Mateus 7
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NVI
1 “ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ.
1 "Não julguem, para que vocês não sejam julgados.
2 ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.
2 Pois da mesma forma que julgarem, vocês serão julgados; e a medida que usarem, também será usada para medir vocês.
3 “ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ?
3 "Por que você repara no cisco que está no olho do seu irmão, e não se dá conta da viga que está em seu próprio olho?
4 ‘ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯುವೆನು’ ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.
4 Como você pode dizer ao seu irmão: ‘Deixe-me tirar o cisco do seu olho’, quando há uma viga no seu?
5 ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.
5 Hipócrita, tire primeiro a viga do seu olho, e então você verá claramente para tirar o cisco do olho do seu irmão.
6 “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.
6 "Não dêem o que é sagrado aos cães, nem atirem suas pérolas aos porcos; caso contrário, estes as pisarão e, aqueles, voltando-se contra vocês, os despedaçarão".
7 “ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.
7 "Peçam, e lhes será dado; busquem, e encontrarão; batam, e a porta lhes será aberta.
8 ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.
8 Pois todo o que pede, recebe; o que busca, encontra; e àquele que bate, a porta será aberta.
9 “ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೋ?
9 "Qual de vocês, se seu filho pedir pão, lhe dará uma pedra?
10 ಮೀನನ್ನು ಕೇಳಿದರೆ, ಹಾವನ್ನು ಕೊಡುವಿರೋ?
10 Ou se pedir peixe, lhe dará uma cobra?
11 ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.
11 Se vocês, apesar de serem maus, sabem dar boas coisas aos seus filhos, quanto mais o Pai de vocês, que está nos céus, dará coisas boas aos que lhe pedirem!
12 “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
12 Assim, em tudo, façam aos outros o que vocês querem que eles lhes façam; pois esta é a Lei e os Profetas".
13 “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.
13 "Entrem pela porta estreita, pois larga é a porta e amplo o caminho que leva à perdição, e são muitos os que entram por ela.
14 ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.
14 Como é estreita a porta, e apertado o caminho que leva à vida! São poucos os que a encontram".
15 “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.
15 "Cuidado com os falsos profetas. Eles vêm a vocês vestidos de peles de ovelhas, mas por dentro são lobos devoradores.
16 ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.
16 Vocês os reconhecerão por seus frutos. Pode alguém colher uvas de um espinheiro ou figos de ervas daninhas?
17 ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.
17 Semelhantemente, toda árvore boa dá frutos bons, mas a árvore ruim dá frutos ruins.
18 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
18 A árvore boa não pode dar frutos ruins, nem a árvore ruim pode dar frutos bons.
19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು.
19 Toda árvore que não produz bons frutos é cortada e lançada ao fogo.
20 ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ.
20 Assim, pelos seus frutos vocês os reconhecerão!
21 “‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
21 "Nem todo aquele que me diz: ‘Senhor, Senhor’, entrará no Reino dos céus, mas apenas aquele que faz a vontade de meu Pai que está nos céus.
22 ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.
22 Muitos me dirão naquele dia: ‘Senhor, Senhor, não profetizamos nós em teu nome? Em teu nome não expulsamos demônios e não realizamos muitos milagres? ’
23 ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.
23 Então eu lhes direi claramente: ‘Nunca os conheci. Afastem-se de mim vocês, que praticam o mal! ’ "
24 “ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.
24 "Portanto, quem ouve estas minhas palavras e as pratica é como um homem prudente que construiu a sua casa sobre a rocha.
25 ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.
25 Caiu a chuva, transbordaram os rios, sopraram os ventos e deram contra aquela casa, e ela não caiu, porque tinha seus alicerces na rocha.
26 “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.
26 Mas quem ouve estas minhas palavras e não as pratica é como um insensato que construiu a sua casa sobre a areia.
27 ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”
27 Caiu a chuva, transbordaram os rios, sopraram os ventos e deram contra aquela casa, e ela caiu. E foi grande a sua queda".
28 ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು.
28 Quando Jesus acabou de dizer essas coisas, as multidões estavam maravilhadas com o seu ensino,
29 ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.
29 porque ele as ensinava como quem tem autoridade, e não como os mestres da lei.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 7, comparar traduções ou montar um estudo — tudo direto pelo WhatsApp.