Mateus 14
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA
1 ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.
1 Por aquele tempo, o tetrarca Herodes soube da fama de Jesus
2 ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.
2 e disse aos que o serviam: — Este é João Batista. Ele ressuscitou dos mortos, e, por isso, forças miraculosas operam nele.
3 ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.
3 Porque Herodes, havendo prendido João, o amarrou e pôs na prisão, por causa de Herodias, mulher do seu irmão Filipe.
4 ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.
4 Pois João lhe dizia: “Você não tem o direito de viver com ela.”
5 ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.
5 Embora Herodes quisesse matá-lo, tinha medo do povo, porque consideravam João como profeta.
6 ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.
6 Mas, quando chegou o dia do aniversário de Herodes, a filha de Herodias dançou diante de todos e agradou a Herodes.
7 ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು.
7 Este prometeu, com juramento, dar-lhe o que ela pedisse.
8 ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ಈ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು.
8 Então ela, instigada por sua mãe, disse: — Dê-me, aqui, num prato, a cabeça de João Batista.
9 ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.
9 O rei ficou triste, mas, por causa do juramento e dos que estavam com ele à mesa, ordenou que o pedido fosse atendido.
10 ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು.
10 Assim, deu ordens para que João fosse decapitado na prisão.
11 ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು.
11 A cabeça foi trazida num prato e dada à jovem, que a levou à sua mãe.
12 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.
12 Então vieram os discípulos de João, levaram o corpo e o sepultaram; depois, foram e anunciaram isso a Jesus.
13 ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.
13 Jesus, ouvindo isto, retirou-se dali num barco para um lugar deserto, à parte. Ao saberem disso, as multidões vieram das cidades seguindo-o por terra.
14 ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.
14 Ao desembarcar, Jesus viu uma grande multidão, compadeceu-se dela e curou os seus enfermos.
15 ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.
15 Ao cair da tarde, os discípulos se aproximaram de Jesus e disseram: — Este lugar é deserto, e já é tarde. Mande as multidões embora, para que, indo pelas aldeias, comprem para si o que comer.
16 ಯೇಸು, “ಜನರು ಹೋಗುವುದು ಬೇಡ. ನೀವೇ ಅವರಿಗೆ ಸ್ವಲ್ಪ ಊಟವನ್ನು ಕೊಡಿ” ಎಂದು ಹೇಳಿದನು.
16 Jesus, porém, lhes disse:
17 ಆಗ ಶಿಷ್ಯರು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ” ಎಂದು ಉತ್ತರಕೊಟ್ಟರು.
17 Mas eles responderam: — Não temos aqui senão cinco pães e dois peixes.
18 ಯೇಸು, “ಆ ರೊಟ್ಟಿ ಮತ್ತು ಮೀನುಗಳನ್ನು ನನ್ನ ಬಳಿಗೆ ತನ್ನಿರಿ” ಅಂದನು.
18 Então Jesus disse:
19 ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.
19 E, tendo mandado que a multidão se assentasse sobre a relva, pegando os cinco pães e os dois peixes, erguendo os olhos para o céu, os abençoou. Depois, tendo partido os pães, deu-os aos discípulos, e estes deram às multidões.
20 ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
20 Todos comeram e se fartaram, e ainda recolheram doze cestos cheios dos pedaços que sobraram.
21 ಊಟ ಮಾಡಿದವರಲ್ಲಿ ಹೆಂಗಸರು ಮತ್ತು ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದುಸಾವಿರ ಇದ್ದರು.
21 E os que comeram eram cerca de cinco mil homens, além de mulheres e crianças.
22 ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
22 Logo a seguir, Jesus fez com que os discípulos entrassem no barco e fossem adiante dele para o outro lado, enquanto ele despedia as multidões.
23 ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.
23 E, tendo despedido as multidões, ele subiu ao monte, a fim de orar sozinho. Ao cair da tarde, lá estava ele, só.
24 ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.
24 Entretanto, o barco já estava longe, a uma boa distância da terra, açoitado pelas ondas; porque o vento era contrário.
25 ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು.
25 De madrugada, Jesus foi até onde eles estavam, andando sobre o mar.
26 ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದ ಆತನನ್ನು ಕಂಡ ಶಿಷ್ಯರು ಭೂತವೆಂದು ಭಾವಿಸಿ ಭಯದಿಂದ ಕೂಗಿಕೊಂಡರು.
26 Os discípulos, porém, vendo-o andar sobre o mar, ficaram apavorados e disseram: — É um fantasma! E, tomados de medo, gritaram.
27 ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.
27 Mas Jesus imediatamente lhes disse:
28 ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು.
28 Então Pedro disse: — Se é o Senhor mesmo, mande que eu vá até aí, andando sobre as águas.
29 ಯೇಸು, “ಪೇತ್ರನೇ, ಬಾ” ಅಂದನು.
29 Jesus disse: E Pedro, descendo do barco, andou sobre as águas e foi até Jesus.
30 ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.
30 Reparando, porém, na força do vento, teve medo; e, começando a afundar, gritou: — Salve-me, Senhor!
31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.
31 E, prontamente, Jesus, estendendo a mão, o segurou e disse:
32 ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು.
32 Subindo ambos para o barco, o vento cessou.
33 ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.
33 E os que estavam no barco o adoraram, dizendo: — Verdadeiramente o senhor é o Filho de Deus!
34 ಅವರು ಸರೋವರವನ್ನು ದಾಟಿ ಗೆನೆಸರೇತ್ ದಡಕ್ಕೆ ಬಂದರು.
34 Estando já no outro lado, chegaram à terra de Genesaré.
35 ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು.
35 Quando as pessoas daquela terra o reconheceram, mandaram avisar em todos aqueles arredores e lhe trouxeram todos os enfermos.
36 ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.
36 E pediam-lhe que ao menos pudessem tocar na borda da sua roupa. E todos os que tocavam nela ficaram curados.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 14, comparar traduções ou montar um estudo — tudo direto pelo WhatsApp.