೊಟ್ಟನು.
12 Orot ana yawas i ra’at kwanekwan men for na’atube’emih. Isan imih Baiyarir ana veya orot babin tanabibais i men tasisinaf kakaf ofafar ta’a’astu’ubimih.”
13 ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು.
13 Imaibo orot uman murubin isan eo, “Uma ku’otofair a’itin.” Naatu orot uman otofair naatu uman igewasin uman rounane na’atube matar.
14 ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.
14 Basit Pharisee Jesu hihamiy hitit ufun, rabin morob isan hiyakitifuw.
15 ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.
15 Jesu rabinamih hiyayanuw tur nowar naatu efan nati ihamiy sa’ab in, sabuw rou’ay gagamin na’in hi’itin hi’ufunun bairi hinan, iyabowat hisawow hinan etei iyawasih.
16 ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು.
16 Naatu eo fafarih eo, “Sabuw afa hai tur men kwana’owenamih.
17 ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ:
17 Iti i abisa dinab orot Isaiah ana bukamaim kikirum na iturobe.
18 “ಇಗೋ, ನನ್ನ ಸೇವಕನು.
18 ‘Iti orot i ayu isau bowamih arubin,
19 ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ.
19 I boro men nagam naatu boro men fanan aumetawat niwow;
20 ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ;
20 Sawasaw ririmih hikimow tere’er boro men na’abar faifiyen,
21 ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.” ಯೆಶಾಯ 42:1-4
21 Naatu sabuw etei hai not hai baitumatum i biyanamaim hinayai.’”
22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.
22 Imaibo sabuw afa orot ta matan fim naatu demon awan gugin toun bububur ma’am hibai hina Jesu biyan hitit iyawas naatu misir tur eo naatu matan igewasin nuw.
23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.
23 Sabuw rau’ay gagamin na’in Jesu abisa iwa’an hi’i’itin hai hikasiy ra’at hio, “Iti orotom David uwan ta?”
24 ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.
24 Baise Pharisees hinonowar hio, “Iti orot demon enununih, anayabin demon hai ukwarin wabin Beelzebul fair itin, nati esisinaf.”
25 ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.
25 Jesu abisa hinotanot so’ob, naatu uwih eo, “Tafaram ta’imon hinakusib rou’ab namatar hinabiyow boro men manin hiniyowamih, naatu bar meraramaim o ain uf rara’amaim hinakusib hinabiyow hai ma boro hini’afiy.
26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?
26 Imih Demon Ana Aiwob wanawananamaim hinakusib taiyuwih hinabiyow, i ana aiwob wanawanan ana fair boro naririm.
27 ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.
27 Naatu kwa i ayu Beelzebul fair baitu demon nunih kwarouw kwa’o. Bo kwa a bai’ufununayah i yait ana fairamaim demon tenununih? Isan imih kwa taiyuw abai’ufununayah hai sinafumaim ebi’obaiyi God ana baibatiyen i wan kwamara’at.
28 ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.
28 Baise ayu i God Anunin Kakafiyin ana fairamaim demon anununih, imih nati ebi’obaiyit mar ana aiwob i na tit kwa wanawananamaim.
29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.
29 “Orot fairin ana bar boro men asir hinarun ana sawar hinabainomih, baise wantoro’ot orot hinab hinafatum nabat, imaibo ana sawar hinabainuw.
30 ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.
30 “Orot yait ayu airi men abita’imon i ayu au wosai, naatu orot yait men ayu ibaisu airi bobaituw abigenamih, nati orot i wasgeyayan.
31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.
31 Ana’an nati isan imih a tur ao’owen, bowabow kakafih ta ta naatu bai’ib tur ta ta God boro nanotawiyen, baise orot yait Anun Kakafiyin ni’ib isan tur kakafin na’o, i ana bowabow kakafih boro men nanotawiyimih.
32 ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.
32 Naatu orot yait Orot Natun isan tur kakafin na’o nabigigim boro ana bowabow kakafin nanotawiyen, baise orot yait God Anun Kakafiyin isan na’o nabi’iyab, i boro tafaramamaim men nanotawiy na’atube maramaim.
33 “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.
33 “A ai inakaif gewas boro ro’on gewasin inab, a ai men inakaif gewas ro’on boro kakafin inab, anayabin ai i boro ro’onamaim ina’inan.
34 ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.
34 Kwa i tuwamorob foufuh, dogor wanawanan kakafin ema’am boro mi’itube tur gewasih kwana’o. Anayabin abisa dogor wanawanan ema’am i awamaim etitit.
35 ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.
