Mateus 25

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ACF

Sair da comparação
ACF Almeida Corrigida Fiel
1 “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.
1 Então o reino dos céus será semelhante a dez virgens que, tomando as suas lâmpadas, saíram ao encontro do esposo.
2 ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು.
2 E cinco delas eram prudentes, e cinco loucas.
3 ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
3 As loucas, tomando as suas lâmpadas, não levaram azeite consigo.
4 ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು.
4 Mas as prudentes levaram azeite em suas vasilhas, com as suas lâmpadas.
5 ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು.
5 E, tardando o esposo, tosquenejaram todas, e adormeceram.
6 “ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು.
6 Mas à meia-noite ouviu-se um clamor: Aí vem o esposo, saí-lhe ao encontro.
7 “ಆಗ ಕನ್ನಿಕೆಯರೆಲ್ಲ ಎಚ್ಚರಗೊಂಡು ತಮ್ಮ ದೀಪಾರತಿಗಳನ್ನು ಸಿದ್ಧಮಾಡಿಕೊಂಡರು.
7 Então todas aquelas virgens se levantaram, e prepararam as suas lâmpadas.
8 ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.
8 E as loucas disseram às prudentes: Dai-nos do vosso azeite, porque as nossas lâmpadas se apagam.
9 “ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.
9 Mas as prudentes responderam, dizendo: Não seja caso que nos falte a nós e a vós, ide antes aos que o vendem, e comprai-o para vós.
10 “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.
10 E, tendo elas ido comprá-lo, chegou o esposo, e as que estavam preparadas entraram com ele para as bodas, e fechou-se a porta.
11 “ತರುವಾಯ ಬುದ್ಧಿಹೀನ ಕನ್ನಿಕೆಯರು ಬಂದು, ‘ಸ್ವಾಮೀ, ಸ್ವಾಮೀ, ಒಳಗೆ ಬರಲು ನಮಗೆ ಬಾಗಿಲು ತೆರೆ’ ಅಂದರು.
11 E depois chegaram também as outras virgens, dizendo: Senhor, Senhor, abre-nos.
12 “ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.
12 E ele, respondendo, disse: Em verdade vos digo que vos não conheço.
13 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.
13 Vigiai, pois, porque não sabeis o dia nem a hora em que o Filho do homem há de vir.
14 “ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.
14 Porque isto é também como um homem que, partindo para fora da terra, chamou os seus servos, e entregou-lhes os seus bens.
15 ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.
15 E a um deu cinco talentos, e a outro dois, e a outro um, a cada um segundo a sua capacidade, e ausentou-se logo para longe.
16 ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.
16 E, tendo ele partido, o que recebera cinco talentos negociou com eles, e granjeou outros cinco talentos.
17 ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು.
17 Da mesma sorte, o que recebera dois, granjeou também outros dois.
18 ಆದರೆ ಒಂದು ತಲಾಂತು ಹೊಂದಿದವನು ಹೊರಟುಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು.
18 Mas o que recebera um, foi e cavou na terra e escondeu o dinheiro do seu senhor.
19 “ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು.
19 E muito tempo depois veio o senhor daqueles servos, e fez contas com eles.
20 ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.
20 Então aproximou-se o que recebera cinco talentos, e trouxe-lhe outros cinco talentos, dizendo: Senhor, entregaste-me cinco talentos; eis aqui outros cinco talentos que granjeei com eles.
21 “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
21 E o seu senhor lhe disse: Bem está, servo bom e fiel. Sobre o pouco foste fiel, sobre muito te colocarei; entra no gozo do teu senhor.
22 “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.
22 E, chegando também o que tinha recebido dois talentos, disse: Senhor, entregaste-me dois talentos; eis que com eles granjeei outros dois talentos.
23 “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
23 Disse-lhe o seu senhor: Bem está, bom e fiel servo. Sobre o pouco foste fiel, sobre muito te colocarei; entra no gozo do teu senhor.
24 “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.
24 Mas, chegando também o que recebera um talento, disse: Senhor, eu conhecia-te, que és um homem duro, que ceifas onde não semeaste e ajuntas onde não espalhaste;
25 ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು.
