Números 16

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs NTLH

Sair da comparação
NTLH Nova Tradução na Linguagem de Hoje 2000
1 ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಹಾರನ ಮಗನು, ಇಚ್ಹಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡುಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೇನನ ಸಂತತಿಯವರು.)
1 — ausente —
2 ಈ ನಾಲ್ಕು ಮಂದಿ ಇಸ್ರೇಲರು ಇನ್ನಿತರ ಇನ್ನೂರೈವತ್ತು ಗಂಡಸರೊಂದಿಗೆ ಮೋಶೆಗೆ ವಿರುದ್ಧವಾಗಿ ಎದ್ದರು. ಅವರು ಜನರಿಂದ ಆರಿಸಲ್ಪಟ್ಟ ನಾಯಕರಾಗಿದ್ದುದರಿಂದ ಜನರೆಲ್ಲರೂ ಅವರನ್ನು ಬಲ್ಲವರಾಗಿದ್ದರು.
2 — ausente —
3 ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.
3 Eles foram juntos falar com Moisés e Arão e disseram: — Agora chega! Todo o povo pertence a Deus, o
4 ಮೋಶೆ ಇದನ್ನು ಕೇಳಿ ನೆಲದವರೆಗೆ ಬಾಗಿ
4 Quando Moisés ouviu isso, ajoelhou-se, encostou o rosto no chão
5 ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ಯೆಹೋವನವನೆಂದು ಯೆಹೋವನು ತೋರಿಸುವನು. ಯಾವನು ಪ್ರತಿಷ್ಠಿತನೆಂದು ಯೆಹೋವನು ತೋರಿಸುವನು ಮತ್ತು ಯೆಹೋವನು ಅವನನ್ನು ತನ್ನ ಹತ್ತಿರ ಕರೆದುಕೊಳ್ಳುವನು.
5 e disse o seguinte a Corá e a todos os seus seguidores: — Amanhã cedo o
6 ಆದ್ದರಿಂದ ಕೋರಹನೇ, ನೀನೂ ನಿನ್ನ ಹಿಂಬಾಲಕರೆಲ್ಲರೂ ಈ ಕಾರ್ಯವನ್ನು ಮಾಡಬೇಕು:
6 — ausente —
7 ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೊ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು
7 — ausente —
8 ಮೋಶೆಯು ಕೋರಹನಿಗೆ, “ಲೇವಿಯರೇ, ಕೇಳಿರಿ!
8 Moisés disse também a Corá: — Agora escutem, levitas!
9 ಇಸ್ರೇಲರ ದೇವರು ನಿಮ್ಮನ್ನು ಸರ್ವಸಮೂಹದಿಂದ ಆರಿಸಿಕೊಂಡದ್ದಕ್ಕಾಗಿ ನೀವು ಸಂತೋಷಪಡಬೇಕು. ದೇವರ ಪವಿತ್ರ ಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡುವುದಕ್ಕೂ ಇಸ್ರೇಲರ ಸೇವೆಯನ್ನು ಮಾಡುವುದಕ್ಕೂ ಮತ್ತು ಯಜ್ಞಗಳನ್ನು ಸಿದ್ಧಪಡಿಸುವುದರಲ್ಲಿ ಅವರಿಗೆ ಸಹಾಯಮಾಡುವುದಕ್ಕೂ ಯೆಹೋವನು ನಿಮ್ಮನ್ನು ತನ್ನ ಸಮೀಪಕ್ಕೆ ಬರಗೊಡಿಸಿದ್ದಾನೆ. ಅದು ನಿಮಗೆ ಸಾಕಾಗಲಿಲ್ಲವೇ?
9 O Deus de Israel os separou do resto do povo para poderem chegar perto dele, para fazerem o seu serviço na Tenda do Senhor e para realizarem as cerimônias em favor do povo. Será que isso não basta para vocês?
10 ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ.
10 Deus deu a você e a todos os outros levitas esse privilégio, e agora vocês estão querendo também ser sacerdotes?
11 ನೀವೂ ನಿಮ್ಮ ಹಿಂಬಾಲಕರೂ ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.
11 Quando vocês reclamam contra Arão, na verdade é contra o Senhor que você e os seus seguidores estão se revoltando.
12 ಬಳಿಕ ಮೋಶೆ ಎಲೀಯಾಬನ ಗಂಡುಮಕ್ಕಳಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಲಾಗಿ, ಅವರು ಅವನಿಗೆ, “ನಾವು ಬರುವುದಿಲ್ಲ.
12 Então Moisés mandou chamar Datã e Abirão, filhos de Eliabe, mas eles responderam aos mensageiros: — Nós não vamos!
13 ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?
