Números 22
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs BKJ
1 ಬಳಿಕ ಇಸ್ರೇಲರು ಹೊರಟು ಜೆರಿಕೊ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು.
1 E os filhos de Israel partiram, e acamparam nas planícies de Moabe, deste lado do Jordão, junto a Jericó.
2 ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನು ಅವನು ಕಂಡಿದ್ದನು.
2 E Balaque, filho de Zipor, viu tudo o que Israel havia feito aos amorreus.
3 ಮೋವಾಬ್ಯರು ನಿಜವಾಗಿಯೂ ಬಹಳ ಭಯಗೊಂಡಿದ್ದರು. ಯಾಕೆಂದರೆ ಇಸ್ರೇಲರು ಬಹುಸಂಖ್ಯಾತರಾಗಿದ್ದರು.
3 E Moabe estava com medo do povo, porque eram muitos, e Moabe se afligiu, por causa dos filhos de Israel.
4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದನು.
4 E Moabe disse aos anciãos de Midiã: Agora este grupo lamberá tudo o que há ao nosso redor, como o boi lambe a erva do campo. E naquele tempo, Balaque, filho de Zipor, era rei dos moabitas.
5 ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ,
5 Assim, ele enviou mensageiros a Balaão, filho de Beor, a Petor, que está junto ao rio, na terra dos filhos do seu povo, para chamá-lo, dizendo: Eis que um povo saiu do Egito; eis que cobrem a face da terra e eles habitam diante de mim.
6 ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.
6 Por isso, peço-te, vem agora, amaldiçoa-me este povo, porque é forte demais para mim; para que eu possa vencê-los, feri-los e expulsá-los da terra, porque sei que aquele a quem abençoas está abençoado, e aquele a quem amaldiçoas está amaldiçoado.
7 ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
7 E os anciãos de Moabe e os anciãos de Midiã partiram, com a recompensa pela adivinhação em suas mãos; e foram até Balaão e lhe transmitiram as palavras de Balaque.
8 ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.
8 E ele lhes disse: Passai aqui esta noite, e vos trarei a resposta que o SENHOR me falar; e os príncipes de Moabe ficaram com Balaão.
9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿಯಲ್ಲಿರುವ ಈ ಮನುಷ್ಯರು ಯಾರು?” ಎಂದು ಕೇಳಿದನು.
9 E Deus veio até Balaão e disse: Quem são estes homens contigo?
10 ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,
10 E Balaão disse a Deus: Balaque, filho de Zipor, rei de Moabe, os enviou a mim, dizendo:
11 ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ ಮತ್ತು ಅವರು ದೇಶವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ನೀನು ಶಪಿಸಿದರೆ, ನಾನು ಅವರನ್ನು ಸೋಲಿಸಲು ಮತ್ತು ಓಡಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಹೇಳಿ ಕಳುಹಿಸಿದ್ದಾನೆ” ಎಂದು ಉತ್ತರಕೊಟ್ಟನು.
11 Eis que saiu um povo do Egito, que cobre a face da terra. Vem, agora, amaldiçoa-os; talvez eu consiga vencê-los e expulsá-los.
12 ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.
12 Então, Deus disse a Balaão: Não irás com eles, tu não amaldiçoarás a este povo, porque são benditos.
13 ಮರುದಿನ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಹಿರಿಯರಿಗೆ, “ನಿಮ್ಮ ಸ್ವಂತ ದೇಶಕ್ಕೆ ಹಿಂದಕ್ಕೆ ಹೋಗಿರಿ. ನಿಮ್ಮ ಸಂಗಡ ಬರಲು ಯೆಹೋವನು ನನಗೆ ಅಪ್ಪಣೆ ಕೊಡುತ್ತಿಲ್ಲ” ಎಂದು ಹೇಳಿದನು.
13 E Balaão se levantou pela manhã, e disse aos príncipes de Balaque: Voltai à vossa terra, porque o SENHOR se recusa a deixar que eu vá convosco.
