Números 1

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC

Sair da comparação
VC Versão Católica
1 ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
1 No primeiro dia do segundo mês, no segundo ano depois da saída do Egito, o Senhor disse a Moisés no deserto do Sinai, na tenda de reunião:
2 “ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,
2 "Fazei o recenseamento de toda a assembléia dos filhos de Israel segundo suas famílias, suas casas patriarcais, contando nominalmente por cabeça todos os varões da idade de vinte anos para cima,
3 ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು.
3 todos os israelitas aptos para o serviço das armas: fareis o recenseamento deles segundo os seus grupos, tu e Aarão.
4 ಪ್ರತಿಯೊಂದು ಕುಲದ ಕುಟುಂಬದ ನಾಯಕನು ನಿಮಗೆ ಸಹಾಯಮಾಡಬೇಕು
4 Assistir-vos-á um homem de cada tribo, um chefe da casa de seu pai.
5 ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ:
5 Eis os nomes daqueles que vos hão de acompanhar: de Rubem, Elisur, filho de Sedeur;
6 ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್;
6 de Simeão, Salamiel, filho de Surisadai;
7 ಯೆಹೂದ ಕುಲದಿಂದ ಅಮ್ಮೀನಾದ್ವಾನ ಮಗನಾದ ನಹಶೋನ್;
7 de Judá, Naasson, filho de Aminadab;
8 ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್;
8 de Issacar, Natanael, filho de Suar;
9 ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್;
9 de Zabulon, Eliab, filho de Elom;
10 ಯೋಸೇಫನ ಸಂತಾನದಿಂದ:
10 dos filhos de José: de Efraim, Elisama, filho de Amiud; de Manassés, Gamaliel, filho de Fadassur;
11 ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್;
11 de Benjamim, Abidã, filho de Gedeão;
12 ದಾನ್ ಕುಲದಿಂದ ಅಮ್ಮಾಷದ್ದೈಯ ಮಗನಾದ ಅಹೀಗೆಜೆರ್;
12 de Dã, Aieser, filho de Amisadai;
13 ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್;
13 de Aser, Fegiel, filho de Ocrã;
14 ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್;
14 de Gad, Eliasaf, filho de Duel;
15 ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
15 de Neftali, Aira, filho de Enã".
16 ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.
16 Tais são os que foram escolhidos da assembléia. Eram os príncipes de suas tribos patriarcais, chefes de milhares em Israel.
17 ಹೆಸರೆಸರಾಗಿ ಆರಿಸಲ್ಪಟ್ಟ ಈ ಜನರನ್ನು ಮೋಶೆ ಆರೋನರು ತೆಗೆದುಕೊಂಡರು.
17 Depois de se terem ajuntado esses homens designados pelos seus nomes, Moisés e Aarão
18 ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.
18 convocaram toda a assembléia no primeiro dia do segundo mês. Efetuaram o recenseamento por clãs e famílias, contando nome por nome as pessoas da idade de vinte anos para cima,
19 ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.
19 assim como o Senhor ordenara a Moisés. Fez-se, pois, o recenseamento no deserto do Sinai.
20 ಅವರು ಇಸ್ರೇಲನ ಚೊಚ್ಚಲ ಮಗನಾದ ರೂಬೇನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿ ಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಹೆಸರುಗಳನ್ನು ಪಟ್ಟಿಮಾಡಲಾಯಿತು.
20 Dos filhos de Rubem, primogênito de Israel, seus descendentes segundo suas famílias e suas casas patriarcais, contando seus nomes por cabeça, todos os varões da idade de vinte anos para cima - todos os que eram aptos para o serviço das armas -,
21 ರೂಬೇನ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 46,500.
21 foram recenseados 46.500 na tribo de Rubem.
22 ಅವರು ಸಿಮೆಯೋನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
22 Dos filhos de Simeão, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
23 ಸಿಮೆಯೋನ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 59,300.
23 foram recenseados 59.300 na tribo de Simeão.
24 ಗಾದ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
24 Dos filhos de Gad, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
25 ಗಾದ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 45,650.
25 foram recenseados 45.650 na tribo de Gad.
26 ಯೆಹೂದನ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿಯೂ ಕುಟುಂಬಗಳಿಗನುಸಾರವಾಗಿಯೂ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
26 Dos filhos de Judá, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
27 ಯೆಹೂದನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 74,600.