13 Será que não basta você nos ter tirado de uma terra boa e rica a fim de nos fazer morrer neste deserto? E além disso ainda quer mandar em nós?
14 ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.
14 Na verdade você não nos trouxe para uma terra boa e rica, nem nos deu campos e plantações de uvas para serem nossa propriedade; e ainda por cima está querendo nos enganar. Nós não vamos!
15 ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.
15 Então Moisés ficou muito zangado e disse a Deus, o Senhor : — Não aceites as ofertas desses homens. Eu nunca prejudiquei a nenhum deles, nem tirei deles nem mesmo um jumento!
16 ಆಗ ಮೋಶೆಯು ಕೋರಹನಿಗೆ, “ನೀನು ಮತ್ತು ನಿನ್ನ ಹಿಂಬಾಲಕರೆಲ್ಲರು ನಾಳೆ ಯೆಹೋವನ ಸನ್ನಿಧಿಯಲ್ಲಿ ಆರೋನನೊಡನೆ ನಿಲ್ಲಬೇಕು.
16 Aí Moisés disse a Corá: — Amanhã você e os seus duzentos e cinquenta seguidores venham até a Tenda Sagrada. Arão também estará ali.
17 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಧೂಪಾರತಿಯನ್ನು ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನೂ ಆರೋನನೂ ನಿಮ್ಮನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
17 Cada um de vocês pegará o seu queimador de incenso, colocará incenso nele e o levará até o altar.
18 ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.
18 Assim, cada homem pegou o seu queimador de incenso, pôs brasas e incenso nele, e todos ficaram na entrada da Tenda Sagrada com Moisés e Arão.
19 ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೆ ಪ್ರತ್ಯಕ್ಷವಾಯಿತು.
19 Então Corá reuniu todo o povo, e eles ficaram diante de Moisés e Arão na entrada da Tenda. De repente, a glória do Senhor apareceu a todo o povo,
20 ಯೆಹೋವನು ಮೋಶೆ ಆರೋನರಿಗೆ,
20 e o Senhor disse a Moisés e a Arão:
21 “ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.
21 — Saiam do meio dessa gente, pois eu vou acabar com eles agora mesmo.
22 ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.
22 Mas Moisés e Arão se ajoelharam, encostaram o rosto no chão e disseram: — Ó Deus, tu dás vida a todos. Será que por causa do pecado de uma só pessoa vais ficar
23 ಆಗ ಯೆಹೋವನು ಮೋಶೆಗೆ,
23 Então o Senhor respondeu a Moisés:
24 “ಜನರಿಗೆ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಮುತ್ತಲಿಂದ ದೂರಹೋಗಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
24 — Diga ao povo que saia de perto das barracas de Corá, Datã e Abirão.
25 ಮೋಶೆಯು ಎದ್ದು ಕೋರಹ, ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು. ಇಸ್ರೇಲರ ಹಿರಿಯರೆಲ್ಲರೂ ಅವನನ್ನು ಹಿಂಬಾಲಿಸಿದರು.
25 Aí Moisés saiu e, junto com os líderes do povo, foi para onde estavam Datã e Abirão.
26 ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.
26 E Moisés disse ao povo: — Afastem-se das barracas desses homens maus e não toquem em nada que seja deles; se não, vocês também serão destruídos por causa dos pecados deles.
27 ಆದ್ದರಿಂದ ಜನರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರಗಳನ್ನು ಬಿಟ್ಟು ದೂರಹೋದರು. ದಾತಾನ್ ಮತ್ತು ಅಬೀರಾಮ್ ಹೊರಗೆ ಬಂದು ತಮ್ಮ ಡೇರೆಗಳ ಪ್ರವೇಶದ್ವಾರದ ಬಳಿ ತಮ್ಮ ಹೆಂಡತಿಯರೊಡನೆ, ಮಕ್ಕಳೊಡನೆ ಮತ್ತು ಕೂಸುಗಳೊಡನೆ ನಿಂತುಕೊಂಡರು.
27 Aí o povo se afastou das barracas de Corá, Datã e Abirão. Datã e Abirão saíram e ficaram na entrada da sua barraca, com as suas mulheres e filhos.
28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದು ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.
28 Então Moisés disse ao povo: — Eu vou dizer como vocês vão ficar sabendo que não fui eu quem resolveu fazer tudo isso. Fiz todas essas coisas porque o
29 ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
29 Se estes homens tiverem morte natural como todos os outros, sem nenhum castigo de Deus, então o Senhor não me enviou.
30 ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು.
30 Mas, se ele fizer acontecer alguma coisa fora do comum, e se a terra se abrir e engolir essa gente com tudo o que eles têm, e eles descerem vivos para o mundo dos mortos , vocês ficarão sabendo que estes homens rejeitaram o Senhor .
