Neemias 6

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NAA

Sair da comparação
NAA Nova Almeida Atualizada 2017
1 ಸನ್ಬಲ್ಲಟನಿಗೆ, ಟೋಬೀಯನಿಗೆ ಮತ್ತು ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.
1 Quando Sambalate, Tobias, Gesém, o árabe, e o resto dos nossos inimigos ouviram que eu tinha reconstruído a muralha e que nela já não havia brecha nenhuma, ainda que até este tempo eu ainda não tivesse colocado os portões no seu lugar,
2 ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು.
2 Sambalate e Gesém mandaram dizer a mim: “Venha, vamos nos encontrar numa das aldeias do vale de Ono.” Na verdade, o que eles queriam era me fazer mal.
3 ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.”
3 Por isso enviei-lhes mensageiros para dizer: — Estou fazendo uma grande obra e não posso descer até aí. Por que devo parar a obra para ir me encontrar com vocês?
4 ಸನ್ಬಲ್ಲಟನೂ ಗೆಷೆಮನೂ ಅದೇ ಸಂದೇಶವನ್ನು ನಾಲ್ಕು ಸಲ ಕಳುಹಿಸಿದರು. ಪ್ರತಿ ಸಾರಿಯೂ ಅದೇ ಉತ್ತರವನ್ನು ನಾನು ಅವರಿಗೆ ಕಳುಹಿಸಿದೆನು.
4 Quatro vezes eles fizeram o mesmo pedido, mas eu lhes dei sempre a mesma resposta.
5 ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು.
5 Então Sambalate me enviou pela quinta vez o seu servo, que trazia na mão uma carta aberta.
6 ಅದರಲ್ಲಿ,
6 Nela estava escrito o seguinte: “Entre os gentios se ouviu, e Gesém também está dizendo, que você e os judeus estão querendo se rebelar e que, por isso, você está reconstruindo a muralha. Também, segundo se diz, você quer ser o rei deles,
7 ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು.
7 e pôs alguns profetas para falarem a respeito de você em Jerusalém, dizendo: ‘Ele é o rei de Judá.’ Ora, isso certamente vai chegar aos ouvidos do rei. Portanto, venha agora e vamos, em conjunto, conversar a respeito disso.”
8 ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.
8 Mandei dizer-lhe: — Nada disso que você está dizendo aconteceu. Você está inventando tudo.
9 ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ.
9 O que todos eles queriam era nos amedrontar. Eles diziam: “As mãos deles largarão a obra, e ela não será concluída.” “Agora, pois, ó Deus, fortalece as minhas mãos.”
10 ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ. ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು.
10 Quando fui à casa de Semaías, filho de Delaías, filho de Meetabel, que estava impedido de sair de casa, ele me disse: — Vamos nos encontrar na Casa de Deus, dentro do templo. Vamos fechar as portas do templo, porque virão matar você. De noite eles virão matar você.
11 ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.
11 Porém eu disse: — Você acha que um homem como eu fugiria? Alguém como eu entraria no templo para salvar a vida? De maneira nenhuma entrarei.
12 ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.
12 Então percebi que não era Deus quem o tinha enviado, mas que ele falou tal profecia contra mim porque Tobias e Sambalate o haviam subornado.
13 ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.
13 Para isto o subornaram, para me amedrontar e para que, fazendo isso, eu viesse a pecar, para que pudessem atacar a minha reputação e me afrontar.
14 ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.
14 “Lembra-te, meu Deus, de Tobias e de Sambalate, segundo as coisas que fizeram, e também da profetisa Noadia e dos outros profetas que quiseram me amedrontar.”
15 ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
15 A reconstrução da muralha foi terminada aos vinte e cinco dias do mês de elul, em cinquenta e dois dias.
16 ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತುಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.
16 Quando todos os nossos inimigos ouviram isso, todos os gentios à nossa volta temeram e decaíram muito no seu próprio conceito, porque reconheceram que foi por intervenção do nosso Deus que fizemos esta obra.
17 ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು.
17 Também naqueles dias alguns nobres de Judá escreveram muitas cartas a Tobias, e cartas de Tobias vinham para eles.
18 ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು.
18 Pois muitos em Judá eram aliados dele, porque era genro de Secanias, filho de Ará. E o seu filho Joanã havia casado com a filha de Mesulão, filho de Berequias.
19 ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.
19 Também falavam das suas boas ações na minha presença, e levavam a ele as minhas palavras. Tobias escrevia cartas para me amedrontar.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Neemias 6, comparar traduções ou montar um estudo — tudo direto pelo WhatsApp.