Provérbios 25

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:
1 Também estes são provérbios de Salomão, os quais transcreveram os homens de Ezequias, rei de Judá.
2 ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.
2 A glória de Deus é encobrir o negócio, mas a glória dos reis é tudo investigar.
3 ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು.
3 Para a altura dos céus, e para a profundeza da terra, e para o coração dos reis, não há investigação alguma.
4 ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು.
4 Tira da prata as escórias, e sairá vaso para o fundidor.
5 ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.
5 Tira o ímpio da presença do rei, e o seu trono se firmará na justiça.
6 ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.
6 Não te glories na presença do rei, nem te ponhas no lugar dos grandes;
7 ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.
7 porque melhor é que te digam: Sobe para aqui, do que seres humilhado diante do príncipe a quem já os teus olhos viram.
8 ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.
8 Não te apresses a litigar, para depois, ao fim, não saberes o que hás de fazer, podendo-te confundir o teu próximo.
9 ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.
9 Pleiteia a tua causa com o teu próximo mesmo e não descubras o segredo de outro;
10 ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು.
10 para que não te desonre o que o ouvir, não se apartando de ti a infâmia.
11 ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.
11 Como maçãs de ouro em salvas de prata, assim é a palavra dita a seu tempo.
12 ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.
12 Como pendentes de ouro e gargantilhas de ouro fino, assim é o sábio repreensor para o ouvido ouvinte.
13 ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.
13 Como frieza de neve no tempo da sega, assim é o mensageiro fiel para com os que o enviam; porque alegra a alma dos seus senhores.
14 ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು.
14 Como nuvens e ventos que não trazem chuva, assim é o homem que se gaba falsamente de dádivas.
15 ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ.
15 Pela longanimidade se persuade o príncipe, e a língua branda quebranta os ossos.
16 ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ.
16 Achaste mel? Come o que te basta; para que, porventura, não te fartes dele e o venhas a vomitar.
17 ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು.
17 Retira o pé da casa do teu próximo, para que se não enfade de ti e te aborreça.
18 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.
18 Martelo, e espada, e flecha aguda é o homem que levanta falso testemunho contra o seu próximo.
19 ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ.
19 Como dente quebrado e pé deslocado, assim é a confiança no desleal, no tempo da angústia.
20 ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.
20 O que entoa canções junto ao coração aflito é como aquele que se despe num dia de frio e como vinagre sobre salitre.
21 ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು.
21 Se o que te aborrece tiver fome, dá-lhe pão para comer; e, se tiver sede, dá-lhe água para beber,
22 ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.
22 porque, assim, brasas lhe amontoarás sobre a cabeça; e o Senhor to pagará.
23 ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.
23 O vento norte afugenta a chuva, e a língua fingida, a face irada.
24 ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು.
24 Melhor é morar num canto de umas águas-furtadas do que com a mulher rixosa numa casa ampla.
25 ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.
25 Como água fria para uma alma cansada, assim são as boas-novas de terra remota.
26 ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ.
26 Como fonte turva e manancial corrupto, assim é o justo que cai diante do ímpio.
27 ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ.
27 Comer muito mel não é bom; assim, a investigação da própria glória não é glória.
28 ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.
28 Como a cidade derribada, que não tem muros, assim é o homem que não pode conter o seu espírito.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Provérbios 25, comparar traduções ou montar um estudo — tudo direto pelo WhatsApp.