31 ಕೂಡಲೇ, ಆ ಜನರು ನಿಂತಿದ್ದ ನೆಲವು ಸೀಳಿತು.
31 E aconteceu que, assim que Moisés acabou de falar, a terra se abriu debaixo deles
32 ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.
32 e os engoliu com as suas famílias, junto com todos os seguidores de Corá e tudo o que eles tinham.
33 ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು!
33 Assim, desceram vivos para o mundo dos mortos, eles e tudo o que possuíam. A terra os cobriu, e eles desapareceram.
34 ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿಹೋದರು.
34 Ao ouvirem os gritos deles, todos os israelitas que estavam ali saíram correndo e gritando: — A terra vai engolir a gente também!
35 ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.
35 Então o Senhor enviou fogo e matou os duzentos e cinquenta homens que haviam oferecido incenso.
36 ಆಗ ಯೆಹೋವನು ಮೋಶೆಗೆ,
36 Aí o Senhor Deus disse a Moisés:
37 “ಯಾಜಕನಾದ ಆರೋನನ ಮಗ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಆ ಧೂಪಾರತಿಗಳು ಪವಿತ್ರವಾದವುಗಳು.
37 — Diga a Eleazar, filho do sacerdote Arão, que pegue os queimadores de incenso do meio dos restos do incêndio e espalhe para longe as brasas que ainda estiverem neles, pois os queimadores de incenso são sagrados.
38 ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದ್ದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.
38 Eles ficaram sagrados quando foram oferecidos no altar do Senhor . Portanto, pegue os queimadores de incenso desses homens que foram mortos por causa dos seus pecados e deles faça folhas finas de metal. E com essas folhas prepare uma cobertura para o altar. Isso será um aviso para o povo de Israel.
39 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಿದನು.
39 Então o sacerdote Eleazar pegou os queimadores de incenso de metal que os homens que tinham sido mortos haviam trazido e mandou que deles fossem feitas folhas de metal para cobrir o altar.
40 ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.
40 Conforme o Senhor tinha dito a Moisés, isso ficou sendo um aviso para os israelitas a fim de que nenhuma pessoa que não seja descendente de Arão venha a queimar incenso diante do Senhor e seja castigada, como aconteceu com Corá e com os seus seguidores.
41 ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.
41 Mas no dia seguinte todos os israelitas começaram a reclamar contra Moisés e Arão, dizendo assim: — Vocês mataram o povo de Deus, o
42 ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು.
42 Depois que todos se reuniram para protestar contra Moisés e Arão, eles se viraram para a Tenda Sagrada e viram que a nuvem a estava cobrindo. Então a glória do Senhor apareceu.
43 ಆಗ ಮೋಶೆ ಆರೋನರು ದೇವದರ್ಶನಗುಡಾರದ ಮುಂದಕ್ಕೆ ಬಂದರು.
43 Moisés e Arão foram até a frente da Tenda,
44 ಯೆಹೋವನು ಮೋಶೆಗೆ,
44 e o Senhor disse a Moisés:
45 “ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.
45 — Saiam do meio desse povo, pois vou destruí-lo agora mesmo! Aí Moisés e Arão se ajoelharam e encostaram o rosto no chão.
46 ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
46 E Moisés disse a Arão: — Pegue o seu queimador de incenso, ponha nele algumas brasas do altar e jogue incenso em cima delas. E vá depressa até o lugar onde o povo está e ofereça o
47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
47 Então Arão pegou o queimador de incenso, conforme Moisés havia mandado, e correu para o meio do povo. Quando viu que a epidemia já havia começado, Arão jogou o incenso nas brasas e ofereceu o sacrifício para conseguir o perdão dos pecados do povo.
48 ಅವನು ಸತ್ತವರಿಗೂ ಬದುಕಿರುವವರಿಗೂ ನಡುವೆ ನಿಂತುಕೊಂಡನು. ಆಗ ಕಾಯಿಲೆ ನಿಂತುಹೋಯಿತು.
48 Com isso a epidemia parou, e Arão ficou de pé entre os vivos e os mortos.
49 ಕೋರಹನೂ ಸೇರಿದಂತೆ ಆ ಕಾಯಿಲೆಯಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ.
49 Naquela epidemia morreram catorze mil e setecentas pessoas, fora as que morreram na revolta de Corá.
50 ಕಾಯಿಲೆಯು ನಿಂತುಹೋದಾಗ, ಆರೋನನು ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿದ್ದ ಮೋಶೆಯ ಬಳಿಗೆ ತಿರುಗಿ ಬಂದನು.
50 Quando acabou a epidemia, Arão voltou para a entrada da Tenda, onde Moisés estava.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Números 16, comparar traduções ou montar um estudo — tudo direto pelo WhatsApp.