Mateus 24

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು.
1 E, quando Jesus ia saindo do templo, aproximaram-se dele os seus discípulos para lhe mostrarem a estrutura do templo.
2 ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.
2 Jesus, porém, lhes disse: Não vedes tudo isto? Em verdade vos digo que não ficará aqui pedra sobre pedra que não seja derribada.
3 ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.
3 E, estando assentado no monte das Oliveiras, chegaram-se a ele os seus discípulos, em particular, dizendo: Dize-nos quando serão essas coisas e que sinal haverá da tua vinda e do fim do mundo?
4 ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.
4 E Jesus, respondendo, disse-lhes: Acautelai-vos, que ninguém vos engane,
5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.
5 porque muitos virão em meu nome, dizendo: Eu sou o Cristo; e enganarão a muitos.
6 ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.
6 E ouvireis de guerras e de rumores de guerras; olhai, não vos assusteis, porque é mister que
7 ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.
7 Porquanto se levantará nação contra nação, e reino contra reino, e haverá fomes, e pestes, e terremotos, em vários lugares.
8 ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.
8 Mas todas essas coisas
9 “ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.
9 Então, vos hão de entregar para serdes atormentados e matar-vos-ão; e sereis odiados de todas as gentes por causa do meu nome.
10 ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.
10 Nesse tempo, muitos serão escandalizados, e trair-se-ão uns aos outros, e uns aos outros se aborrecerão.
11 ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.
11 E surgirão muitos falsos profetas e enganarão a muitos.
12 ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು.
12 E, por se multiplicar a iniquidade, o amor de muitos se esfriará.
13 ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.
13 Mas aquele que perseverar até ao fim será salvo.
14 ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.
14 E este evangelho do Reino será pregado em todo o mundo, em testemunho a todas as gentes, e então virá o fim.
15 “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)
15 Quando, pois, virdes que a abominação da desolação, de que falou o profeta Daniel, está no lugar santo (quem lê, que entenda),
16 ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ.
16 então, os que
17 ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.
17 e quem
18 ಹೊಲದಲ್ಲಿರುವವನು ತನ್ನ ಮೇಲಂಗಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮನೆಗೆ ಹಿಂತಿರುಗದಿರಲಿ.
18 e quem estiver no campo não volte atrás a buscar as suas vestes.
19 “ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ!
19 Mas ai das grávidas e das que amamentarem naqueles dias!
20 ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ.
20 E orai para que a vossa fuga não aconteça no inverno nem no sábado,
21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.
21 porque haverá, então, grande aflição, como nunca houve desde o princípio do mundo até agora, nem tampouco haverá jamais.
22 “ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.
22 E, se aqueles dias não fossem abreviados, nenhuma carne se salvaria; mas, por causa dos escolhidos, serão abreviados aqueles dias.
23 “ಆ ಸಮಯದಲ್ಲಿ ಕೆಲವರು ನಿಮಗೆ, ‘ನೋಡಿ, ಕ್ರಿಸ್ತನು ಅಲ್ಲಿದ್ದಾನೆ!’ ಎಂದು ಹೇಳಬಹುದು. ಇಲ್ಲವೆ ಬೇರೊಬ್ಬನು, ‘ಆತನು ಇಲ್ಲಿದ್ದಾನೆ!’ ಎಂದು ಹೇಳಬಹುದು. ಆದರೆ ಅವರನ್ನು ನಂಬಬೇಡಿ.
23 Então, se alguém vos disser: Eis que o Cristo
24 ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.
24 porque surgirão falsos cristos e falsos profetas e farão tão grandes sinais e prodígios, que, se possível fora, enganariam até os escolhidos.
25 ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.
25 Eis que eu vo-lo tenho predito.
26 “‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ.
26 Portanto, se vos disserem: Eis que ele está no deserto, não saiais; ou: Eis que ele está no interior da casa, não acrediteis.
27 ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು.