14 ಮೋವಾಬ್ಯರ ನಾಯಕರು ಬಾಲಾಕನ ಬಳಿಗೆ ಹಿಂತಿರುಗಿ, “ಬಿಳಾಮನು ನಮ್ಮೊಡನೆ ಬರಲು ಒಪ್ಪುತ್ತಿಲ್ಲ” ಎಂದು ತಿಳಿಸಿದರು.
14 E os príncipes de Moabe se levantaram e foram até Balaque, e disseram: Balaão se recusou a vir conosco.
15 ಆದ್ದರಿಂದ ಬಾಲಾಕನು ಅವರಿಗಿಂತಲೂ ಶ್ರೇಷ್ಠರಾದ ಅನೇಕ ನಾಯಕರನ್ನು ಕಳುಹಿಸಿದನು.
15 E Balaque enviou mais príncipes, ainda mais honrados do que eles.
16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆನ್ನುತ್ತಾನೆ: ನೀನು ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬೇಡ.
16 E eles vieram até Balaão e lhe disseram: Assim diz Balaque, filho de Zipor: Peço-te que não deixes de vir até mim,
17 ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.
17 porque grandemente te honrarei, e farei tudo o que me disseres. Portanto, vem, peço-te, amaldiçoa este povo.
18 ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ಬಾಲಾಕನು ನನಗೆ ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅಪ್ಪಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ಮಾಡಲಾರೆ.
18 E Balaão respondeu, e disse aos servos de Balaque: Mesmo que Balaque me desse a sua casa cheia de prata e de ouro, eu não poderia ir além da palavra do SENHOR, meu Deus, para fazer mais ou menos.
19 ಆದ್ದರಿಂದ ನೀವೂ ಸಹ ಇತರ ಹಿರಿಯರಂತೆ ಈ ರಾತ್ರಿ ಇಲ್ಲೇ ಇರಬೇಕು. ಯೆಹೋವನು ನನಗೆ ಇನ್ನೂ ಹೇಳಬೇಕಾದದ್ದನ್ನು ಈ ರಾತ್ರಿ ತಿಳಿದುಕೊಳ್ಳುವೆನು” ಎಂದು ಹೇಳಿದನು.
19 Agora portanto, peço-vos que fiqueis também aqui esta noite, para que eu possa saber o que o SENHOR me dirá mais.
20 ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.
20 Veio, pois, Deus a Balaão, de noite, e disse-lhe: Se os homens vierem te chamar, levanta-te e vai com eles; porém a palavra que eu te disser, isso farás.
21 ಮರುದಿನ ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
21 E Balaão se levantou pela manhã, e selou sua jumenta, e foi com os príncipes de Moabe.
22 ಬಿಳಾಮನು ಕತ್ತೆಯ ಮೇಲೆ ಸವಾರಿ ಮಾಡುತ್ತಿದ್ದನು. ಅವನ ಜೊತೆ ಇಬ್ಬರು ಆಳುಗಳಿದ್ದರು. ಬಿಳಾಮನು ಪ್ರಯಾಣ ಮಾಡತೊಡಗಿದ್ದರಿಂದ ದೇವರು ಕೋಪಗೊಂಡನು. ಆದ್ದರಿಂದ ಯೆಹೋವನ ದೂತನು ಬಿಳಾಮನನ್ನು ತಡೆಯಲು ದಾರಿಯಲ್ಲಿ ನಿಂತುಕೊಂಡನು.
22 E a ira de Deus se acendeu, porque ele foi; e o anjo do SENHOR se pôs no caminho, como adversário. E ele seguia, montado em sua jumenta, e seus dois servos estavam com ele.
23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.
23 E a jumenta viu o anjo do SENHOR em pé no caminho, com a espada desembainhada na mão; e a jumenta se desviou do caminho e foi para o campo; e Balaão feriu a jumenta, para trazê-la de volta ao caminho.
