Números 33
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs VC
1 ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ:
1 Eis as etapas que fizeram os israelitas desde a sua partida do Egito em tropas organizadas sob as ordens de Moisés e Aarão.
2 ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು.
2 Moisés, por ordem do Senhor, tomou nota de suas marchas por etapas. São as seguintes essas marchas em etapas:
3 ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು.
3 No décimo quinto dia do primeiro mês partiram de Ramsés. Isso foi no dia seguinte à Páscoa; partiram com a mão levantada, à vista de todos os egípcios
4 ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.
4 que estavam enterrando aqueles que o Senhor tinha ferido dentre eles, todos os seus primogênitos. Também contra os seus deuses o Senhor tinha exercido o seu juízo.
5 ಇಸ್ರೇಲರು ರಮ್ಸೇಸ್‌ನಿಂದ ಹೊರಟು ಸುಕ್ಕೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.
5 Partidos de Ramsés, os israelitas se detiveram em Socot,
6 ಸುಕ್ಕೋತಿನಿಂದ ಅವರು ಏತಾಮಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಜನರು ಅಲ್ಲಿ ಮರುಭೂಮಿಯ ಗಡಿಯಲ್ಲಿ ಪಾಳೆಯಮಾಡಿಕೊಂಡರು.
6 de onde partiram, indo acampar em Etão, situado na extremidade do deserto.
7 ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು.
7 Dali, voltaram a Fi-Hairot, defronte de Beelsefon, e acamparam diante de Magdalum.
8 ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.
8 Deixando Fi-Hairot, passaram pelo meio do mar para o deserto. Após três dias de marcha na solidão de Etão, detiveram-se em Mara.
9 ಜನರು ಮಾರವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು.
9 Partindo de Mara, ganharam Elim, onde havia doze fontes e setenta palmeiras; e acamparam ali.
10 ಜನರು ಏಲೀಮನ್ನು ಬಿಟ್ಟು ಕೆಂಪುಸಮುದ್ರದ ಹತ್ತಿರ ಪಾಳೆಯ ಮಾಡಿಕೊಂಡರು.
10 Saindo de Elim, foram acampar junto do mar Vermelho,
11 ಕೆಂಪುಸಮುದ್ರದಿಂದ ಹೊರಟು ಸೀನ್ ಅರಣ್ಯದಲ್ಲಿ ಪಾಳೆಯ ಮಾಡಿಕೊಂಡರು.
11 de onde partiram e acamparam no deserto de Sin.
12 ಸೀನ್ ಅರಣ್ಯದಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.
12 Tendo partido do deserto de Sin, acamparam em Dafca,
13 ದೊಫ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.
13 de onde foram para Alus.
14 ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯಲು ನೀರು ಇರಲಿಲ್ಲ.
14 Dali, partiram e acamparam em Rafidim, onde o povo não encontrou água para beber.
15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
15 Partidos de Rafidim, acamparam no deserto do Sinai.
16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
16 Saindo do deserto do Sinai, foram acampar em Kibrot-Hataava,
17 ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
17 de onde foram acampar em Haserot.
18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
18 De lá, acamparam em Retma.
19 ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
19 De Retma foram a Remonfarés.
20 ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
20 De Remonfarés a Lebna.
21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
21 De Lebna a Ressa.
22 ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು.
22 De Ressa a Ceelata.
23 ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.
23 Deixaram Ceelata e acamparam no monte Sefer.
24 ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.
24 Dali foram acampar em Arada.
25 ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
25 De lá a Macelot.
26 ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
26 Dali a Taat.
27 ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
27 De Taat a Taré.
28 ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.
28 De Taré a Metca.
29 ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.
29 De Metca a Hesmona.
30 ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
30 De Hesmona foram acampar em Moserot.
31 ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
31 De Moserot a Benê-Jacã.
32 ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದ್‌ನಲ್ಲಿ ಇಳಿದುಕೊಂಡರು.
32 Dali a Hor-Guidgad.
33 ಹೋರ್ಹಗಿದ್ಗಾದ್‌ನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
33 Dali a Jotebata.
34 ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
34 Dali a Abrona.
35 ಅಬ್ರೋನದಿಂದ ಹೊರಟು ಎಚ್ಯೋನ್‌ಗೆಬೆರಿನಲ್ಲಿ ಇಳಿದುಕೊಂಡರು.