27 Porque, assim como o relâmpago sai do oriente e se mostra até ao ocidente, assim será também a vinda do Filho do Homem.
28 ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.
28 Pois onde estiver o cadáver, aí se ajuntarão as águias.
29 “ಆ ದಿನಗಳ ಸಂಕಟವು ತೀರಿದ ಕೂಡಲೇ,
29 E, logo depois da aflição daqueles dias, o sol escurecerá, e a lua não dará a sua luz, e as estrelas cairão do céu, e as potências dos céus serão abaladas.
30 “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.
30 Então, aparecerá no céu o sinal do Filho do Homem; e todas as tribos da terra se lamentarão e verão o Filho do Homem vindo sobre as nuvens do céu, com poder e grande glória.
31 ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
31 E ele enviará os seus anjos com rijo clamor de trombeta, os quais ajuntarão os seus escolhidos desde os quatro ventos, de uma à outra extremidade dos céus.
32 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
32 Aprendei, pois, quando já os seus ramos se tornam tenros e brotam folhas, sabeis que está próximo o verão.
33 ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.
33 Igualmente, quando virdes todas essas sabei que ele está próximo, às portas.
34 ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ!
34 Em verdade vos digo que não passará esta geração sem que todas essas
35 ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!
35 O céu e a terra passarão, mas as minhas palavras não hão de passar.
36 “ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.
36 Porém daquele Dia e hora ninguém sabe, nem os anjos dos céus, nem o Filho, mas unicamente meu Pai.
37 “ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ.
37 E, como foi nos dias de Noé, assim será também a vinda do Filho do Homem.
38 ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.
38 Porquanto, assim como, nos dias anteriores ao dilúvio, comiam, bebiam, casavam e davam-se em casamento, até ao dia em que Noé entrou na arca,
39 ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು.
39 e não o perceberam, até que veio o dilúvio, e os levou a todos, assim será também a vinda do Filho do Homem.
40 ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
40 Então, estando dois no campo, será levado um, e deixado o outro;
41 ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಧಾನ್ಯ ಬೀಸುತ್ತಿದ್ದರೆ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬಳನ್ನು ಬಿಡಲಾಗುವುದು.
41 Estando duas moendo no moinho, será levada uma, e deixada outra.
42 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.
42 Vigiai, pois, porque não sabeis a que hora há de vir o vosso Senhor.
43 ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.
43 Mas considerai isto: se o pai de família soubesse a que vigília da noite havia de vir o ladrão, vigiaria e não deixaria que fosse arrombada a sua casa.
44 ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.
44 Por isso, estai vós apercebidos também, porque o Filho do Homem há de vir à hora em que não penseis.
45 “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.
45 Quem é, pois, o servo fiel e prudente, que o Senhor constituiu sobre a sua casa, para dar o sustento a seu tempo?
46 ತನಗೆ ಕೊಟ್ಟ ಕೆಲಸವನ್ನು ಮಾಡುತ್ತಿರುವಾಗ ಯಜಮಾನನು ಬಂದರೆ ಆ ಸೇವಕನಿಗೆ ಬಹಳ ಸಂತೋಷವಾಗುತ್ತದೆ.
46 Bem-aventurado aquele servo que o Senhor, quando vier, achar servindo assim.
47 ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.
47 Em verdade vos digo que o porá sobre todos os seus bens.
48 “ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?
48 Porém, se aquele mau servo disser consigo: O meu senhor tarde virá,
49 ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು.
49 e começar a espancar os
50 ಹೀಗೆ ಅವನಿನ್ನೂ ಸಿದ್ಧನಾಗಿಲ್ಲದಿರುವಾಗ ಯಜಮಾನನು ಅನಿರೀಕ್ಷಿತವಾಗಿ ಬಂದು
50 virá o senhor daquele servo n
51 ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.
51 e separá-lo-á, e destinará a sua parte com os hipócritas; ali haverá pranto e ranger de dentes.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 24, comparar traduções ou montar um estudo — tudo direto pelo WhatsApp.