24 ಆಮೇಲೆ ಯೆಹೋವನ ದೂತನು ಎರಡು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ದಾರಿಯಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಗಳಿದ್ದವು.
24 Mas o anjo do SENHOR se pôs em uma vereda entre as vinhas, um muro de um lado, e um muro do outro lado.
25 ತಿರುಗಿ ಕತ್ತೆಯು ಯೆಹೋವನ ದೂತನನ್ನು ನೋಡಿ ಗೋಡೆಗೆ ತನ್ನನ್ನು ಒತ್ತರಿಸಿಕೊಂಡಿತು. ಆಗ ಬಿಳಾಮನ ಪಾದವು ಗೋಡೆಗೆ ಒತ್ತರಿಸಿತು. ಆದ್ದರಿಂದ ಬಿಳಾಮನು ತಿರುಗಿ ಕತ್ತೆಯನ್ನು ಹೊಡೆದನು.
25 E quando a jumenta viu o anjo do SENHOR, encostou-se no muro, e esmagou o pé de Balaão contra o muro, e ele a feriu novamente.
26 ಬಳಿಕ ಯೆಹೋವನ ದೂತನು ಮತ್ತೆ ಮುಂದೆ ಹೋಗಿ ಕತ್ತೆಯು ಎಡಕ್ಕಾಗಲಿ ಬಲಕ್ಕಾಗಲಿ ಹೊರಳಲು ಸಾಧ್ಯವಿಲ್ಲದಷ್ಟು ಇನ್ನೂ ಕಿರಿದಾದ ಸ್ಥಳದಲ್ಲಿ ನಿಂತುಕೊಂಡನು.
26 Então, o anjo do SENHOR passou mais à frente, e ficou mais adiante, em um lugar estreito, onde não havia como se desviar, nem para a direita nem para a esquerda.
27 ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಅಡಗಿ ಮಲಗಿಕೊಂಡಿತು. ಆಗ ಬಿಳಾಮನು ಸಿಟ್ಟುಗೊಂಡು ತನ್ನ ಕೋಲಿನಿಂದ ಕತ್ತೆಯನ್ನು ಹೊಡೆದನು.
27 E quando a jumenta viu o anjo do SENHOR, caiu debaixo de Balaão; e a ira de Balaão se acendeu, e ele feriu a jumenta com uma vara.
28 ಆಗ ಯೆಹೋವನು ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟನು. ಅದು ಬಿಳಾಮನಿಗೆ, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ?” ಎಂದು ಕೇಳಿತು.
28 E o SENHOR abriu a boca da jumenta, e ela disse a Balaão: O que eu te fiz, que me feriste estas três vezes?
29 ಬಿಳಾಮನು, “ನೀನು ನನ್ನನ್ನು ಮೂರ್ಖನನ್ನಾಗಿ ಮಾಡಿರುವೆ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಈಗಲೇ ಕೊಂದುಹಾಕಿಬಿಡುತ್ತಿದ್ದೆ” ಅಂದನು.
29 E Balaão disse à jumenta: Porque zombaste de mim; quisera eu ter uma espada na mão, porque agora te mataria.
30 ಅದಕ್ಕೆ ಕತ್ತೆಯು ಬಿಳಾಮನಿಗೆ, “ನೋಡು, ನಾನು ನಿನ್ನ ಸ್ವಂತ ಕತ್ತೆ. ಅನೇಕಾನೇಕ ವರ್ಷಗಳಿಂದ ನೀನು ನನ್ನ ಮೇಲೆ ಸವಾರಿ ಮಾಡುತ್ತಿರುವೆ. ನಾನು ಹಿಂದೆಂದೂ ಹೀಗೆ ಮಾಡಲಿಲ್ಲವೆಂದು ನಿನಗೆ ತಿಳಿದದೆ” ಎಂದು ಹೇಳಿತು.