25 E, atemorizado, escondi na terra o teu talento; aqui tens o que é teu.
26 “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?
26 Respondendo, porém, o seu senhor, disse-lhe: Mau e negligente servo; sabias que ceifo onde não semeei e ajunto onde não espalhei?
27 ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು.
27 Devias então ter dado o meu dinheiro aos banqueiros e, quando eu viesse, receberia o meu com os juros.
28 “ಬಳಿಕ ಯಜಮಾನನು ತನ್ನ ಬೇರೆ ಸೇವಕರಿಗೆ, ‘ಅವನ ಒಂದು ತಲಾಂತನ್ನು ತೆಗೆದುಕೊಂಡು ಐದು ತಲಾಂತು ಹೊಂದಿರುವ ಸೇವಕನಿಗೆ ಕೊಡಿರಿ.
28 Tirai-lhe pois o talento, e dai-o ao que tem os dez talentos.
29 ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು.
29 Porque a qualquer que tiver será dado, e terá em abundância; mas ao que não tiver até o que tem ser-lhe-á tirado.
30 ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು.
30 Lançai, pois, o servo inútil nas trevas exteriores; ali haverá pranto e ranger de dentes.
31 “ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.
31 E quando o Filho do homem vier em sua glória, e todos os santos anjos com ele, então se assentará no trono da sua glória;
32 ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;
32 E todas as nações serão reunidas diante dele, e apartará uns dos outros, como o pastor aparta dos bodes as ovelhas;
33 ಮನುಷ್ಯಕುಮಾರನು ಕುರಿಗಳನ್ನು ತನ್ನ ಬಲಗಡೆಯಲ್ಲಿಯೂ ಮತ್ತು ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
33 E porá as ovelhas à sua direita, mas os bodes à esquerda.
34 “ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.
34 Então dirá o Rei aos que estiverem à sua direita: Vinde, benditos de meu Pai, possuí por herança o reino que vos está preparado desde a fundação do mundo;
35 ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.
35 Porque tive fome, e destes-me de comer; tive sede, e destes-me de beber; era estrangeiro, e hospedastes-me;
36 ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.
36 Estava nu, e vestistes-me; adoeci, e visitastes-me; estive na prisão, e foste me ver.
37 “ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು?
37 Então os justos lhe responderão, dizendo: Senhor, quando te vimos com fome, e te demos de comer? ou com sede, e te demos de beber?
38 ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು?
38 E quando te vimos estrangeiro, e te hospedamos? ou nu, e te vestimos?
39 ನೀನು ಕಾಯಿಲೆ ಬಿದ್ದಿದ್ದನ್ನು ಅಥವಾ ಸೆರೆಯಲ್ಲಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ಆರೈಕೆ ಮಾಡಿದೆವು?’ ಎಂದು ಹೇಳುವರು.
39 E quando te vimos enfermo, ou na prisão, e fomos ver-te?
40 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.
40 E, respondendo o Rei, lhes dirá: Em verdade vos digo que quando o fizestes a um destes meus pequeninos irmãos, a mim o fizestes.
41 “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.
41 Então dirá também aos que estiverem à sua esquerda: Apartai-vos de mim, malditos, para o fogo eterno, preparado para o diabo e seus anjos;
42 ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ.
42 Porque tive fome, e não me destes de comer; tive sede, e não me destes de beber;
43 ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.
43 Sendo estrangeiro, não me recolhestes; estando nu, não me vestistes; e enfermo, e na prisão, não me visitastes.
44 “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.
44 Então eles também lhe responderão, dizendo: Senhor, quando te vimos com fome, ou com sede, ou estrangeiro, ou nu, ou enfermo, ou na prisão, e não te servimos?
45 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.
45 Então lhes responderá, dizendo: Em verdade vos digo que, quando a um destes pequeninos o não fizestes, não o fizestes a mim.
46 “ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”
46 E irão estes para o tormento eterno, mas os justos para a vida eterna.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 25, comparar traduções ou montar um estudo — tudo direto pelo WhatsApp.