35 Orot gewasin ana bar wanawanan sawar gewasih ya ti’inu’in boro nabow naya taiten, naatu orot kakafin ana bar wanawanan sawar kakafih ya ti’inu’in boro naya taiten.
36 ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.
36 Imih a tur ao’owen, baibatebat ana maramaim sabuw etei awahimaim tur abisa hi’o boro God ana tur hina’owen aisim nati tur hi’o.
37 ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.
37 Naatu o taiyuw a tur io’omaim God boro nibatiyi, naatu o taiyuw a turamaim boro naorereb o i gewas o kakaf.”
38 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.
38 Imaibo Pharisee naatu Ofafar bai’obaiyenayah afa himisir hi’o, “Bai’obaiyenayan, aki akokok ina’inan ta iniwa’an ana’itin.”
39 ಯೇಸು, “ದುಷ್ಟರು ಮತ್ತು ಪಾಪಿಗಳು ಸೂಚಕಕಾರ್ಯವನ್ನು ಅಪೇಕ್ಷಿಸುತ್ತಾರೆ. ಆದರೆ ಅವರಿಗೆ ಒಂದು ಸೂಚಕಕಾರ್ಯವನ್ನೂ ಗುರುತಿಗಾಗಿ ತೋರಿಸಲಾಗುವುದಿಲ್ಲ.
39 Baise Jesu iyafut eo, “Kwa iti mar boun nan ana sabuw a fanasair ra’at, ina’inan itinamih kwa’o. Baise ina’inan boro men ta kwana’itinamih, ina’inan ta’imon nati dinab orot Jonah biyanamaim kwa’itinika.
40 ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.
40 Jonah siy gagamin tonan yan wanawanan in fai tounu auyit tounu na’atube, Orot Natun boro fai tounu auyit tounu me wanawanan na’in.
41 ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.
41 Jonah binan Nineveh sabuw hinonowar ufunamaim hai bowabow kakafih hisisinaf etei hihamiyen, imih baibatebat ana veya boro hinamisir kwa kwabiwa’an kakaf isan boro hina’uwi, anayabin binan iti boun abit i men marasika Jonah bibinan na’atube’emih!
42 “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.
42 Na’atube tafaram Sheba hai aiwob babin Solomon ana binan gewasin nowaramih ana tafaram ef yok na’in ihamiy na tur nowar, imih baibatebat ana veya boro namisir, kwabiwa’an kakaf isan na’uwi, anayabin Solomon bibinan i men boun ayu abibinan na’atube’emih!
43 “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.
43 “Demon kakafin orot biyanamaim ema’am tenun etit i boro watu owararinamaim ma baiyarir isan ana efan nanuwet, naatu efan men natitita’ur na’at,
44 ಆಗ ಅದು, ‘ನಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದು ಅಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.
44 i boro na’o, ‘Ayu boro anamatabir maiye au ubar anan.’ Naatu namatabir nan ana bar natitit, ana bar wanawanan i owararin naatu hirereb hiyabuna inu’in boro na’itin.
45 ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.
45 Imaibo boro namatabir maiye demon kakafih anababatun etei seven nanawiyih bairi hinan nati bar hinasusuw hinama. Naatu nati orot i boro na’af narauwabon men marasika ma’am na’atube’emih. Imih iti sabuw boun hima kakafih tesisinaf boro isah na’atube namatar.”
46 ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.
46 Jesu eo, sabuw hima hinonowar ana tur baisawarina’e, hinah taitin hina hitit ufun hibat hi’o, “Aki akokok Jesu bairi ana’o.”
47 ಒಬ್ಬನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾದಿದ್ದಾರೆ, ಅವರು ನಿನ್ನೊಂದಿಗೆ ಮಾತಾಡಬೇಕೆಂದಿದ್ದಾರೆ” ಎಂದನು.
47 Basit orot ta run Jesu iu, “Hinat taiti hina ufun tebatabat, tekokok bairi kwana’o.”
48 ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಉತ್ತರಕೊಟ್ಟು,
48 Jesu orot iya’afut eo, “Ayu hinai naatu taitu anababatun ana’o inanowar.”
49 ತನ್ನ ಶಿಷ್ಯರ ಕಡೆಗೆ ಕೈ ತೋರಿಸಿ, “ನೋಡಿ! ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.
49 Imaibo ana bai’ufununayah isah uman fufunih eo, “Ayu hinai naatu taitu i iti tema’am ku’itih.
50 ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು.
50 Orot yait ayu Tamai maramaim eo na’atube fanan bai esisinaf i ayu taiu, ayu rubu naatu ayu hinai.”
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 12, comparar traduções ou montar um estudo — tudo direto pelo WhatsApp.