27 foram recenseados 74.600 na tribo de Judá.
28 ಇಸ್ಸಾಕಾರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
28 Dos filhos de Issacar, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
29 ಇಸ್ಸಾಕಾರ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 54,400.
29 foram recenseados 54.400 na tribo de Issacar.
30 ಜೆಬುಲೂನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
30 Dos filhos de Zabulon, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
31 ಜೆಬುಲೂನ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 57,400.
31 foram recenseados 57.400 na tribo de Zabulon.
32 ಯೋಸೇಫನ ಮಗನಾದ ಎಫ್ರಾಯೀಮ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
32 Entre os filhos de José, os filhos de Efraim, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
33 ಎಫ್ರಾಯೀಮ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 40,500.
33 foram recenseados 40.500 na tribo de Efraim.
34 ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
34 Dos filhos de Manassés, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
35 ಮನಸ್ಸೆ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 32,200.
35 foram recenseados 32.200 na tribo de Manassés.
36 ಬೆನ್ಯಾಮೀನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
36 Dos filhos de Benjamim, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
37 ಬೆನ್ಯಾಮೀನನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 35,400.
37 foram recenseados 35.400 na tribo de Benjamim.
38 ದಾನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
38 Dos filhos de Dã, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
39 ದಾನನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 62,700.
39 foram recenseados 62.700 na tribo de Dã.
40 ಆಶೇರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
40 Dos filhos de Aser, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
41 ಆಶೇರ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 41,500.
41 foram recenseados 41.500 na tribo de Aser.
42 ನಫ್ತಾಲಿ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
42 Dos filhos de Neftali, seus descendentes segundo suas famílias e suas casas patriarcais, contando seus nomes da idade de vinte anos para cima - todos os que eram aptos para o serviço das armas -,
43 ನಫ್ತಾಲಿಯ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 53,400.
43 foram recenseados 53.400 na tribo de Neftali.
44 ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)
44 Estes são os que foram recenseados por Moisés e Aarão com os príncipes de Israel, em número de doze, um homem de cada casa patriarcal.
45 ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು.
45 Os israelitas recenseados por famílias, da idade de vinte anos para cima - todos os que eram aptos para o serviço das armas -,
46 ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 6,03,550.
46 somaram o total de 603.550.
47 ಆದರೆ ಲೇವಿ ಕುಲದ ಕುಟುಂಬಗಳು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ.
47 Quanto aos levitas, porém, não foram contados com os demais, segundo suas tribos patriarcais.
48 ಯಾಕೆಂದರೆ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
48 O Senhor havia dito, com efeito, a Moisés:
49 “ಲೇವಿ ಕುಲದ ಪುರುಷರನ್ನು ಲೆಕ್ಕಿಸಬೇಡ. ಅವರನ್ನು ಉಳಿದ ಇಸ್ರೇಲರ ಜನಗಣತಿಯೊಡನೆ ಸೇರಿಸಬಾರದು.
49 "Não farás o recenseamento da tribo de Levi, nem porás a soma deles com os filhos de Israel.
50 ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.
50 Confia-lhes o cuidado do tabernáculo do testemunho, de todos os seus utensílios e de tudo o que lhe pertence. Levarão o tabernáculo e todos os seus utensílios, farão o seu serviço e acamparão em volta do tabernáculo.
51 ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.
51 Quando se tiver de partir, os levitas desmontarão o tabernáculo e o levantarão quando se tiver de acampar. O estrangeiro que se aproximar dele será punido de morte.
52 ಇಸ್ರೇಲರ ಆಯಾ ದಂಡುಗಳು ತಮ್ಮತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು.
52 Os israelitas acamparão cada um em seu respectivo acampamento e cada um perto de sua bandeira, segundo suas turmas.
53 ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”
53 Quanto aos levitas, porém, acamparão em torno do tabernáculo do testemunho, para que não suceda explodir a minha cólera contra a assembléia dos israelitas; ademais, os levitas terão a guarda do tabernáculo do testemunho".
54 ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು.
54 Os israelitas fizeram tudo o que o Senhor tinha ordenado a Moisés; assim o fizeram.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Números 1, comparar traduções ou montar um estudo — tudo direto pelo WhatsApp.