30 E a jumenta disse a Balaão: Não sou a tua jumenta, em que cavalgaste desde o tempo em que me tornei tua até hoje? Alguma vez fiz isso contigo? E ele disse: Não.
31 ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.
31 Então, o SENHOR abriu os olhos de Balaão, e ele viu o anjo do SENHOR em pé no caminho, com a sua espada desembainhada na mão; e ele inclinou a cabeça e caiu sobre a sua face.
32 ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
32 E o anjo do SENHOR lhe disse: Por que espancaste a tua jumenta três vezes? Eis que eu saí para ser teu adversário, porque o teu caminho é perverso diante de mim.
33 ಆ ಕತ್ತೆ ನನ್ನನ್ನು ನೋಡಿ ಮೂರು ಸಲ ನನ್ನೆದುರಿನಿಂದ ಇನ್ನೊಂದು ಕಡೆಗೆ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದಲ್ಲಿ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಆಗಲೇ ಕೊಂದುಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
33 E a jumenta me viu e se desviou de mim três vezes; se ela não tivesse se desviado de mim, certamente agora eu teria te matado, e poupado a vida dela.
34 ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.
34 E Balaão disse ao anjo do SENHOR: Eu pequei, porque não sabia que estavas no caminho contra mim. Agora, se te desagradei, voltarei.
35 ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು.
35 E o anjo do SENHOR disse a Balaão: Vai com os homens, mas somente a palavra que eu falar, essa falarás. Então Balaão foi com os príncipes de Balaque.
36 ಬಿಳಾಮನು ಬರುತ್ತಿರುವ ಸುದ್ದಿಯನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಸರಹದ್ದಿನಲ್ಲಿ ಅರ್ನೋನ್ ನದಿಯ ಬಳಿಯಲ್ಲಿರುವ ಮೋವ್ಯಾಬರ ಊರಿನಲ್ಲಿ ಅವನನ್ನು ಭೇಟಿಯಾಗಲು ಹೋದನು.
36 E quando Balaque soube que Balaão vinha, foi ao seu encontro até a cidade de Moabe, que está na fronteira de Arnom, na extremidade do território.
37 ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಸುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ. ನೀನು ಆಗಲೇ ಯಾಕೆ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ನೀನು ಭಾವಿಸಿಕೊಂಡಿರುವಿಯಾ?” ಎಂದು ಕೇಳಿದನು.
37 E Balaque disse a Balaão: Porventura não te enviei mensageiros a chamar-te? Por que não viestes a mim? Eu não sou capaz de te honrar?
38 ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು.
38 E Balaão disse a Balaque: Eis que eu tenho vindo a ti; por acaso, posso eu falar alguma coisa? A palavra que Deus puser em minha boca, esta falarei.
39 ಆಗ ಬಿಳಾಮನು ಬಾಲಾಕನೊಡನೆ ಕಿರ್ಯತ್‌ಹುಚೋತಿಗೆ ಹೋದನು.
39 E Balaão foi com Balaque, e chegaram a Quiriate-Huzote.
40 ಬಾಲಾಕನು ಹೋರಿಗಳನ್ನು ಮತ್ತು ಕುರಿಗಳನ್ನು ವಧಿಸಿ ಯಜ್ಞಮಾಡಿ ಅದರಲ್ಲಿ ಸ್ವಲ್ಪ ಭಾಗವನ್ನು ಬಿಳಾಮನಿಗೂ ಅವನ ಸಂಗಡವಿದ್ದ ಪ್ರಧಾನರಿಗೂ ಕೊಟ್ಟನು.
40 E Balaque ofereceu bois e ovelhas; e os enviou a Balaão e aos príncipes que estavam com ele.
41 ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.
41 E no dia seguinte, Balaque tomou a Balaão e o levou aos lugares altos de Baal, para que pudesse ver dali a parte mais distante do povo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Números 22, comparar traduções ou montar um estudo — tudo direto pelo WhatsApp.