35 De lá a Asiongaber.
36 ಎಚ್ಯೋನ್‌ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದು ಕಾದೇಶ್.
36 foram acampar no deserto de Sin, isto é, em Cades.
37 ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
37 Deixando Cades, acamparam no monte Hor, na extremidade da terra de Edom.
38 ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು.
38 O sacerdote Aarão subiu por ordem do Senhor ao monte Hor, e ali morreu, no quadragésimo ano do êxodo dos israelitas do Egito, no primeiro dia do quinto mês.
39 ಆರೋನನು “ಹೋರ್” ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು.
39 Aarão tinha cento e vinte e três anos quando expirou no monte Hor.
40 ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್‌ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು.
40 Foi então que o rei cananeu de Arad, que habitava no Negeb, na terra de Canaã, soube da chegada dos israelitas.
41 ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
41 a Deixando o monte Hor, acamparam em Salmona.
42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
42 De Salmona foram acampar em Funon.
43 ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
43 De Funon foram a Obot.
44 ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ಆಚೆ ಇರುವ ಇಯ್ಯಿಮಿನಲ್ಲಿ ಇಳಿದುಕೊಂಡರು.
44 De Obot, detiveram-se em Ijé-Abarim, na fronteira de Moab.
45 ಇಯ್ಯಿಮಿನಿಂದ ಹೊರಟು ದೀಬೋನ್‌ಗಾದಿನಲ್ಲಿ ಇಳಿದುಕೊಂಡರು.
45 Dali foram acampar em Dibon-Gad.
46 ದೀಬೋನ್‌ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
46 Dali a Almon-Diblataim.
47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೆಬೋವಿನ ಪೂರ್ವದಿಕ್ಕಿನಲ್ಲಿ ಇಳಿದುಕೊಂಡರು.
47 Dali aos montes Abarim, em frente ao Nebo.
48 ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬಿನ ಬಯಲಿನಲ್ಲಿ ಇಳಿದುಕೊಂಡರು.
48 Partiram dos montes Abarim e foram acampar nas planícies de Moab, junto do Jordão, defronte de Jericó.
49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.
49 Seu acampamento nas planícies de Moab, perto do Jordão, ia desde Betsimot até Abel-Setim.
50 ಆ ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:
50 O Senhor disse a Moisés, nas planícies de Moab, junto do Jordão, defronte de Jericó:
51 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನೀವು ಜೋರ್ಡನ್ ಹೊಳೆದಾಟಿ ಕಾನಾನ್ ದೇಶವನ್ನು ಸೇರಿದಾಗ
51 "Dize aos israelitas: quando tiverdes passado o Jordão e entrado na terra de Canaã,
52 ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳು ಮಾಡಬೇಕು.
52 expulsareis de diante de vós todos os habitantes da terra, destruireis todas as suas pedras esculpidas, todas as suas estátuas fundidas e devastareis todos os seus lugares altos.
53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
53 Tomareis posse da terra e habitá-la-eis, porque eu vo-la dou.
54 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
54 Reparti-la-eis entre vossas famílias por sorte: aos que forem mais numerosos, uma porção maior, e uma menor, aos que forem menos. Cada um possuirá o que lhe couber por sorte. Fareis essa repartição segundo vossas tribos patriarcais.
55 “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.
55 Se vós, porém, não expulsardes de diante de vós os habitantes da terra, os que ficarem serão para vós como espinhos nos olhos e aguilhões nos flancos, e vos perseguirão na terra onde habitardes.
56 ಅದಲ್ಲದೆ, ನಾನು ಅವರಿಗೆ ಏನನ್ನು ಮಾಡಲು ಯೋಚಿಸಿದೆನೋ ಅದನ್ನು ನಿಮಗೆ ಮಾಡುವೆನು.”
56 E tudo o que eu tinha pensado fazer a eles, o farei a vós."
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Números 33, comparar traduções ou montar um estudo — tudo direto pelo WhatsApp.